ದಿನದ ಸುದ್ದಿ

ಹಿಂದುಳಿದ ವರ್ಗಗಳಿಗೆ ರಾಜಕೀಯ ಪ್ರಾತಿನಿಧ್ಯ ; ಅಧ್ಯಯನಕ್ಕಾಗಿ ಪ್ರತ್ಯೇಕ ಆಯೋಗ ರಚನೆ

Published

on

ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಹಿಂದುಳಿದ ವರ್ಗಗಳಿಗೆ ಸೂಕ್ತ ರಾಜಕೀಯ ಪ್ರಾತಿನಿಧ್ಯ ನೀಡುವ ಕುರಿತು ಅಧ್ಯಯನ ನಡೆಸಲು ನ್ಯಾಯಮೂರ್ತಿ ಭಕ್ತವತ್ಸಲ ಅಧ್ಯಕ್ಷತೆಯಲ್ಲಿ ಸರ್ಕಾರ ಪ್ರತ್ಯೇಕ ಆಯೋಗ ರಚಿಸಿದೆ.

ನಿವೃತ್ತ ಐಎಎಸ್ ಅಧಿಕಾರಿ ಸಿ.ಆರ್. ಚಿಕ್ಕಮಠ ಆಯೋಗದ ಸದಸ್ಯರಾಗಿ ನೇಮಕಗೊಂಡಿದ್ದಾರೆ. ಹಿಂದುಳಿದ ವರ್ಗಗಳಿಗೆ ಪಂಚಾಯತ್ ರಾಜ್ ಸಂಸ್ಥೆಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸೂಕ್ತ ಪ್ರಾತಿನಿಧ್ಯ ಕಲ್ಪಿಸುವ ಕುರಿತ ಪ್ರಕರಣವೊಂದಕ್ಕೆ ಸಂಬಂಧಿಸಿ, ಸುಪ್ರೀಂ ಕೋರ್ಟ್ ನೀಡಿದ್ದ ನಿರ್ದೇಶನದಂತೆ, ಈ ಆಯೋಗ ರಚಿಸಲಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version