Connect with us

ದಿನದ ಸುದ್ದಿ

ದಾವಣಗೆರೆ | ವಿದ್ಯಾರ್ಥಿನಿಯ ವರ್ಗಾವಣೆ ಪತ್ರ ಕೊಡುವ ಹಿನ್ನೆಲೆ; ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ನಿರಂಜನ್‌ಮೂರ್ತಿ ಬೇಜವಾಬ್ದಾರಿ ನಡೆ , ಸೂಕ್ತ ಕ್ರಮಕ್ಕೆ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಆಗ್ರಹ

Published

on

ಸುದ್ದಿದಿನ,ದಾವಣಗೆರೆ: ವಿದ್ಯಾರ್ಥಿನಿಯ ವರ್ಗಾವಣೆ ಪತ್ರ ಕೊಡುವ ಹಿನ್ನೆಲೆ ದಾವಣಗೆರೆ ದಕ್ಷಿಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ನಿರಂಜನ್‌ಮೂರ್ತಿ ಅವರ ಬೇಜಾಬ್ದಾರಿ ನಡೆಯ ಕುರಿತುರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ಕೆ.ಎ. ಓಬಳೇಶ್ ಆಕ್ರೋಶ ವ್ಯಕ್ತಪಡಿಸಿದರು.

ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದಾವಣಗೆರೆ ತಾಲ್ಲೂಕು ಗೋಣಿವಾಡ ಕ್ಯಾಂಪ್ ನಿವಾಸಿಗಳಾದ ಪಟ್ಟಾಬಿ ಎನ್. ಇವರು ತಮ್ಮ ಮಗಳಾದ ಕುಶಿ.ಎನ್. ಇವರನ್ನು ದಾವಣಗೆರೆ ನಗರದ ಡಿ.ಸಿ.ಎಂ. ಟೌನ್‌ಶಿಪ್‌ನಲ್ಲಿರುವ ಗೋಲ್ಡನ್ ಪಬ್ಲಿಕ್ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ಎಲ್.ಕೆ.ಜಿ ಯಿಂದ ೨ನೇ ತರಗತಿಯವರೆಗೆ ವ್ಯಾಸಾಂಗ ಮಾಡಿಸಿರುತ್ತಾರೆ.

ಕರೋನಾ ಬಿಕ್ಕಟ್ಟಿನ ಕಾರಣದಿಂದ ಆರ್ಥಿಕ ಸಂಕಷ್ಟಕ್ಕೆ ಒಳಗಾದ ಸದರಿ ಪೋಷಕರು 202-22ನೇ ಸಾಲಿನ ಶಾಲಾ ಶುಲ್ಕವನ್ನು ತುಂಬಿ, ತಮ್ಮ ಮಗಳನ್ನು ತಮ್ಮ ಸ್ವಗ್ರಾಮವಾದ ಗೋಣಿವಾಡ ಕ್ಯಾಂಪಿನಲ್ಲಿರುವ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 3ನೇ ತರಗತಿಗೆ ದಾಖಲು ಮಾಡಿರುತ್ತಾರೆ. ಆದರೆ ಹಿಂದಿನ ಶಾಲೆಯ ಆಡಳಿತ ಮಂಡಳಿಯು ಕುಶಿ.ಎನ್ ಎಂಬ ಮಗುವಿನ ವರ್ಗಾವಣೆ ಪ್ರಮಾಣಪತ್ರವನ್ನು ಕೊಡಲು ಪೋಷಕರಿಗೆ ನಿರಾಕರಿಸಿರುತ್ತಾರೆ ಎಂದು ತಿಳಿಸಿದರು.

ಇದಕ್ಕೆ ಕಾರಣ 2021-22ನೇ ಸಾಲಿನಲ್ಲಿ ಈ ಮಗುವಿಗೆ ವರ್ಗಾವಣೆ ಪ್ರಮಾಣಪತ್ರವನ್ನು ಕೊಡಬೇಕಾದರೆ ಸದರಿ ವರ್ಷದ ಶೇ 70ರಷ್ಟು ಶುಲ್ಕವನ್ನು ತುಂಬಿದರೆ ಮಾತ್ರ ವರ್ಗಾವಣೆ ಪ್ರಮಾಣಪತ್ರವನ್ನು ನೀಡುತ್ತೇವೆ ಎಂದು ತಾಕೀತು ಮಾಡಿರುತ್ತಾರೆ. ಹಾಗೆಯೇ ಸದರಿ ವರ್ಷದಲ್ಲಿ ಮಗು ದಾಖಲಾಗಿರುವ ಸರ್ಕಾರಿ ಶಾಲೆಯ ಮುಖ್ಯೋಪಧ್ಯಾಯರು ಕೂಡ ವರ್ಗಾವಣೆ ಪತ್ರವನ್ನು ನೀಡುವಂತೆ ಪತ್ರದ ಮುಖಾಂತರ ಮನವಿ ಮಾಡಿಕೊಂಡಿರುತ್ತಾರೆ.

ಇದಕ್ಕೂ ಖಾಸಗಿ ಶಾಲೆಯಿಂದ ಯಾವುದೇ ಪ್ರತಿಕ್ರಿಯೆ ಬಂದಿರುವುದಿಲ್ಲ. ಇದರಿಂದ ಆತಂಕಗೊಂಡ ಪೋಷಕರು ತಮ್ಮ ಗ್ರಾಮ ಪಂಚಾಯಿತಿ ಚುನಾಯಿತ ಪ್ರತಿನಿಧಿಗಳಾದ ಎನ್.ಎಂ.ಮಂಜುನಾಥ್ ಅವರ ಬಳಿ ತಮ್ಮ ಅಳಲನ್ನು ಹಂಚಿಕೊಂಡಾಗ, ಮತ್ತಿ ಗ್ರಾಮ ಪಂಚಾಯಿತಿ ಸದಸ್ಯರಾದ ಶ್ರೀ ಮಂಜುನಾಥ್ ಇವರು ಇದಕ್ಕೆ ಸಂಬಂಧಿಸಿದ ದಾವಣಗೆರೆ ದಕ್ಷಿಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎಂ.ನಿರಂಜನ್‌ಮೂರ್ತಿಯವರಿಗೆ ಕರೆ ಮಾಡಿ, ಸದರಿ ವಿಷಯಕ್ಕೆ ಸಂಬಂಧಿಸಿದಂತೆ ದೂರು ಹೇಳಿದಾಗ, ಹಿಂದಿನ ವರ್ಷದ ಶಾಲಾ ಶುಲ್ಕವನ್ನು ಸಂದಾಯ ಮಾಡಿದರೆ ಮಾತ್ರ ವರ್ಗಾವಣೆ ಪತ್ರವನ್ನು ನೀಡುತ್ತಾರೆ.

ಇಲ್ಲದೆ ಹೋದರೆ ವರ್ಗಾವಣೆ ಪತ್ರ ನೀಡಲು ಸಾಧ್ಯವಿಲ್ಲ ಎಂದು ತಿಳಿಸುತ್ತಾರೆ. ಇದಕ್ಕೆ ಪ್ರತಿಯಾಗಿ ಶ್ರೀ ಎನ್.ಎಂ.ಮಂಜುನಾಥ್ ಅವರು ಮಗುವಿನ ಪೋಷಕರು ಹಿಂದಿನ ವರ್ಷದ ಎಲ್ಲ ಶುಲ್ಕವನ್ನು ಪಾವತಿಸಿದರೂ ಶಾಲಾ ಆಡಳಿತ ಮಂಡಳಿಯು ವರ್ಗಾವಣೆ ಪತ್ರ ನೀಡಲು ನಿರಾಕರಿಸಿದೆ. ಅಲ್ಲದೆ ಸದರಿ ವರ್ಷದ ಶೇ 70 ರಷ್ಟು ಶುಲ್ಕ ನೀಡಿದರೆ ಮಾತ್ರ ವರ್ಗಾವಣೆ ಪತ್ರ ನೀಡುತ್ತೇವೆ ಎಂದು ಹೇಳುತ್ತಿದ್ದಾರೆ.

ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ‘ಇನ್ನೂ ಮುಂದೆ ಖಾಸಗಿ ಶಾಲೆಗಳು ಮಕ್ಕಳಿಗೆ ವರ್ಗಾವಣೆ ಪತ್ರ ನೀಡಲು ನಿರಾಕರಿಸಿದರೆ ಪೋಷಕರು ಆತಂಕ ಪಡುವ ಅವಶ್ಯಕತೆಯಿಲ್ಲ. ಆಯಾ ವಲಯಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳಿಂದ ನೇರವಾಗಿ ವರ್ಗಾವಣೆ ಪತ್ರ ಪಡೆಯುವ ಅವಕಾಶ ನೀಡಲಾಗಿದೆ’ ಎಂದು ಪತ್ರಿಕೆ ಹೇಳಿಕೆಯನ್ನು ನೀಡಿದ್ದಾರೆ.

ಅದರಂತೆ ತಾವೇ ಈ ಮಗುವಿಗೆ ವರ್ಗಾವಣೆ ಪತ್ರ ನೀಡಿ ಎಂದು ಕೇಳಿಕೊಂಡಾಗ, ಹೀಗೆ ಕೊಡುವುದಕ್ಕೆ ಸಾಧ್ಯವಿಲ್ಲ. ‘ನಮಗೆ ಇಂತಹ ಯಾವುದೇ ಆದೇಶ ಬಂದಿಲ್ಲ. ಖಾಸಗಿ ಶಾಲೆಗಳನ್ನು ನಾವು ಕಾಪಾಡಬೇಕು. ಆದ್ದರಿಂದ ನೀವು ಹೇಳಿದಂತೆ ಕೇಳಲು ಸಾಧ್ಯವಿಲ್ಲ. ಇದಕ್ಕೆ ಸಂಬAಧಿಸಿದ ಪೋಷಕರಿಗೆ ಕರೆ ಮಾಡಲು ಹೇಳಿ, ನಾನು ಸದರಿ ವಿಷಯದ ಬಗ್ಗೆ ಅವರಿಗೆ ಅರಿವು ಮೂಡಿಸುತ್ತೇನೆ’ ಎಂಬುದಾಗಿ ಹೇಳಿರುತ್ತಾರೆ.

ಮಾನ್ಯರಾದ ತಮ್ಮಲ್ಲಿ ಈ ಮೂಲಕ ವಿನಂತಿಸಿಕೊಳ್ಳುವುದೇನೆಂದರೆ, ಕರೋನಾ ಸಂಕಷ್ಟದಿಂದಾಗಿ ಸಾಮಾನ್ಯ ಜನರ ಬದುಕು ಬೀದಿಗೆ ಬಂದಿರುವ ಸ್ಥಿತಿ ತಮಗೆಲ್ಲ ತಿಳಿದಿದೆ. ಹೀಗಾಗಿ ತಮ್ಮ ಮಕ್ಕಳನ್ನು ಖಾಸಗಿ ಶಾಲೆಗೆ ಸೇರಿಸಲಾಗದೆ ಪೋಷಕರು ಸರ್ಕಾರಿ ಶಾಲೆಗಳತ್ತ ಮುಖ ಮಾಡಿದ್ದಾರೆ. ಇದರಿಂದಾಗಿ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಹೆಚ್ಚಾಗಿದೆ.

ಇಂತಹ ಬಿಕ್ಕಟ್ಟಿನ ಸಂದರ್ಭದಲ್ಲಿ ಪೋಷಕರಿಗೆ ಆರ್ಥಿಕ ಹೊರೆಯನ್ನು ತಪ್ಪಿಸುವ ನಿಟ್ಟಿನಲ್ಲಿ, ಪ್ರತಿಯೊಂದು ಮಗುವಿಗೂ ಶಿಕ್ಷಣವು ಸುಲಭವಾಗಿ ತಲುಪುವಂತೆ ಮಾಡುವುದಕ್ಕಾಗಿ, ಪೋಷಕರು ಖಾಸಗಿ ಶಾಲೆಗೆ ಅಲೆಯುವುದನ್ನು ತಪ್ಪಿಸಲು ವರ್ಗಾವಣೆ ಪತ್ರ ಕೊಡದ ಶಾಲೆಗಳ ವರ್ಗಾವಣೆ ಪತ್ರವನ್ನು ಆಯಾ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳು ನೀಡುವ ಅವಕಾಶವನ್ನು ಕಲ್ಪಿಸಿಕೊಡಲಾಗಿದೆ ಎಂಬ ವಿಷಯ ಪತ್ರಿಕೆಗಳಲ್ಲಿ ಪ್ರಕಟವಾಗಿದೆ.

ಈ ವಿಷಯಕ್ಕೆ ಸಂಬಂಧಿಸಿದಂತೆ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಯುತ ಉಮಾಶಂಕರ್ ಅವರು ಪತ್ರಿಕಾ ಹೇಳಿಕೆಯನ್ನು ನೀಡಿರುತ್ತಾರೆ. ಇಂತಹ ಸಂದರ್ಭದಲ್ಲಿ ದಾವಣಗೆರೆ ದಕ್ಷಿಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ನಿರಂಜನ್‌ಮೂರ್ತಿಯವರು ಅನ್ಯಾಯಕ್ಕೆ ಒಳಗಾದ ಪೋಷಕರ ಪರವಾಗಿ ನಿಲ್ಲದೆ, ಖಾಸಗಿ ಶಾಲೆಗಳ ಹಿತಕಾಯುವಂತಹ ಬೇಜವಬ್ದಾರಿ ಮಾತುಗಳನ್ನಾಡಿರುವುದು ನಿಜಕ್ಕೂ ಶೋಚನೀಯವಾದ ಸಂಗತಿಯಾಗಿದೆ.

ಆದ್ದರಿಂದ ಸದರಿ ಅರ್ಜಿಯೊಂದಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀ ಎನ್.ಎಂ.ಮಂಜುನಾಥ್ ಅವರೊಂದಿಗೆ ನಡೆಸಿದ ಸಂಭಾಷಣೆಯ ತುಣುಕನ್ನು ಸಿ.ಡಿಯಲ್ಲಿ ಲಗತ್ತಿಸಿ ಮಾನ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು, ಮಾನ್ಯ ಪ್ರಧಾನ ಕಾರ್ಯದರ್ಶಿಗಳು, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ, ದಾವಣಗೆರೆ ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯನಿರ್ವಾಣಾಧಿಕಾರಿಗಳು ಹಾಗೂ ಉಪ ನಿರ್ದೇಶಕರು ಸಾರ್ವಜನಿಕ ಶಿಕ್ಷಣ ಇಲಾಖೆ, ದಾವಣಗೆರೆ ಇವರಿಗೆ ಬೇಜವಬ್ದಾರಿ ಹೇಳಿಕೆ ನೀಡಿದ ಕ್ಷೇತ್ರ ಶಿಕ್ಷಣಾಧಿಕಾರಿಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಹಾಗೆಯೇ ಖಾಸಗಿ ಶಿಕ್ಷಣ ಸಂಸ್ಥೆಗಳಿಂದ ಸಂಕಷ್ಟಕ್ಕೆ ಒಳಗಾಗಿರುವ ಪೋಷಕರ ಆರ್ಥಿಕ ಒತ್ತಡವನ್ನು ತಪ್ಪಿಸಿ, ಸರ್ಕಾರಿ ಶಾಲೆಯತ್ತ ಮುಂದಾಗಿರುವ ಮಕ್ಕಳ ಹಿತಕಾಯುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ- ಕರ್ನಾಟಕದ ವತಿಯಿಂದ ಲಿಖಿತ ದೂರು ನೀಡಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾ ಕಾರ್ಯದರ್ಶಿ ಗೋವರ್ಧನ್, ಗ್ರಾಮ ಪಂಚಾಯತಿ ಸದಸ್ಯ ಎಂ,ಎನ್ ಮಂಜುನಾಥ, ಹೂವಿನ ಮಡು ರವಿ, ನಾಗೇಶ್ವರರಾವ್ ಅವರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದಲ್ಲಿ ನಿಷೇಧ ; ತೆರವುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಪತ್ರ

Published

on

ಸುದ್ದಿದಿನಡೆಸ್ಕ್:ಕರ್ನಾಟಕದ ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲಾಧಿಕಾರಿ ವಿಧಿಸಿರುವ ನಿಷೇಧ ಆದೇಶ ರದ್ದು ತೆರವುಗೊಳಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಪತ್ರ ಮೂಲಕ ಮನವಿ ಮಾಡಿದ್ದಾರೆ.

ಇದು ಮುಂದಿನ ದಿನಗಳಲ್ಲಿ ತರಕಾರಿಗಳು ಮತ್ತು ಇತರ ಕೃಷಿ ಸರಕುಗಳ ಅಂತಾರಾಜ್ಯ ಸಾಗಾಣೆಗೆ ಅಡ್ಡಿ ಉಂಟುಮಾಡುವ ಸಾಧ್ಯತೆಯಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಈ ನಿರ್ಬಂಧವು ಸಾವಿರಾರು ರೈತರ ಜೀವನ ಉಪಾಯದ ಮೇಲೆ ನೇರ ಪರಿಣಾಮ ಬೀರಲಿದೆ ಎಂದು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಐಎಎಸ್ – ಐಪಿಎಸ್ ಅಧಿಕಾರಿಗಳ ವರ್ಗಾವಣೆ ; ಆದೇಶ

Published

on

ಬೆಂಗಳೂರು ನಗರ ಕಾರ್ಯಪಡೆಯ ಎಡಿಜಿಪಿಯಾಗಿ ನೇಮಕಗೊಂಡಿರುವ ಐಪಿಎಸ್‌ ಅಧಿಕಾರಿ ರೂಪಾ ಡಿ. ಅವರು ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದರು.

ಸುದ್ದಿದಿನಡೆಸ್ಕ್:ರಾಜ್ಯ ಸರ್ಕಾರ ಇಂದು ಕೆಲವು ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಐಪಿಎಸ್ ಅಧಿಕಾರಿ ಡಿ. ರೂಪಾ ಅವರನ್ನು ಬೆಂಗಳೂರು ಮೆಟ್ರೋ ಪಾಲಿಟನ್ ಟಾಸ್ಕ್‌ಪೋರ್ಸ್ ಎಡಿಜಿಪಿ ಯಾಗಿ ವರ್ಗಾವಣೆ ಮಾಡಿದೆ.

ಕೆಎಸ್‌ಆರ್‌ಟಿಸಿ ಮಹಾನಿರ್ದೆಶಕರನ್ನಾಗಿ ಅಕ್ರಂ ಪಾಶಾ ಅವರನ್ನು ನೇಮಕ ಮಾಡಲಾಗಿದೆ. ಇದೇ ವೇಳೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಯವರನ್ನು ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

ಬೆಂಗಳೂರು ನಗರ ಕಾರ್ಯಪಡೆಯ ಎಡಿಜಿಪಿಯಾಗಿ ನೇಮಕಗೊಂಡಿರುವ ಐಪಿಎಸ್‌ ಅಧಿಕಾರಿ ರೂಪಾ ಡಿ. ಅವರು ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತ ಪ್ರಕರಣ ; ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಧ್ಯಪ್ರವೇಶಕ್ಕೆ ಪ್ರತಿಪಕ್ಷ ನಾಯಕ ಆರ್. ಅಶೋಕ ಮನವಿ

Published

on

ಸುದ್ದಿದಿನಡೆಸ್ಕ್:ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಪ್ರಕರಣದ ಬಗ್ಗೆ ಮಧ್ಯಸ್ಥಿಕೆ ವಹಿಸುವಂತೆ ವಿರೋಧ ಪಕ್ಷದ ನಾಯಕ ಆರ್. ಅಶೋಕ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಪತ್ರ ಬರೆದಿದ್ದಾರೆ. ಸಂತ್ರಸ್ಥರು ಮತ್ತು ಅವರ ಕುಟುಂಬಗಳಿಗೆ ಪಾರದರ್ಶಕತೆ ನ್ಯಾಯ ದೊರಕುವಂತಾಗಲು ತನಿಖೆಯ ಮೇಲ್ವಿಚಾರಣೆ ನಡೆಸುವಂತೆ ಒತ್ತಾಯಿಸಿದ್ದಾರೆ.

ಸಂತ್ರಸ್ಥರಿಗೆ ನ್ಯಾಯ ಒದಗಿಸುವುದು ಹಾಗೂ ಇಂತಹ ಘಟನೆಗಳು ಮರುಕಳಿಸದಂತೆ ತಡೆಯುವುದು ಎಲ್ಲರ ಕರ್ತವ್ಯವಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಈ ನಡುವೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಿಂದ ಸಮಸ್ಯೆಗೆ ಒಳಗಾದ ಮಕ್ಕಳ ವಿವರವನ್ನು ಕೋರಿ ಸಿಐಡಿಗೆ ಮಕ್ಕಳ ಹಕ್ಕು ಆಯೋಗ ನೋಟಿಸ್ ಜಾರಿ ಮಾಡಿದೆ.

ಸಾರ್ವಜನಿಕ ದೂರು ಆಧರಿಸಿ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ಆಯೋಗ ಈ ಬಗ್ಗೆ ಹೆಚ್ಚಿನ ನಿಖರ ಮಾಹಿತಿ ನೀಡುವಂತೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending