ಕ್ರೀಡೆ
ದಾವಣಗೆರೆ | ರಾಜ್ಯ ಮಟ್ಟದ ಅಥ್ಲೆಟಿಕ್ಸ್ ಸ್ಪರ್ಧೆಯಲ್ಲಿ ವೇಣುಗೋಪಾಲ್ ಗೆ ಪ್ರಥಮ ಸ್ಥಾನ
ಸುದ್ದಿದಿನ,ದಾವಣಗೆರೆ : ನಗರದ ಕ್ರೀಡಾ ವಸತಿ ನಿಲಯದ ಕ್ರೀಡಾಪಟುವಾದ ವೇಣುಗೋಪಾಲ್ ಎಸ್ ಇವರು ಇತ್ತೀಚೆಗೆ ಮಂಡ್ಯ ಜಿಲ್ಲೆಯ ಆದಿಚುಂಚನಗಿರಿಯಲ್ಲಿ ನಡೆದ ರಾಜ್ಯ ಮಟ್ಟದ 17 ವರ್ಷದೊಳಗಿನ ಬಾಲಕರ ಪ್ರೌಢ ಶಾಲಾ ವಿಭಾಗದ ಅಥ್ಲೆಟಿಕ್ಸ್ ಸ್ಪರ್ಧೆಯ 400 ಮೀ ಓಟದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲೆಗೆ ಕೀರ್ತಿ ತಂದಿರುತ್ತಾರೆ.
ಡಿ.04 ರಿಂದ 08 ರವರೆಗೆ ಪಂಜಾಬ್‍ನ ಸಂಗ್ರೂರ್‍ನಲ್ಲಿ ನಡೆಯುವ ರಾಷ್ಟ್ರ ಮಟ್ಟದ ಅಥ್ಲೆಟಿಕ್ಸ್ ಸ್ಪರ್ಧೆಗೆ ರಾಜ್ಯ ತಂಡದಿಂದ ಇವರು ಆಯ್ಕೆಯಾಗಿರುತ್ತಾರೆ. ಈ ಕ್ರೀಡಾಪಟುವು ರಾಷ್ಟ್ರಮಟ್ಟದಲ್ಲಿ ಉತ್ತಮ ಸಾಧನೆ ಮಾಡಿ, ಜಿಲ್ಲೆಗೆ ಹಾಗೂ ರಾಜ್ಯಕ್ಕೆ ಕೀರ್ತಿ ತರಲೆಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಬಿ. ಶ್ರೀನಿವಾಸ್ ಮತ್ತು ಎಲ್ಲಾ ತರಬೇತುದಾರರು ಹಾಗೂ ಸಿಬ್ಬಂದಿ ವರ್ಗದವರು ಶುಭಹಾರೈಸಿದ್ದಾರೆಂದು ಪ್ರಕಟಣೆ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243