Connect with us

ದಿನದ ಸುದ್ದಿ

ತೋಟಗಾರಿಕೆ ಇಲಾಖೆ ; ರೈತರ ಮಕ್ಕಳಿಗೆ ತರಬೇತಿಗಾಗಿ ಅರ್ಜಿ ಆಹ್ವಾನ

Published

on

ಸುದ್ದಿದಿನ,ಶಿವಮೊಗ್ಗ: ತೋಟಗಾರಿಕೆ ಇಲಾಖೆಯ ಅಧೀನ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ರೈತರ ಮಕ್ಕಳಿಗೆ ದಿ:01/07/2024 ರಿಂದ ದಿ: 31/03/2025 ರವರೆಗೆ 10 ದಿನಗಳ ತರಬೇತಿ ಕಾರ್ಯಕ್ರಮವನ್ನು ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾ, ಹೊಸೂರು ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ಹಮ್ಮಿಕೊಂಡಿದ್ದು, ಎಸ್.ಎಸ್.ಎಲ್.ಸಿ. ಉತ್ತೀರ್ಣರಾಗಿದ್ದು, ಸ್ವಂತ ಜಮೀನುವುಳ್ಳ ಸಾಗುವಳಿ ಮಾಡುತ್ತಿರುವ ಆಸಕ್ತ ರೈತರ ಮಕ್ಕಳಿಂದ ಅರ್ಜಿ ಆಹ್ವಾನಿಸಿದೆ.

ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಇಲಾಖೆಯ ವೆಬ್‍ಸೈಟ್ https://horticulturedir.karnataka.gov.in ನಿಂದ ಡೌನ್‍ಲೋಡ್ ಮಾಡಿಕೊಂಡು ಅಥವಾ ಜಿಲ್ಲೆಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೆಶಕರ ಕಚೇರಿ ಶಿವಮೊಗ್ಗ ಇಲ್ಲಿಂದ ಅಥವಾ ಆಯಾ ತಾಲೂಕಿನ ತೋಟಗಾರಿಕೆ ಇಲಾಖೆಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಜೂನ್ 21ರೊಳಗಾಗಿ ಸಲ್ಲಿಸುವಂತೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಶಿವಮೊಗ್ಗ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-222794/9686950460 ಗಳನ್ನುಸಂಪರ್ಕಿಸುವುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ನಾಳೆಯಿಂದ 18ನೇ ಲೋಕಸಭೆಯ ಮೊದಲ ಅಧಿವೇಶನ

Published

on

ಸುದ್ದಿದಿನಡೆಸ್ಕ್:18ನೇ ಲೋಕಸಭೆಯ ಮೊದಲ ಅಧಿವೇಶನ ನಾಳೆಯಿಂದ ಆರಂಭವಾಗಲಿದೆ. ಅಧಿವೇಶನದಲ್ಲಿ ಹೊಸದಾಗಿ ಆಯ್ಕೆಯಾದ ಸಂಸತ್ ಸದಸ್ಯರ ಪ್ರಮಾಣ ವಚನ ನಡೆಯಲಿದೆ.

ಹಂಗಾಮಿ ಸ್ಪೀಕರ್ ಆಗಿ ನೇಮಕಗೊಂಡಿರುವ ಬಿಜೆಪಿಯ ಹಿರಿಯ ಸಂಸದ ಭರ್ತೃಹರಿ ಮಹ್ತಾಬ್ ಅವರು ಹೊಸದಾಗಿ ಆಯ್ಕೆಯಾದ ಲೋಕಸಭೆ ಸಂಸದರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ. ನೂತನ ಲೋಕಸಭಾ ಸ್ಪೀಕರ್ ಆಯ್ಕೆ ಇದೇ 26 ರಂದು ನಡೆಯಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇದೇ 27 ರಂದು ಲೋಕಸಭೆ ಮತ್ತು ರಾಜ್ಯಸಭೆಯ ಜಂಟಿ ಸದನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.ರಾಜ್ಯಸಭೆಯ ಅಧಿವೇಶನ ಇದೇ 27ರಂದು ಆರಂಭವಾಗಲಿದೆ. ಜುಲೈ 3 ರಂದು ಸಂಸತ್ ಅಧಿವೇಶನ ಮುಕ್ತಾಯವಾಗಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ರೇಣುಕಾಸ್ವಾಮಿ ಕೊಲೆ ಮತ್ತು ಗಂಡುಹೆಣ್ಣಿನ ನಡುವಿನ ಸಂಬಂಧ

Published

on

  • ರಾಜೇಂದ್ರ ಬುರಡಿಕಟ್ಟಿ

ರೇಣುಕಾಸ್ವಾಮಿ ಕೊಲೆ ಕೇಸನ್ನು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚಿಸುವ ಅನೇಕ ಸ್ನೇಹಿತರು ಈ ಕೇಸಿನಲ್ಲಿ ಮೊದಲನೆಯ ಮತ್ತು ಎರಡನೆಯ ಆರೋಪಿಗಳೆಂದು ಹೆಸರಿಸಲ್ಪಟ್ಟ ದರ್ಶನ್ ಮತ್ತು ಪವಿತ್ರ ಗೌಡ ಅವರ ನಡುವಿನ ಸಂಬಂಧದ ಬಗ್ಗೆ ಅನಗತ್ಯವಾಗಿ ಚರ್ಚಿಸಿ ಪವಿತ್ರಗೌಡ ಅವರನ್ನು ‘ಇಟ್ಟುಕೊಂಡವಳು’ ಇತ್ಯದಿ ಪದಬಳಸಿ ಹಿಯ್ಯಾಳಿಸಿದ್ದಾರೆ.

ಒಂದು ಟಿವಿ ಚಾನೆಲ್ ನವರು ಅವರನ್ನು ‘ಸೆಕೆಂಡ್ ಹ್ಯಾಂಡ್ ಸುಂದರಿ’ ಎಂದೂ ಕರೆದದ್ದು ವರದಿಯಾಗಿದೆ. ಇದನ್ನು ಮಾಡುವ ಹಕ್ಕು ಯಾರಿಗೂ ಇಲ್ಲ. ನಮ್ಮ ವಿರೋಧ ಇರಬೇಕಾದದ್ದು ಅವರು ರೂಪಿಸಿದ್ದಾರೆ ಎನ್ನಲಾದ ಕೊಲೆಯ ಕೇಸಿನ ಬಗ್ಗೆಯೇ ಹೊರತು ಅವರಿಬ್ಬರ ನಡುವಿನ ವೈಯಕ್ತಿಕ ಸಂಬಂಧದ ಬಗ್ಗೆ ಅಲ್ಲ.

ಗಂಡು ಹೆಣ್ಣಿನ ನಡುವಿನ ಸಂಬಂಧ ಎಂಬುದು ಅತ್ಯಂತ ಸಹಜವಾದದ್ದು. ಯಾರಿಗೆ ಯಾರ ಮೇಲೆ ಯಾವಾಗ ಆಕರ್ಷಣೆ ಉಂಟಾಗಿ ಸಂಬಂಧಗಳು ಬೆಸೆದುಕೊಳ್ಳುತ್ತವೆ ಎಂಬುದನ್ನು ಹೇಳಲಾಗದು. ಇದಕ್ಕೆ ‘ನೈತಿಕ’ ‘ಅನೈತಿಕ’ ಎಂಬ ಹಣೆಪಟ್ಟಿ ಹಚ್ಚಿ ಗೌರವಿಸುವ ಅಥವಾ ಅವಹೇಳನ ಮಾಡುವ ಕ್ರಮ ಸರಿಯಾದದ್ದಲ್ಲ. ಪ್ರತಿಯೊಬ್ಬರಿಗೂ ಆಯ್ಕೆಗಳಿರುತ್ತವೆ. ತಮಗೆ ಬೇಕಾದ ಗಂಡನ್ನು ಅಥವಾ ಹೆಣ್ಣನ್ನು ಆಯ್ದುಕೊಳ್ಳುವ ಅವರೊಡನೆ ಲೈಂಗಿಕ ಸಂಬಂಧವನ್ನು ಇಟ್ಟುಕೊಳ್ಳುವ ಸ್ವಾತಂತ್ರ್ಯವಿದೆ. ಎಲ್ಲರಿಗೂ ಇದೆ. ಅದನ್ನು ಪ್ರಶ್ನಿಸುವ ಹಕ್ಕು ಇತರರಿಗೆ ಇಲ್ಲ. ಪರಸ್ಪರ ಒಪ್ಪಿತ ಲೈಂಗಿಕ ಸಂಬಂಧವು ದೇಶದ ಕಾನೂನಿನ ಪ್ರಕಾರವೂ ಅಪರಾಧವಲ್ಲ.

ಕನ್ನಡಕ್ಕೆ ಜ್ಞಾನಪೀಠ ಪ್ರಶಸ್ತಿ ತಂದುಕೊಟ್ಟ ಹಿರಿಯ ಸಾಹಿತಿ ಡಾ. ಶಿವರಾಮ ಕಾರಂತರು ತಮ್ಮ ಅನೇಕ ಕಾದಂಬರಿಗಳ ಮೂಲಕ ಇದಕ್ಕೆ ಸಂಬಂಧಿಸಿದಂತೆ ಒಂದು ತಾತ್ವಿಕತೆಯನ್ನು ನಮಗೆ ರೂಪಿಸಿಕೊಡುತ್ತಾರೆ. ಅದೆಂದರೆ ‘ಲೈಂಗಿಕ ಸುಖ ಎನ್ನುವುದು ಮನುಷ್ಯನ ಬದುಕು ಮನುಷ್ಯನಿಗೆ ನೀಡುವ ಅತ್ಯಂತ ಸುಖದ ಸಂಗತಿಗಳಲ್ಲಿ ಒಂದು. ಅದರಿಂದ ಯಾರೂ ವಂಚಿತರಾಗಬಾರದು. ಪರಸ್ಪರ ಒಪ್ಪಿಕೊಂಡ ಗಂಡು ಹೆಣ್ಣುಗಳ ನಡುವಿನ ಲೈಂಗಿಕ ಸಂಬಂಧದಲ್ಲಿ ಒಂದು ಚೆಲುವು ಇರುತ್ತದೆ. ಇಂತಹ ಒಂದು ಒಳ್ಳೆಯ ಸಂಬಂಧಕ್ಕೆ ಮದುವೆ ಎಂಬುದು ಒಂದು ‘ಪೂರ್ವಾಗತ್ಯ’ವಾಗಬೇಕಿಲ್ಲ. ಗಂಡುಹೆಣ್ಣಿನ ನಡುವಿನ ಒಂದು ಒಳ್ಳೆಯ ಸಂಬಂಧವು ವಿವಾಹದ ಒಳಗೂ ಇರಬಹುದು; ಹೊರಗೂ ಇರಬಹುದು. ಅದೇ ರೀತಿ ಒಂದು ಕೆಟ್ಟ ಸಂಬಂಧವು ವಿವಾಹದ ಒಳಗೂ ಇರಬಹುದು ಹೊರಗೂ ಇರಬಹುದು. ವಿವಾಹದ ಚೌಕಟ್ಟಿನ ಒಳಗಿನ ಒಂದು ಕೆಟ್ಟ ಸಂಬಂಧಕ್ಕಿಂತ ವಿವಾಹದ ಚೌಕಟ್ಟಿನ ಹೊರಗಿನ ಒಳ್ಳೆಯ ಸಂಬಂಧ ಬೆಲೆಯುಳ್ಳದ್ದು.

ಹೀಗಾಗಿ ಯಾರೊಡನೆ ಎಂತಹ ಸಂಬಂಧ ಇಟ್ಟುಕೊಳ್ಳಬೇಕು ಎಂಬುದು ಅವರವರ ವೈಯಕ್ತಿಕ ವಿಚಾರ. ಅದರಲ್ಲಿ ಇತರರು ತಲೆಹಾಕುವುದು ಅವಿವೇಕತನ. ‘ಮದುವೆ ಎಂಬುದು ಏಳೇಳು ಜನ್ಮಗಳ ಸಂಬಂಧ’ ಏನೇ ಆದರೂ ಅದರ ಗೆರೆದಾಟಿ ಬೇರೆಯವರೊಡನೆ ಲೈಂಗಿಕ ಸಂಬಂಧ ಇಟ್ಟುಕೊಳ್ಳಬಾರದು’ ಎನ್ನುವವರು ಹಾಗೆಯೇ ಇರಬಹುದು. ಅದಕ್ಕೂ ಅವರಿಗೆ ಸ್ವಾತಂತ್ರ್ಯವಿದೆ. ಆದರೆ ಮದುವೆಯ ಚೌಕಟ್ಟಿನ ಹೊರಗಿನ ಸಂಬಂಧಗಳನ್ನು ಟೀಕಿಸುವ ಸ್ವಾತಂತ್ರ್ಯ ಹಕ್ಕು ಅವರಿಗಿಲ್ಲ. ಈ ವಿಷಯದಲ್ಲಿ ನಮ್ಮ ಆಲೋಚನಾ ಕ್ರಮ ಸಾಕಷ್ಟು ಬದಲಾಗಬೇಕಿದೆ. ಒಂದು ಗಂಡು ಮತ್ತು ಒಂದು ಹೆಣ್ಣಿನ ನಡುವಿನ ಸಂಬಂಧ ಎಂಥದ್ದೇ ಇರಲಿ ಅದು ಅವರಿಬ್ಬರಿಗೂ ಸಂತೋಷವನ್ನು ಕೊಡುತ್ತಿದ್ದರೆ ಅದನ್ನು ಕಂಡು ನಾವು ಸಂತೋಷ ಪಡಬೇಕೆ ಹೊರತು ಹೊಟ್ಟೆಕಿಚ್ಚು ಪಡಬಾರದು. ಅದನ್ನು ಗೌರವಿಸುವುದನ್ನು ನಾವು ಮೊದಲು ಕಲಿಯಬೇಕು. ಈ ಹಿನ್ನಲೆಯಲ್ಲಿ ನಮ್ಮ ವಿರೋಧವಿರಬೇಕಾದದ್ದು ಅವರಿಬ್ಬರು ಸೇರಿ ವ್ಯಕ್ತಿಯೊಬ್ಬರ ಕೊಲೆಮಾಡಿದ್ದಾರೆ ಎನ್ನಲಾದ ವಿಚಾರಕ್ಕೆ ಹೊರತು ಅವರ ನಡುವಿನ ವೈಯಕ್ತಿಕ ಸಂಬಂಧದ ಬಗ್ಗೆ ಅಲ್ಲ. ಇಂತದ್ದೇ ವಿಚಾರವನ್ನು ಬೇರೆ ರೀತಿಯಲ್ಲಿ ಹೇಳಿರುವ ಸುಹಾಸಿನಿ ಶ್ರೀ Suhasini Shree ಅವರ ಒಂದು ಪೋಸ್ಟನ್ನೂ ಆಸಕ್ತಿ ಇರುವವರು ಗಮನಿಸಬಹುದು.(ರಾಬು (23-06-2024)
(ರಾಜೇಂದ್ರ ಬುರಡಿಕಟ್ಟಿ ಅವರ ಫೇಸ್ ಬುಕ್ ಬರೆಹ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

SC-ST ಕಾನೂನು ಪದವೀಧರರಿಗೆ ಶಿಷ್ಯ ವೇತನ ; ಅರ್ಜಿ ಆಹ್ವಾನ

Published

on

ಸುದ್ದಿದಿನಡೆಸ್ಕ್:ಗದಗ ಜಿಲ್ಲೆಯಲ್ಲಿ 2024-25ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಕಾನೂನು ಪದವೀಧರರಿಗೆ ವೃತ್ತಿ ತರಬೇತಿ ಅವಧಿಯಲ್ಲಿ ಶಿಷ್ಯವೇತನ ಪಾವತಿಸುವ ಕಾರ್ಯಕ್ರಮದಡಿ ಅರ್ಹ ಕಾನೂನು ಪದವೀಧರರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅಂತಿಮ ವರ್ಷದ ಕಾನೂನು ಪದವಿ ಅಂಕಪಟ್ಟಿ, ಆದಾಯ ಪ್ರಮಾಣ ಪತ್ರ, ಬಾರ್ ಕೌನ್ಸಿಲ್‌ನಲ್ಲಿ ಹೆಸರು ನೋಂದಣಿ ಪ್ರಮಾಣ ಪತ್ರಗಳ ಜೆರಾಕ್ಸ್ ಪ್ರತಿಗಳನ್ನು ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕರಿಸಿ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಿಗೆ ಆಗಸ್ಟ್ 1 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending