Connect with us

ದಿನದ ಸುದ್ದಿ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ, ’ಅಸಾನಿ’ ಚಂಡಮಾರುತ ತೀವ್ರ; ಒಡಿಶಾ, ಆಂಧ್ರ, ತೆಲಂಗಾಣ, ಕರ್ನಾಟಕ, ಕೇರಳದಲ್ಲಿ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ

Published

on

ಸುದ್ದಿದಿನ ಡೆಸ್ಕ್ : ಬಂಗಾಳ ಕೊಲ್ಲಿಯಲ್ಲಿ ತೀವ್ರ ವಾಯುಭಾರ ಕುಸಿತದಿಂದ ’ಅಸಾನಿ’ ಚಂಡಮಾರುತ ತೀವ್ರಗೊಳ್ಳಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಇಂದು ನಸುಕಿನ ಜಾವ 5.30ರ ಹೊತ್ತಿಗೆ ಕೇಂದ್ರೀಕೃತವಾಗಿತ್ತು, ಮುಂದಿನ 24ಗಂಟೆಗಳಲ್ಲಿ ಇದು ವಾಯವ್ಯ ದಿಕ್ಕಿನಲ್ಲಿ ಚಲಿಸುವ ಸಾಧ್ಯತೆಯಿದೆ. ಮುಂದಿನ 24ಗಂಟೆಗಳಲ್ಲಿ ಪೂರ್ವ ಮಧ್ಯ ಬಂಗಾಳ ಕೊಲ್ಲಿಯಲ್ಲಿ ತೀವ್ರವಾದ ಚಂಡಮಾರುತವಾಗಿ ತೀವ್ರಗೊಳ್ಳುವ ಸಾಧ್ಯತೆಯಿದೆ ಎಂದು ಭಾರತ ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಆಂಧ್ರಪ್ರದೇಶ ಮತ್ತು ಒಡಿಶಾ ಕರಾವಳಿಯಿಂದ ಪಶ್ಚಿಮ-ಮಧ್ಯ ಮತ್ತು ಪಕ್ಕದ ವಾಯವ್ಯ ಬಂಗಾಳ ಕೊಲ್ಲಿಯಲ್ಲಿ ತೀವ್ರ ಚಂಡಮಾರುತದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಚಂಡಮಾರುತ ರಾಜ್ಯದ ಕರಾವಳಿಗೆ ಅಪ್ಪಳಿಸುವುದಿಲ್ಲ ಎಂಬ ಮಾಹಿತಿ ಪಡೆದ ನಂತರವೂ ಭದ್ರತಾಪಡೆಗಳನ್ನು ತೀವ್ರ ಕಟ್ಟೆಚ್ಚರ ವಹಿಸುವಂತೆ ನಿಯೋಜಿಸಲಾಗಿದೆ. ಅಗತ್ಯವಿದ್ದರೆ 7.5 ಲಕ್ಷ ಜನರನ್ನು ಸ್ಥಳಾಂತರಿಸಲು ರಾಜ್ಯ ಸಿದ್ಧವಾಗಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಕೇರಳದಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರ ಮಳೆಯಾಗಿದೆ. ಮುಂದಿನ ಮೂರು ನಾಲ್ಕು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅಸಾನಿ ಚಂಡಮಾರುತದ ಪ್ರಭಾವದಿಂದ ರಾಜ್ಯದ ಕರಾವಳಿ ಭಾಗದಲ್ಲಿ ಬಿರುಗಾಳಿ ಬೀಸಲಿದೆ. ತೀರ ಪ್ರದೇಶದಲ್ಲಿರುವ ಮೀನುಗಾರರು ಹಾಗೂ ಇತರೆ ಜನರನ್ನು ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚಿಸಲಾಗಿದೆ. ಮುಂದಿನ ಒಂದು ವಾರದ ಕಾಲ ಮೀನುಗಾರಿಕೆಗೆ ತೆರಳದಂತೆಯೂ ಸೂಚನೆ ನೀಡಲಾಗಿದೆ
ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿಯೂ ಆಸಾನಿ ಚಂಡಮಾರುತ ಅಬ್ಬರ ಹೆಚ್ಚಾಗಿದೆ. ಗಂಟೆಗೆ 40-50 ಕಿಲೋ ಮೀಟರ್ ವೇಗದಲ್ಲಿ ಚಂಡಮಾರುತ ಬೀಸುತ್ತಿದೆ. ಮುಂದಿನ ಕೆಲವು ಗಂಟೆಗಳಲ್ಲಿ ಇದು ಕರಾವಳಿ ಭಾಗಗಳಿಗೆ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮುಂದಿನ ಕೆಲವು ಗಂಟೆಗಳ ನಂತರ ಬಿರುಗಾಳಿಯ ವೇಗದ ಪ್ರಮಾಣ ಇನ್ನಷ್ಟು ಹೆಚ್ಚಬಹುದು ಎಂದು ನಿರೀಕ್ಷಿಸಲಾಗಿದೆ. ತೆಲಂಗಾಣದ ಕರಾವಳಿ ಭಾಗಗಳಲ್ಲಿಯೂ ಭಾರಿ ಮಳೆಯಾಗುತ್ತಿದೆ. ಬಿರುಗಾಳಿ, ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ. ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ವಿವರಿಸಿದ್ದಾರೆ.

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಇತರೆ ಭಾಗಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲೆಯ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆಯು ಒಟ್ಟಾರೆ ಶೇಕಡ 81.99 ರಷ್ಟು ಸಾಧನೆ ಮಾಡಿದ್ದು, ರಾಜ್ಯದಲ್ಲಿ 25 ನೇ ಸ್ಥಾನ ಪಡೆದಿದೆ. ಈ ಬಾರಿಯೂ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಜಿಲ್ಲೆಯಲ್ಲಿ ಅತಿ ಹೆಚ್ಚು ಶೇಕಡ 90.91 ರಷ್ಟು ಫಲಿತಾಂಶ ಪಡೆದು ಮೇಲುಗೈ ಸಾಧಿಸಿದ್ದಾರೆ.

ಜಿಲ್ಲೆಯಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು 20,810 ವಿದ್ಯಾರ್ಥಿಗಳ ಪೈಕಿ 16,046 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು ಶೇಕಡ 77.11 ರಷ್ಟು ಹಾಗೂ ಹೊಸದಾಗಿ ಪರೀಕ್ಷೆ ಬರೆದ (Freshers) 18,949 ವಿದ್ಯಾರ್ಥಿಗಳಲ್ಲಿ 15,540 ಮಂದಿ ಉತ್ತೀರ್ಣರಾಗಿದ್ದಾರೆ ಶೇಕಡ 82.01 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ವಿಭಾಗವಾರು ಫಲಿತಾಂಶದ ವಿಶ್ಲೇಷಣೆ

ವಿಜ್ಞಾನ ವಿಭಾಗ (Science): ಜಿಲ್ಲೆಯಲ್ಲಿ ಅತಿ ಹೆಚ್ಚು ಸಾಧನೆ ಈ ವಿಭಾಗದಲ್ಲಿ ದಾಖಲಾಗಿದೆ. ಒಟ್ಟು 12,536 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,936 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 87.24). ಹೊಸ ವಿದ್ಯಾರ್ಥಿಗಳ ಪೈಕಿ 11,770 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,736 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 90.91 ರಷ್ಟು ಅದ್ಭುತ ಫಲಿತಾಂಶ ಬಂದಿದೆ.

ವಾಣಿಜ್ಯ ವಿಭಾಗ (Commerce)

ಈ ವಿಭಾಗದಲ್ಲಿ ಹಾಜರಾದ 4,295 ವಿದ್ಯಾರ್ಥಿಗಳಲ್ಲಿ 3,075 ಮಂದಿ ಉತ್ತೀರ್ಣರಾಗಿದ್ದಾರೆ (ಶೇ. 71.59). ಹೊಸ ವಿದ್ಯಾರ್ಥಿಗಳ ಪೈಕಿ 3858 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 2960 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 76.72 ರಷ್ಟು ಫಲಿತಾಂಶ ಬಂದಿದೆ.

ಕಲಾ ವಿಭಾಗ (Arts): ಕಲಾ ವಿಭಾಗದಲ್ಲಿ ಒಟ್ಟು 3,979 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 2,035 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 51.14). ಹೊಸ ವಿದ್ಯಾರ್ಥಿಗಳ ಪೈಕಿ 3321 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 1880 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 56.61 ರಷ್ಟು ಫಲಿತಾಂಶ ಬಂದಿದೆ.

ಜಿಲ್ಲೆಯ ಒಟ್ಟಾರೆ ಫಲಿತಾಂಶದಲ್ಲಿ ವಿಜ್ಞಾನ ವಿಭಾಗವು ಪ್ರಥಮ ಸ್ಥಾನದಲ್ಲಿದ್ದರೆ, ವಾಣಿಜ್ಯ ಮತ್ತು ಕಲಾ ವಿಭಾಗಗಳು ನಂತರದ ಸ್ಥಾನ ಪಡೆದಿವೆ ಎಂದು ಉಪ ನಿರ್ದೇಶಕ ಪಳಿನಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ

Published

on

ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಇಂದು ನಡೆದ ಉಪ ಚುನಾವಣೆಯು ಅತ್ಯಂತ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಒಟ್ಟಾರೆ ಶೇ. 68.55ರಷ್ಟು ಮತದಾನ ದಾಖಲಾಗಿದೆ.

ಬೆಳಿಗ್ಗೆಯಿಂದಲೇ ಮತಗಟ್ಟೆಗಳ ಮುಂದೆ ಮತದಾರರು ಉತ್ಸಾಹದಿಂದ ಸರದಿಯಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸಿದರು. ಚುನಾವಣಾ ಆಯೋಗದ ಕಟ್ಟುನಿಟ್ಟಿನ ಕ್ರಮಗಳು ಹಾಗೂ ಪೊಲೀಸ್ ಬಂದೋಬಸ್ತ್ನಿಂದಾಗಿ ಯಾವುದೇ ಅಹಿತಕರ ಘಟನೆಗಳಿಲ್ಲದೆ ಮತದಾನ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು.

ಯುವಕರು ಹಾಗೂ ಹಿರಿಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಮತದಾನ ಮಾಡಿದ್ದು ಕಂಡುಬಂದಿತು. ಚುನಾವಣಾ ಸಿಬ್ಬಂದಿ ಹಾಗೂ ಭದ್ರತಾ ಪಡೆಯ ಸಹಕಾರದೊಂದಿಗೆ ಮತದಾನ ಪ್ರಕ್ರಿಯೆಯು ಸುಗಮವಾಗಿ ಜರುಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ

Published

on

ಸುದ್ದಿದಿನಡೆಸ್ಕ್:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಹದಡಿ ಗ್ರಾಮದ ಮತಗಟ್ಟೆಯಲ್ಲಿ ತೃತೀಯ ಲಿಂಗತ್ವ ಮತದಾರರು ಮತಗಟ್ಟೆಗೆ ಆಗಮಿಸಿ ಸಂತೋಷದಿಂದ ಮತ ಚಲಾಯಿಸಿದರು.

ಸಮಾಜದ ಪ್ರತಿಯೊಬ್ಬರಿಗೂ ಸಮಾನ ಹಕ್ಕು ಎಂಬ ಸಂದೇಶವನ್ನು ಸಾರಿದ ಕ್ಷಣ! ತಮ್ಮ ಅಮೂಲ್ಯ ಮತದಾನದ ಮೂಲಕ ಪ್ರಜಾಪ್ರಭುತ್ವವನ್ನು ಬಲಪಡಿಸಿದ ತೃತೀಯ ಲಿಂಗತ್ವ ಮತದಾರರಿಗೆ ಅಭಿನಂದನೆಗಳು ಎಂದು ಜಿಲ್ಲಾ ಪಂಚಾಯತ್ ಸಿಇಓ ತಿಳಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending