ಲೈಫ್ ಸ್ಟೈಲ್
‘ಆ ಕರಾಳ ರಾತ್ರಿಯಲ್ಲಿ’ ಮದನ ಮುರಳಿ ಮಾಧವ ಎಂದ ಗಾನ ಕೋಗಿಲೆ ಶೃತಿ ಪ್ರಶಾಂತ್..!
ಬಿಗ್ ಬಾಸ್ ಖ್ಯಾತಿಯ ದಯಾಳ್ ಪದ್ಮನಾಭ, ಅನುಪಮಾ ಗೌಡ..ಜೆ .ಕೆ ಈಗ ಮತ್ತೆ ಸುದ್ದಿಯಲ್ಲಿದ್ದಾರೆ. ಈ ಮೂವರ ಕಾಂಬಿನೇಷನ್ ನಲ್ಲಿ ಮೂಡಿ ಬಂದಿರುವ “ಆ ಕರಾಳ ರಾತ್ರಿಯಲ್ಲಿ ” ಚಿತ್ರ ಈ ಶುಕ್ರವಾರ ತೆರೆದೆ ಸಿದ್ಧ ವಾಗಿರುವ ಬೆನ್ನಲ್ಲೇ, ಈ ಚಿತ್ರದ “ಮಧನ ಮುರುಳಿ ಮೋಹನ ” ಎಂಬ ಹಾಡು ಸೋಷಿಯಲ್ ಮೀಡಿಯಾ ದಲ್ಲಿ ಈಗ ಸಿಕ್ಕಾಪಟ್ಟೆ ವೈರಲ್ ಆಗಿದೆ.
ಅಂದ ಹಾಗೆ ರಾಯಲ್ ಸ್ಟಾರ್ ಉಪೇಂದ್ರ ರವರು ಈ ಚಿತ್ರದ ಆಡಿಯೋ ಲಾಂಚ್ ಮಾಡಿದ್ದು.. ಈ ಚಿತ್ರದ ಹಾಡುಗಳು ಕೇಳುಗರ ಮನ ಗೆದ್ದಿದೆ.
ಒಮ್ಮೆ ಕೇಳಿದರೆ ಸಾಕು ಮತ್ತೆ ಮತ್ತೆ ಕೇಳಬೇಕೆನಿಸುವಷ್ಟು ಇಂಪಾಗಿ ಮೂಡಿ ಬಂದಿರುವ ಈ ಹಾಡಿಗೆ ಅನುಪಮಾ ಮತ್ತು ಜೆ.ಕೆ ನೃತ್ಯಿಸಿದ್ದಾರೆ. ಮೂಗುತಿ ಸುಂದರಿ ಎಂದೇ ಹೆಸರಾಗಿರುವ ಅನುಪಮಾ ಬಹಳ ಹಾಟ್ ಮತ್ತು ಬ್ಯೂಟಿಫುಲ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಹಾಡು ಕೇಳುವುದಕ್ಕೆ ಎಷ್ಟು ಇಂಪೋ ಇದರ ವಿಜುಯಲ್ ಕೂಡಾ ಅಷ್ಟೇ ಸೂಪರ್ ಹಿಟ್ ಆಗಿದೆ.
https://youtu.be/35YaWgh0unc
ಸೂಪರ್ ಹಿಟ್ ಆಯ್ತು ‘ಮದನ ಮುರಳಿ ಮಾಧವ’
ಈ ಹಾಡು ಸದ್ಯ ಈಗ ಎಲ್ಲರ ನಾಲಿಗೆ ಯ ಮೇಲೆ ನಲಿದಾಡುತ್ತಿದೆ. ಎಲ್ಲೆಲ್ಲೂ “ಮದನ ಮುರಳಿ ಮಾಧವನ” ಮಾಯೆ! ಕೇಳಲು ಬಹಳ ಇಂಪಾಗಿ ಮೂಡಿ ಬಂದಿರುವ ಹಾಡು ಫಣೀಶ್ ರಾಜ ರವರ ಅದ್ಭುತ ರಚನೆ ಯಾಗಿದೆ. ಸಂಗೀತ ನಿರ್ದೇಶಕ R.S. ಗಣೇಶ್ ನಾರಾಯಣನ್ ರವರು ಇದಕ್ಕೆ ಟ್ಯೂನ್ ಕಂಪೋಸ್ ಮಾಡಿದ್ದು… ಗಾನ ಕೋಗಿಲೆ ಶೃತಿ ಪ್ರಶಾಂತ್ ಈ ಹಾಡನ್ನು ಅಷ್ಟೇ ಸುಂದರವಾಗಿ ಹಾಡಿದ್ದಾರೆ. ಸೋಷಿಯಲ್ ಮೀಡಿಯಾ ದಲ್ಲಿ ತುಂಬಾ ವೈರಲ್ ಆಗಿರುವ ಈ ಹಾಡು ಕರ್ನಾಟಕದ ಸಂಗೀತ ರಸಿಕರ ಮನ ಗೆದ್ದಿದೆ.
ಯಾರು ಈ ಶೃತಿ ಪ್ರಶಾಂತ್?
ಈಕೆಯ ಹೆಸರಲ್ಲಿ ಸಂಗೀತ ದ ಲಯವಿದೆ.. ಹೆಸರಿಗೆ ತಕ್ಕಂತೆ ಶೃತಿ ಬದ್ಧವಾಗಿ ಹಾಡುವ ಸ್ಯಾಂಡಲ್ ವುಡ್ ನ ಈ ಗಾನ ಕೋಗಿಲೆ.. ಕನ್ನಡ..ತಮಿಳು..ತೆಲುಗು ಸೇರಿದಂತೆ ನೂರು ಚಿತ್ರಗಳಿಗೆ ದನಿ ನೀಡಿದ್ದಾರೆ.
S.K ಪ್ರಹಲ್ಲಾದ್ ಮತ್ತು ಮಂಜುಳ ಪ್ರಹಲ್ಲಾದ್ ರ ಪುತ್ರಿ ಶೃತಿ. ಪ್ರಶಾಂತ್ ವಿಶ್ವಕರ್ಮ ರ ಧರ್ಮ ಪತ್ನಿ. ಇಬ್ಬರು ಮುದ್ದು ಮಕ್ಕಳ ತಾಯಿ.ಕನ್ನಡ ದ ಈ ಹೆಣ್ಣು ಮಗಳಿಗೆ ಸಂಗೀತ ಅನ್ನೋದು ಹುಟ್ಟಿನಿಂದಲೇ
ಇವರ ವಂಶಸ್ಥರಿಂದ ಈಕೆ ಪಡೆದ ವರ.. ಶೃತಿ ಭಾರತದ ಅದ್ಭುತ ಘಜಲ್ ಗಾಯಕಿ. ತಮ್ಮ ಗುರು ದಿ.ರವೀಂದ್ರ ಹಂಬಿನೂರ್ ರಿಂದ ಛಜಲ್ ಮತ್ತು ಹಿಂದುಸ್ತಾನಿ ಸಂಗೀತಾಭ್ಯಾಸ ಪಡೆದಿದ್ದು.. ಕರ್ನಾಟಿಕ್ ಕ್ಲಾಸಿಕಲ್ ಅನ್ನು ಶಮಂತಕಮಣಿ ಅಯ್ಯಂಗಾರ್ ಅವರ ಬಳಿ ಅಭ್ಯಾಸ ಮಾಡಿದ್ದಾರೆ.
2001 ರಿಂದಲೇ ಇವರು ಕನ್ನಡ ದ ಹಲವಾರು ಚಿತ್ರ ಗಳಲ್ಲಿ ಹಾಡಿದ್ದಾರೆ.ಚಿಕ್ಕ ವಯಸ್ಸಿನಲ್ಲೇ ಸಂಗೀತಾಭ್ಯಾಸ ದಲ್ಲಿ ಮುಳುಗಿದ ಶೃತಿ ಯ ಸಾಧನೆ ಅಪಾರ. ಸುಮಾರು ನೂರಕ್ಕೂ ಹೆಚ್ಚು ಆಲ್ಬಮ್ ಗಳಲ್ಲಿ ಹಾಡಿರುವ ಶೃತಿ ಕನ್ನಡ ಚಿತ್ರರಂಗದ ಒಬ್ಬ ಪ್ರತಿಭಾವಂತ ಹೆಣ್ಣು ಮಗಳು. ಹಲವಾರು ಸುಪ್ರಸಿದ್ಧ ಗಾಯಕರೊಂದಿಗೆ ಧನಿಗೂಡಿಸಿರುವ ಹೆಗ್ಗಳಿಕೆ ಇವರದು. “ಎದೆ ತುಂಬಿ ಹಾಡುವೆನು” ಕಾರ್ಯಕ್ರಮ ದಲ್ಲಿ S.P.ಬಾಲಸುಬ್ರಹ್ಮಣ್ಯಮ್ ರೊಂದಿಗೆ ಹಾಡಿದ ಆ ಕ್ಷಣ ವನ್ನು ಎಂದಿಗೂ ಮರೆಯಲಾರೆ “ಅನ್ನುತ್ತಾರೆ ಶೃತಿ ಪ್ರಶಾಂತ್.
2007ರಲ್ಲಿ ವಿ.ಮನೋಹರ್ ರವರ ಸಂಗೀತ ನಿರ್ದೇಶನದಲ್ಲಿ ಮೂಡಿಬಂದ ದೈವ ಭಕ್ತಿ ಕಥಾಹಂದರದ ಚಿತ್ರ ದ ಇವರ ಹಾಡು ಅಂದಹಾಗೆ ತುಂಬಾ ಹಿಟ್ ಆಗಿತ್ತು.
ಇತ್ತೀಚೆಗೆ ತೆರೆಕಂಡ ” ರಾಜ-ರಾಧೆ” ಯ “ಹೊತ್ತು ಹತ್ತು ಸಲಹುವಳು” ಎಂಬ ಭಾವನಾತ್ಮಕ ಗೀತೆಯನ್ನು ಸೊಗಸಾಗಿ ಹಾಡಿ ಜನರಿಂದ ಮನ ಗೆದ್ದಿದ್ದಾರೆ. ಕೃಷ್ಣನ್ ಲವ್ ಸ್ಟೋರಿ ಯ “ಕಾದಿರುವೆ ನಿನಗಾಗಿ” ಗೀತೆ ಇವರ ಸಾಧನೆಯ ಕಿರೀಟ ಕ್ಕೆ ಮತ್ತೊಂದು ಗರಿ.
• ಒನ್ಸ್ ಮೋರ್ ಕೌರವರ ಚಿತ್ರ ಕ್ಕೆ ಇವರು ಹಾಡಿದ ಗೀತೆ ಸೂಪರ್ ಹಿಟ್.
• ಮೊನ್ನೆ ಅಷ್ಟೇ ಮುಕ್ತಾಯ ವಾದ “ಸರಿಗಮಪ” ಕಾರ್ಯಕ್ರಮ ದಲ್ಲಿ ಜೂರಿ ಯಾಗಿ ಕೂಡ ನಿಂತಿದ್ದಾರೆ ಶೃತಿ.
• ಅರ್ಜುನ್ ಜನ್ಯ, ಶ್ರೇಯಸ್ ಗಂಧರ್ವ, ಜೆಸ್ಸೀ ಗಿಫ್ಟ್, ಶ್ರೀಧರ್.ವಿ.ಸನರನ್.. ಗಣೇಶ್ ನಾರಾಯಣನ್ ಹೀಗೆ ಹಲವಾರು ಸೂಪರ್ ಹಿಟ್ ಸಂಗೀತ ನಿರ್ದೇಶಕ ರೊಂದಿಗೆ ಕೆಲಸ ಮಾಡಿದ್ದಾರೆ.
• ತೆರಿಗೆ ಸಿದ್ಧ ವಾಗಿರುವ “ಆ ಕರಾಳ ರಾತ್ರಿಯಲ್ಲಿ ” ಸೂಪರ್ ಹಿಟ್ ಆಯ್ತು ಗಾನ ಕೋಗಿಲೆ ಶೃತಿ ಪ್ರಶಾಂತ್ ರ ಸೆನ್ಸೇಷನಲ್ ವಾಯ್ಸ್!.
ಇವರ ಎಲ್ಲಾ ಪ್ರಯತ್ನಗಳು ಯಶಸ್ವಿಯಾಗಲೀ. ಸಂಗೀತ ಸರಸ್ವತಿ ಇವರಲ್ಲಿ ಸದಾ ನಲಿನಲಿದಾಡಲಿ. ಯಶಸ್ಸು-ಕೀರ್ತಿ ಇವರದಾಗಲಿ ಎಂದು ಹಾರೈಸುತ್ತೇವೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ
ಸುದ್ದಿದಿನ ಡೆಸ್ಕ್:ಬೆಂಗಳೂರಿನಲ್ಲಿ ಪ್ರೀತಿಯೊಂದು ರಕ್ತಸಿಕ್ತ ಅಂತ್ಯ ಕಂಡಿದೆ. ಮದುವೆಗೆ ನಿರಾಕರಿಸಿದ ಪ್ರೇಯಸಿಯನ್ನು ಪ್ರಿಯಕರನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ಪೈಪ್‌ಲೈನ್ ರಸ್ತೆಯಲ್ಲಿ ನಡೆದಿದೆ.
23 ವರ್ಷದ ಅಂಜಲಿ ಕೊಲೆಯಾದ ಯುವತಿಯಾಗಿದ್ದು, ರಾಜೀವ್ ಬಂಧಿತ ಆರೋಪಿ. ಕಳೆದ ಮೂರು-ನಾಲ್ಕು ವರ್ಷಗಳಿಂದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಈ ಹಿಂದೆ ಕೆಲಸ ಮಾಡುತ್ತಿದ್ದ ಸ್ಥಳದಲ್ಲೇ ಪರಿಚಯವಾಗಿ ಸ್ನೇಹ ಬೆಳೆದು, ಬಳಿಕ ಅದು ಪ್ರೀತಿಗೆ ತಿರುಗಿತ್ತು.
ಆದರೆ ರಾಜೀವ್‌ಗೆ ಕ್ರಿಮಿನಲ್ ಹಿನ್ನೆಲೆ ಇದ್ದ ಕಾರಣ ಅಂಜಲಿ ಕುಟುಂಬಸ್ಥರು ಈ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ಹಲವು ಬಾರಿ ಕುಟುಂಬಸ್ಥರನ್ನು ಒಪ್ಪಿಸಲು ರಾಜೀವ್ ಪ್ರಯತ್ನಿಸಿದ್ದರೂ ಫಲಿಸಿರಲಿಲ್ಲ. ಇತ್ತೀಚೆಗೆ ಪೋಷಕರ ಒತ್ತಾಯಕ್ಕೆ ಮಣಿದ ಅಂಜಲಿ ರಾಜೀವ್‌ನಿಂದ ದೂರವಾಗಲು ಆರಂಭಿಸಿದ್ದಳು. ಇಂದು ಸಂಜೆ ಅಂಜಲಿಯನ್ನು ಊಟದ ನೆಪದಲ್ಲಿ ಕರೆಸಿಕೊಂಡಿದ್ದ ರಾಜೀವ್, ಮತ್ತೊಮ್ಮೆ ಮದುವೆ ವಿಚಾರ ಪ್ರಸ್ತಾಪಿಸಿದ್ದಾನೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು, ಕೋಪಗೊಂಡ ರಾಜೀವ್ ಚಾಕುವಿನಿಂದ ಅಂಜಲಿಯ ಕುತ್ತಿಗೆಗೆ ಇರಿದಿದ್ದಾನೆ.
ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಂಜಲಿಯನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃ*ತಪಟ್ಟಿದ್ದಾಳೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಪರಿಶೀಲನೆ ನಡೆಸಿ, ಕೆಲವೇ ನಿಮಿಷಗಳಲ್ಲಿ ಆರೋಪಿ ರಾಜೀವ್‌ನನ್ನು ಬಂಧಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್ ಆಹ್ವಾನ
ಸುದ್ದಿದಿನ ಡೆಸ್ಕ್:ಸುಪ್ರಿಯಾನ್ವಿ ಪ್ರೊಡಕ್ಷನ್ಸ್ ಸಂಸ್ಥೆಯಡಿ ಪ್ರಿಯಾ ಸುದೀಪ್ ನಿರ್ಮಿಸಿದ ಮೊದಲ ಚಿತ್ರ ‘ಮ್ಯಾಂಗೋ ಪಚ್ಚ’. ಸಂಚಿತ್ ಸಂಜೀವ್ ಅಭಿನಯದ ಈ ಚಿತ್ರ ಹೆಚ್ಚು ಸದ್ದು ಮಾಡಲಿಲ್ಲ.
ಈ ಸೋಲನ್ನು ಹಿಂದಕ್ಕೆ ಹಾಕಿ, ಪ್ರಿಯಾ ಸುದೀಪ್ ಇನ್ನಷ್ಟು ಹೊಸ ಕಥೆಗಳನ್ನು ತೆರೆಗೆ ತರುವುದಕ್ಕೆ, ಹೊಸ ಚಿತ್ರಗಳನ್ನು ನಿರ್ಮಿಸುವುದಕ್ಕೆ ಮುಂದಾಗಿದ್ದಾರೆ. ಕಥೆಗಾರರಿಗೆ ಆಹ್ವಾನ ನೀಡಿದ್ದಾರೆ. ‘ನಾವು ಹುಡುಕುತ್ತಿರುವುದು ಕೇವಲ ಕಥೆಗಳಲ್ಲ. ಮನಸ್ಸುಗಳನ್ನು ಮುಟ್ಟುವ ಭಾವನೆಗಳು, ಚಿಂತನೆಗೆ ಹಚ್ಚುವ ವಿಚಾರಗಳು ಮತ್ತು ಪರದೆಯ ಮೇಲೆ ಹೊಸ ಇತಿಹಾಸ ಬರೆಯುವ ಕಲ್ಪನೆಗಳು.
ನಿಮ್ಮ ಬಳಿ ಮೌಲಿಕ ಕಥೆ-ಚಿತ್ರಕಥೆ ಇದ್ದರೆ ಅಥವಾ ವಿಶಿಷ್ಟ ಕಥಾ ಪರಿಕಲ್ಪನೆ ಇದ್ದರೆ, ಅದನ್ನು ನಮ್ಮೊಂದಿಗೆ ಹಂಚಿಕೊಳ್ಳಿ. ತಮ್ಮದೇ ಆದ ವಿಶಿಷ್ಟ ದೃಷ್ಟಿಕೋನ ಮತ್ತು ಸೃಜನಾತ್ಮಕತೆಯನ್ನು ಹೊಂದಿರುವ ಲೇಖಕರು, ಕಥೆಗಾರರು ಮತ್ತು ಸೃಜನಶೀಲ ಮನಸ್ಸುಗಳನ್ನು ನಾವು ಸ್ವಾಗತಿಸುತ್ತೇವೆ. ಎಲ್ಲಾ ಪ್ರಕಾರಗಳು ಮತ್ತು ಎಲ್ಲಾ ಮಾದರಿಗಳಲ್ಲಿನ ಕಥಾ ಸಲ್ಲಿಕೆಗಳನ್ನು ನಾವು ಸ್ವಾಗತಿಸುತ್ತೇವೆ. ನಿಮ್ಮ ಕಥೆಯೇ ಮುಂದಿನ ದೊಡ್ಡ ಪ್ರಯಾಣದ ಆರಂಭವಾಗಬಹುದು’ ಎಂದು ಪ್ರಿಯಾ ಸುದೀಪ್, ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
ಜೊತೆಗೆ ಒಂದು ಮೊಬೈಲ್ ಸಂಖ್ಯೆಯನ್ನು ಸಹ ಹಂಚಿಕೊಂಡಿದ್ದಾರೆ. ಆದರೆ, ಕರೆ ಮಾಡುವಂತಿಲ್ಲ. ಚಾಟ್ ಮಾತ್ರ ಮಾಡಬಹುದು. ಕಥೆಗಳಿದ್ದರೆ 6663307434 ಸಂಖ್ಯೆಯನ್ನು ಸಂಪರ್ಕಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoಚನ್ನಗಿರಿ | ಲವ್ ಮ್ಯಾರೇಜ್ ; ಪೊಲೀಸ್ ಠಾಣೆ ಆವರಣದಲ್ಲೇ ಯುವಕನಿಗೆ ಚಾಕು ಇರಿತ
-
ದಿನದ ಸುದ್ದಿ3 days agoದಾವಣಗೆರೆ | ತಾಪಂ ಅನುದಾನ ದುರುಪಯೋಗ: ಮೂವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ತನಿಖೆ ಚುರುಕು
-
ದಿನದ ಸುದ್ದಿ4 days ago
ಮತದಾರರ ಪಟ್ಟಿ ಪರಿಷ್ಕರಣೆ | ಪ್ರತಿಯೊಬ್ಬರ ಮನೆಬಾಗಿಲಿಗೆ ತಲುಪಲಿವೆ ಫಾರಂಗಳು ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ
-
ದಿನದ ಸುದ್ದಿ24 hours agoಮಾಠಾಧೀಶರ ಮೇಲೆ ಹಲ್ಲೆ ; ನಿರ್ಲಕ್ಷಿಸಿದರೆ ದುಷ್ಕೃತ್ಯ ಹೆಚ್ಚಳ ಸಂಭವ; ಕಠಿಣ ಕ್ರಮಕ್ಕೆ ಎಚ್.ಆಂಜನೇಯ ಆಗ್ರಹ





