ದಿನದ ಸುದ್ದಿ
ದಾವಣಗೆರೆ | ಬಸವರಾಜಪ್ಪ ಸೇವೆಗೆ ಸರ್ವೋತ್ತಮ ಸೇವಾ ಪ್ರಶಸ್ತಿ
ಸುದ್ದಿದಿನ,ದಾವಣಗೆರೆ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ದಾವಣಗೆರೆಯ ಹಿರಿಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಡಿ ಗ್ರೂಪ್ ಸಿಬ್ಬಂದಿಯಾಗಿ ಸೇವೆ ಸಲ್ಲಿಸುತ್ತಿರುವ ಬಸವರಾಜಪ್ಪ ಅವರಿಗೆ ಜಿಲ್ಲಾಡಳಿತದ ವತಿಯಿಂದ ಸರ್ವೋತ್ತಮ ಸೇವಾ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಏ. 21 ರ ಗುರುವಾರ ಜಿಲ್ಲಾಡಳಿತ ಹಾಗೂ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು 2021 22 ನೇ ಸಾಲಿನಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಬಸವರಾಜಪ್ಪ ಅವರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ ನೀಡಿ ಸನ್ಮಾನಿಸಿದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಗ್ರೂಪ್ ಡಿ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿರುವ ಬಸವರಾಜಪ್ಪ ಅವರು ಕಳೆದ 23 ವರ್ಷಗಳಿಂದ ನಿಷ್ಟೆ ಹಾಗೂ ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸಿದ್ದಾರೆ. ಅವರ ಈ ಸೇವೆಯನ್ನು ಜಿಲ್ಲಾಡಳಿತ ಪರಿಗಣಿಸಿ 2021-22ನೇ ಸಾಲಿನ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243