ದಿನದ ಸುದ್ದಿ

ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದಿಂದ ಸ್ವಯಂ ಉದ್ಯೋಗ ನೇರ ಸಾಲಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿನ ಸ್ವಯಂ ಉದ್ಯೋಗ ನೇರ ಸಾಲ ಯೋಜನೆಗಳ ಅನುಷ್ಟಾನಕ್ಕೆ ಹಿಂದುಳಿದ ವರ್ಗಗಳ ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯಕ್ಕೆ ಸೇರಿದ ಜನರ ಅರ್ಥಿಕ ಅಭಿವೃದ್ಧಿಗಾಗಿ, ಸಾಲ ಹಾಗೂ ಸಹಾಯಧನ ಸೌಲಭ್ಯಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಗಸ್ಟ್.03 ಕೊನೆಯ ದಿನಾಂಕವಾಗಿದ್ದು, ಅರ್ಜಿಗಳನ್ನು ಸುವಿಧಾ ತಂತ್ರಾಂಶದ https://suvidha.karnataka.gov.in/
ಮೂಲಕ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ ನಿಯಮಿತ/ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ಕಛೇರಿಯನ್ನು ಅಥವಾ ನಿಗಮದ ಸಹಾಯವಾಣಿ ಸಂಖ್ಯೆ: 08192-230934 ವೆಬ್‍ಸೈಟ್ https://dbcdc.karnataka.gov.in ಅನ್ನು ಸಂಪರ್ಕಿಸಬಹುದು ಎಂದು ದಾವಣಗೆರೆ ಡಿ.ಬಿ.ಸಿ.ಡಿ.ಸಿ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version