ದಿನದ ಸುದ್ದಿ
ಆತ್ಮನಿರ್ಭರ ಯೋಜನೆ ಚುರುಕುಗೊಳಿಸಿ : ಬ್ಯಾಂಕ್ ಮ್ಯಾನೇಜರ್ ಗಳು ಸಹಕರಿಸದಿದ್ದರೆ ದೂರು
ಸುದ್ದಿದಿನ, ದಾವಣಗೆರೆ : ಪ್ರಧಾನಮಂತ್ರಿಯವರ ಮಹಾತ್ವಾಕಾಂಕ್ಷಿ ಯೋಜನೆಯಾದ ಆತ್ಮ ನಿರ್ಭರ ಯೋಜನೆಯಡಿ ಹೆಚ್ಚು ಹೆಚ್ಚು ಜನರಿಗೆ ಬ್ಯಾಂಕ್ ಮುಖಾಂತರ ಸಾಲಸೌಲಭ್ಯ ನೀಡಬೇಕು. ಬೀದಿಬದಿ ವ್ಯಾಪಾರಿಗಳ ಕಲ್ಯಾಣಕ್ಕಾಗಿ ಆರಂಭಿಸಿರುವ ಯೋಜನೆ ಜಿಲ್ಲೆಯಲ್ಲಿ ಹೆಚ್ಚು ಜನರನ್ನು ತಲುಪುತ್ತಿಲ್ಲ. ಅಧಿಕಾರಿಗಳು ಬ್ಯಾಂಕ್ ಮ್ಯಾನೇಜರ್‍ಗಳು ಸಹಕರಿಸುತ್ತಿಲ್ಲವೆಂದು ಕೆಲವು ಅಧಿಕಾರಿಗಳು ಜಿಲ್ಲಾಡಳಿತ ಭವನದ ಕಚೇರಿ ಸಭಾಂಗಣದಲ್ಲಿ ಬುಧುವಾರದಂದು ಏರ್ಪಡಿಸಿದ್ದ ಕೋವಿಡ್ ನಿರ್ವಹಣಾ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು.
ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು, ಬ್ಯಾಂಕ್ ಮ್ಯಾನೇಜರ್‍ಗಳಿಗೆ ಲೀಡ್ ಬ್ಯಾಂಕ್ ಮ್ಯಾನೇಜರ್ ರವರಿಂದ ಮಾಗದರ್ಶನ ಕೊಡಿಸಿ, ಒಂದು ವೇಳೆ ಯಾವುದೇ ಬ್ಯಾಂಕ್ ಮ್ಯಾನೇಜರ್ ಈ ವಿಚಾರದಲ್ಲಿ ಅಸಡ್ಡೆತನ ಪ್ರದರ್ಶಸಿದರೆ ಅಥವಾ ಸಾಲ ಮಂಜೂರಾತಿಗೆ ಅಸಹಕಾರ ತೋರಿದರೆ ಅವರ ವಿರುದ್ದ ಸರ್ಕಾರಕ್ಕೆ ನೇರವಾಗಿ ದೂರು ನೀಡಲಾಗುವುದೆಂದರು.
ಸಭೆಯಲ್ಲಿ ಎಡಿಸಿ ಪೂಜಾರ ವೀರಮಲ್ಲಪ್ಪ, ಉಪವಿಭಾಗಾಧಿಕಾರಿ ಮಮತ ಹೊಸಗೌಡರ್, ಜಿಲ್ಲಾ ಕೋವಿಡ್ ನೋಡಲ್ ಅಧಿಕಾರಿ ಪ್ರಮೋದ್ ನಾಯಕ್, ಮಹಾನಗರಪಾಲಿಕೆ ಆಯುಕ್ತ ವಿಶ್ವನಾಥ್ ಮುದ್ದಜ್ಜಿ, ಡಿಹೆಚ್‍ಓ ನಾಗರಾಜು, ಡಿಎಸ್‍ಓ ಡಾ.ರಾಘವನ್, ನಗರಾಭಿವೃದ್ದಿ ಕೋಶದ ಅಧಿಕಾರಿ ನಜ್ಮ ವಿವಿಧ ಸ್ಥಳೀಯ ಸಂಸ್ಥೆಯ ಮುಖ್ಯಾಧಿಕಾರಿಗಳು ಇದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243