ದಿನದ ಸುದ್ದಿ

‘ಉದ್ಯಮಶೀಲತಾಭಿವೃದ್ಧಿ’ ಸ್ವ ಉದ್ಯೋಗಕ್ಕೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : ಕರ್ನಾಟಕ ಸರ್ಕಾರದ ಸಂಸ್ಥೆಯಾಗಿರುವ ಕರ್ನಾಟಕ ತಾಂತ್ರಿಕ ಸಲಹಾ ಸೇವಾ ಸಂಸ್ಥೆ (ಟೆಕ್ಸಾಕ್), ಬೆಂಗಳೂರು ಇವರ ಸಹಯೋಗದಲ್ಲಿ ಜಿಲ್ಲೆಯಲ್ಲಿ ಫೆಬ್ರವರಿ/ಮಾರ್ಚ-2020 ಮಾಹೆಯಲ್ಲಿ ಹತ್ತು ದಿನಗಳ ಉದ್ಯಮಶೀಲತಾಭಿವೃದ್ಧಿ ಕಾರ್ಯಕ್ರಮಗಳನ್ನು ಅಯೋಜಿಸಲಾಗಿದೆ.

ಈ ಕಾರ್ಯಕ್ರಮಗಳನ್ನು ರಾಜ್ಯ ಸರ್ಕಾರದ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕಾ ನಿರ್ದೇಶನಾಲಯದ ಆರ್ಥಿಕ ಬೆಂಬಲದಲ್ಲಿ ನಡೆಸಲಾಗುತ್ತಿದ್ದು, ಕಾರ್ಯಕ್ರಮವು ಅಭ್ಯರ್ಥಿಗಳಿಗೆ ಸ್ವ ಉದ್ಯಮಗಳನ್ನು ಸ್ಥಾಪಿಸಲು ಬೇಕಾದ ಅರಿವು ಮತ್ತು ಆತ್ಮಸ್ಥೈರ್ಯವನ್ನು ನೀಡುವ ಉದ್ದೇಶ ಹೊಂದಿದೆ.

ಆಸಕ್ತ ಅಭ್ಯರ್ಥಿಗಳು ಜಿಲ್ಲಾ ಕೈಗಾರಿಕಾ ಕೇಂದ್ರವನ್ನು ಸಂಪರ್ಕಿಸಬಹುದು. ಮತ್ತು ಟೆಕ್ಸಾಕಿನ www.tecsok.com  ವೆಬ್‍ಸೈಟ್ ನಲ್ಲಿ ಆನಲೈನ್ ಮುಲಕ ಅರ್ಜಿ ಸಲ್ಲಿಸಬಹುದೆಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version