Connect with us

ದಿನದ ಸುದ್ದಿ

ಮಸೀದಿ ಧ್ವಂಸದ ಚಾರಿತ್ರಿಕ ನೋಟ : ಎಲ್ಲರೂ ನಿರ್ದೊಷಿಗಳಾದರೆ ಧ್ವಂಸಗೈದವರಾರು..?

Published

on

  • ಹಾರೋಹಳ್ಳಿ ರವೀಂದ್ರ

ಯೋಧ್ಯೆ ಭಾರತದ ಪ್ರಾಚೀನ ನಗರಗಳಲ್ಲಿ ಒಂದು. ಇದು ಉತ್ತರ ಪ್ರದೇಶದ ಫೈಜಾಬಾದ್ ಜಿಲ್ಲೆಯಲ್ಲಿದೆ. ಅಯೋಧ್ಯೆಯು ಸರಾಯು ನದಿಯ ತೀರದಲ್ಲಿದ್ದು, ಭಾರತದ ರಾಜಧಾನಿ ದೆಹಲಿಯಿಂದ 555 ಕಿಲೋಮೀಟರ್ ದೂರದಲ್ಲಿದೆ. ಮೊಘಲ್ ಸಾಮ್ರಾಜ್ಯವು ಭಾರತೀಯ ಉಪಖಂಡ ಉತ್ತರ ಭಾಗಗಳನ್ನು 16ನೇ ಶತಮಾನದಲ್ಲಿ ಆಳಿದ ಪ್ರಮುಖ ಸಾಮ್ರಾಜ್ಯಗಳಲ್ಲಿ ಒಂದು.

ಮೊಘಲ್ ಸಾಮ್ರಾಜ್ಯ ಅಸ್ತಿತ್ವಕ್ಕೆ ಬರುವ ಮುನ್ನ ದೆಹಲಿ ಸುಲ್ತಾನರು ಅಧಿಕಾರ ನಡೆಸುತ್ತಿದ್ದರು. ದೆಹಲಿ ಸುಲ್ತಾನರ ಕೊನೆಯ ದೊರೆಯಾದ ಇಬ್ರಾಹಿಂ ಲೂದಿಯನ್ನು 1526ರ ಮೊದಲನೇ ಪಾಣಿಪತ್ ಕದನದಲ್ಲಿ ಸೋಲಿಸಿ ಮೊಘಲ್ ಸಾಮ್ರಾಜ್ಯದ ಅಸ್ತಿತ್ವಕ್ಕೆ ಬಾಬರ್ನು ಕಾರಣಕರ್ತನಾಗುತ್ತಾನೆ.

ಅಯೋಧ್ಯೆಯಲ್ಲಿ ಒಂದು ಐತಿಹಾಸಿಕ ಹಿನ್ನೆಲೆಯುಳ್ಳ ಮಸೀದಿಯಿತ್ತು ಎಂದರೆ ಅದು ಬಾಬ್ರೀ ಮಸೀದಿ. ಈ ಬಾಬ್ರೀ ಮಸೀದಿಯನ್ನು ಮಸ್ವಿದ್-ಇ-ಜನ್ಮಸ್ಥಾನ್, ಜಾಮೀಮಸೀದಿ ಎಂದು ಹಲವಾರು ಹೆಸರುಗಳಿಂದ ಕರೆಯುತ್ತಾರೆ. ಆ ಸ್ಥಳದಲ್ಲಿ ದೇವಸ್ಥಾನ ಇದ್ದಿದ್ದೆ ಹಿಂದೂ ಹಾಗೂ ಮುಸ್ಲಿಮರ ಮನಸ್ಥಾಪಕ್ಕೆ ಕಾರಣವಾಗಿದ್ದು, ಆ ಸ್ಥಳದಲ್ಲಿ ಹಿಂದೂ ಮತ್ತು ಮುಸ್ಲೀಮರು ಒಟ್ಟಿಗೆ ಪ್ರಾರ್ಥನೆ ಸಲ್ಲಿಸುತ್ತಿದ್ದರು.

ಆದರೆ ದೇಗುಲ ನೆಪ ಮಾಡಿಕೊಂಡು ಹಿಂದೂ ಮತ್ತು ಮುಸಲ್ಮಾನರಿಗೆ ಮನಸ್ಥಾಪ ಉಂಟಾಗುವಂತೆ ಮಾಡಿದ್ದು ಹಿಂದೂಪರ ಸಂಘಟನೆಗಳು. ಕೋಮುವಾದದ ಬೆಂಕಿಯನ್ನು ಬಾಬ್ರೀ ಮಸೀದಿಯನ್ನು ಧ್ವಂಸಮಾಡುವ ಮೂಲಕ ಹಚ್ಚಿದರು. ಆ ಮೂಲಕ ಆತನಕವೂ ಇಲ್ಲದಿದ್ದ ಧರ್ಮ ಕಲಹ ಮೊಳಕೆಯೊಡೆಯಿತು. ಅದಕ್ಕೆ ಅವರು ನೆಪ ಮಾಡಿಕೊಂಡಿದ್ದು ರಾಮ ಮಂದಿರ ಘೋಷಾವಾಕ್ಯ.

ರಾಮಮಂದಿರ ಕಟ್ಟುವ ಘೋಷಣೆಯೊಂದಿಗೆ ಆಂದೋಲನ ಆರಂಭಿಸಿದ್ದು ವಿಶ್ವ ಹಿಂದೂ ಪರಿಷತ್ತೇ ಆದರು, ಆ ಹೋರಾಟದ ಹಿಂದಿನ ಶಕ್ತಿ ಹಾಗೂ ಅದನ್ನು ಉತ್ತುಂಗಕ್ಕೆ ಕೊಂಡೊಯ್ದದ್ದು ಬಿಜೆಪಿ ನಾಯಕ ಎಲ್.ಕೆ.ಅಡ್ವಾಣಿ, ರಾಮ ರಥಯಾತ್ರೆ ಅವರದೇ ಕಲ್ಪನೆ. ಅದು ರಾಮಭೂಮಿ ಹೋರಾಟಕ್ಕೂ ಆ ಮೂಲಕ ಹಿಂದುತ್ವ ಹೋರಾಟಕ್ಕೂ ಜೊತೆಗೆ ದೇಶದಾದ್ಯಂತ ಬಿಜೆಪಿಗೂ ಟಾನಿಕ್ ನೀಡಿತು. ಮುಂದೆ ಅದೇ ಮಸೀದಿ ಧ್ವಂಸಕ್ಕೂ ಕಾರಣವಾಯಿತು.

ದೇಶದಾದ್ಯಂತ ಹಲವು ರಥಯಾತ್ರೆಗಳನ್ನು ನಡೆಸಿ ಪ್ರಸಿದ್ದಿಗಳಿಸಿರುವ ಬಿಜೆಪಿ ನಾಯಕ ಎಲ್.ಕೆ.ಅಡ್ವಾಣಿ ಅವರ ಮೊದಲ ರಥಯಾತ್ರೆ ‘ರಾಮ ರಥಯಾತ್ರೆ’ ರಾಮ ಜನ್ಮ ಭೂಮಿಯನ್ನು ಸ್ವತಂತ್ರಗೊಳಿಸುವ ಉದ್ದೇಶಗೊಳೊಂದಿಗೆ ಬಿಜೆಪಿ 1990 ಸೆಪ್ಟೆಂಬರ್ 25 ರಂದು ಗುಜರಾತ್ನ ಸೋಮನಾಥದಲ್ಲಿ ರಥಯಾತ್ರೆಗೆ ಚಾಲನೆ ನೀಡಿದರು. 10 ಸಾವಿರ ಕಿ.ಮೀ ಕ್ರಮಿಸಿ ಅದು ಅಕ್ಟೋಬರ್ 30 ರಂದು ಅಯೋಧ್ಯೆಗೆ ತಲುಪುವುದು ಎಂದು ನಿಗದಿಯಾಗಿತ್ತು. ಬಿಜೆಪಿ ಕಾರ್ಯಕರ್ತರು ಹಿಂದೂಗಳ ಮನೆಮನೆಗೆ ತೆರಳಿ ರಾಮಮಂದಿರ ಕಟ್ಟಲು ಇಟ್ಟಿಗೆ ಸಂಗ್ರಹಿಸಿದರು ಆದರೆ ಯಾತ್ರೆ ಕೊನೆಗೊಳ್ಳಲಿಲ್ಲ.

1992, ಡಿಸೆಂಬರ್ 6, ದೇಶದ ಮೂಲೆ ಮೂಲೆಗಳಿದ ಉತ್ತರ ಪ್ರದೇಶದ ಅಯೋಧ್ಯೆಗೆ ಕರಸೇವಕರ ದಂಡು ತೆರಳಿತು. ವಿಎಚ್ಪಿ, ಶಿವಸೇನೆ, ಬಿಜೆಪಿ ಸೇರಿದಂತೆ ಹಿಂದೂ ಸಂಘಟನೆಗಳ ಸಾವಿರಾರು ಕಾರ್ಯಕರ್ತರು ಅಲ್ಲಿ ನೆರೆದಿದ್ದರು. ನೋಡ ನೋಡುತ್ತಿದ್ದಂತೆಯೇ ಕರಸೇವಕರ ಸೇನೆ ರಾಮ್ಕೋರ್ಟ್ ಪರ್ವತ ಏರಿ ಸಂಜೆಯ ಸೂರ್ಯ ಬಾನಂಚು ಸೇರುವುದೊಳಗೆ ಬಾಬರಿ ಮಸೀದಿಯ ಮೂರು ಗುಮ್ಮಟಗಳನ್ನು ನೆಲಕ್ಕುರುಳಿಸಿದರು. ಅವಶೇಷಗಳಡಿ ಸಿಕ್ಕಿ ಕೆಲ ಕರಸೇವಕರು ಪ್ರಾಣಬಿಟ್ಟರು.

ಕೇಂದ್ರ ಸರ್ಕಾರ ಸ್ಥಳಕ್ಕಟ್ಟಿದ್ದ ಸೇನಾಪಡೆಯ ಯೋಧರಿಗೆ ಮಸೀದಿಯ ಸಮೀಪಕ್ಕು ಹೋಗಲು ಸಾಧ್ಯವಾಗಲಿಲ್ಲ. ಅಂದು ಕೇಂದ್ರ ಸರ್ಕಾರದಲ್ಲಿ ಕಾಂಗ್ರೆಸ್ ಅಸ್ತಿತ್ವದಲ್ಲಿದ್ದು, ಈ ದುರಂತವನ್ನು ತಡೆಯುವಲ್ಲಿ ವಿಫಲವಾಯಿತು. ತದನಂತರ ಪಿ.ವಿ.ನರಸಿಂಹರಾವ್ ನೇತೃತ್ವದ ಕೇಂದ್ರ ಸಕರ್ಾರ ಉತ್ತರ ಪ್ರದೇಶದ ಕಲ್ಯಾಣ್ಸಿಂಗ್ ಅವರ ಬಿ.ಜೆ.ಪಿ ಸರ್ಕಾರವನ್ನು ವಜಾಮಾಡಿ ರಾಷ್ಟ್ರಪತಿ ಆಳ್ವಿಕೆ ಜಾರಿಮಾಡಿತು.

ಬಾಬ್ರಿ ಮಸೀದಿ ಬೆನ್ನಲ್ಲೆ ದೇಶದಾದ್ಯಂತ ಕೋಮುಗಲಭೆಗಳು ಆರಂಭವಾದವು. ಅಯೋಧ್ಯೆಗೆ ತೆರಳಿದ ಕರ ಸೇವಕರು ತವರಿಗೆ ಬಂದು ಸೇರುವುದಕ್ಕೂ ಮುನ್ನವೇ ಅವರ ಊರು ಹೊತ್ತಿ ಉರಿಯುತ್ತಿದ್ದವ್ತು. ರಾಜಧಾನಿ ದೆಹಲಿ, ವಾಣಿಜ್ಯ ರಾಜಧಾನಿ ಮುಂಬೈ ಸೇರಿದಂತೆ ದೇಶದ ಮೂಲೆ ಮೂಲೆಗಳಲ್ಲೂ ಎರಡು ಕೋಮುಗಳ ನಡುವೆ ಸಂಘರ್ಷ ನಡೆಯಿತು.

ಕರ್ನಾಟಕದಲ್ಲಿ ಬೆಂಗಳೂರು, ಮೈಸೂರು, ಗುಲ್ಬರ್ಗ, ಬೀದರ್, ಹುಬ್ಬಳ್ಳಿ, ಧಾರವಾಡ, ದ.ಕನ್ನಡ, ರಾಯಚೂರು, ಚಿತ್ರದುರ್ಗ, ಮಂಡ್ಯ ಮತ್ತು ತುಮಕೂರು ಸೇರಿದಂತೆ ಕೋಮು ಗಲಭೆಗಳು ನಡೆದವು ಡಿ.7 ರಂದು ಆರಂಭವಾದ ಕರ್ನಾಟಕದಲ್ಲಿನ ಹಿಂಸಾಚಾರವು ಒಂದು ತಿಂಗಳಿಗೂ ಹೆಚ್ಚು ಕಾಲ ನಡೆಯಿತು.

ಇದಕ್ಕೆ 78 ಮಂದಿ ಬಲಿಯಾಗಿದ್ದರು, ಅದರಲ್ಲಿ ಪೊಲೀಸರ ಗುಂಡಿಗೆ ಬಲಿಯಾದವರು 33 ಜನ. ಒಟ್ಟಾರೆ ದೇಶದಾಧ್ಯಂತ ಈ ಕೋಮುಗಲಭೆಯಿಂದ ಸುಮಾರು 2000ಕ್ಕು ಹೆಚ್ಚು ಜನರು ಪ್ರಾಣಬಿಟ್ಟರು. ಇದಾದ ನಂತರ 1996ರಲ್ಲಿ ಕೇಂದ್ರದಲ್ಲಿ ಮೊದಲಬಾರಿಗೆ ಬಿಜೆಪಿ ನೇತೃತ್ವದ ಸರ್ಕಾರ ಅಸ್ಥಿತ್ವಕ್ಕೆ ಬಂತು. ಅಟಲ್ಬಿಹಾರಿ ವಾಜಪೇಯಿ ಪ್ರಧಾನಿಯಾದರು.

ಲಿಬ್ಹರಾನ್ ಆಯೋಗ

16 ಡಿಸೆಂಬರ್ 1992 ರಂದು ನ್ಯಾಯಮೂರ್ತಿ ಲಿಬ್ಹರಾನ್ ನೇತೃತ್ವದಲ್ಲಿ ಬಾಬ್ರಿ ಮಸೀದಿ ಧ್ವಂಸ ಕುರಿತು ತನಿಖೆಗಾಗಿ ಆಯೋಗವೊಂದನ್ನು ರಚಿಸಲಾಯಿತು. ಆಯೋಗಕ್ಕೆ ಮೊದಲ ಆದೇಶದಲ್ಲಿ ನೀಡಿದ್ದು ಮೂರೇ ತಿಂಗಳ ಅವಧಿ. ಆದರೆ ಪ್ರಧಾನಿಯ ಕೈಗೆ ನ್ಯಾಯಮೂರ್ತಿ ಲಿಬ್ಹರಾನ್ ವರದಿಯನ್ನು ಒಪ್ಪಿಸಿದ್ದು ಅದಾದ ಹದಿನೇಳು ವರ್ಷಗಳ ನಂತರ, 48 ಬಾರಿ ಕೇಂದ್ರ ಸರ್ಕಾರ ಆಯೋಗದ ಅವಧಿಯನ್ನು ವಿಸ್ತರಿಸಬೇಕಾಯಿತು.

ವರದಿಯು 900 ಕ್ಕು ಹೆಚ್ಚು ಪುಟ್ಳನ್ನು ಒಳಗೊಂಡಿದ್ದು ಆಯೋಗದ ಕಾರ್ಯಕಲಾಪಕ್ಕೆ ಸುಮಾರು 8 ಕೋಟಿ ವೆಚ್ಚವಾಗಿದೆ. ಲಿಬ್ಹರಾನ್ ವರದಿಯಲ್ಲಿ ಮಾಜಿ ಉಪಪ್ರಧಾನಿ ಎಲ್.ಕೆ.ಅಡ್ವಾಣಿ, ಸಚಿವ ಮುರುಳಿ ಮನೋಹರ ಜೋಶಿ, ಉಮಾಭಾರತಿ ಇವರು ಧ್ವಂಸಕ್ಕೆ ನೇರ ಕಾರಣರು, ಇದಲ್ಲದೆ ಮಸೀದಿ ಧ್ವಂಸ ತಡೆಯಲು ಅಂದಿನ ಕಾಂಗ್ರೆಸ್ ಸರ್ಕಾರ ಪ್ರಧಾನಿಯಾದ ನರಸಿಂಹರಾವ್ ಸೂಕ್ತ ಕ್ರಮ ಕೈಗೊಳ್ಳಲಿಲ್ಲ. ಅಡ್ವಾಣಿ ರಥಯಾತ್ರೆ ಮಾಡಿದ್ದು ತಪ್ಪು. ಇಡೀ ಘಟನೆಯಲ್ಲಿ ವಿ ಎಚ್ ಪಿ ನಾಯಕರ ಪಾತ್ರ ಪ್ರಮುಖ ಎಂದು ಹೇಳಿತು.

ಮಸೀದಿಯ 2010ರ ಸೆಪ್ಟೆಂಬರ್ ತೀರ್ಪು

ಅಯೋಧ್ಯೆಯನ್ನು ಹೊಂದಿರುವ ಉತ್ತರಪ್ರದೇಶ ಭಯದ ಕಾರ್ಮೋಡ, ಇತರೆ ರಾಜ್ಯಗಳಲ್ಲಿಯೂ ಜನಮನದಲ್ಲೂ ಎಂಥದ್ದೊ ಒಂದು ರೀತಿಯ ಆತಂಕ ಮತ್ತು ಕಳವಳ, ಮುಂಜಾಗ್ರತ ಕ್ರಮವಾಗಿ ಉತ್ತರ ಪ್ರದೇಶದ ಅಂದಿನ ಮಾಯಾವತಿ ಸರ್ಕಾರವು ಅಯೋಧ್ಯೆಯಲ್ಲಿ ಸೆಕ್ಷನ್ 144ರ ಅನ್ವಯ ನಿಷೇಧಾಜ್ಞೆಯನ್ನು ಆಗಸ್ಟ್ 30 ರಿಂದಲೇ ಜಾರಿಗೆ ತಂದಿತ್ತು. ಕೋಮು ಸಂಘರ್ಷ ಮರುಕಳಿಸದಂತೆ ತಡೆಯಲು ಅವಳಿ ನಗರಗಳಾದ ಅಯೋಧ್ಯೆ, ಫೈಜಾಬಾದ್ನಲ್ಲಿ ಹೆಚ್ಚಿನ ಭದ್ರತೆ ಒದಗಿಸಲಾಗಿತ್ತು. ಎಲ್ಲಿ ನೋಡಿದರೂ ಖಾಕಿಗಳ ದಂಡು ಸುಮಾರು 2 ಲಕ್ಷ ಭದ್ರತಾ ಸಿಬ್ಬಂದಿ, ಉತ್ತರ ಪ್ರದೇಶದ ಪ್ರಮುಖ ಬೀದಿಗಳಲ್ಲಿ ಗಸ್ತು ತಿರುಗುತ್ತಿದ್ದರು. 1500 ಪೊಲೀಸರು ಹೈಕೋರ್ಟ್ ಆವರಣದಲ್ಲಿ ನಿಯೋಜಿಸಲಾಗಿತ್ತು.

2010 ಸೆಪ್ಟೆಂಬರ್ 30 ರಂದು ಅಲಹಬಾದ್ ಹೈಕೋರ್ಟ್ ತನ್ನ ತೀರ್ಪನ್ನು ಪ್ರಕಟಿಸಿತು. ನ್ಯಾಯಮೂರ್ತಿಗಳಾದ ಡಿ.ವಿ.ಶರ್ಮಾ, ಸುಧೀರ್ ಅಗರವಾಲ್ ಮತ್ತು ಎಸ್.ಯು ಖಾನ್ ಅವರಿದ್ದ ತ್ರಿಸದಸ್ಯ ಪೀಠ 2-1 ರ ಆಧಾರದ ಮೇಲೆ 2.77 ಎಕರೆ ಮಸೀದಿ ಜಾಗವನ್ನು ಮೂರು ಭಾಗವಾಗಿ ವಿಂಗಡಿಸಿತು. ಹಿಂದೂ ಮಹಾಸಭಾ ಪ್ರತಿನಿಧಿತ್ವದ ರಾಮಲಲ್ಲ, ಇಸ್ಲಾಂ ಪ್ರತಿನಿಧಿತ್ವದ ಸುನ್ನಿವಕ್ಫ್ ಮಂಡಳಿ ಹಾಗೂ ನಿರ್ಮೋಹಿ ಅಖಾಡಕ್ಕೆ ಸೇರಿದಂತೆ ಮೂರು ಭಾಗಮಾಡಿತು.

ಫಲಕಾರಿಯಾಗದ ಸಂಧಾನ

ಮಸೀದಿ ವಿವಾದ ತೀರ್ಪನ್ನು ಎರಡೂ ಕಡೆಯ ಧಾರ್ಮಿಕ ಮುಖಂಡರು ಒಪ್ಪಲಿಲ್ಲ. ಆದರೆ ಇದನ್ನು ಮಾತುಕತೆ ಮೂಲಕ ಬಗೆಹರಿಸಲು ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಸಭೆಯಲ್ಲಿ ಈ ಬಗ್ಗೆ ನಿರ್ಣಯ ಕೈಗೊಂಡರು. ಆದರೆ ಕಾಂಗ್ರೆಸ್ನ ಈ ಪ್ರಯತ್ನವನ್ನು ಬಿಜೆಪಿ ತಳ್ಳಿ ಹಾಕಿತು. ಸಂಪೂರ್ಣ ಜಾಗ ನಮ್ಮದೇ ಆಗಬೇಕೆಂದು ಹಿಂದೂ ಧಾರ್ಮಿಕ ಮುಖಂಡರು ಸೋನಿಯಾ ಗಾಂಧಿ ಅಧ್ಯಕ್ಷತೆಯಲ್ಲಿ ನಡೆದ ಸಂಧಾನಕ್ಕೆ ವಿರೋಧ ವ್ಯಕ್ತಪಡಿಸಿದರು. ಸಂಧಾನದ ಮೂಲಕ ಬಗೆಹರಿಯದ ಈ ಸಮಸ್ಯೆ ಅಂತಿಮವಾಗಿ ಸುಪ್ರೀಂಕೋರ್ಟ್ ಮೆಟ್ಟಿಲೇರಿತು.

2019 ರ ಸುಪ್ರೀಂಕೋರ್ಟ್ ತೀರ್ಪೀ

2010 ರ ಅಲಹಬಾದ್ ಕೋರ್ಟ್ ನ ತೀರ್ಪನ್ನು ಒಪ್ಪದ ರಾಮಲಲ್ಲ ಮತ್ತು ಸುನ್ನಿವಕ್ಫ್ ಬೋರ್ಡ್ ಇಬ್ಬರೂ ಸೇರಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದರು 8 ವರ್ಷಗಳ ಸುಧೀರ್ಘ ವಿಚಾರಣೆಯ ನಂತರ 2019ಕ್ಕೆ ಮುಖ್ಯನ್ಯಾಯಮೂರ್ತಿ ರಂಜನ್ ಗೊಗೊಯ್, ಎಸ್.ಎ.ಬೊಬ್ಬೆ, ಡಿವೈ ಚಂದ್ರಚೂಡ್, ಅಶೋಕ್ ಭೂಷಣ್ ಹಾಗೂ ಎಸ್.ಎ.ನಝೀರ್ ಅವರನ್ನೊಳಗೊಂಡ ಪೀಠ ತನ್ನ ತೀರ್ಪನ್ನು ಪ್ರಕಟಿಸಿತು. ಈ ಹಿಂದೆ ಅಲಹಬಾದ್ ಹೈಕೋರ್ಟ್ ಮೂವರಿಗು ಸಮನಾಗಿ ಹಂಚಿದರೆ ಸುಪ್ರೀಂಕೋರ್ಟ್ 2.77 ಎಕರೆ ಮಸೀದಿಯ ಜಾಗವನ್ನು ಮಂದಿರ ಕಟ್ಟಲು ಹಸ್ತಾಂತರಿಸಿ ಮಸೀದಿ ಕಟ್ಟಲು ಬೇರೆ ಕಡೆ ಭೂಮಿಯನ್ನು ನೀಡಲು ತೀರ್ಪು ನೀಡಿತು.

2003 ಮತ್ತು 2020 ರ ಪುರಾವೆ

2019 ರಲ್ಲಿ ಸುಪ್ರೀಂಕೋರ್ಟ್ ಮಂದಿರ ಕಟ್ಟಲು ಸಂಪೂರ್ಣ ಮಸೀದಿ ಜಾಗವನ್ನು ಹಸ್ತಾಂತರಿಸಿ ತೀರ್ಪು ನೀಡಿತು. ಈ ತೀರ್ಪಿಗೆ ಅದು ಆಧರಿಸಿಕೊಂಡಿದ್ದು 2003 ರ ಪುರಾತತ್ವ ಇಲಾಖೆ ವರದಿಯನ್ನು. ದೇವಾಲಯ ಮಾದರಿಯಲ್ಲಿ ಗೋಡೆ ಮತ್ತು ಗೋಪುರಗಳು ಇರುವುದರಿಂದ ದೇವಾಲಯವನ್ನು ಕೆಡವಿ ಮಸೀದಿ ನಿರ್ಮಿಸಲಾಗಿದೆ ಎಂದು ಪುರಾವೆ ಹೇಳಿತು.

ಇದನ್ನು ಸುಪ್ರೀಂಕೋರ್ಟ್ ಕೂಡ ಗಂಭೀರವಾಗಿ ಪರಿಗಣಿಸಿತು. ಮಂದಿರ ಕಟ್ಟಲು ಮಸೀದಿಯನ್ನು ಹಗೆಯುವಾಗ 24 ಮೇ 2020 ರಂದು ಬುದ್ಧನ ವಿಗ್ರಹ ಮಸೀದಿಯ ಕೆಳಗೆ ಸಿಕ್ಕಿತು. ಇದು ಆ ಸಂದರ್ಭದಲ್ಲಿ ಭಾರತದಾಧ್ಯಂತ ದೊಡ್ಡ ಚರ್ಚೆಯಾಯಿತು. ಅಯೋಧ್ಯೆಯು ಹಿಂದೆ ಸಾಕೇತ್ ನಗರವಾಗಿದ್ದು ಬೌದ್ಧರ ಕೇಂದ್ರವಾಗಿತ್ತು ಇದನ್ನು ನಮಗೆ ಹಸ್ತಾಂತರಿಸಿ ಎಂದು ಸಾಕಷ್ಟು ಪ್ರತಿಭಟನೆಗಳು ನಡೆದವು. 2003 ರ ಪುರಾವೆಯನ್ನು ಗಣನೆಗೆ ತೆಗೆದುಕೊಂಡ ಕೋರ್ಟ್ 2020 ರಲ್ಲಿ ಸಿಕ್ಕ ಬುದ್ಧನ ಉತ್ಖನನದ ಬಗೆ ವಿವರಣೆಯನ್ನೆ ಕೇಳಲಿಲ್ಲ.

05 ಆಗಸ್ಟ್ 2020 ಮಂದಿರ ಶಿಲಾನ್ಯಾಸ

ಸುಪ್ರೀಂಕೋರ್ಟ್ 2019 ರಲ್ಲಿ ಸಂಪೂರ್ಣ ಜಾಗವನ್ನು ರಾಮಜನ್ಮಭೂಮಿಗೆ ಹಸ್ತಾಂತರಿಸಿದ ಮೇಲೆ ಅದನ್ನು ಕಟ್ಟಲು ಮೊದಲ ಶಿಲಾನ್ಯಾಸ ಆಗಸ್ಟ್ 5 ರಂದು ನಡೆಯಿತು. ಒಂದು ಖಾಸಗಿ ಟ್ರಸ್ಟ್ ನಿರ್ಮಿಸುತ್ತಿರುವ ರಾಮ ಮಂದಿರ ಶಿಲಾನ್ಯಾಸಕ್ಕೆ ದೇಶದ ಪ್ರಧಾನಿಯಾದ ನರೇಂದ್ರ ಮೋದಿಯವರೇ ನೆರವೇರಿಸಿದರು. ಅದರ ಉಪಸ್ಥಿತಿಯ ಭಾಗವಾಗಿ ಆರ್ ಎಸ್ ಎಸ್ ನ ರಾಷ್ಟ್ರೀಯ ಸಂಚಾಲಕರಾದ ಮೋಹನ್ ಭಾಗವತ್ ಕೂಡ ಇದ್ದರು. ಇಲ್ಲಿಗೆ ಮಸೀದಿ ಕತೆ ಮುಗಿಯಿತು.

ಅಂತಿಮ ತೀರ್ಪು 30 ಸೆಪ್ಟೆಂಬರ್ 2020

ಮಸೀದಿ ಜಾಗದ ವಿವಾದ ಮುಗಿದ ನಂತರ ಮಸೀದಿ ಕೆಡವಿದ ಆರೋಪಿಗಳ ವಿಚಾರಣೆಯನ್ನು ಸಿಬಿಐ ವಿಶೇಷ ನ್ಯಾಯಾಲಯಕ್ಕೆ ವಹಿಸಲಾಗಿತ್ತು. ಈ ಪ್ರಕರಣದಲ್ಲಿ ಒಟ್ಟು 49 ಆರೋಪಿಗಳಿದ್ದು ಈಗಾಗಲೇ 17 ಜನ ಮೃತಪಟ್ಟಿದ್ದರಿಂದ 32 ಆರೋಪಿಗಳು ಬದುಕುಳಿದಿದ್ದರು ಅವರಲ್ಲಿ ಎಲ್.ಕೆ.ಅಡ್ವಾಣಿ, ಮುರುಳಿ ಮನೋಹರ ಜೋಷಿ, ಉಮಾಭಾರತಿ, ಕಲ್ಯಾಣ್ ಸಿಂಗ್, ರಾಮಜನ್ಮಭೂಮಿ ಟ್ರಸ್ಟ್ ನ ಗೋಪಾಲ್ ದಾಸ್, ವಿನಯ್ ಕಟಿಯಾರ್, ಧರ್ಮದಾಸ್, ವೇದಾಂತಿ, ಲಲ್ಲುಸಿಂಗ್, ಸಾಕ್ಷಿ ಮಹಾರಾಜ್, ಸಾಧ್ವಿ ರಿತಂಬರಾ, ಚಂಪತ್ ರಾಯ್ ಮತ್ತು ಪವನ್ ಪಾಂಡೆ ಮುಂತಾದವರು ಇದ್ದರು. ಆದರೆ ಸಿಬಿಐ ನ್ಯಾಯಾಲಯವು ಮಸೀದಿ ಕೆಡವಿದ್ದಕ್ಕೆ ಸೂಕ್ತ ಸಾಕ್ಷ್ಯಾಧಾರಗಳಿಲ್ಲವೆಂದು ಎಲ್ಲಾ ಆರೋಪಿಗಳನ್ನು ನಿರ್ದೋಷಿಗಳೆಂದು ತೀರ್ಪು ನೀಡಿತು.

ಕಾಂಗ್ರೇಸ್ ನ ವೈಫಲ್ಯ

ಲಿಬ್ಹರಾನ್ ವರದಿ ಸಲ್ಲಿಕೆಯ ನಂತರ ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ಮಂಡಿಸುವುದಾಗಿ ಘೋಷಿಸಿದ ಅಂದಿನ ಕಾಂಗ್ರೇಸ್ ಸರ್ಕಾರ ಲಿಬ್ಹರಾನ್ ಆಯೋಗದ ವರದಿಯ ಕಡೆ ತಿರುಗಿಯೂ ನೋಡಲಿಲ್ಲ. ಇದು ಕಾಂಗ್ರೇಸ್ ನ ನಿರ್ಲಕ್ಷ್ಯವೂ ಹೌದು. ಲಿಬ್ಹರಾನ್ ಆಯೋಗದ ವರದಿಯನ್ನು ಅಂದು ಕಾಂಗ್ರೇಸ್ ಸರ್ಕಾರ ಸಂಸತ್ತಿನಲ್ಲಿ ಮಂಡಿಸಿ ಸೂಕ್ತ ಕ್ರಮ ಕೈಗೊಂಡಿದ್ದರೆ ಬಿಜೆಪಿಯ ಬಹುತೇಕ ನಾಯಕರು ಜೈಲಿನಲ್ಲಿರುತ್ತಿದ್ದರು.

ಕಾಂಗ್ರೇಸ್ ಕ್ರಮೇಣವಾಗಿ ಆಯೋಗದ ವರದಿಯನ್ನು ನಿರ್ಲಕ್ಷಿಸಿದ ಕಾರಣ ಇಂದು ಬಿಜೆಪಿ ಅಧಿಕಾರಕ್ಕೆ ಬಂದು ನ್ಯಾಯಾಂಗದ ದೃಷ್ಟಿಯಲ್ಲಿ ಎಲ್ಲರೂ ನಿರ್ದೋಷಿಗಳಾದರು. ಬಿಜೆಪಿ ನಾಯಕರ ರಕ್ಷಣೆಯ ಹಿಂದೆ ಕಾಂಗ್ರೇಸ್ ನ ಇಂತಹ ಆಷಾಢಭೂತಿತನವು ಕಾರಣವಾಗಿದೆ. ಕಾಂಗ್ರೆಸ್ ತನ್ನ ಹಳೆಯ ಸಾಂಪ್ರದಾಯಿಕ ನೆಲೆಯ ಸಂಧಾನಕ್ಕೆ ಮತ್ತು ಓಲೈಕೆ ರಾಜಕಾರಣಕ್ಕೆ ಮುಂದಾಹಿತೇ ವಿನಃ ಕೋಮು ಶಕ್ತಿಗಳನ್ನು ಹಿಮ್ಮೆಟ್ಟಿಸಲು ಸಂಪೂರ್ಣ ವಿಫಲವಾಯಿತು.

ಕೊನೆಯದಾಗಿ

1992 ಡಿಸೆಂಬರ್ 6 ರಂದು ಅಡ್ವಾಣಿ ನೇತೃತ್ವದ ರಾಮರಥಯಾತ್ರೆಯ ಮೂಲಕ ಬಂದ ಕರಸೇವಕರು ಮಸೀದಿಯನ್ನು ಧ್ವಂಸಗೊಳಿಸಿದರು ಎಂಬುದು ಇಂದಿಗೂ ಅಂತರಾಷ್ಟ್ರೀಯ ವಿಚಾರ. ಈ ಒಂದು ಘಟನೆಯಿಂದ ದೇಶದಾಧ್ಯಂತ ಗಲಭೆಗಳು ನಡೆದಿವೆ 2000ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಸುಧೀರ್ಘವಾಗಿ 28 ವರ್ಷಗಳ ವಿಚಾರಣೆ ನಡೆದಿದೆ ಎರಡು ಬಾರಿ ಕೋರ್ಟ್ ತೀರ್ಪು ನಿಡಿವೆ. ಈಗಿರುವಾಗ ಮಸೀದಿಯ ಧ್ವಂಸಕ್ಕೆ ಯಾರು ಕಾರಣ ಎಂಬುದು ತನಿಖೆಯಲ್ಲಿ ತಿಳಿಯಲೇ ಇಲ್ಲವೆ? ವಿಚಾರಣೆಯಲ್ಲಿದ್ದವರೆಲ್ಲಾ ನಿರ್ದೋಷಿಗಳು ಎಂದಾದ ಮೇಲೆ ಮಸೀದಿ ಧ್ವಂಸ ಮಾಡಿದವರು ಯಾರು? ಬಹುಶಃ ಕಣ್ಕಟ್ಟು ಎಂದರೆ ಇದೇ ಇರಬೇಕು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಉದ್ದಿಮೆದಾರರಿಗೆ ನೆರವು ಯೋಜನೆ; ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ವಿಶೇಷ ಘಟಕ ಯೋಜನೆ, ಗಿರಿಜನ ಉಪ ಯೋಜನೆಯಡಿ ವಿವಿಧ ಯೋಜನೆಗಳಾದ ಸಾಫ್ಟ್ ಸೀಡ್ ಕ್ಯಾಪಿಟಲ್, ಶೇ.60 ರಷ್ಟು ಸಹಾಯಧನ ಸಾಲ ಶುಲ್ಕ ಮರುಪಾವತಿ ಮತ್ತು ವಿದ್ಯುಚ್ಚಕ್ತಿ ಸಹಾಯಧನ ಯೋಜನೆಯಡಿ ಅರ್ಹ ಉದ್ದಿಮೆದಾರರಿಗೆ ನೆರವು ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಈಗಾಗಲೇ ಬ್ಯಾಂಕಿನಿಂದ ಸಾಲ ಪಡೆದು ಘಟಕಗಳನ್ನು ಸ್ಥಾಪಿಸಿರುವ ಅರ್ಹ ಉದ್ದಿಮೆದಾರರು ಹಾಗೂ ಬ್ಯಾಂಕ ಸಾಲ ಪಡೆದು ಉದ್ದಿಮೆ ಸ್ಥಾಪಿಸಲು ಇಚ್ಚಿಸಿರುವ ಉದ್ದಿಮೆದಾರರು ಹೆಚ್ಚಿನ ವಿವರಗಳಿಗೆ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಪಿ.ಬಿ ರಸ್ತೆ ದಾವಣಗೆರೆ ಇವರನ್ನು ಸಂಪರ್ಕಿಸಬಹುದೆಂದು ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

Continue Reading

ದಿನದ ಸುದ್ದಿ

ಭರವಸೆ ಕೊಟ್ಟು ಯುವಜನರನ್ನು ಮನೆಗೆ ಕಳುಹಿಸಿದ ಸರ್ಕಾರಕ್ಕೆ ಈಗ ಪ್ರತಿಭಟನೆಯ ಬಿಸಿ: ಸೆ.5ಕ್ಕೆ ದೆಹಲಿಯಲ್ಲಿ CJP ಬೃಹತ್ ಮೆರವಣಿಗೆ!

Published

on

ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ

ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ

  • ಜುಲೈ 25ರ ಭರವಸೆ ಜಾರಿಗೆ ವಿಳಂಬ: CJP ತೀವ್ರ ಆಕ್ರೋಶ
  • ಇಂಡಿಯಾ ಗೇಟ್‌ನಿಂದ ಪೊಲೀಸ್ ಕೇಂದ್ರ ಕಚೇರಿವರೆಗೆ ಮೆರವಣಿಗೆ
  • NEET ಅಭ್ಯರ್ಥಿಗಳ ಕುಟುಂಬಸ್ಥರು, ಪೊಲೀಸ್ ದೌರ್ಜನ್ಯ ಸಂತ್ರಸ್ತರು ಮುಂಚೂಣಿಯಲ್ಲಿ
  • “ನಮ್ಮ ತಾಳ್ಮೆಯನ್ನು ದೌರ್ಬಲ್ಯವೆಂದು ಭಾವಿಸಬೇಡಿ” ಎಂದ CJP 

ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ

ಸುದ್ದಿದಿನ,ನವದೆಹಲಿ: ದೇಶದ ಯುವಜನರಿಗೆ ನೀಡಿರುವ ಭರವಸೆಗಳನ್ನು ಸರ್ಕಾರ ಈಡೇರಿಸಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ ಕಾಕ್‌ರೋಚ್ ಜನತಾ ಪಾರ್ಟಿ (CJP) ಸೆಪ್ಟೆಂಬರ್ 5ರಂದು ನವದೆಹಲಿಯಲ್ಲಿ ಶಾಂತಿಯುತ ಪ್ರತಿಭಟನಾ ಮೆರವಣಿಗೆ ನಡೆಸಲು ಕರೆ ನೀಡಿದೆ. ಜುಲೈ 25ರಂದು ಸಾರ್ವಜನಿಕವಾಗಿ ನೀಡಲಾಗಿದ್ದ ಭರವಸೆಗಳಿಗೆ ಒಂದು ತಿಂಗಳು ಕಳೆದರೂ ಅವುಗಳ ಅನುಷ್ಠಾನಕ್ಕೆ ಸ್ಪಷ್ಟ ಕ್ರಮಗಳು ಗೋಚರಿಸುತ್ತಿಲ್ಲ ಎಂಬುದು CJPಯ ಪ್ರಮುಖ ಆರೋಪವಾಗಿದೆ.

CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಲಾಗಿದ್ದು, ಸರ್ಕಾರ ಹಾಗೂ ಬಿಜೆಪಿ-ಎನ್‌ಡಿಎ ಆಡಳಿತದ ರಾಜ್ಯಗಳು ಯುವಜನರಿಗೆ ನೀಡಿದ್ದ ಭರವಸೆಗಳ ಅನುಷ್ಠಾನವನ್ನು ಪರಿಶೀಲಿಸಿದ ಬಳಿಕ ಪ್ರತಿಭಟನೆ ನಡೆಸುವ ನಿರ್ಧಾರವನ್ನು ಸರ್ವಾನುಮತದಿಂದ ಕೈಗೊಳ್ಳಲಾಗಿದೆ ಎಂದು ಪಕ್ಷ ತಿಳಿಸಿದೆ.

http://Visit : www.suddidina.com

ಇಂಡಿಯಾ ಗೇಟ್‌ನಿಂದ ಮೆರವಣಿಗೆ

ಸೆಪ್ಟೆಂಬರ್ 5ರಂದು ಇಂಡಿಯಾ ಗೇಟ್‌ನಿಂದ ಪ್ರತಿಭಟನಾ ಮೆರವಣಿಗೆ ಆರಂಭವಾಗಿ ನವದೆಹಲಿ ಪೊಲೀಸ್ ಕೇಂದ್ರ ಕಚೇರಿಯತ್ತ ಸಾಗಲಿದೆ. ಮೃತ NEET ಅಭ್ಯರ್ಥಿಗಳ ಕುಟುಂಬಸ್ಥರು ಹಾಗೂ ಪೊಲೀಸ್ ದೌರ್ಜನ್ಯಕ್ಕೆ ಒಳಗಾದವರು ಮೆರವಣಿಗೆಯ ಮುಂಚೂಣಿಯಲ್ಲಿ ಸಾಗಲಿದ್ದಾರೆ ಎಂದು CJP ಹೇಳಿದೆ.

ದೇಶದ ವಿವಿಧ ಭಾಗಗಳಿಂದ ವಿದ್ಯಾರ್ಥಿಗಳು, ಯುವ ಸಂಘಟನೆಗಳ ಪ್ರತಿನಿಧಿಗಳು ಮತ್ತು ಯುವಜನರು ಪ್ರತಿಭಟನೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಸರ್ಕಾರ ನೀಡಿದ್ದ ಭರವಸೆಗಳನ್ನು ಜಾರಿಗೆ ತರಬೇಕು ಎಂಬ ಒಂದೇ ಪ್ರಮುಖ ಬೇಡಿಕೆಯೊಂದಿಗೆ ಯುವಜನರು ಶಾಂತಿಯುತವಾಗಿ ಧ್ವನಿ ಎತ್ತಲಿದ್ದಾರೆ ಎಂದು ಪಕ್ಷ ಹೇಳಿದೆ.

ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ

ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ

‘ನಮ್ಮ ತಾಳ್ಮೆಯನ್ನು ದೌರ್ಬಲ್ಯವೆಂದು ಭಾವಿಸಬೇಡಿ’

ಜುಲೈ 25ರಂದು ನೀಡಿದ ಭರವಸೆಗಳನ್ನು ನಂಬಿ ದೇಶಾದ್ಯಂತ ನಡೆದಿದ್ದ ಪ್ರತಿಭಟನೆಗಳನ್ನು ಯುವಜನರು ಉತ್ತಮ ನಂಬಿಕೆಯಿಂದ ಹಿಂಪಡೆದಿದ್ದರು. ಆದರೆ, ಭರವಸೆಗಳ ಅನುಷ್ಠಾನದಲ್ಲಿ ವಿಳಂಬವಾಗುತ್ತಿರುವುದು ಯುವಜನರಲ್ಲಿ ಮತ್ತೆ ಅಸಮಾಧಾನ ಮೂಡಿಸಿದೆ ಎಂದು CJP ಆರೋಪಿಸಿದೆ.

“ನಮ್ಮ ತಾಳ್ಮೆಯನ್ನು ದೌರ್ಬಲ್ಯವೆಂದು ಭಾವಿಸಬೇಡಿ. ನಮ್ಮ ಸದುದ್ದೇಶವನ್ನು ಸರ್ಕಾರ ಯುವಜನರಿಗೆ ದ್ರೋಹ ಮಾಡುವ ಅವಕಾಶವಾಗಿ ಬಳಸಿಕೊಳ್ಳಬಾರದು” ಎಂದು CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಎಚ್ಚರಿಕೆ ನೀಡಿದೆ.

“ಭರವಸೆಗಳನ್ನು ಜಾರಿಗೆ ತರುವ ಬದಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳುವುದನ್ನು ವಿಳಂಬಿಸುತ್ತಿದೆ, ತಾಂತ್ರಿಕ ಕಾರಣಗಳ ಹಿಂದೆ ಅಡಗಿಕೊಳ್ಳುತ್ತಿದೆ ಹಾಗೂ ಸುಪ್ರೀಂ ಕೋರ್ಟ್‌ನ ಮುಂದೆಯೂ ಸ್ಪಷ್ಟ ಭರವಸೆ ನೀಡುವುದನ್ನು ತಪ್ಪಿಸುತ್ತಿದೆ” 

  • CJP ಆರೋಪ

ಮಾತಿನಿಂದ ಹಿಂದೆ ಸರಿಯಲು ಸಾಧ್ಯವಿಲ್ಲ

ಜುಲೈ 25ರಂದು ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಸಾರ್ವಜನಿಕವಾಗಿ ನೀಡಿದ್ದ ಭರವಸೆಗಳನ್ನು ಸರ್ಕಾರ ಈಡೇರಿಸಬೇಕು ಎಂಬುದು CJPಯ ಆಗ್ರಹ. ಮಕ್ಕಳನ್ನು ಕಳೆದುಕೊಂಡ ಕುಟುಂಬಗಳು ಹಾಗೂ ಪೊಲೀಸ್ ದೌರ್ಜನ್ಯಕ್ಕೆ ಒಳಗಾದವರ ನೋವಿನ ನಡುವೆ ನಡೆಯಲಿರುವ ಈ ಮೆರವಣಿಗೆ, ಯುವಜನರ ವಿಶ್ವಾಸ ಮತ್ತು ಸರ್ಕಾರದ ಹೊಣೆಗಾರಿಕೆಯ ಪ್ರಶ್ನೆಯನ್ನು ಮುನ್ನೆಲೆಗೆ ತರುವ ಪ್ರಯತ್ನವಾಗಿದೆ.

ಕೇಂದ್ರ ಸರ್ಕಾರ ಭರವಸೆಗಳನ್ನು ಜಾರಿಗೆ ತರುವ ಬದಲು ಕ್ರಮ ಕೈಗೊಳ್ಳುವುದನ್ನು ವಿಳಂಬಿಸುತ್ತಿದೆ, ತಾಂತ್ರಿಕ ಕಾರಣಗಳ ಹಿಂದೆ ಅಡಗಿಕೊಳ್ಳುತ್ತಿದೆ ಹಾಗೂ ಸುಪ್ರೀಂ ಕೋರ್ಟ್‌ನ ಮುಂದೆಯೂ ಸ್ಪಷ್ಟ ಭರವಸೆ ನೀಡುವುದನ್ನು ತಪ್ಪಿಸುತ್ತಿದೆ ಎಂದು CJP ಆರೋಪಿಸಿದೆ.

ಸೆಪ್ಟೆಂಬರ್ 5ರಂದು ಹೆಚ್ಚಿನ ಸಂಖ್ಯೆಯಲ್ಲಿ ಇಂಡಿಯಾ ಗೇಟ್‌ನಲ್ಲಿ ಸೇರಿ ಶಾಂತಿಯುತ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಯುವಜನರು, ವಿದ್ಯಾರ್ಥಿಗಳು ಹಾಗೂ ಯುವ ಸಂಘಟನೆಗಳಿಗೆ CJP ಮನವಿ ಮಾಡಿದೆ. ಪ್ರತಿಭಟನೆ ಸಂಪೂರ್ಣವಾಗಿ ಶಾಂತಿಯುತ ಮತ್ತು ಪ್ರಜಾಸತ್ತಾತ್ಮಕ ರೀತಿಯಲ್ಲಿ ನಡೆಯಲಿದೆ ಎಂದು ಅದು ಪುನರುಚ್ಚರಿಸಿದೆ.

Continue Reading

ದಿನದ ಸುದ್ದಿ

KPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ

Published

on

KPSC ಹಗರಣಕ್ಕೆ ಬಿಗ್ ಟ್ವಿಸ್ಟ್! 329 ಅಭ್ಯರ್ಥಿಗಳಿಗೆ CID ನೋಟಿಸ್; IAS ಅಧಿಕಾರಿ ವಿರುದ್ಧ ₹1.1 ಕೋಟಿ ಆರೋಪ
KPSC ಹಗರಣಕ್ಕೆ ಬಿಗ್ ಟ್ವಿಸ್ಟ್! 329 ಅಭ್ಯರ್ಥಿಗಳಿಗೆ CID ನೋಟಿಸ್; IAS ಅಧಿಕಾರಿ ವಿರುದ್ಧ ₹1.1 ಕೋಟಿ ಆರೋಪ

KPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ

  • 329 ಅಭ್ಯರ್ಥಿಗಳಿಗೆ ಏಕಕಾಲದಲ್ಲಿ ವಿಚಾರಣಾ ನೋಟಿಸ್

  • 658 OMR ಕಾರ್ಬನ್ ಶೀಟ್‌ಗಳು FSLಗೆ

  • IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ವಿರುದ್ಧ ED ಗಂಭೀರ ಆರೋಪ

  • ₹70–80 ಲಕ್ಷ ಲಂಚದ ಆರೋಪವೂ ತನಿಖೆಯಲ್ಲಿದೆ

  • ಪ್ರಶ್ನೆಪತ್ರ ಸಿದ್ಧತೆ, ಮುದ್ರಣದ CCTV ದೃಶ್ಯಗಳ ಬಗ್ಗೆಯೂ ಅನುಮಾನ 

ಸುದ್ದಿದಿನ,ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (KPSC) ಪಶುವೈದ್ಯಾಧಿಕಾರಿ ನೇಮಕಾತಿ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮದ ತನಿಖೆ ದಿನದಿಂದ ದಿನಕ್ಕೆ ಹೊಸ ತಿರುವು ಪಡೆಯುತ್ತಿದೆ. ಈಗಾಗಲೇ ಜಾರಿ ನಿರ್ದೇಶನಾಲಯ (ED) ರಾಜ್ಯದ ವಿವಿಧೆಡೆ 21ಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ ನಡೆಸಿದ್ದು, ಅದರ ಬೆನ್ನಲ್ಲೇ ಅಪರಾಧ ತನಿಖಾ ಇಲಾಖೆ (CID) ಎಲ್ಲಾ 329 ಅಭ್ಯರ್ಥಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ.

http://Visit : www.suddidina.com

329 ಅಭ್ಯರ್ಥಿಗಳಿಗೆ ನೋಟಿಸ್ ಏಕೆ?

ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ ಅಭ್ಯರ್ಥಿಗಳಿಂದ ಈಗಾಗಲೇ 658 OMR ಕಾರ್ಬನ್ ಶೀಟ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಅವುಗಳನ್ನು ಮೂಲ OMR ಉತ್ತರ ಪತ್ರಿಕೆಗಳೊಂದಿಗೆ ಹೋಲಿಕೆ ಮಾಡಲು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ (FSL) ಕಳುಹಿಸಲಾಗಿದೆ. ಅಭ್ಯರ್ಥಿಗಳು ಗುರುತಿಸಿದ್ದ ಉತ್ತರಗಳ ಕಾರ್ಬನ್ ಪ್ರತಿಯಲ್ಲಿ ಮತ್ತು ಮೂಲ OMRನಲ್ಲಿ ವ್ಯತ್ಯಾಸವಿದೆಯೇ ಎಂಬುದನ್ನು ಪರಿಶೀಲಿಸುವುದು ತನಿಖೆಯ ಪ್ರಮುಖ ಭಾಗವಾಗಿದೆ.

ಇದೀಗ 329 ಅಭ್ಯರ್ಥಿಗಳನ್ನೂ ವಿಚಾರಣೆಗೆ ಒಳಪಡಿಸುವ CID ಕ್ರಮ ಪ್ರಕರಣದ ವ್ಯಾಪ್ತಿಯನ್ನು ಮತ್ತಷ್ಟು ವಿಸ್ತರಿಸಿದೆ. ಈ ವಿಚಾರಣೆಯ ಮೂಲಕ ಪರೀಕ್ಷಾ ಪ್ರಕ್ರಿಯೆಯಲ್ಲಿ ಯಾವುದೇ ಅಕ್ರಮ ನಡೆದಿದೆಯೇ, ಅಭ್ಯರ್ಥಿಗಳಿಗೆ ಪ್ರಶ್ನೆಪತ್ರಿಕೆ ಅಥವಾ ಉತ್ತರಗಳ ಮಾಹಿತಿ ಮುಂಚಿತವಾಗಿ ಸಿಕ್ಕಿತೇ, OMR ಉತ್ತರ ಪತ್ರಿಕೆಗಳಲ್ಲಿ ತಿದ್ದುಪಡಿ ನಡೆದಿದೆಯೇ ಎಂಬುದರ ಬಗ್ಗೆ ತನಿಖಾಧಿಕಾರಿಗಳು ಮಾಹಿತಿ ಕಲೆಹಾಕುತ್ತಿದ್ದಾರೆ.

IAS ಅಧಿಕಾರಿಯತ್ತ ತನಿಖೆಯ ಚಿತ್ತ

ಈ ಪ್ರಕರಣದಲ್ಲಿ IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಅವರ ಹೆಸರು ಪ್ರಮುಖವಾಗಿ ಕೇಳಿಬಂದಿದೆ. ಅವರು ಫೆಬ್ರವರಿ 2024ರಿಂದ ಮಾರ್ಚ್ 2026ರವರೆಗೆ KPSCಯ ಪರೀಕ್ಷಾ ನಿಯಂತ್ರಕರಾಗಿ ಕಾರ್ಯನಿರ್ವಹಿಸಿದ್ದರು. ಪ್ರಸ್ತುತ ಅವರು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಲ್ಲಿ MSME ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರ ಬೆಂಗಳೂರಿನ ನಿವಾಸ ಸೇರಿದಂತೆ ಉತ್ತರ ಪ್ರದೇಶದ ಬರೇಲಿಯಲ್ಲಿರುವ ನಿವಾಸದ ಮೇಲೂ ED ಶೋಧ ನಡೆಸಿದೆ.

ED ಆರೋಪದ ಪ್ರಕಾರ, ಗಂಗ್ವಾರ್ ಅವರು ತಮ್ಮ ಇಬ್ಬರು ಪುತ್ರರಿಗೆ KPSC ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಹೆಚ್ಚಿನ ಅಂಕಗಳನ್ನು ದೊರಕಿಸಿಕೊಡಲು ವ್ಯಕ್ತಿಯೊಬ್ಬರಿಂದ ಸುಮಾರು ₹1.1 ಕೋಟಿ ಪಡೆದಿದ್ದಾರೆ ಎನ್ನಲಾಗಿದೆ. ಈ ಆರೋಪ ಇನ್ನೂ ತನಿಖೆಯ ಹಂತದಲ್ಲಿದ್ದು, ಆರೋಪ ಸಾಬೀತಾಗಿಲ್ಲ.

ಪ್ರಶ್ನೆಪತ್ರಿಕೆ ಸಿದ್ಧತೆಯಲ್ಲೂ ಅನುಮಾನ

ಪರೀಕ್ಷಾ ನಿಯಂತ್ರಕರಾಗಿದ್ದ ಅವಧಿಯಲ್ಲಿ ಪ್ರಶ್ನೆಪತ್ರಿಕೆ ಸಿದ್ಧಪಡಿಸುವ ಮತ್ತು ಮುದ್ರಿಸುವ ಪ್ರಕ್ರಿಯೆಗೆ ಸಂಬಂಧಿಸಿದ CCTV ದೃಶ್ಯಾವಳಿಗಳ ಅನುಪಸ್ಥಿತಿಯನ್ನೂ ED ಅಧಿಕಾರಿಗಳು ಪ್ರಶ್ನಿಸಿದ್ದಾರೆ ಎನ್ನಲಾಗಿದೆ. ಇಂತಹ ಪ್ರಕ್ರಿಯೆಯಲ್ಲಿ CCTV ದಾಖಲೆಗಳು ಪ್ರಮುಖ ಭದ್ರತಾ ಕ್ರಮವಾಗಿರುವುದರಿಂದ, ಅವುಗಳ ಲಭ್ಯತೆ ಮತ್ತು ನಿರ್ವಹಣೆಯೂ ತನಿಖೆಯ ಪ್ರಮುಖ ಅಂಶವಾಗಿದೆ.

ಇದರ ಜೊತೆಗೆ, ಪಶುವೈದ್ಯಾಧಿಕಾರಿ ನೇಮಕಾತಿಯಲ್ಲಿ ಅಭ್ಯರ್ಥಿಗಳಿಂದ ₹70–80 ಲಕ್ಷದವರೆಗೆ ಲಂಚ ಕೇಳಲಾಗಿದೆ ಎಂಬ ಆರೋಪಗಳೂ ತನಿಖೆಯಲ್ಲಿವೆ. ಪ್ರಶ್ನೆಪತ್ರಿಕೆ ಸೋರಿಕೆ, OMR ತಿದ್ದುಪಡಿ ಮತ್ತು ನೇಮಕಾತಿ ಪ್ರಕ್ರಿಯೆಯ ಮೇಲೆ ಪ್ರಭಾವ ಬೀರಿದ ಆರೋಪಗಳ ಕುರಿತು ತನಿಖೆ ಮುಂದುವರಿದಿದೆ.

KPSCಯಂತಹ ನೇಮಕಾತಿ ಸಂಸ್ಥೆಯ ಮೇಲಿನ ವಿಶ್ವಾಸಕ್ಕೆ ಧಕ್ಕೆ ತರುವ ಆರೋಪಗಳಾಗಿರುವುದರಿಂದ, CID ಮತ್ತು ED ತನಿಖೆಯ ಮುಂದಿನ ಹಂತಗಳು ಮಹತ್ವ ಪಡೆದುಕೊಂಡಿವೆ. 329 ಅಭ್ಯರ್ಥಿಗಳ ವಿಚಾರಣೆ, OMR ಕಾರ್ಬನ್ ಶೀಟ್‌ಗಳ FSL ವರದಿ ಹಾಗೂ ಹಣಕಾಸು ವ್ಯವಹಾರಗಳ ಪರಿಶೀಲನೆಯ ಬಳಿಕ ಪ್ರಕರಣದ ನಿಜವಾದ ಚಿತ್ರಣ ಇನ್ನಷ್ಟು ಸ್ಪಷ್ಟವಾಗುವ ನಿರೀಕ್ಷೆಯಿದೆ.

ಮೇಲಿನ ಹಣ, ಅಕ್ರಮ ಮತ್ತು ಅಧಿಕಾರಿಯ ವಿರುದ್ಧದ ಆರೋಪಗಳು ತನಿಖಾ ಸಂಸ್ಥೆಗಳು ಮುಂದಿಟ್ಟಿರುವ ಆರೋಪಗಳಾಗಿದ್ದು, ನ್ಯಾಯಾಲಯದಲ್ಲಿ ಸಾಬೀತಾಗುವವರೆಗೆ ಆರೋಪಗಳೆಂದೇ ಪರಿಗಣಿಸಬೇಕೆಂದು ಕೋರ್ಟ್ ತಿಳಿಸಿದೆ.

 

Continue Reading

Trending