ದಿನದ ಸುದ್ದಿ
ಅಂಜನಾದ್ರಿ ಬೆಟ್ಟದ ಮೇಲೆ ಗಾಳಿ ಗೋಪುರ ನಿರ್ಮಿಸಲು ತೀರ್ಮಾನ
ಸುದ್ದಿದಿನ ಡೆಸ್ಕ್ : ಅಂಜನಾದ್ರಿ ಬೆಟ್ಟದ ಮೇಲೆ ಗಾಳಿ ಗೋಪುರ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಇಂದು ಹುಬ್ಬಳ್ಳಿಯಲ್ಲಿ ಹನುಮಂತ ದೇವರ ದೇವಸ್ಥಾನಕ್ಕೆ ಭೇಟಿ ನೀಡಿದ ವೇಳೆ ಮಾತನಾಡಿದ ಮುಖ್ಯಮಂತ್ರಿ, ಹನುಮಂತ ಕನ್ನಡನಾಡಿನ ವರಪುತ್ರ. ಹೊಸಪೇಟೆಯ ಅಂಜನಾದ್ರಿ ಬೆಟ್ಟದ ಸಮಗ್ರ ಅಭಿವೃದ್ಧಿಗೆ ಈ ಸಾಲಿನ ಬಜೆಟ್ ನಲ್ಲಿ 100 ಕೋಟಿ ರೂಪಾಯಿಗಳ ಅನುದಾನವನ್ನು ಮೀಸಲಿಡಲಾಗಿದೆ. ಬೆಟ್ಟಕ್ಕೆ ರೋಪ್ ವೇಯಿಂದ ಹಿಡಿದು, ಕ್ಷೇತ್ರಕ್ಕೆ ಭೇಟಿ ನೀಡುವ ಜನರ ಅನುಕೂಲಕ್ಕಾಗಿ ಸೌಲಭ್ಯಗಳನ್ನು ಕಲ್ಪಿಸಲಾಗುವುದು ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243