/home/u584543641/domains/suddidina.com/public_html/wp-content/themes/zox-news/amp-single.php on line 77

Warning: Trying to access array offset on value of type bool in /home/u584543641/domains/suddidina.com/public_html/wp-content/themes/zox-news/amp-single.php on line 77
" width="36" height="36">

ದಿನದ ಸುದ್ದಿ

ಶಹಾಪುರ | ಅಂಬೇಡ್ಕರ್ ಪರಿನಿರ್ವಾಣ ದಿನ ಆಚರಣೆ

Published

on

ಸುದ್ದಿದಿನ,ಶಹಾಪುರ : ತಾಲೂಕಿನ ಶಿರವಾಳ ಗ್ರಾಮದಲ್ಲಿ ಡಾ. ಬಾಬಾಸಾಹೇಬ್ ಅಂಬೇಡ್ಕರ ಅವರ ಮಹಾ ಪರಿನಿರ್ವಾಣ ದಿನಾಚರಣೆ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಗೌರವ ಸಮರ್ಪಣೆ ಮಾಡುವ ಮೂಲಕ ಆಚರಿಸಲಾಯಿತು.

ಡಾ ಬಾಬಾ ಸಾಹೇಬ್ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪು‌ಷ್ಪಾರ್ಜನೆ ಮಾಡಲಾಯಿತು. ಸದಾಶಿವ ಗೋನಲ ಮಾಹಾಂತೇಶ ನಡಿಗಿ ಬಸವರಾಜ ಇಂಗಳಗಿ ರಾಮಸ್ವಾಮಿ ಬಡಿಗೇರ ಸುಬಾಸ ನಡಿಗಿ ಹಾಗೂ ಧ್ವಜರೋಹಣ ಪಂಚಶೀಲ ಧ್ವಜ ಅಂಬ್ಲಪ್ಪ ನಡಿವಿನಕೇರಿ ಚಂದ್ರಪ್ಪ ಭಂಡಾರಿ ನೇರವೇರಿಸಿದರು.

ಪ್ರಾಸ್ತಾವಿಕ ನುಡಿಗಳನ್ನಾಡಿದ ಶಿವು ಆಂದೋಲ ಅವರು ಮಾತನಾಡಿ, ತಮ್ಮ ಜೀವನದುದ್ದಕ್ಕೂ ಅಸ್ಪೃಶ್ಯತೆ, ಜಾತಿ ಪದ್ಧತಿ, ಲಿಂಗಭೇದ, ಅಸಮಾನತೆ ವಿರುದ್ಧ ಹೋರಾಡಿ ಶೋಷಿತ ಸಮುದಾಯದ ಏಳ್ಗೆಗೆ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಬಾಬಾಸಾಹೇಬ್ ಅಂಬೇಡ್ಕರ್ ಅವರು ತಮ್ಮ ಭೌತಿಕ ಶರೀರವನ್ನು ತ್ಯಜಿಸಿ ಮಹಾಪರಿನಿರ್ವಾಣ ಹೊಂದಿದ ಈ ದಿನದಂದು ಅವರಿಗೆ ನನ್ನ ಭಾವಪೂರ್ಣ ನಮನಗಳು ಎಂದರು.

ಅವರನ್ನು ಓರ್ವ ಮಾರ್ಗದರ್ಶಿಯನ್ನಾಗಿ ಸ್ವೀಕರಿಸಿ,ಅವರು ತೋರಿಸಿ ಕೊಟ್ಟ ಹಾದಿಯಲ್ಲಿ ಅವರ ಯೋಚನೆ ಮತ್ತು ದೂರದೃಷ್ಟಿಯನ್ನು ಅರ್ಥಮಾಡಿಕೊಂಡು ಸಮಾನತೆ ಹಾಗೂ ಸಾಮಾಜಿಕ ನ್ಯಾಯದ ತತ್ವದಡಿ ಸಮಸಮಾಜವನ್ನು ನಿರ್ಮಿಸುವ ಸಂಕಲ್ಪ ಮಾಡೋಣ ಎಂದರು.

ಈ ಸಂದರ್ಭದಲ್ಲಿ ಬಲಭೀಮ ನಡಿವಿನಕೇರಿ ಸಿದ್ದಪ್ಪ ಧಮ್ಮನ ಹಾಗೂ ಊರಿನ ಹಿರಿಯರು ಮುಖಂಡರು ಮತ್ತು ಅಂಬೇಡ್ಕರ್ ಅಭಿಮಾನಿಗಳು ಭಾಗವಹಿಸಿದ್ದರು. ನಿರೂಪಣೆ ರವಿ ಭಂಡಾರಿ ಮಾಡಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version