ದಿನದ ಸುದ್ದಿ

ಎಪಿಎಂಸಿ ಬಲವರ್ಧನೆಗೆ ಸರ್ಕಾರದ ಸಂಕಲ್ಪ : ಸಚಿವ ಎಸ್.ಟಿ. ಸೋಮಶೇಖರ್

Published

on

ಸುದ್ದಿದಿನ, ಬೆಳಗಾವಿ : ರಾಜ್ಯದ ಎಪಿಎಂಸಿಗಳ ಬಲವರ್ಧನೆಗೆ ಸರ್ಕಾರ ಸಂಕಲ್ಪ ಮಾಡಿದೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ.

ಬೆಳಗಾವಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖಾಸಗಿ ವಲಯದ ಮಾರುಕಟ್ಟೆ, ಸಾಮರ್ಥ್ಯ ಎದುರಿಸಿ ಪರಿಣಾಮಕಾರಿ ಸ್ಪರ್ಧೆ ನೀಡುವ ಉದ್ದೇಶದಿಂದ ಎಪಿಎಂಸಿಗಳಿಗೆ ಮತ್ತಷ್ಟು ಶಕ್ತಿ ತುಂಬಲು ಸರ್ಕಾರ ನಿರ್ಧರಿಸಿದೆ. ಯಾವುದೇ ಕಾರಣಕ್ಕೂ ಇವುಗಳನ್ನು ಮುಚ್ಚುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ರೈತರ ಕೃಷಿ ಉತ್ಪನ್ನಗಳಿಗೆ ಸೂಕ್ತ ಬೆಲೆ ಲಭಿಸಬೇಕು ಎಂಬ ಉದ್ದೇಶದಿಂದ ಕಾಯ್ದೆ ತಿದ್ದುಪಡಿ ಮೂಲಕ ಮಾರುಕಟ್ಟೆಯಲ್ಲಿ ಖಾಸಗಿ ವಲಯಕ್ಕೂ ಅವಕಾಶ ಕಲ್ಪಿಸಲಾಗಿದೆ. ರೈತರು ತಮ್ಮ ಉತ್ಪನ್ನಗಳನ್ನು ತಮಗೆ ಸೂಕ್ತವೆನಿಸಿದ ಎಲ್ಲಿ ಬೇಕಾದರೂ ಮಾರಾಟ ಮಾಡುವ ಮುಕ್ತ ಅವಕಾಶ ಕಲ್ಪಿಸಲಾಗಿದೆ ಎಂದು ಸಚಿವ ಸೋಮಶೇಖರ್ ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version