ಸಿನಿ ಸುದ್ದಿ
ಈ ಶತಮಾನದ ಮಾದರಿ ಹೆಣ್ಣು..!
ಟಿವಿ9 ನ ‘ಮಾರುವೇಷ’ ಸರಣಿಯಲ್ಲಿ ಈಗಷ್ಟೇ ಒಂದು ಒಳ್ಳೆಯ ಕಾರ್ಯ ಕ್ರಮ ನೋಡಿದೆ…
ಅದು ,ಒಂದು ಕಾಲದಲ್ಲಿ ಅತ್ಯುತ್ತಮ ನಟಿಯಾಗಿ 125ಕ್ಕೂ ಹೆಚ್ಚು ಚಿತ್ರದಲ್ಲಿ ನಟಿಸಿ,ಇದ್ದಕ್ಕಿದ್ದಂತೇ 1986ರಲ್ಲೇ ಬಣ್ಣದ ಬದುಕಿಗೆ ವಿದಾಯ ಹೇಳಿ,ನಿಜ ಬದುಕಿನಲ್ಲಿ ಸಾಮಾಜಿಕ ಕಳಕಳಿಯಿಂದ ಕೆರೆಯ ನೀರನ್ನು ಕೆರೆಗೆ ಚೆಲ್ಲುವಂತೆ ಸಂಪಾದಿಸಿದ್ದೆಲ್ಲವನ್ನೂ ಬಡವರ ಕಣ್ಣೀರೊರೆಸಲು ವಿನಿಯೋಗಿಸುತ್ತಿರುವ ಶ್ರೇಷ್ಠ ನಟಿ,ಅಭಿನೇತ್ರಿ ಆರತಿಯವರ ಸಾರ್ಥಕ ಬದುಕಿನ ಕತೆ..!!
ನಾಯಕಿ ನಟಿಯಾಗಿ ಜನಪ್ರಿಯತೆಯ ಉತ್ತುಂಗದಲ್ಲಿರುವಾಗಲೇ, ಸಿನಿಮಾದ ಆಕರ್ಷಕ ಬಣ್ಣದ ಲೋಕಕ್ಕೆ ವಿದಾಯ ಹೇಳುವುದು ಸುಲಭದ ಮಾತಲ್ಲ.ಪ್ರೀತಿಸಿ ಕೈ ಹಿಡಿದ ಪುಟ್ಟಣ್ಣ ಕಣಗಾಲರೂ ದೂರವಾಗಿದ್ದರು.ಮಗಳು ಯಶಸ್ವಿನಿಯನ್ನು ಆಯಾಳ ಕೈಗೊಪ್ಪಿಸಿ ದಿನಗಟ್ಟಲೆ ಶೂಟಿಂಗಿಗೆ ತೆರಳಬೇಕಾದ ಅನಿವಾರ್ಯತೆ. ಆದರೆ ಅದೊಂದು ದಿನ ತಡ ರಾತ್ರಿ ಶೂಟಿಂಗ್ ಮುಗಿಸಿ ಬಂದಾಗ, ಮಗಳ ಒಂಟಿತನದ ಆಕ್ರಂದನ ಅದೆಷ್ಟು ತೀವ್ರವಾಗಿ ಆ ತಾಯಿಯ ಕರುಳನ್ನು ಇರಿಯಿತೆಂದರೆ,ಆ ಕ್ಷಣದಲ್ಲಿ ಮಗಳ ತಲೆ ಮೇಲೆ ಕೈಯಿಟ್ಟು ಇನ್ನೆಂದೂ ಬಣ್ಣ ಹಚ್ಚುವುದಿಲ್ಲವೆಂದು ಪ್ರಮಾಣ ಮಾಡಿದರು..!!
ಪಡೆದಿದ್ದ ಎಲ್ಲ ಅಡ್ವಾನ್ಸ್ ಹಣವನ್ನೂ ನಿರ್ಮಾಪಕರಿಗೆ ಹಿಂತಿರುಗಿಸಿದರು..!!
ಬಣ್ಣದ ಬದುಕಿಂದ ದೂರವಾಗಿ ಸರಳ ಬದುಕನ್ನಪ್ಪಿಕೊಂಡು ಅಜ್ಞಾತವಾಗಿರಬಯಸಿದ ಆರತಿ ಸುಮ್ಮನೇ ಕೂರಲಿಲ್ಲ..ತಾನು ದುಡಿದ ಅಷ್ಟೂ ಹಣವನ್ನು ಸಮಾಜ ಸೇವೆಗೆ ವಿನಿಯೋಗಿಸಿದರು.
ಅದೇ ಸಮಯದಲ್ಲಿ ಪರಿಚಯವಾದ ಸೇವಾ ಮನೋಭಾವದ ಹಾರ್ಡ್ ವೇರ್ ಇಂಜಿನಿಯರ್ ಚಂದ್ರಶೇಖರ ದೇಸಾಯಿ ಗೌಡರ ರನ್ನು ಮದುವೆಯಾಗಿ ಅಮೇರಿಕಾದಲ್ಲಿದ್ದುಕೊಂಡೇ ತನ್ನ ಸಾಮಾಜಿಕ ಸೇವಾ ಕ್ಷೇತ್ರದ ವ್ಯಾಪ್ತಿಯನ್ನು ಇನ್ನಷ್ಟು ವಿಸ್ತರಿಸಿಕೊಂಡರು..!!
ಬೆಂಗಳೂರಿನಲ್ಲಿದ್ದ ತನ್ನ ಪ್ರೀತಿಯ ಬಂಗಲೆ “ಬೆಳ್ಳಿತೆರೆ”ಯನ್ನೂ ಮಾರಿ ಬಂದ 15 ಕೋಟಿ ರೂಪಾಯಿ ಅಷ್ಟನ್ನೂ ಸಮಾಜ ಸೇವೆಗೆ ವಿನಿಯೋಗಿಸಿದರು. ಆರತಿಯವರಿಗೆ ಸಮಾಜಸೇವೆಗೆ ಪ್ರೇರಣೆ ನೀಡಿದ್ದು ಚಾಮರಾಜನಗರದಲ್ಲಿ ಡಾ.ಜಿ.ಎಸ್.ಶಿವರುದ್ರಪ್ಪನವರ ಮಗ ಜಿ.ಎಸ್.ಜಯದೇವ ನಡೆಸುತ್ತಿರುವ ‘ದೀನಬಂಧು’ ಮಕ್ಕಳ ಮನೆ. ಆ ಅನಾಥಾಶ್ರಮಕ್ಕೆ ವಿಶಾಲ ಹಾಸ್ಟೆಲ್ ಕಟ್ಟಡ ಕಟ್ಟಿಸಿ ಕೊಟ್ಟಿದ್ದಲ್ಲದೆ, ಎರಡು ಕೋಟಿ ರೂ.ಠೇವಣಿಯಿರಿಸಿ ಅದರ ಬಡ್ಡಿಯನ್ನು ಬಡ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಲು ವಿನಿಯೋಗಿಸುತ್ತಿದ್ದಾರೆ. ನಲುವತ್ತು ಶಾಲೆಗಳನ್ನು ದತ್ತು ಪಡೆದು ಅಷ್ಟೂ ಶಾಲೆಗಳ ಬಡ ಮಕ್ಕಳ ಖರ್ಚುವೆಚ್ಚ ಭರಿಸುತ್ತಿದ್ದಾರೆ..!!
ಆರತಿ-ಚಂದ್ರಶೇಖರ ದಂಪತಿಗಳ ಸೇವಾ ಕಾರ್ಯ ಇಷ್ಟಕ್ಕೇ ನಿಲ್ಲುವುದಿಲ್ಲ.ಉತ್ತರ ಕರ್ನಾಟಕದ 20 ಹಳ್ಳಿಗಳನ್ನು ದತ್ತು ಪಡೆದು ಆ ಹಳ್ಳಿಗೆ ಶೌಚಾಲಯ,ಆಸ್ಪತ್ರೆ,ಶಾಲೆ ಹೆಣ್ಣು ಮಕ್ಕಳಿಗೆ ಸ್ವಉದ್ಯೋಗ ತರಬೇತಿಯಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ..!!
ಚಿತ್ರರಂಗದಲ್ಲಿದ್ದಾಗಿನ ಅವರ ಸಹಜ ವೈವಾಹಿಕ, ಪ್ರೇಮ ಕತೆಗಳು ಏನಾದರೂ ಇರಲಿ.ನನಗೆ ಅಚ್ಚರಿಯೆನಿಸುವುದು ಅದಲ್ಲ..
ಇಷ್ಟೆಲ್ಲ ಕೋಟಿಗಟ್ಟಲೆ ಮೊತ್ತವನ್ನು ನಿಸ್ವಾರ್ಥ ಭಾವದಿಂದ ಸಾಮಾಜಿಕ ಸೇವೆಗಾಗಿ ವಿನಿಯೋಗಿಸುತ್ತಿದ್ದರೂ, ಯಾರ ಕಣ್ಣಿಗೂ ಬೀಳದೇ,ಸಾರ್ವಜನಿಕರು,ಪತ್ರಿಕೆಯವರು,ಕೊನೆಗೆ ತನ್ನನ್ನು ಬೆಳೆಸಿದ ಚಿತ್ರಂಗದವರಿಂದಲೂ ದೂರವಾಗಿ ಅಜ್ಞಾತರಾಗಿಯೇ ಉಳಿಯಬೇಕೆನ್ನುವ ಅವರ ದಿವ್ಯ ನಿರ್ಲಿಪ್ತ ಮನೋಭಾವ..!!
ಬಹುಶಃ ‘ದೀನಬಂಧು’ಮನೆಯ ಜಯದೇವರಲ್ಲದಿದ್ದರೆ ಆರತಿಯವರು ಯಾರ ಕಣ್ಣಿಗೂ ಕಾಣಿಸುತ್ತಿರಲಿಲ್ಲವೇನೋ.ಹತ್ತು ವರ್ಷಗಳ ಹಿಂದೆ ನಾನು ಚಾಮರಾಜನಗರದಲ್ಲಿ ಲೀಡ್ ಬ್ಯಾಂಕ್ ವ್ಯವಸ್ಥಾಪಕನಾಗಿದ್ದಾಗ ಜಯದೇವ್ ಅವರ ದೀನಬಂಧು ಮಕ್ಕಳ ಮನೆಯ ಜೊತೆ ನಿಕಟವಾಗಿದ್ದೆ. ಆಗ ಒಮ್ಮೆ ಜಯದೇವ್ ಅವರು ಆರತಿಯವರ ಸೇವಾ ಕಾರ್ಯದ ಬಗ್ಗೆ ಹೇಳಿದ್ದರು. ಮುಂದಿನ ಸಲ ಆರತಿಯವರು ಬಂದಾಗ ನಾನು ಭೇಟಿ ಮಾಡಬಹುದಾ ಅಂತ ಕೇಳಿದಾಗ ಆರತಿಯವರು ಯಾರನ್ನೂ ಭೇಟಿಯಾಗಲು ಇಷ್ಟ ಪಡುವುದಿಲ್ಲ ಎಂದರು..!! ಆದರೆ ಆಗಲೂ ನನಗೆ ಆರತಿಯವರ ವೈಯಕ್ತಿಕ ಬದುಕಿನ ಬಗೆಗಾಗಲಿ, ಸೇವಾಗಾತ್ರ ಇಷ್ಟೊಂದು ದೊಡ್ಡದಿದೆಯೆಂದಾಗಲಿ ಗೊತ್ತಿರಲಿಲ್ಲ..
ಟಿವಿ9 ಹೇಳಿದಂತೆ, ಕೆಲವು ವರ್ಷಗಳ ಹಿಂದೆ ಎಸ್.ಜಿ.ತುಂಗರೇಣುಕ ಅನ್ನುವ ಹಿರಿಯ ಪತ್ರಕರ್ತೆಯಿಂದಾಗಿ ಆರತಿಯವರ ಕುರಿತು ಮಾಹಿತಿ ದೊರೆಯುವಂತಾಯಿತು. ರೇಣುಕ ಅವರಿಗೂ ಆರತಿಯವರ ಭೇಟಿ ಅಷ್ಟು ಸುಲಭದಲ್ಲಿ ಸಿಗಲಿಲ್ಲ. ಜಯದೇವರ ಮೂಲಕ ಭೇಟಿಗೆ ಪ್ರಯತ್ನಿಸಿದರೂ ಆರತಿಯವರು ಭೇಟಿ ನಿರಾಕರಿಸಿದರು.ಕೊನೆಗೂ ಜಯದೇವರ ಒತ್ತಾಯಕ್ಕೆ ಮಣಿದು ಭೇಟಿಗೆ ಅವಕಾಶ ದೊರೆಯಿತು..!! ಬಹುಶಃ ಆ ಭೇಟಿಯಿಂದಾಗಿ ಆರತಿಯವರ ಅತ್ಯಂತ ಸರಳಬದುಕಿನ, ಆದರೆ ಸಮಾಜ ಸೇವೆಯ ಶ್ರೀಮಂತಿಕೆಯ ವಿವರಗಳು ಲಭ್ಯವಾದವು..!! ಆ ನಂತರವೂ ಅವರು ಯಾರಿಗೂ ಸಂದರ್ಶನ ಭೇಟಿಗೆ ಅವಕಾಶ ನೀಡಲಿಲ್ಲ..
ಇವತ್ತು ಕೋಟಿಗಟ್ಟಲೆ ದಾನ ಮಾಡುವ ಅನೇಕ ಸಂಸ್ಥೆಗಳು,ಶ್ರೀಮಂತ ವ್ಯಕ್ತಿಗಳು ಚಿತ್ರರಂಗದ ವರು ನೂರಾರು ಮಂದಿ ಇರಬಹುದು.ಆದರೆ ಎಲ್ಲ ಬಗೆಯ ಪ್ರಚಾರದಿಂದಲೂ ದೂರವಿದ್ದು, ತಾನು ಸಮಾಜದಿಂದ ಪಡೆದದ್ದೆಲ್ಲವನ್ನೂ ಮತ್ತೆ ಸಮಾಜಕ್ಕೆ ಮರಳಿಸುವ ಸರಳ,ನಿಸ್ರೃಹ ನಿಸ್ವಾರ್ಥ ಸೇವೆಗೆ ತಮ್ಮನ್ನು ಮುಡಿಪಾಗಿಸಿಕೊಂಡ ಆರತಿಯವರಂತಹ ವ್ಯಕ್ತಿಗಳು ಹೆಚ್ಚು ಮಂದಿ ಸಿಗುವುದಿಲ್ಲ..!! ಚಂದ್ರಶೇಖರರ ಹೆಸರಾದರೂ ಅವರ ಟ್ರಸ್ಟಿನಲ್ಲಿದೆ. ಆರತಿಯವರ ಹೆಸರು ಎಲ್ಲೂ ಕಾಣಿಸುವುದಿಲ್ಲ..!!
ನಿಜಕ್ಕೂ ಆರತಿಯವರು- ” ಈ ಶತಮಾನದ ಮಾದರಿ ಹೆಣ್ಣು..!!”
ಹ್ಯಾಟ್ಸಾಫ್ ಆರತಿಯವರೇ..
(ಲೇಖನ ಕೃಪೆ : ವಾಟ್ಸಾಪ್)
ಸುದ್ದಿದಿನ.ಕಾಂ|ವಾಟ್ಸಾಪ್|9986715401
ದಿನದ ಸುದ್ದಿ
ನಾಲ್ಕನೇ ಮದುವೆಗೆ ಸಜ್ಜಾದ್ರು ನಟಿ ವನಿತಾ ವಿಜಯಕುಮಾರ್
ಸುದ್ದಿದಿನಡೆಸ್ಕ್:ಹಿರಿಯ ನಟ ವಿಜಯಕುಮಾರ್ ಮತ್ತು ಅವರ ಎರಡನೇ ಪತ್ನಿ ನಟಿ ಮಂಜುಳಾ ಅವರ ಹಿರಿಯ ಪುತ್ರಿ ವನಿತಾ ವಿಜಯಕುಮಾರ್. ತಮ್ಮ 15 ನೇ ವಯಸ್ಸಿನಲ್ಲಿಯೇ ತಮಿಳು ಸಿನಿಮಾದಲ್ಲಿ ನಾಯಕಿಯಾಗಿ ನಟಿಸುವ ಅವಕಾಶ ಪಡೆದರು.
ಆ ಸಾಲಿನಲ್ಲಿ ನಟ ವಿಜಯ್ ಜೊತೆಗೆ ವನಿತಾ ವಿಜಯಕುಮಾರ್ 1995 ರಲ್ಲಿ ನಟಿಸಿದ್ದ ‘ಚಂದ್ರಲೇಖಾ’ ಚಿತ್ರ ಮಿಶ್ರ ಪ್ರತಿಕ್ರಿಯೆ ಪಡೆದು ಸೋಲು ಕಂಡಿತು. ಇದಾದ ಬಳಿಕ ‘ಮಾಣಿಕ್ಯಂ’ ಚಿತ್ರದಲ್ಲಿ ನಟಿಸಿದ ವನಿತಾ ವಿಜಯಕುಮಾರ್, ತೆಲುಗು ಮತ್ತು ಮಲಯಾಳಂನಲ್ಲಿ ತಲಾ ಒಂದು ಚಿತ್ರದಲ್ಲಿ ಮಾತ್ರ ನಟಿಸಿದ್ದಾರೆ.
ಮೊದಲ ಪತಿಗೆ ವಿಚ್ಛೇದನ ನೀಡಿದ ಕೆಲವೇ ತಿಂಗಳಲ್ಲಿ ಆನಂದ್ ಜಯರಾಜನ್ ಎಂಬವರನ್ನು ಎರಡನೇ ಮದುವೆಯಾದರು ವನಿತಾ ವಿಜಯಕುಮಾರ್. ಎರಡನೇ ಪತಿಯ ಮೂಲಕ ಜಯನಿತಾ ಎಂಬ ಮಗಳು ವನಿತಾಗೆ ಜನಿಸಿದಳು. ಬಳಿಕ 2012 ರಲ್ಲಿ ಅವರಿಂದಲೂ ವಿಚ್ಛೇದನ ಪಡೆದರು. ಮತ್ತೆ ಸಿನಿಮಾದಲ್ಲಿ ನಟಿಸುತ್ತೇನೆ ಎಂದು ಹೇಳಿ.. ಅವರೇ ನಿರ್ಮಾಪಕರಾಗಿ ಕಣಕ್ಕಿಳಿದು ಮತ್ತೆ ಕಮ್ ಬ್ಯಾಕ್ ಕೊಟ್ಟ ಚಿತ್ರ ‘ಎಂಜಿಆರ್, ಶಿವಾಜಿ, ರಜನಿ, ಕಮಲ್’. ಈ ಚಿತ್ರವನ್ನು ನೃತ್ಯ ನಿರ್ದೇಶಕ ರಾಬರ್ಟ್ ಮಾಸ್ಟರ್ ನಿರ್ಮಿಸಿ ನಾಯಕನಾಗಿಯೂ ನಟಿಸಿದ್ದರು. ರಾಬರ್ಟ್‌ಗೆ ಜೋಡಿಯಾಗಿ ವನಿತಾ ನಟಿಸಿದ್ದರು.
ಈ ಪ್ರೇಮ ವಿವಾದ ವನಿತಾ ಅವರ ಜೀವನದಲ್ಲಿ ಅಂತ್ಯಗೊಂಡ ನಂತರ, ನಿಜ ಜೀವನದಲ್ಲಿ.. ಅವರ ಕುಟುಂಬದಿಂದಾಗಿ ಹಲವಾರು ಸಮಸ್ಯೆಗಳನ್ನು ಎದುರಿಸಬೇಕಾಯಿತು. ಆಸ್ತಿ ವಿಚಾರವಾಗಿ ನಡೆದ ಗಲಾಟೆ ವನಿತಾ ವಿಜಯಕುಮಾರ್ ಅವರನ್ನು ಕುಟುಂಬದಿಂದ ಸಂಪೂರ್ಣವಾಗಿ ದೂರ ಮಾಡಿತು. ಒಂದು ಹಂತದಲ್ಲಿ ಆರ್ಥಿಕವಾಗಿ ಹಲವು ಕಷ್ಟಗಳನ್ನು ಅನುಭವಿಸುತ್ತಿದ್ದ ವನಿತಾ ವಿಜಯಕುಮಾರ್ ಅವರಿಗೆ ಮತ್ತೆ ಬೆಳ್ಳಿತೆರೆಗೆ ಮರಳಲು ಅವಕಾಶ ಮಾಡಿಕೊಟ್ಟಿದ್ದು, ಬಿಗ್ ಬಾಸ್ ಕಾರ್ಯಕ್ರಮ.
ಈ ಚಾನೆಲ್ ಸಂಬಂಧ ಪೀಟರ್ ಪಾಲ್ ಎಂಬುವವರೊಂದಿಗೆ ಸ್ನೇಹ ಬೆಳೆಸಿದ್ದು, ಇಬ್ಬರ ನಡುವೆ ಮೂಡಿದ ಪ್ರೇಮ 2020 ರಲ್ಲಿ ಮದುವೆಯಲ್ಲಿ ಕೊನೆಗೊಂಡಿತು. ಕ್ರಿಶ್ಚಿಯನ್ ಸಂಪ್ರದಾಯದಂತೆ ಮನೆಯಲ್ಲೇ ನಡೆದ ಈ ಮದುವೆ ಸರಿಯಾಗಿ ನೋಂದಣಿಯಾಗಲಿಲ್ಲ. ಇನ್ನು ಪೀಟರ್ ಪಾಲ್ ಅವರ ಕುಡಿತದ ಚಟದಿಂದಾಗಿ ಮೂರೇ ತಿಂಗಳಲ್ಲಿ ವನಿತಾ ವಿಜಯಕುಮಾರ್ ಅವರಿಂದ ದೂರವಾದರು. ಇದಾದ ಬಳಿಕ ತಮ್ಮ ಸಿನಿಮಾ ಜೀವನದತ್ತಲೇ ಗಮನ ಹರಿಸಿರುವ ವನಿತಾ, ಸತತವಾಗಿ ಹಲವು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಇತ್ತೀಚೆಗೆ ಪ್ರಶಾಂತ್ ನಟನೆಯ ‘ಅಂಧಗನ್’ ಚಿತ್ರದಲ್ಲಿಯೂ ಅವರ ಅಭಿನಯ ಮೆಚ್ಚುಗೆ ಗಳಿಸಿತು.
ವಿವಾದಗಳಿಗೆ ಹೆಸರಾಗಿರುವ ವನಿತಾ ವಿಜಯಕುಮಾರ್, ಈಗ ನಾಲ್ಕನೇ ಮದುವೆಗೆ ಸಿದ್ಧರಾಗಿದ್ದಾರಾ ಎಂಬ ಅನುಮಾನ ಮೂಡಿದೆ. ಅದೇನೆಂದರೆ ‘ಎಂಜಿಆರ್ ಶಿವಾಜಿ ರಜನಿ ಕಮಲ್’ ಚಿತ್ರದಲ್ಲಿ ನಟಿಸುವಾಗ ತಮ್ಮೊಂದಿಗೆ ಪ್ರೇಮ ಸುದ್ದಿಯಲ್ಲಿ ಸಿಲುಕಿಕೊಂಡಿದ್ದ ಬಿಗ್ ಬಾಸ್ ಸೆಲೆಬ್ರಿಟಿ ರಾಬರ್ಟ್ ಮಾಸ್ಟರ್‌ಗೆ.. ಬೀಚ್‌ನಲ್ಲಿ, ಬಿಕಿನಿ ತೊಟ್ಟು ಮಂಡಿಯೂರಿ ಪ್ರಪೋಸ್ ಮಾಡಿದ್ದಾರೆ. ಇದೇ ವೇಳೆ ಇದಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 5 ರಂದು ಮಹತ್ವದ ಮಾಹಿತಿ ಹೊರಬೀಳಲಿದೆ ಎನ್ನಲಾಗುತ್ತಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಗನ್ ಮಿಸ್ ಫೈರ್ | ಬಾಲಿವುಡ್ ನಟ ಗೋವಿಂದ ಆಸ್ಪತ್ರೆಗೆ ದಾಖಲು
ಸುದ್ದಿದಿನ,ಮುಂಬೈ:ಗನ್ ಮಿಸ್ ಫೈರ್ ಆದ ಕಾರಣ ಬಾಲಿವುಡ್ ನಟ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಇಂದು ಮುಂಜಾನೆ ನಡೆದಿದೆ. ಆದರೆ ಗುಂಡು ಗೋವಿಂದ ಅವರ ಕಾಲಿಗೆ ತಗುಲಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಾಥಮಿಕ ವರದಿಯ ಪ್ರಕಾರ ತನ್ನದೇ ಗನ್ ಅನ್ನು ಸ್ವಚ್ಛಗೊಳಿಸುತ್ತಿದ್ದಾಗ ಈ ಅವಘಡ ನಡೆದಿದೆ. ಪೊಲೀಸರು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ, ಗೋವಿಂದ ಅವರ ಬಳಿಯಿದ್ದ ಗನ್‌ಗೆ ಪರವಾನಗಿ ಪಡೆದುಕೊಳ್ಳಲಾಗಿತ್ತು ಎಂದು ತಿಳಿಸಿದ್ದಾರೆ. ನಟ ಗೋವಿಂದ ಹಾಗೂ ಕುಟುಂಬಸ್ಥರು ಈ ಕುರಿತು ಇದುವರೆಗೂ ಯಾವುದೇ ಹೇಳಿಕೆ ನೀಡಿಲ್ಲ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ನಟ ದರ್ಶನ್‌ಗೆ ರಾಜಾತಿಥ್ಯ ; ಏಳು ಮಂದಿ ಜೈಲು ಅಧಿಕಾರಿ, ಸಿಬ್ಬಂದಿ ಅಮಾನತು
ಸುದ್ದಿದಿನಡೆಸ್ಕ್:ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್‌ಗೆ ರಾಜಾತಿಥ್ಯ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಏಳುಮಂದಿ ಜೈಲು ಅಧಿಕಾರಿ, ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದರು.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೈಲರ್ ಶರಣಬಸವ ಅಮೀನಗಢ, ಸಹಾಯಕ ಜೈಲರ್ ಪುಟ್ಟಸ್ವಾಮಿ, ಜೈಲ್ ಹೆಡ್ ವಾರ್ಡರ್‌ಗಳಾದ ವೆಂಕಪ್ಪ, ಸಂಪತ್, ವಾರ್ಡರ್‌ಗಳಾದ ಬಸಪ್ಪ, ಪ್ರಭು, ಶ್ರೀಕಾಂತ್ ಅವರನ್ನು ಅಮಾನತು ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಘಟನೆ ಹಿನ್ನೆಲೆಯಲ್ಲಿ ಹಿರಿಯ ಅಧಿಕಾರಿಗಳ ವಿರುದ್ಧವೂ ಸಹ ತನಿಖೆ ನಡೆಯುತ್ತಿದೆ. ಮುಂದೆ ಇಂತಹ ಘಟನೆಗಳು ನಡೆಯದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ತಿಳಿಸಿದರು.
ಇನ್ನೊಂದೆಡೆ, ಜೈಲಿನಲ್ಲಿ ನಟ ದರ್ಶನ್ ಹಾಗೂ ಮತ್ತಿತರರಿಗೆ ರಾಜಾತಿಥ್ಯ ಒದಗಿಸುತ್ತಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ದರ್ಶನ್ ಮತ್ತು ಇತರರನ್ನು ಕೂಡಲೇ ಬೇರೆ ಬೇರೆ ಕಾರಾಗೃಹಗಳಿಗೆ ಸ್ಥಳಾಂತರ ಮಾಡುವಂತೆ ನಿರ್ದೇಶಿಸಿದ್ದಾರೆ. ಅಲ್ಲದೆ, ಪ್ರಕರಣದ ಬಗ್ಗೆ ಸಂಪೂರ್ಣ ವರದಿ ನೀಡುವಂತೆ ಅವರು ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಸೂಚಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ6 days ago
ಗುರುಕುಲ ಶಾಲೆಯ ಮಕ್ಕಳೊಂದಿಗೆ ಬೆರೆತ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ
-
ದಿನದ ಸುದ್ದಿ6 days ago
ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ಅ.9 ರಂದು ಲೋಕಾಯುಕ್ತ ಪೊಲೀಸ್ ಅಧೀಕ್ಷಕರಿಂದ ಅಹವಾಲು ಸ್ವೀಕಾರ
-
ದಿನದ ಸುದ್ದಿ5 days ago
ವಸತಿ ಯೋಜನೆ ; ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ದಾವಣಗೆರೆ | ಖಾಸಗಿ ಬಸ್ ನಿಲ್ದಾಣದಲ್ಲಿ ಬಸ್ಸುಗಳ ಕಾರ್ಯಾರಂಭ ಸಮಾರಂಭ ; ಶಾಸಕ ಶಾಮನೂರು ಶಿವಶಂಕರಪ್ಪ ಉದ್ಘಾಟನೆ
-
ದಿನದ ಸುದ್ದಿ4 days ago
ಗ್ರಾಮ ಸಭೆ ಕಡ್ಡಾಯ : ಸಚಿವ ಪ್ರಿಯಾಂಕ ಖರ್ಗೆ
-
ದಿನದ ಸುದ್ದಿ5 days ago
ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರೊತ್ಸಾಹಧನಕ್ಕೆ ಅರ್ಜಿ ಆಹ್ವಾನ