ದಿನದ ಸುದ್ದಿ

HAL ನಲ್ಲಿ ITI ಅಭ್ಯರ್ಥಿಗಳಿಗೆ ‘ಅಪ್ರೆಂಟಿಸ್’ ತರಬೇತಿಗಾಗಿ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : ಹೆಚ್.ಎ.ಎಲ್ ಬೆಂಗಳೂರು ಇವರು ಐ.ಟಿ.ಐ. (ಫಿಟ್ಟರ್, ಟರ್ನರ್, ಮೆಷಿನಿಸ್ಟ್, ಶೀಟ್ ಮೆಟಲ್ ವರ್ಕರ್, ಫೌಂಡ್ರಿಮನ್, ಎಲೆಕ್ಟ್ರೀಷಿಯನ್, ವೆಲ್ಟರ್ & COPA/PASSA) ತೇರ್ಗಡೆ ಹೊಂದಿದ ಅಭ್ಯರ್ಥಿಗಳಿಂದ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ ಆಹ್ವಾನಿಸಿರುತ್ತಾರೆ.

ಅರ್ಜಿ ನಮೂನೆಯನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಪಡೆದುಕೊಂಡು, ಭರ್ತಿ ಮಾಡಿದ ಅರ್ಜಿಯನ್ನು ಡಿ.31 ರಂದು ಸಂಜೆ 5 ಒಳಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾಡಳಿತ ಭವನ, 1ನೇ ಮಹಡಿ, ಬಿ-ಬ್ಲಾಕ್, ಪಿ.ಬಿ. ರಸ್ತೆ, ದಾವಣಗೆರೆ ಇಲ್ಲಿಗೆ ಸಲ್ಲಿಸಬೇಕು. ಅಭ್ಯರ್ಥಿಗಳು ವೆಬ್‍ಸೈಟ್ www.apprenticeship.gov.in ನೋಂದಾಯಿಸಿ, ಕಡ್ಡಾಯವಾಗಿ ನೋಂದಣಿ ಸಂಖ್ಯೆಯನ್ನು ತರತಕ್ಕದ್ದು.

ಹೆಚ್ಚಿನ ಮಾಹಿತಿಗೆ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾ ಆಡಳಿತ ಭವನ, ದಾವಣಗೆರೆ ದೂ.ಸಂ :08192-259446 ಇವರನ್ನು ಸಂಪರ್ಕಿಸಬಹುದೆಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ರವೀಂದ್ರ.ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version