Connect with us

ಬಹಿರಂಗ

ಹುತಾತ್ಮ ಭಗತ್ ಸಿಂಗ್ ಮತ್ತು ಪ್ರಸ್ತುತ ಭಾರತ

Published

on

 

  • ಕೆ. ವಾಸುದೇವರೆಡ್ಡಿ
    ಎಸ್ಎಫ್ಐ ರಾಜ್ಯ ಕಾರ್ಯದರ್ಶಿ

ಪ್ಪಟ ದೇಶಪ್ರೇಮಿಗಳಾದ ಭಗತ್ ಸಿಂಗ್, ರಾಜಗುರು,ಸುಖದೇವ್ ರನ್ನು ಬ್ರಿಟಿಷ್ ಸರ್ಕಾರ 1931 ಮಾರ್ಚ್ 23 ನೇಣಿಗೇರಿಸಿತು. ಬ್ರಿಟಿಷ್ ಸಾಮ್ರಾಜ್ಯಶಾಹಿ ದಾಸ್ಯದ ಸಂಕೋಲೆಯಿಂದ ಭಾರತದ ವಿಮೋಚನೆಗಾಗಿ ಚಿರು ಯೌವನದ ಯುವಕರ ಬಲಿದಾನ ಅಸಂಖ್ಯಾತ ಭಾರತೀಯರನ್ನು ಸ್ವಾತಂತ್ರ್ಯ ಚಳುವಳಿಗೆ ಪ್ರಚೋದಿಸಿತು.

ಒಂದು ಉನ್ನತ ಧ್ಯೇಯ ಮತ್ತು ಆದರ್ಶಗಳಿಗಾಗಿ ಹೋರಾಡಿ ಸ್ಥಾಪಿತ ವ್ಯವಸ್ಥೆಯ ವಿರುದ್ಧ ಸೆಟೆದು ನಿಂತು ವ್ಯವಸ್ಥೆಯ ಬದಲಾವಣೆಗಾಗಿ ಅವಿರತ ಶ್ರಮಿಸಿ ಪ್ರಭುತ್ವದ ಧೂರ್ತತನಕ್ಕೆ ಬಲಿಯಾಗುವ ಪ್ರಾಮಾಣಿಕ ಹೋರಾಟಗಾರರನ್ನು ಹುತಾತ್ಮ ಎಂದು ಬಣ್ಣಿಸಬಹುದು. ವ್ಯಕ್ತಿಗತ ಸೈದ್ಧಾಂತಿಕ ನೆಲೆಯಲ್ಲಿ ಹುತಾತ್ಮ ಎಂಬ ಪದಕ್ಕೆ ನಾನಾ ಅರ್ಥಗಳು ಮೂಡುತ್ತವೆ. ಭಾರತದ ಪ್ರಸ್ತುತ ರಾಜಕಾರಣದಲ್ಲಿ ಹುತಾತ್ಮ ಎಂಬ ಪದವೂ ಸಹ ಮಾರುಕಟ್ಟೆಯ ಸರಕಿನಂತಾಗಿದ್ದು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುವ ಚಿಮ್ಮುಹಲಗೆಯಾಗಿ ಪರಿಣಮಿಸಿದೆ.

23 ವರ್ಷಕ್ಕೆ ಬಲಿಪೀಠ ಮೇಲೆ ಇನ್ ಕ್ವಿಲಾಬ್ ಜಿಂದಾಬಾದ್ ಕ್ರಾಂತಿಯ ಕಹಳೆ ಮೊಳಗಿಸಿದ ಶಾಹೀದ್ ಭಗತ್ ಸಿಂಗ್ ಮತ್ತು ಆತನ ಸಂಗಾತಿಗಳನ್ನು ಭಾರತ ಸರ್ಕಾರ ಹುತಾತ್ಮರೆಂದು ಅಧಿಕೃತವಾಗಿ ಪರಿಗಣಿಸದಿರುವುದು ಮತ್ತು ಚಂಡಿಗಢ ಮತ್ತು ಹರಿಯಾಣ ವಿಮಾನ ನಿಲ್ದಾಣಕ್ಕೆ ಶಾಹೀದ್ ಭಗತ್ ಸಿಂಗ್ ಹೆಸರನ್ನು ನಾಮಕರಣ ಮಾಡಲು ಸಹ ಹೋರಾಟ ನಡೆಸಿದರು ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿರುವುದು ಗಣಘೋರ ಅವಮಾನದ ಸಂಗತಿ. ಆದರೆ ಬ್ರಿಟಿಷರಿಗೆ ಕ್ಷಮಾಪಣೆ ಪತ್ರ ಬರೆದು ಕೊಟ್ಟು ಹೊರ ಬಂದ ಸಂಘಪರಿವಾರದ ಸ್ವಯಂಘೋಷಿತ ವೀರ ಸಾವರ್ಕರ್ ಗೆ ಭಾರತರತ್ನ ಕೊಡುವ ಬಗ್ಗೆ ಚರ್ಚೆ ನಡೆಯುತ್ತಿದೆ.

ದೇಶ-ದೇಶದ್ರೋಹ-ದೇಶ ಭಕ್ತಿ ಮುಂತಾದ ವಿದ್ಯಮಾನಗಳು ಬಲಪಂಥೀಯ ರಾಜಕಾರಣದ ನೆಲೆಯಲ್ಲಿ ಅನುಕೂಲಸಿಂಧುವಾಗಿ ವ್ಯಾಖ್ಯಾನಿಸಲ್ಪಡುತ್ತಿರುವ ಸಂದರ್ಭದಲ್ಲಿ ಹುತಾತ್ಮ ಎಂಬ ಪದ ತನ್ನ ಅರ್ಥವನ್ನೇ ಕಳೆದುಕೊಳ್ಳುತ್ತಿದೆ.

ಆದರೆ ಹುತಾತ್ಮ ಎನ್ನುವ ಗೌರವ ಪಡೆಯುವ ಹಕ್ಕು ಕೇವಲ ಪ್ರಾಮಾಣಿಕ ದಿಟ್ಟ ಕ್ರಾಂತಿಕಾರಿಗಳಿಗೆ ಮಾತ್ರವೇ ಇರುತ್ತದೆ. ಭಾರತದ ಸ್ವಾತಂತ್ರ್ಯ ಚಳುವಳಿಯಲ್ಲಿ ಸಾವಿರಾರು ಜನ ತಮ್ಮ ಜೀವವನ್ನೇ ಪಣವಿಟ್ಟು ಬ್ರಿಟೀಷರ ವಿರುದ್ಧ ಹೋರಾಡಿ ಮೃತರಾದರೂ ಹುತಾತ್ಮ ಎಂಬ ಪಟ್ಟಕ್ಕೆ ಅರ್ಹನಾದ ವ್ಯಕ್ತಿ ಸಂಗಾತಿ ಭಗತ್ಸಿಂಗ್, ರಾಜಗುರು ಸುಖದೇವ್ ಮತ್ತು ಆತನ ಸಂಗಾತಿಗಳು ಮಾತ್ರ. ಏಕೆಂದರೆ ಭಗತ್ ಸಿಂಗ್ ಕೇವಲ ಬ್ರಿಟೀಷ್ ವಸಾಹತುಶಾಹಿಯ ವಿರುದ್ಧ ಹೋರಾಡಲಿಲ್ಲ.

ಭಾರತದಲ್ಲಿ ಅಮೂಲಾಗ್ರ ಬದಲಾವಣೆ ತರಲು ಅಸಮಾನತೆಯ ಬುನಾದಿ ಮೇಲೆ ನಿರ್ಮಾಣವಾಗಿರುವ ಶ್ರೇಣೀಕೃತ, ಊಳಿಗಮಾನ್ಯ ವ್ಯವಸ್ಥೆಯಲ್ಲಿ ಹಾಸು ಹೊಕ್ಕಾಗಿದ್ದ ಶೋಷಣೆ ಮತ್ತು ಅಸಮಾನತೆಯ ವ್ಯವಸ್ಥೆಯನ್ನು ಬೇರು ಸಮೇತ ಕಿತ್ತು ಹಾಕಿ ನವ ಸಮ ಸಮಾಜದ ಕನಸುಗಳನ್ನು ಭಗತ್ ಸಿಂಗ್ ಮತ್ತು ಅವನ ಸಂಗಾತಿಗಳು ಒಂದು ವೇಳೆ ಸ್ವಾತಂತ್ರ್ಯದ ಕನಸು ಸಾಕಾರಗೊಳ್ಳುವ ಮುನ್ನವೇ ಅಮರರಾದರು.

” ಸ್ವಾತಂತ್ರ್ಯ ಎಂದರೆ ಕೇವಲ ಯಜಮಾನರ ಬದಲಾವಣೆ ಎಂದಾದರೆ ಜನರ ಶೋಷಣೆಯು ಹಾಗೆ ಮುಂದುವರಿಯಲಿದೆ ಆದ್ದರಿಂದ ಈ ಶೋಷಕ ವ್ಯವಸ್ಥೆಯನ್ನು ಬುಡ ಸಮೇತ ಕಿತ್ತು ಹಾಕಬೇಕು, ಹಳೆಯ ಸಂಗತಿಗಳನ್ನು ಕಾಪಾಡಿಕೊಂಡು ನವ ಸಮಾಜ ನಿರ್ಮಾಣ ಅಸಾಧ್ಯ ಅಂದರೆ ಈ ದೇಶದಿಂದ ಬಿಳಿಯ ದೊರೆಗಳು ಹೋಗಿ ಕಂದು ಬಣ್ಣದ (ಇದೇ ದೇಶದ) ಭೂಮಾಲಕ, ಬಂಡವಾಳದಾರರ ಕೈಗೆ ರಾಜಕೀಯ ಅಧಿಕಾರ ಹಸ್ತಾಂತರವಾಗುವುದರಿಂದ ನಿಜವಾದ ಸ್ವಾತಂತ್ರ್ಯ ಬರುವುದಿಲ್ಲ. ಬದಲಿಗೆ ಈ ದೇಶದ ಬಡಜನರ ಶೋಷಣೆ ಮುಂದುವರೆಯಲಿದೆ. ಎಂಬ ಭಗತ್ ಸಿಂಗ್ ರವರು ಮಾತು ದೇಶದ ಪ್ರಸ್ತುತ ಸಮಾಜೋ ರಾಜಕೀಯ ವ್ಯವಸ್ಥೆಯನ್ನು ಗ್ರಹಿಸಿದರೆ ನಮ್ಮ ಅರಿವಿಗೆ ಬರುವುದು ಸಹಜ.

ಹೌದು ಈಸ್ಟ್ ಇಂಡಿಯಾ ಕಂಪನಿಗಳ ಸ್ಥಾನದಲ್ಲಿ ಬಹುರಾಷ್ಟ್ರೀಯ ಕಾರ್ಪೋರೇಟ್ ಕಂಪೆನಿಗಳು, ಬ್ರಿಟಿಷರ ಪಾತ್ರದಲ್ಲಿ ರಾಜಕಾರಣದ ವ್ಯಾಪಾರಿಗಳು ಈ ದೇಶವನ್ನು ಲೂಟಿ ಹೊಡೆದು ಜನರನ್ನು ವಂಚಿಸುತ್ತಿದ್ದಾರೆ. 1947 ರಲ್ಲಿ ಕೇವಲ ಆಳುವ ಯಜಮಾನರು ಮಾತ್ರ ಬದಲಾಗಿರೋದು. ಆದ್ದರಿಂದ ಈಗಲೂ ದೇಶ ಬಡತನ, ಅಸ್ಪೃಶ್ಯತೆ, ಮೌಢ್ಯ, ಧರ್ಮಾಂಧತೆ, ದುಡಿಯುವ ರೈತ ಕಾರ್ಮಿಕರ ಪೋಷಣೆ ಮುಂದುವರೆದಿದೆ.

ಇಂದು ಹುತಾತ್ಮ ಭಗತ್ ಸಿಂಗ್ ನ ರಾಜಕೀಯ, ಆರ್ಥಿಕ, ಸೈದ್ಧಾಂತಿಕ, ವಿಚಾರಗಳು ಆದರ್ಶ ಪ್ರೇರೇಪಣೆಯಾಗಿವೆ. ಎಡಪಂಥೀಯ ಸಂಘಟನೆಗಳಿಗೆ ಭಗತ್ ಸಿಂಗ್ನ ಸಾಮ್ರಾಜ್ಯಶಾಹಿ, ವಸಹಾತುಶಾಹಿ ವಿರೋಧಿ ಧೋರಣೆ ಅಪ್ಯಾಯಮಾನವಾದರೆ ಬಲಪಂಥೀಯರಿಗೆ ಅವರದೇ ಆದ ಸೀಮಿತ ಚೌಕಟ್ಟಿನ “ ದೇಶಪ್ರೇಮ-ದೇಶಭಕ್ತಿ ” ಅವನನ್ನು ಆರಾಧಿಸುವಂತೆ ಮಾಡುತ್ತದೆ. ಭಗತ್ ಸಿಂಗ್ ಗಲ್ಲುಶಿಕ್ಷೆಗೊಳಗಾಗದೆ ಸ್ವತಂತ್ರ ಭಾರತದ ಆಡಳಿತ ವ್ಯವಸ್ಥೆಯಲ್ಲಿ ತಾನು ಬಯಸಿದ ಸಮಾಜವಾದಿ ವ್ಯವಸ್ಥೆಯನ್ನು ತರಲು ಯತ್ನಿಸಿದ್ದಲ್ಲಿ ಬಹುಶಃ ಈಗಿನ ಸ್ವಯಂ ಘೋಷಿತ ದೇಶಭಕ್ತರಿಂದ ಭಾರತದಲ್ಲಿ ಆರಾಧ್ಯ ದೈವದ ಪಟ್ಟ ಅವನಿಗೆ ದೊರೆಯುತ್ತಿಲಿಲ್ಲವೇನೋ..! ಬಹುಶಃ ವಿಶ್ವದ ಇತಿಹಾಸ ಪಠ್ಯಗಳಲ್ಲಿ ಲ್ಯಾಟಿನ್ ಅಮೆರಿಕದ ಕ್ರಾಂತಿಕಾರಿ ಚೆ ಗುವಾರನನ್ನು ಕಡೆಗಣಿಸಿರುವಂತೆಯೇ ಭಗತ್ಸಿಂಗ್ನನ್ನೂ ಕಡೆಗಣಿಸಲಾಗಿದೆ.

ಒಂದು ಅರ್ಥದಲ್ಲಿ ಭಗತ್ ಸಿಂಗ್ ಹುತಾತ್ಮನಾಗಿದ್ದು “ ದೇಶಭಕ್ತಿ ”ಯ ವಕ್ತಾರರಿಗೆ ಒಂದು ವರದಾನವಾಗಿ ಪರಿಣಮಿಸಿದರು. ಕೇಸರಿಪಡೆಗಳಿಗೆ ಭಗತ್ ಸಿಂಗ್ ನಾಸ್ತಿಕವಾದ, ಜ್ಯಾತ್ಯಾತೀತ, ಸಮಾಜವಾದಿ ವಿಚಾರಗಳು ಬಲಪಂಥೀಯ ರಾಜಕಾರಣಕ್ಕೆ ವಿರುದ್ಧವಾಗಿರುವುದರಿಂದ ಭಗತ್ ಸಿಂಗ್ ನನ್ನು ಕೇಸರಿಪಡೆಗಳು ಹೈಜಾಕ್ ಮಾಡಲು ಸಾಧ್ಯವಾಗಿಲ್ಲ. ಇಲ್ಲದಿದ್ದರೆ ಕೆಂಪುಕೋಟೆಯ ತ್ರಿವರ್ಣ ಧ್ವಜದ ನೆರಳಲ್ಲಿ ವಿಜೃಂಭಿಸುವ ಭಗತ್ ಸಿಂಗ್ ನನ್ನು ಕೇಸರಿ ಭಗವಾಧ್ವಜದ ಶೋಭಾಯಾತ್ರೆಯಲ್ಲೂ ವಿಜೃಂಭಿಸುತ್ತಿದ್ದರು.

ಸಮಕಾಲೀನ ಸಂದರ್ಭದಲ್ಲಿ, ಭಗತ್ ಸಿಂಗ್ ಹುತಾತ್ಮನಾಗಿ 89 ವರ್ಷಗಳು ಕಳೆದಿರುವ ಈ ಸಂದರ್ಭದಲ್ಲಿ ಕೇವಲ ಸ್ವಾತಂತ್ರ್ಯ ಸಂಗ್ರಾಮಿ ಎಂಬ ಸೀಮಿತ ಚೌಕಟ್ಟಿನೊಳಗೆ ಬಂಧಿಸುವುದು ಹುತಾತ್ಮನಿಗೆ ಅಪಚಾರ ಎಸಗಿದಂತೆಯೇ ಸರಿ. ಏಕೆಂದರೆ ಬ್ರಿಟೀಷ್ ಆಡಳಿತ ವ್ಯವಸ್ಥೆ ಭಗತ್ ಸಿಂಗ್ ಎಂಬ ಒಬ್ಬ ವ್ಯಕ್ತಿಯನ್ನು ಗಲ್ಲಿಗೇರಿಸಿತ್ತು. ವ್ಯಕ್ತಿಗಳನ್ನು ಕೊಂದು ಹಾಕಬಹುದು ಆದರೆ ಅವರ ವಿಚಾರಗಳು ಅಲ್ಲ, ಉನ್ನತ ಆದರ್ಶಗಳು ಅಂತ್ಯಗೊಳಿಸುವುದಿಲ್ಲ ಎಂಬ ಭಗತ್ಸಿಂಗ್ನ ಮುತ್ತಿನಂತಹ ನುಡಿಗಳು ಎಷ್ಟು ಸತ್ಯ. ಭಗತ್ ಸಿಂಗ್ ಹುತಾತ್ಮನಾದ ನಂತರವೂ ಆತನ ವಿಚಾರ, ತತ್ವ ಸಿದ್ಧಾಂತಗಳು ಜೀವಂತವಾಗಿವೆ. ಇನ್ನೂ ಶತಮಾನಗಳ ಕಾಲ ಜೀವಂತವಾಗಿರುತ್ತವೆ. ಇಂದು ನಾವು ಈ ಯುವ ಕ್ರಾಂತಿಕಾರಿಯನ್ನು ನೆನೆಯುವುದೇ ಆದರೆ ಬೇರೊಂದು ನೆಲೆಗಟ್ಟಿನಲ್ಲೇ ಸ್ಮರಿಸಬೇಕಾಗುತ್ತದೆ.

ಭಗತ್ ಸಿಂಗ್ ಕೇವಲ ತನ್ನ ಒಂದು ಉದ್ದೇಶಕ್ಕಾಗಿ ಅಥವಾ ತನ್ನ ಎಡಪಂಥೀಯ ಧೋರಣೆಗಳ ಅಸ್ತಿತ್ವವನ್ನು ಉಳಿಸಿಲೆಂದೇ ಹುತಾತ್ಮನಾಗಲಿಲ್ಲ. ಅಥವಾ ತನ್ನದೇ ಆದ ರಾಜಕೀಯ ಭೂಮಿಕೆಗಾಗಿ, ಅಧಿಕಾರ ರಾಜಕಾರಣಕ್ಕಾಗಿ ಹುತಾತ್ಮನಾಗಲಿಲ್ಲ. ಇಂದು ನಾವು ಕಾಣುತ್ತಿರುವ ಪಕ್ಷ ರಾಜಕಾರಣ ಮತ್ತು ವಿಭಜನೆಯ ಚಿಂತನೆಗಳನ್ನು ಮೀರಿ ದೇಶದ ಯುವ ಜನತೆಗೆ, ಭವಿಷ್ಯದ ಪೀಳಿಗೆಗೆ ಸಮ ಸಮಾಜದ ಒಂದು ನಿರ್ದಿಷ್ಟ ಆಯಾಮವನ್ನು ತನ್ನ ಹೋರಾಟದ ಮೂಲಕ ಬಿಂಬಿಸಿದ ಭಗತ್ ಸಿಂಗ್ ಸ್ಪೂರ್ತಿದಾಯಕ.

ಆದರೆ ಇಂದು ಆಳುವ ವರ್ಗಗಳ ತಾಳಕ್ಕೆ ತಕ್ಕಂತೆ ಪತನದತ್ತ ಹೆಜ್ಜೆ ಹಾಕುತ್ತಾ ಭ್ರಷ್ಟ ವ್ಯವಸ್ಥೆಯ ಕಬಂಧ ಬಾಹುಗಳಿಗೆ ಸಿಲುಕಿ ನಲುಗುತ್ತಿರುವುದು ದೇಶದ ಯುವಜನತೆ ಭಗತ್ ಸಿಂಗ್ ಪ್ರತಿಪಾದಿಸಿದ ಉನ್ನತ ಆದರ್ಶಗಳು ಯಾವುವೂ ಎಂದು ಗಮನಿಸಬೇಕು. ತ್ಯಾಗ, ಪ್ರಾಮಾಣಿಕತೆ, ಆದರ್ಶ ಮತ್ತು ಸತ್ಯಸಂಧತೆಯನ್ನು ಭೌಗೋಳಿಕ ಚೌಕಟ್ಟಿನಲ್ಲಿ ಬಂಧಿಸುವ ಬದಲು ಸಾಮಾಜಿಕ ನೆಲೆಯಲ್ಲಿ ಗ್ರಹಿಸಿದಾಗ ಸಮಾಜ ಒಂದು ಉನ್ನತ ಧ್ಯೇಯದೆಡೆಗೆ ಸಾಗುವುದು ಸಾಧ್ಯ. ಇಲ್ಲವಾದಲ್ಲಿ ಎಲ್ಲವೂ ಆಳುವವರ ಹಿತಾಸಕ್ತಿ ಕಾಪಾಡುವ ಭೂಪಟದ ಭೌಗೋಳಿಕ ದೇಶಭಕ್ತಿಯ ಸೀಮಿತ ಶರಪಂಜರದೊಳಗೆ ಬಂಧಿಯಾಗುತ್ತವೆ.

ಭಾರತದ ಪ್ರಸ್ತುತ ರಾಜಕೀಯ, ಸಾಮಾಜಿಕ ಮತ್ತು ಸಾಂಸ್ಕøತಿಕ ಸನ್ನಿವೇಶವನ್ನು ಗಮನಿಸಿದಾಗ ಭಗತ್ ಸಿಂಗ್ ಮತ್ತು ಸಂಗಾತಿಗಳು ಪ್ರತಿಪಾದಿಸಿದ ಎಲ್ಲ ಮೌಲ್ಯಗಳೂ ಅಪಮೌಲ್ಯಕ್ಕೊಳಗಾಗುತ್ತಿರುವುದು ಎದ್ದು ಕಾಣುತ್ತದೆ. ತಮ್ಮ ಜಾತ್ಯತೀತ, ವೈಚಾರಿಕತೆ, ಜನಪರ ಹೋರಾಟಗಳಲ್ಲಿ ಪ್ರಾಮಾಣಿಕತೆಯಿಂದ ತೊಡಗಿದರೆ ಹತ್ಯೆಗೀಡಾಗುವ, ಒತ್ತಡಕ್ಕೆ ಸಿಲುಕಿಸಿ ಆತ್ಮಹತ್ಯೆಗೆ ಶರಣಾಗುವಂತೆ ಮಾಡಲಾಗುತ್ತಿದೆ.

ಪಟ್ಟಭದ್ರ ಹಿತಾಸಕ್ತಿಗಳ, ಮತೀಯವಾದಿಗಳ, ಧರ್ಮಾಂಧರ ಕೆಂಗಣ್ಣಿಗೆ ಬಲಿಯಾಗಿ ಬದುಕಿದ್ದೂ ಶವದಂತಾಗುವ ಸಾಹಿತಿ, ವಿಚಾರವಾದಿಗಳು ಈ ವ್ಯವಸ್ಥೆಯ ಲೋಪಗಳನ್ನು ಜನಸಾಮಾನ್ಯರ ಮುಂದಿರಿಸಿದ ಅಪರಾಧಕ್ಕಾಗಿ ಸ್ಥಾಪಿತ ವ್ಯವಸ್ಥೆಯಿಂದಲೇ ದಮನಕ್ಕೊಳಗಾಗುವ ಹೋರಾಟಗಾರರು, ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸಿ ಒಂದು ಸ್ವಾಸ್ಥ್ಯ ಸಮಾಜವನ್ನು ನಿರ್ಮಿಸಲು ಶ್ರಮಿಸಿ ಆಡಳಿತ ವ್ಯವಸ್ಥೆಯ, ಪ್ರಭುತ್ವದ ದಮನಕ್ಕೊಳಗಾಗುವ ಪ್ರಜ್ಞಾವಂತರು ಇವರೆಲ್ಲರೂ ತಮ್ಮೊಳಗಿನ ಬೌದ್ಧಿಕ ಶಕ್ತಿ ಮತ್ತು ಉತ್ಸಾಹಗಳು ಹುತಾತ್ಮವಾಗುವುದನ್ನು ಕಣ್ಣೆದುರಿನಲ್ಲೇ ಭಾರತದಲ್ಲಿ ಕಾಣುತ್ತಿದ್ದೇವೆ. ಇದರ ನಡುವೆಯೇ ಭಗತ್ ಸಿಂಗ್ ಬೌದ್ಧಿಕವಾಗಿ ಜೀವಂತವಾಗಿದ್ದರೂ ಭೌತಿಕವಾಗಿ ಕಣ್ಮರೆಯಾಗುತ್ತಿದ್ದಾನೆ.

ಕೇವಲ 23 ವರ್ಷಕ್ಕೆ ನೇಣುಗಂಬಕ್ಕೆ ಏರುವ ಕೊನೆಯ ಗಳಿಗೆಯಲ್ಲೂ ಭಗತ್ ಸಿಂಗ್ ನ ಸ್ಪೂರ್ತಿಯಾಗಿದ್ದ ಕಾಮ್ರೇಡ್ ಲೆನಿನ್ ರವರ ಪುಸ್ತಕ ಓದಿ ಮುಗಿಸುವುದು ಕೊನೆಯುಸಿರೆಳೆಯುವ ಮುನ್ನ ಅಂತಿಮ ಆಸೆ ಎಂದಿದ್ದರು. ಆದರೆ ಇಂದು ದೇಶಭಕ್ತಿಯನ್ನು ಸ್ವಯಂ ಗುತ್ತಿಗೆ ಪಡೆದುಕೊಂಡಿರುವವರು ತ್ರಿಪುರಾದ ಅರ್ಗತಲಾ ದಲ್ಲಿ ಲೆನಿನ್ ಪ್ರತಿಮೆಯನ್ನು ಜೆಸಿಬಿ ಯಂತ್ರದಿಂದ ಉರುಳಿಸಿ ರಣಕೇಕೆ ಹಾಕಿದ್ದು ನೋಡಿದರೆ ಗೊತ್ತಾಗುತ್ತದೆ ಈ ಶಕ್ತಿಗಳು ಭಗತ್ ಸಿಂಗ್ ಕನಸಿನ ಭಾರತವನ್ನು ಛಿದ್ರಗೊಳಿಸುತ್ತಿದ್ದಾರೆ. ಈ ಕೋಮುವಾದಿ, ಮೂಲಭೂತವಾದಿ ಶಕ್ತಿಗಳಿಂದ ದೇಶದ ಐಕ್ಯತೆ ಸಮಗ್ರತೆ ಜಾತ್ಯತೀತತೆಯನ್ನು ಕಾಪಾಡುವುದೇ ನಮ್ಮ ಮುಂದಿರುವ ಮೊದಲ ಕರ್ತವ್ಯ.

ಇದಕ್ಕೆ ಕಾರಣ ಎಂದರೆ ಸಮಕಾಲೀನ ಭಾರತದಲ್ಲಿ ಉನ್ನತ ಸಮಾಜವನ್ನು ನಿರ್ಮಿಸಲು ನೆರವಾಗುವ ಎಲ್ಲ ಮೌಲ್ಯಗಳೂ ಬಿಕರಿಗಿವೆ, ಹಾಗೆಯೇ ಈ ಎಲ್ಲ ಮೌಲ್ಯಗಳೂ ಪ್ರಭುತ್ವದ ಶೋಷಣೆಗೆ ಸಿಲುಕಿ ನಲುಗುತ್ತಿವೆ. ಭೌತಿಕವಾಗಿ ಆತ್ಮ, ದೇಹ ಇಲ್ಲದ ಈ ಮೌಲ್ಯಗಳನ್ನು ಗಲ್ಲಿಗೇರಿಸಲು ವ್ಯವಸ್ಥೆಯ ಸಂರಕ್ಷಕರಿಗೆ ಸಾಧ್ಯವಿಲ್ಲ. ಆದರೆ ಈ ಮೌಲ್ಯಗಳನ್ನು ಪ್ರತಿಪಾದಿಸುವ ವ್ಯಕ್ತಿಗಳನ್ನು ಪಂಜರದೊಳಗೆ ಬಂಧಿಸುವ ಮೂಲಕ ನಿರ್ನಾಮ ಮಾಡುವುದು ಸುಲಭಸಾಧ್ಯ. ರೋಹಿತ್ ವೇಮುಲ, ಕನ್ನಯ್ಯ ಕುಮಾರ್, ಜೆಎನ್ಯು ವಿವಾದ, ದಾದ್ರಿ ಘಟನೆ ಮತ್ತು ಭೀಮ್ ಕೊರೆಂಗಾವ.. ವಿದ್ಯಮಾನಗಳು ರಾಷ್ಟ್ರ ಮತ್ತು ರಾಷ್ಟ್ರೀಯತೆಯ ವ್ಯಾಖ್ಯೆಯನ್ನೇ ವಿಭಿನ್ನ ನೆಲೆಗೆ ಕೊಂಡೊಯ್ದಿದೆ.

ರಾಷ್ಟ್ರ ಭಕ್ತಿ ಎನ್ನುವ ಬೌದ್ಧಿಕ ವಿದ್ಯಮಾನ ಇಂದು ಲೌಕಿಕತೆಯನ್ನು ಪಡೆದುಕೊಂಡಿದ್ದು ಭಾರತದ ಪ್ರತಿಯೊಬ್ಬ ಪ್ರಜೆಯೂ ತನ್ನ ದೇಶಭಕ್ತಿ ಪ್ರದರ್ಶಿಸಲು ಜಯಕಾರ ಕೂಗಬೇಕಾದ ಸಂದರ್ಭ ಒದಗಿಬಂದಿದೆ..! ಹಾಗಾಗಿ ಪ್ರಭುತ್ವ ಮತ್ತು ಪ್ರಜೆಗಳ ನಡುವಿನ ಸಂಘರ್ಷವನ್ನು ದೇಶಭಕ್ತಿ-ದೇಶದ್ರೋಹದ ಚೌಕಟ್ಟಿನಲ್ಲೇ ವ್ಯಾಖ್ಯಾನಿಸಲಾಗುತ್ತಿದೆ. ಈ ಸಂದಿಗ್ಧ ಪರಿಸ್ಥಿತಿಯಲ್ಲಿ ಅಪ್ಪಟ ದೇಶಪ್ರೇಮಿ ಭಗತ್ ಸಿಂಗ್ ಮತ್ತು ಆತನ ಸಂಗಾತಿಗಳನ್ನು ಹುತಾತ್ಮರೆಂದು ನೆನೆಯುತ್ತಿದ್ದೇವೆ. ಭಗತ್ ಸಿಂಗ್ ಇಂದಿಗೂ ಭಾರತದ ಭವಿಷ್ಯ ಕಟ್ಟಲು ಚಿಂತಿಸುವವರೆಲ್ಲರೊಳಗೆ ಅದಮ್ಯ ಚೇತನವಾಗಿದ್ದಾನೆ.

ಭಗತ್ ಸಿಂಗ್ ಮತ್ತು ಆತನ ಸಂಗಾತಿಗಳು ಬಿದ್ದ ಮರಗಳು ಅಲ್ಲ ಬಿತ್ತಿದ ಬೀಜಗಳು.ನಮ್ಮೆಲ್ಲರಲ್ಲೂ ಭಗತ್ ಸಿಂಗ್ ವಿಚಾರಗಳನ್ನು ವಿಚಾರಧಾರೆ ಕ್ರಾಂತಿಯನ್ನುಂಟು ಮಾಡಲಿ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಭಾರತದ ಜನಸಂಖ್ಯೆ ವರವೋ..? ಶಾಪವೋ..?

Published

on

ಸಾಂದರ್ಭಿಕ ಚಿತ್ರ

 

  • ಅಂಬಿಕಾ. ಕೆ
    ಎಂ.ಎ. ಪ್ರಥಮ ವರ್ಷದ ವಿದ್ಯಾರ್ಥಿನಿ
    ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ
    ಬೆಂಗಳೂರು ವಿಶ್ವವಿದ್ಯಾಲಯ

 

ವಿಶ್ವ ಸಂಸ್ಥೆಯು ಪಾಪುಲೇಷನ್ ಫಂಡ್ ಮಾಡಿರುವ ಅಂದಾಜಿನ ಪ್ರಕಾರ ಭಾರತವು ಜಗತ್ತಿನ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ ಎನಿಸಿಕೊಂಡಿದೆ.

ದೇಶದ ಒಟ್ಟು ಜನಸಂಖ್ಯೆಯು 142.86 ಕೋಟಿಗೆ ಏರಿಕೆಯಾಗಿದ್ದು, ಚೀನಾ ಎರಡನೇ ಸ್ಥಾನಕ್ಕೆ ಇಳಿದಿದೆ, ಇಂತಹದೊಂದು ಹಿರಿಮೆಗೆ ಭಾರತವು ಪಾತ್ರವಾಗಲಿದೆ ಎಂಬುದರ ಅರಿವು ಹಿಂದೆಯೇ ಇತ್ತು. ಹೊಸ ಭಾರತದ ಜನಸಂಖ್ಯೆಯ ಸ್ವರೂಪವೇನು ಮತ್ತು ಯಾವ ವಯೋ ಮಾನದವರು ಎಷ್ಟಿದ್ದಾರೆ. ಆದಾಯ ಮಟ್ಟ ಹೇಗಿದೆ, ಆದಾಯ ಹಂಚಿಕೆ ಹೇಗಿದೆ ಎಂಬುದರ ಕುರಿತು ಕೂಡ ಚರ್ಚೆಗಳು ನಡೆಯುತ್ತಿವೆ. ಒಟ್ಟು ಜನಸಂಖ್ಯೆಯ ಜತೆಗೆ ಈ ಎಲ್ಲಾ ಅಂಶಗಳು ಕೂಡ ಸರ್ಕಾರದ ನೀತಿಗಳು ಮತ್ತು ಕಾರ್ಯಕ್ರಮ ರೂಪಿಸುವಿಕೆ ಮೇಲೆ ಪ್ರಭಾವ ಬೀರುತ್ತವೆ. ರಾಜಕೀಯ ಪಕ್ಷಗಳು ಮತ್ತು ಗುಂಪುಗಳು ರಾಜಕೀಯ ಹಾಗೂ ಸಾಮಾಜಿಕ ಸ್ಥಾನಗಳನ್ನು ನಿರ್ಧರಿಸುವಲ್ಲಿಯೂ ಈ ಅಂಶಗಳು ಪಾತ್ರವಹಿಸುತ್ತವೆ ಭಾರತದಲ್ಲಿ ಗರಿಷ್ಠ ಸಂಖ್ಯೆಯು ಯುವ ಜನರಿದ್ದಾರೆ.

ಹಾಗೆಯೇ ಮುಂದುವರೆಯಲಿದೆ 15 ರಿಂದ 24 ವರ್ಷದೊಳಗಿನವರ ಸಂಖ್ಯೆಯು 25.4 ಕೋಟಿ ಎಂದು ಅಂದಾಜಿಸಲಾಗಿದೆ ಇನ್ನು ದೀರ್ಘಕಾಲ ಭಾರತವು ಈ ಸ್ಥಿತಿ ಕಾಯ್ದುಕೊಳ್ಳಲಿದೆ ಎಂಬುದರಲ್ಲಿಯೂ ಅನುಮಾನ ಇಲ್ಲ ಜನಸಂಖ್ಯೆಯಲ್ಲಿ ಜಗತ್ತಿನಲ್ಲಿ ಮೊದಲ ಸ್ಥಾನಕ್ಕೆ ಏರುವುದು, ಗೌರವ ಏನು ಅಲ್ಲ ಬದಲಿಗೆ ಇದು ದೇಶಕ್ಕೆ ಹಲವು ಸವಾಲುಗಳನ್ನು ಹುಟ್ಟುತ್ತದೆ ಜತೆಗೆ ಅವಕಾಶಗಳ ಬಾಗಿಗಳನ್ನು ತೆರೆಯುತ್ತದೆ ಆದರೆ, ಜನರನ್ನು ಸಕಾಲಿಕವಾಗಿ ಮತ್ತು ಪರಿಣಾಮಕಾರಿಯಾಗಿ ಬಲಿಸಿಕೊಳ್ಳದೆ ಇದ್ದರೆ ಜನಸಂಖ್ಯೆಯೇ ಶಾಪವಾಗಿ ದೊಡ್ಡ ಸವಾಲಾಗಿ ಪರಿಣಮಿಸಬಹುದು. ದೇಶ ಪ್ರತಿ ವರ್ಷವೂ ಹೆಚ್ಚು ಹೆಚ್ಚು ಜನರಿಗೆ ಆಹಾರ ಬಟ್ಟೆ ಶಿಕ್ಷಣ ಆರೋಗ್ಯ ಸೇವೆ ಉದ್ಯೋಗಾವಕಾಶಗಳನ್ನು ಒದಗಿಸಬೇಕಾಗುತ್ತದೆ.

ಅಂಬಿಕಾ. ಕೆ

ಹೀಗೆ ಮುಂದುವರೆದರೆ ಉದ್ಯೋಗಾವಕಾಶಗಳು ದೊರೆಯದೆ ಜನರ ಜೀವನ ಮಟ್ಟ ಸುಧಾರಿಸಿಕೊಳ್ಳುವುದು ಕಷ್ಟವೇ ಸರಿ ಕೆಲಸ ಮಾಡುವ ವಯೋಮಾನದ ಜನರನ್ನು ಸಮಂಜಸವಾಗಿ ಬಳಸಿಕೊಂಡರೇ ಮಾತ್ರ ಜನಸಂಖ್ಯೆಯು ದೇಶದ ಅಭಿವೃದ್ಧಿಗೆ ಪೂರಕವಾಗಿ ಪರಿಣಮಿಸುತ್ತದೆ. ದೇಶದಲ್ಲಿ ದೊಡ್ಡ ಸಂಖ್ಯೆಯ ಜನರಿಗೆ ಈಗಲೂ ಮೂಲ ಸೌಲಭ್ಯಗಳನ್ನು ಒದಗಿಸಲು ಸಾಧ್ಯವಾಗಿಲ್ಲ ಆದ್ದರಿಂದ ಎಲ್ಲಾ ಕ್ಷೇತ್ರಗಳಲ್ಲಿಯೂ ಸಂಬಂಧಿಸಿದ ನೀತಿಗಳು ಮತ್ತು ಕಾರ್ಯತಂತ್ರ ಗಳಿಗೆ ಸಂಬಂಧಿಸಿದ ಪ್ರಯತ್ನಗಳನ್ನು ನಡೆಸದೇ ಇದ್ದರೆ ಜನಸಂಖ್ಯೆ ಹೆಚ್ಚಳದ ಲಾಭವು ದೊರೆಯದೆ ಹೋಗಬಹುದು ಇದರ ಪರಿಣಾಮವಾಗಿ ಲಾಭದ ಹೆಸರಿನಲ್ಲಿ ನಷ್ಟವೇ ಹೆಚ್ಚು ಅದುವೇ ಒಂದು ಹೊರೆಯುವಾಗಬಹುದು.

ಯುವ ಜನರಿಗೆ ಸೌಲಭ್ಯಗಳು ಮತ್ತು ಅವಕಾಶಗಳನ್ನು ಸೃಷ್ಟಿಸುವುದರ ಜೊತೆಗೆ ಹೆಚ್ಚುತ್ತಲೇ ಇರುವ ಹಿರಿಯ ನಾಗರಿಕರ ಹಾರೈಕೆಯು ವ್ಯವಸ್ಥೆ ಮಾಡಬೇಕಿದೆ ಅವಕಾಶಗಳನ್ನು ಸದುಪಯೋಗ ಮಾಡಿಕೊಳ್ಳುವುದು ಮತ್ತು ಸವಾಲುಗಳನ್ನು ಎದುರಿಸುವುದು ಭಾರತೀಯರ ಹೊರೆಗಾರಿಕೆ ದೇಶದ ಜನರ ಅಗತ್ಯಗಳನ್ನು ಪೂರೈಸಲು ವಿಫಲವಾದರೆ, ಸಾಮಾಜಿಕ ಸಂಘರ್ಷ ಮತ್ತು ರಾಜಕೀಯ ದೃಷ್ಟಿ ಉಂಟಾಗಿ ಅದು ಗಂಭೀರ ಪರಿಣಾಮಗಳಿಗೆ ಕಾರಣವಾಗಬಹುದು. ಮುಂದೆ ಜನಸಂಖ್ಯಾ ಸ್ಫೋಟವಾದರೂ ಆಶ್ಚರ್ಯ ಪಡಬೇಕಾಗಿಲ್ಲ ಈಗಿನ ಸನ್ನಿವೇಶದಲ್ಲಿ ದೊರಕುತ್ತಿರುವ ಸಂಪನ್ಮೂಲಗಳ ಗರಿಷ್ಠ ಬಳಕೆ ಮತ್ತು ಪರಿಣಾಮಕಾರಿ ಬಳಕೆ ಬಹಳ ಮಹತ್ವವಾಗಿದೆ.

ಮೀಸಲಾತಿ, ವಲಸೆ , ರಾಜಕೀಯ ಪ್ರಾತಿನಿಧ್ಯ ಸಂಪನ್ಮೂಲಗಳ ಹಂಚಿಕೆ ಮತ್ತು ಇದರ ವಿಚಾರಗಳು ಚರ್ಚೆಗೆ ಒಳಗಾಗುವ ಸಾಧ್ಯತೆ ಇದೆ ಸಮಾಜದ ಎಲ್ಲಾ ವರ್ಗಗಳನ್ನು ಸಮಾನವಾಗಿ ಒಳಗೊಳ್ಳುವ ಆರ್ಥಿಕ ಪ್ರಗತಿಯು ಸಾಧ್ಯವಾದರೆ ಜನಸಂಖ್ಯೆ ಏರಿಕೆ ಸವಾಲಾಗಿ ಪರಿಣಮಿಸಬಹುದು ಮಾನವ ಅಭಿವೃದ್ಧಿಯೇ ಅತ್ಯುತ್ತಮ ಕುಟುಂಬ ಕಲ್ಯಾಣ ಯೋಜನೆ ಇದರಿಂದ ಜನಸಂಖ್ಯೆಯ ಏರಿಕೆಯನ್ನು ನಿಯಂತ್ರಣದಲ್ಲಿ ಇರಿಸಿಕೊಳ್ಳಬಹುದು ಜನಸಂಖ್ಯೆ ಹೆಚ್ಚಳ ಯಾವುದೋ ಒಂದು ಸಮುದಾಯ ಕಾರಣ ಎಂದು ದೂಷಿಸುವ ಪ್ರವೃತ್ತಿಗೆ ಜ್ಞಾನದಾದ ಆಧಾರ ಇಲ್ಲದ ಪೂರ್ವಗ್ರಹ ಕಾರಣದಿಂದ ಮತ್ತು ಇದು ತಪ್ಪು ನಡವಳಿಕೆಯ ಜನಸಂಖ್ಯೆಗೆ ಸಂಬಂಧಿಸಿದ ಸವಾಲುಗಳನ್ನು ಉತ್ತಮವಾಗಿ ಮತ್ತು ಜಾಣ್ಮೆಯಿಂದ ನಿರ್ವಹಿಸಿದರೆ ಈ ಶತಮಾನವನ್ನು ಭಾರತದ ಶತಮಾನವನ್ನಾಗಿ ಪರಿವರ್ತಿಸುವ ಅವಕಾಶ ನಮ್ಮ ಮುಂದೆ ಇದೆ ಜನರೇ ನಮ್ಮ ದೇಶದ ಸಂಪನ್ಮೂಲವನ್ನಾಗಿ ಮಾರ್ಪಾಡು ಮಾಡಿಕೊಳ್ಳುವ ಅವಕಾಶ ನಮ್ಮ ನಿಮ್ಮೆಲ್ಲರ ಮೇಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬಾಬಾ ಸಾಹೇಬ ಅಂಬೇಡ್ಕರರ ‘ಧ್ಯಾನ’ ಗಾಯನ ; ವಿನೂತನ

Published

on

 

  • ವೆನ್ನೆಲಾ ಕೆ.
    ಎಂ.ಎ. ಪ್ರಥಮ ವರ್ಷದ ವಿದ್ಯಾರ್ಥಿನಿ,
    ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ,
    ಬೆಂಗಳೂರು ವಿಶ್ವವಿದ್ಯಾಲಯ,ಬೆಂಗಳೂರು

ತ್ತೀಚೆಗೆ ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ ಅನನ್ಯ ಮಾಧ್ಯಮ ಮತ್ತು ಬೆಳ್ಳಿತೆರೆ ಸಂಸ್ಥೆಯ ವತಿಯಿಂದ ಆಯೋಜಿಸಿದ 132ನೇ ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ರವರ ಜನುಮ ನಿಮಿತ್ತವಾಗಿ “ಧಾನ್ಯ” ‘ಗಾಯನವು’ ವಿನೂತನವಾದ ಈ ಕಾರ್ಯಕ್ರಮವು 5 ಘಂಟೆ, 1ನಿಮಿಷ, 14 ಸೆಕೆಂಡ್ ಗೆ ಆರಂಭವಾಗಿದ್ದು ಅವಿಸ್ಮರಣೀಯವಾದ ದಿನ, ಇದೊಂದು ಭಾರತ ಇತಿಹಾಸದ ಪುಟದ ಚರಿತ್ರೆಯಲ್ಲೇ ಹೊಸ ದಾಖಲೆಯೂ ಅಂತ ಹೇಳಬಹುದು.

ಈ ಕಾರ್ಯಕ್ರಮವನ್ನು ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ವು ಇಡೀ ಭಾರತದಲ್ಲೇ ಯಾರು ಮಾಡಿರದ ಈ ವಿನೂತವಾದ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯದಲ್ಲಿಯೇ ಪ್ರಪ್ರಥಮ ಬಾರಿಗೆ ಬೆಂಗಳೂರು ನಗರದಲ್ಲಿರುವ ಗಾಂಧಿ ಭವನದ ಆವರಣದಲ್ಲಿ ‘ಅನನ್ಯ ಸಂಸ್ಥೆ’ ವತಿಯಿಂದ 132 ನೇ ‘ವಿಶ್ವದ ವೀರ ವಿದ್ಯಾರ್ಥಿ ಹುಟ್ಟಿದ ದಿನ’ ಹಾಗೂ ‘ರಾಷ್ಟ್ರದ ಸ್ಫೂರ್ತಿಯ ದಿನ’ ‘ಸರ್ವ ಸಮುದಾಯದ ಶಕ್ತಿಯ ದಿನ’ ಇದೊಂದು ನಮ್ಮೆಲ್ಲರ ಹಬ್ಬದ ದಿನ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಇಂತಹ ಮೇರು ಶಿಖರ ಟ್ಯಾಗ್ ಲೈನ್ ಗಳಿಂದ ಅದ್ಭುತವಾಗಿ
ಆಯೋಜಿಸಿದ ಕಾರ್ಯಕ್ರಮಕ್ಕೆ ರಾಜ್ಯ ಕಂಡ ಪ್ರಸಿದ್ಧ ಐಪಿಎಸ್ ಅಧಿಕಾರಿಗಳು, ಸರ್ಕಾರಿ ಅಧಿಕಾರಿಗಳು, ಸಿನಿಮಾ ಸೆಲೆಬ್ರಿಟಿಗಳು, ಸಮಸ್ತ ವಿದ್ಯಾರ್ಥಿ ಸಮೂಹ, ಸಾಮಾಜಿಕ ನ್ಯಾಯದ ವಿಚಾರಶೀಲರು, ಬರಹಗಾರರು, ಪತ್ರಕರ್ತರು ಇನ್ನೂ ಅನೇಕ ಮುಂತಾದವರು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

ಇದಕ್ಕೆ ಮುಖ್ಯ ಕಾರಣಕರ್ತರಾದ ಅನನ್ಯ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಶ್ರೀ ರಾಂಪುರ ರಾಜೇಶ್ ರವರ ನಿರ್ದೇಶನದಲ್ಲಿ ಇಂತಹ ಕಾರ್ಯಕ್ರಮ ಆಯೋಜಿಸಿದ್ದು ಹೆಮ್ಮೆಯ ವಿಷಯ.

ಇದರ ಹಿನ್ನೆಲೆ: ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ದಲ್ಲಿ ಅತ್ಯುತ್ತಮ ಹಾಗೂ ಅತ್ಯಂತ ತುಂಬಾ ಮನಸ್ಸಿನಿಂದಲ್ಲೇ ವಿಶೇಷವಾದ ಆಸಕ್ತಿಯನ್ನು ಅಂಬೇಡ್ಕರ್ ರವರು ಸಂಗೀತ ಪ್ರಿಯರು ಹಾಗೂ ಅಂಬೇಡ್ಕರ್ ರವರು ಸುಶ್ರಾವ್ಯವಾಗಿ ವಯಲಿನ್ ನುಡಿಸುತ್ತಿದ್ದರು. ಹಾಗೇಯೆ ಇವರಿಗೆ ಚಿತ್ರಕಲೆಯೂ ಸಹ ಒಲಿದಿತ್ತು ಎಂಬುದು ಗಮನಾರ್ಹ ಸಂಗತಿ. ಇಂತಹ ವಿಷಯವನ್ನು ಯಾರು ಸಹ ಬೆಳಕು ಚೆಲ್ಲುವ ಸಾಹಸಕ್ಕೆ ಕೈ ಹಾಕಿ ಇರಲಿಲ್ಲ. ಇದೊಂದು ಅನನ್ಯ ಸಂಸ್ಥೆ ವತಿಯಿಂದ ಇಂತಹ ಕಾರ್ಯಕ್ರಮ ನಡೆಸಿಕೊಟ್ಟಿದ್ದು ಐತಿಹಾಸಿಕ ಚರಿತ್ರೆಗೆ ಮುನ್ನುಡಿವಾಗಿದೆ.

ಅಂಬೇಡ್ಕರ್ ರವರಿಗೆ ತಮ್ಮ ಬಿಡುವಿನ ವೇಳೆಯಲ್ಲಿ ಅದ್ಭುತವಾದ ಒಬ್ಬ ಸಂಗೀತ ಪ್ರಿಯರಾಗಿದ್ದರು. ಇವರು ಸುಶ್ರಾವ್ಯವಾಗಿ ವಯಲಿನ್ ನುಡಿಸುತ್ತಿದ್ದರು ಹಾಗೂ ವಿಶೇಷವಾಗಿ ಚಿತ್ರಕಲೆ ಸಹ ಸರಳವಾಗಿ ಮಾಡುವ ಮೂಲಕ ತಮ್ಮ ಮನದಲ್ಲಿ ಆಸಕ್ತಿ ಹೊಂದಿದ್ದರು. ಇನ್ನು ಹಲವಾರು ವಿಷಯದಲ್ಲಿ ಅಂದರೆ ಅಂಬೇಡ್ಕರ್ ರವರಿಗೆ ವಿಶೇಷವಾದ ಇವುಗಳಲ್ಲಿ ಆಸಕ್ತಿ ಮತ್ತು ಅಭಿರುಚಿಯನ್ನು ಹೊಂದಿದ್ದರು ಎಂಬುದನ್ನು ಮನಗಂಡ ಅನನ್ಯ ಸಂಸ್ಥೆಯ ವತಿಯಿಂದ ಆಯೋಜಿಸಿದ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮವು ಅತ್ಯುತ್ತಮವಾಗಿ ಮೂಡಿಬಂದಿದೆ.

ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮದಲ್ಲಿ ವಿಶೇಷವಾಗಿ ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕರು ಹಾಗೂ ಚಿತ್ರ ಸಾಹಿತ್ಯಗಳು, ಅಂಬೇಡ್ಕರ್ ವಾದಿಗಳು ಮತ್ತು ಚಿತ್ರರಂಗದ ಬಹುಮುಖ ಪ್ರತಿಭೆ, ಮಹಾಗುರುಗಳಾದ ಡಾ. ಹಂಸಲೇಖ ರವರು ಹೊಸದಾಗಿ ಹಾಡನ್ನು ಬರೆದದ್ದು ತುಂಬಾ ಅವಿಸ್ಮರಣೀಯ ಅಂತ ಹೇಳಬಹುದು. ಇವರು ಇದೇ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪ್ರೊತ್ಸಾಹ ನೀಡಿದ್ದು, ಸರ್ವ ಸಮುದಾಯದಕ್ಕೆ ಹೊಸ ಶಕ್ತಿ ತುಂಬಿದ್ದು ಮೇರು ವ್ಯಕ್ತಿಯಾಗಿದ್ದಾರೆ.

ವೆನ್ನೆಲಾ ಕೆ.

ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮದಲ್ಲಿ ಮುಖ್ಯವಾದ ಅಂಶವೆಂದರೆ ಇದರಲ್ಲಿ ಒಟ್ಟು ನಾಲ್ಕು ಭಗವಾನ್ ಬುದ್ಧ, ಅಂಬೇಡ್ಕರ್, ಬಸವೇಶ್ವರ ಮುಂತಾದರವರನ್ನು ವಿಷಯಗಳನ್ನು ಪರಿಗಣಿಸಿ ಅಂಬೇಡ್ಕರ್ ಧ್ಯಾನ ಹಾಡುಗಳ ರಚಿಸಿವುದರಲ್ಲಿ ಪ್ರಮುಖವಾಗಿ ರಾಜ್ಯದ ಹೆಸರಾಂತ ಸಾಹಿತಿ, ಪ್ರಗತಿಪರ ಚಿಂತಕರು ಹಾಗೂ ಮಾಜಿ ಅಧ್ಯಕ್ಷರಾದ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರಿನ ಪ್ರೊ.ಎಸ್.ಜಿ.ಸಿದ್ದರಾಮಯ್ಯನವರ
‘ಧೀ ಶಕ್ತಿಯೇ … ಜ್ಞಾನ ಪರ್ವತದ … ಧೀಮಂತ ಧೀಶಕ್ತಿಯೇ …
ಇಂತಹ ಸಾಲುಗಳನ್ನು, ಡಾ. ಕೈ.ವೈ.ನಾರಾಯಣಸ್ವಾಮಿರವರ ದೀಪಾ …. ಎಲ್ಲರೆದೆಯಲಿ … ಹಚ್ಚಿದ ದೀಪಾ .. ಭೂಪಾ … ಭೂಪಾ … ಭೀಮಾ ಭೂಪಾ .. ಬಾಬಾ .. ಸಾಹೇಬ್.. ಜೀವಸ್ವರವೇ … ಬಾಬಾ.. ಹಾಗೂ ರವಿ ಮರಿಯಪ್ಪರವರ ಹತ್ತು ಸಾವಿರ ವಯಲಿನನ್ನು … ವೀಣೆಗಳು ನೂರೆಂಟು … ಕೋಟಿ ಕೋಟಿ ಎದೆ ಸದ್ದಿನ ಡೊಳ್ಳು … ಸಂಯೋಜಿಸಿದರೇ .. ಸಂವಿಧಾನಾ … ಮತ್ತು ಚಿತ್ರ ಸಾಹಿತಿ, ಹೆಸರಾಂತ ಸಂಗೀತ ನಿರ್ದೇಶಕರು ಡಾ. ಹಂಸಲೇಖ ರವರು ನಿನ್ನ ಮೌನಾ … ದೀನ ಗಾನಾ… ನಿನ್ನ ಧ್ಯಾನಾ .. ಸಂವಿಧಾನಾ … ಈ ನಾಲ್ಕು ಅಂಬೇಡ್ಕರ್ ಧ್ಯಾನ ರಚನೆಗೆ ಇವರುಗಳ ಬರೆದಿರುವ ಅದ್ಭುತವಾದ ಅಂಬೇಡ್ಕರ್ ರವರ ಧ್ಯಾನ ಹಾಡುಗಳನ್ನು ನಮ್ಮ ಹಿಂದುಸ್ತಾನಿ ಸಂಗೀತ ಹಾಡುಗಳ ಮೂಲಕ ಕನ್ವರ್ಟ್ ಮಾಡುವ ಮೂಲಕ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿತು.

ಹಾಗೆಯೇ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮವು ಬಹಳಷ್ಟು ಯಶಸ್ವಿಯಾಗಬೇಕಾದರೆ ಈ ಮೊದಲು ಪುಟ್ಟರಾಜ ಗವಾಯಿಗಳ ಆಪ್ತ ಶಿಷ್ಯರಲ್ಲಿ ಒಬ್ಬರಾದ ವಿದ್ವಾನ್ ಶ್ರೀ ಡಿ. ಕುಮಾರ್ ದಾಸ್ ಅವರ ವಿದ್ವತ್ ಶರೀರದಲ್ಲಿ ‘ಧ್ಯಾನ ಗಾಯನ’ ಹಾಗೂ ಇವರ ತಂಡದ ವತಿಯಿಂದ ನಡೆಸಿಕೊಟ್ಟ ಅದ್ಭತವಾದ ಅಂಬೇಡ್ಕರ್ ರವರ ಧ್ಯಾನವು ಹಿಂದುಸ್ತಾನಿ ಸಂಗೀತದ ಕನ್ವರ್ಟ್ ಮಾಡುವ ಮುಖಾಂತರ ಈ ಹಾಡುಗಳನ್ನು ಬಹಳ ಸೊಗಸಾಗಿ ಮೂಡಿಬಂದಿದ್ದು ಹೊಸ ದಾಖಲೆಗೆ ಸೇರ್ಪಡೆಯಾಗಿದೆ.

ಇನ್ನು ಮುಂಬರುವ ದಿನಗಳಲ್ಲಿ ಅದಷ್ಟು ಹಲವಾರು ವಿನೂತನವಾದ ಭಗವಾನ್ ಬುದ್ಧರ, ಬಸವೇಶ್ವರರ ಹಾಗೂ ವಿಶ್ವದ ವೀರ ವಿದ್ಯಾರ್ಥಿಯಾದ ಮೇರು ರಾಷ್ಟ್ರದ
ನಾಯಕರಾದ ಬಾಬಾಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ ರವರ ಹಲವಾರು ಹಾಡುಗಳನ್ನು
ಅನನ್ಯ ಮಾಧ್ಯಮ ಮತ್ತು ಬೆಳ್ಳಿತೆರೆ ಸಂಸ್ಥೆಯ ವತಿಯಿಂದ ಆಯೋಜಿಸಿದರೆ ಇನ್ನುಷ್ಟು ಭಾರತದ ಇತಿಹಾಸದ ಪುಟಗಳಲ್ಲಿ ಮರೆತು ಹೋಗಿರುವ ಹಲವು ಬಗ್ಗೆ ದಾಖಲೆ ಇಲ್ಲದ ನೈಜ ಸಂಗತಿಗಳನ್ನು ಪುನಃ ಹೊಸ ದಾಖಲೆಗೆ ಉಪಯುಕ್ತವಾದ ವಿಶಿಷ್ಟವಾದ ಮೇರು ನಾಯಕನ
ಅಂಬೇಡ್ಕರ್ ರವರ ವಿಚಾರ ಧಾರೆಗಳು ತಾವು ಅನುಭವಿಸಿದ ನೋವು, ನಲಿವು, ಭಾರತದ ರಾಜ್ಯಾಂಗದ ಶಿಲ್ಪಿಯನ್ನು ಮುಂಬರುವ ದಿನಗಳಲ್ಲಿ ಹೊಸ ಪೀಳಿಗೆಯ ಪರಿಚಯಿಸುವ ಕೀರ್ತಿದಾಯಿಕವಾಗಲಿ ಮತ್ತು ಅದಷ್ಟು ಮುಂಬರುವ ದಿನಗಳಲ್ಲಿ ಅಂಬೇಡ್ಕರ್ ರವರ ಆಸಕ್ತಿದಾಯಕ ವಿಚಾರಗಳು ಹಾಗೂ ಸಂಗೀತದ ಬಗ್ಗೆ ಹಲವಾರು ಮಾಹಿತಿಗಳು ಸಮಸಮಸಮಾಜಕ್ಕೆ ತಲುಪುವ ವ್ಯವಸ್ಥೆಗೆ ಸಾಕ್ಷಿಯಾಗಲಿ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಬಹಿರಂಗ

ರಷ್ಯಾದಲ್ಲಿ ಓಂ – ಭರತಾಸ್- ರಾಮ – ರಾವಣ ಲಂಕೇಶ – ಮಾರೀಚ – ಸೀತ ನದಿಗಳು..!

Published

on

  • ಲಕ್ಷ್ಮೀಪತಿ ಕೋಲಾರ, ಸಂಶೋಧಕರು, ಸಂಸ್ಕೃತಿ‌ ಚಿಂತಕರು, ಬೆಂಗಳೂರು

ಸ್ಲಾವ್ ಸಮುದಾಯದ ಲಿತುವೇನಿಯ, ಲಾತ್ವಿಯ, ಬೆಲಾರಸ್,ಉಕ್ರೇನ್ ಮತ್ತು ರಷಿಯಾದಂತಹ ದೇಶಗಳ ನದಿ,ನಗರಗಳು ಸಂಸ್ಕೃತ ಮೂಲದ ಹೆಸರುಗಳನ್ನೆ ಇಂದಿಗು ಉಳಿಸಿಕೊಂಡಿರುವುದು ಆ ಭಾಷೆ ಮತ್ತು ಸಂಬಂಧಿತ ಸಂಸ್ಕೃತಿಯೊಂದಿಗೆ ಅವು ಹಿಂದೊಮ್ಮೆ ಹೊಂದಿದ್ದ ಬಲವಾದ ನಂಟಿಗೆ ಸಾಕ್ಷಿಯಾಗಬಲ್ಲವು.

ಇದರೊಂದಿಗೆ ಉತ್ತರ ಭಾರತದ ಆರ್ಯ ವೈದಿಕರ ಭಾಷೆ ಸಂಸ್ಕೃತಿಯೊಂದಿಗೆ ಸ್ಲಾವ್ ಸಮುದಾಯಕ್ಕೆ ಎಷ್ಟು ನಿಕಟ ಸಂಬಂಧವಿತ್ತೆಂಬುದನ್ನು ಮತ್ತು ನಾಲ್ಕೈದು ಸಾವಿರ ವರ್ಷಗಳ ಹಿಂದೆ ಈ ಎಲ್ಲ ಆರ್ಯ ಸಮುದಾಯಗಳು ಒಟ್ಟಿಗೆ ಒಂದೆಡೆಯೇ ಕಳ್ಳುಬಳ್ಳಿಗಳಾಗಿ ಜೀವಿಸಿದ್ದರೆಂಬುದನ್ನ ಈ ಹಿನ್ನೆಲೆಯಲ್ಲಿ ನಾವು ಗ್ರಹಿಸಬಹುದಾಗಿದೆ.

ಅದರಲ್ಲು ವಿಶೇಷವಾಗಿ ಲಿತುವೇನಿಯ ಮತ್ತು ರಷಿಯಾದ ನದಿಗಳ ಹೆಸರುಗಳು ಎಷ್ಟು ಸಂಸ್ಕೃತಮಯವು (ಇಂಡೋ – ಯುರೋಪಿಯನ್ ಭಾಷಾಮೂಲದ) ಮತ್ತು ವೈದಿಕರ ಪುರಾಣ ಮೂಲದವು ಆಗಿವೆ ಎಂದರೆ, ನಂಬಲಿಕ್ಕು ಅಸಾಧ್ಯ ಎಂಬಂತಿವೆ. ಇದರರ್ಥ ಸ್ಲಾವ್ ಜನರು ವೈದಿಕರ ಪುರಾಣಗಳಿಂದ ಪ್ರೇರಿತಗೊಂಡಿದ್ದಾರೆ ಎಂಬುದಲ್ಲ.

ಬದಲಿಗೆ ವೈದಿಕರ ಇಂದಿನ ಪುರಾಣ – ಸಂಸ್ಕೃತಿ – ಭಾಷೆಗಳು ವೈದಿಕರಿಗೆ ಎಷ್ಟು ಸಂಬಂಧಿಸಿದ್ದೋ ಅದಕ್ಕು ಹೆಚ್ಚಿನದಾಗಿ ಸ್ಲಾವ್ ಸಮುದಾಯಕ್ಕೂ ಸಂಬಂಧಿಸಿದ್ದಾಗಿದ್ದವು. ಹಾಗೆ ನೋಡಿದರೆ ಬ್ರಹ್ಮ – ವೇದ ಮೂಲವು ಕೂಡ ಸ್ಲಾವ್ ಸಮುದಾಯದ ಉತ್ತರ ಧ್ರುವ ಪ್ರದೇಶಕ್ಕೆ ಹೋಗಿ ನಿಲ್ಲುತ್ತದೆ ಎಂಬುದು ಸೋಜಿಗವಾದರು ನಿರ್ವಿವಾದವಾಗಿ ಚಾರಿತ್ರಿಕ ಸತ್ಯವಾಗಿದೆ. 12 – 13 ನೇ ಶತಮಾನಗಳಲ್ಲಿ ಸ್ಲಾವ್ ಜನರು ಕ್ರೈಸ್ತರಾಗಿ ಪರಿವರ್ತಿತರಾಗುವವರೆಗು ಅವರು ಶತಾಂಶ ಮತ್ತು ಥೇಟ್ ಶ್ರೇಷ್ಟ ಆರ್ಯ ವೈದಿಕರೆ ಆಗಿದ್ದರು.

ರಷ್ಯ ಮತ್ತು ಲಿತುವೇನಿಯಾಗಳಲ್ಲಿ ಭರತಾಸ್, ಓಂ, ರಾಮ, ಸೀತ, ಲಂಕೇಶ, ರಾವಣ, ಮಾರೀಚ, ನೆಮುನ (ಯಮುನ), ಕಾಮ, ಯಂತ್ರ, ಶ್ವೇತೆ, ದ್ರವ, ಮೋಕ್ಷ, ಋಗ್ವೇದದ ದಾನವ ಮಾತೆ ದನು ನೆನಪಿನ ದನುಬೆ ಮುಂತಾದ ನದಿಗಳು ಮತ್ತು ನಾರದ (ಈಗ ನರೋದ್ನಯ ಎಂದಿದ್ದರು ಸ್ಥಳೀಯರು ನಾರದ ಬೆಟ್ಟ ಎಂದೇ ಕರೆಯುತ್ತಾರೆ) ಹೆಸರಿನ ಬೆಟ್ಟವು ಇವೆ ಎಂದರೆ ಯಾರೂ ಅಚ್ಚರಿಪಡುವಂತದ್ದೆ.

ಯಾರಿಗಾದರು ಈ ಸಂಗತಿಗಳಲ್ಲಿ ಅನುಮಾನ ಹುಟ್ಟುವುದು ಸಹಜವೆ. ಯಾಕೆಂದರೆ ಸ್ಲಾವ್ – ವೈದಿಕ ಆರ್ಯರ ಮೂಲ ಪ್ರದೇಶವೆ ಉತ್ತರ ದ್ರುವ ಪ್ರದೇಶವಾಗಿತ್ತು ಎಂಬ ಚರಿತ್ರೆಯನ್ನೇ ನಮ್ಮಿಂದ ಮರೆಮಾಚಲಾಗಿತ್ತು ಮತ್ತು ಅದು ಬಹುದೊಡ್ಡ ಸಾಂಸ್ಕೃತಿಕ ರಾಜಕಾರಣವೂ ಆಗಿತ್ತು. ಆದರೆ ತಿಲಕರು ತಮ್ಮ “Arctic Home In the Vedas” ಎಂಬ ಪುಸ್ತಕದಲ್ಲಿ ಉತ್ತರ ಭಾರತದ ವೈದಿಕ ಆರ್ಯರ ತವರು ನೆಲ ಉತ್ತರ ದ್ರುವ ಪ್ರದೇಶವೆ, ಅಂದರೆ ಇಂದಿನ ಲಿತುವೇನಿಯ, ಲಾತ್ವಿಯ, ಬೆಲಾರಸ್ ಪ್ರದೇಶಗಳೇ ಆಗಿದ್ದವು ಎಂದು ಸಮರ್ಥ ಸಾಕ್ಷಾಧಾರಗಳೊಂದಿಗೆ ನಿರೂಪಿಸಿದ್ದಾರೆ.

ರಷ್ಯಾದಲ್ಲಿ ಸಂಸ್ಕೃತ ಭಾಷಾಮೂಲದ ನೂರಾರು ನದಿಗಳಿವೆ. ಭಾರತದಲ್ಲಿ ಕೆಲವು ನದಿಗಳನ್ನ ಹೊರತುಪಡಿಸಿದರೆ ಆ ಪ್ರಮಾಣದ ವೈದಿಕ ಪುರಾಣ ಮೂಲದ ನದಿ ಹೆಸರುಗಳು ಈ ನೆಲದಲ್ಲಿ ಇಲ್ಲವೆಂಬುದು ಪ್ರಾಚೀನ ಕಾಲದಿಂದಲು ಆರ್ಯ ವೈದಿಕರು ಇಲ್ಲಿರಲಿಲ್ಲವೆಂಬುದನ್ನೇ ಸೂಚಿಸುತ್ತದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ10 hours ago

ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ ನಡೆದ ಕೊಲೆಗಳೆಷ್ಟು ? ಅತ್ಯಾಚಾರಗಳೆಷ್ಟು ಗೊತ್ತಾ?

ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಹಾದಿ ಬೀದಿಯಲ್ಲಿ ಹತ್ಯೆಗಳು ಆಗುತ್ತಿವೆ. ಬೆಂಗಳೂರು ನಗರದಲ್ಲಿ ಮಾದಕ ವಸ್ತುಗಳ ದಂಧೆ ಅವ್ಯಾಹತವಾಗಿದೆ. ಕಳೆದ...

ದಿನದ ಸುದ್ದಿ10 hours ago

ಬಿಜೆಪಿ ಆರೋಪದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ : ಗೃಹ ಸಚಿವ ಡಾ. ಜಿ.ಪರಮೇಶ್ವರ್

ಸುದ್ದಿದಿನ, ತುಮಕೂರು : ರಾಜ್ಯದಲ್ಲಿ ಜನರು ಶಾಂತಿ ಮತ್ತು ನೆಮ್ಮದಿಯಿಂದ ಬದುಕಲು ಯಾವುದೇ ಕ್ರಮ ತೆಗೆದುಕೊಳ್ಳಲು ಸಿದ್ಧ. ಬಿಜೆಪಿ ಆರೋಪದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ ಎಂದು...

ದಿನದ ಸುದ್ದಿ10 hours ago

ವಿಧಾನ ಪರಿಷತ್ ಚುನಾವಣೆ ; 91 ನಾಮಪತ್ರಗಳು ಪುರಸ್ಕೃತ

ಸುದ್ದಿದಿನ ಡೆಸ್ಕ್ : ಕರ್ನಾಟಕ ವಿಧಾನ ಪರಿಷತ್‌ನ ಚುನಾವಣೆಗೆ ಸಂಬಂಧಪಟ್ಟಂತೆ ಒಟ್ಟು 91ನಾಮಪತ್ರಗಳು ಪುರಸ್ಕೃತಗೊಂಡಿವೆ. ಈಶಾನ್ಯ ಪದವಿಧರ ಕ್ಷೇತ್ರಕ್ಕೆ ಒಟ್ಟು 26 ನಾಮಪತ್ರಗಳು ಪುರಸ್ಕೃತಗೊಂಡಿದೆ. ಅದೇ ರೀತಿ...

ದಿನದ ಸುದ್ದಿ11 hours ago

ದೀನ ದಯಾಳ್ ಅಂತ್ಯೋದಯ ಯೋಜನೆ ; ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ : ಹೊನ್ನಾಳಿ ಪಟ್ಟಣದ ಸಾರ್ವಜನಿಕರಿಗೆ ದೀನ ದಯಾಳ್ ಅಂತ್ಯೋದಯ ಯೋಜನೆ-ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ಯೋಜನೆಯಡಿ ಪ್ರಸಕ್ತ ಸಾಲಿಗೆ ಸ್ವಯಂ ಉದ್ಯೋಗ ಕಾರ್ಯಕ್ರಮದಡಿ, ವ್ಯಕ್ತಿಗತ ಉದ್ಯಮಶೀಲತೆ...

ದಿನದ ಸುದ್ದಿ11 hours ago

ಐತಿಹಾಸಿಕ, ಪಾರಂಪರಿಕ ದೇವಾಲಯಗಳು ಶಾಸನಗಳು, ವೀರಗಲ್ಲು, ಸ್ಮಾರಕಗಳ ಸಂರಕ್ಷಣೆ ; ಸಾರ್ವಜನಿಕರ ಸಹಕಾರ ಅಗತ್ಯ

ಸುದ್ದಿದಿನ,ದಾವಣಗೆರೆ : ಕರ್ನಾಟಕ ಇತಿಹಾಸದ ಶಾಸನಗಳು, ದೇವಾಲಯಗಳು, ಸ್ಮಾರಕಗಳು ಸೇರಿದಂತೆ ಸ್ಥಳಗಳಿದ್ದಲ್ಲಿ ಸಾರ್ವಜನಿಕರು ತಮ್ಮ ತಾಲ್ಲೂಕು, ಊರು, ಗ್ರಾಮಗಳಲ್ಲಿ ವಿನಾಶದ ಸ್ಥಿತಿಯಲ್ಲಿರುವ ದೇವಾಲಯಗಳು, ಶಾಸನಗಳು, ವೀರಗಲ್ಲುಗಳು, ಕೋಟೆಗಳು,...

ದಿನದ ಸುದ್ದಿ12 hours ago

ಪ್ರಥಮ ಪಿ.ಯು.ಸಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ ; ಜಿಲ್ಲೆಯಲ್ಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2024-25 ನೇ ಸಾಲಿಗೆ ಡಾ|| ಎ.ಪಿ.ಜೆ.ಅಬ್ದುಲ್ ಕಲಾಂ ಪದವಿ ಪೂರ್ವ ವಸತಿ ಕಾಲೇಜು, ಕೊಂಡಜ್ಜಿ ಗ್ರಾಮದಲ್ಲಿನ ಮೊರಾರ್ಜಿ...

ದಿನದ ಸುದ್ದಿ15 hours ago

ಮುಂದಿನ ವರ್ಷದಿಂದ 10ನೇ ತರಗತಿಗೆ ಕೃಪಾಂಕ ರದ್ದು ; ಸಚಿವ ಮಧುಬಂಗಾರಪ್ಪ

ಸುದ್ದಿದಿನ, ಚಿಕ್ಕಮಗಳೂರು : ಪರೀಕ್ಷೆಯಲ್ಲಿ ಪಾವಿತ್ರತೆ ಮತ್ತು ಶಿಸ್ತು ಕಾಪಾಡುವ ಉದ್ದೇಶದಿಂದ ಈ ವರ್ಷ ಹತ್ತನೆ ತರಗತಿ ವಿಧ್ಯಾರ್ಥಿಗಳಿಗೆ ಶೇಕಡ 20 ರಷ್ಟು ಕೃಪಾಂಕಗಳನ್ನು ನೀಡಲಾಗಿದೆ. ಇದು...

ದಿನದ ಸುದ್ದಿ1 day ago

ಹಲವು ಜಿಲ್ಲೆಗಳಲ್ಲಿ ಪೂರ್ವ ಮುಂಗಾರು ಆರಂಭ; ಕೃಷಿ ಚಟುವಟಿಕೆ ಆರಂಭ

ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಮುಂದಿನ ಒಂದು ವಾರ ಮುಂಗಾರು ಮಳೆ ಚುರುಕುಗೊಳ್ಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಕೊಡಗು, ಮೈಸೂರು, ಹಾಸನ,...

ದಿನದ ಸುದ್ದಿ1 day ago

ಮೇಲ್ಮನೆಯ ಆರು ಕ್ಷೇತ್ರಗಳ ನಾಮಪತ್ರ ಪರಿಶೀಲನೆ ಪ್ರಗತಿಯಲ್ಲಿ ; ಕಣದಲ್ಲಿ 103 ಅಭ್ಯರ್ಥಿಗಳು : ಇಲ್ಲಿದೆ ಸಂಪೂರ್ಣ ಮಾಹಿತಿ

ಸುದ್ದಿದಿನ ಡೆಸ್ಕ್ : ವಿಧಾನಪರಿಷತ್ತಿನ ಆರು ಸ್ಥಾನಗಳಿಗೆ 103 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, ಇಂದು ನಾಮಪತ್ರಗಳ ಪರಿಶೀಲನೆ ಕಾರ್ಯ ಆರಂಭಗೊಂಡಿದೆ. ಕಾಂಗ್ರೆಸ್, ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷದ ಅಭ್ಯರ್ಥಿಗಳು...

ದಿನದ ಸುದ್ದಿ2 days ago

ವಸತಿ ಶಾಲೆಯಲ್ಲಿನ 7, 8 ಮತ್ತು 9ನೇ ತರಗತಿಗಳಲ್ಲಿನ ಖಾಲಿ ಸ್ಥಾನಗಳಿಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿನ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಡಿ ಬರುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ ನಡೆಸುವ ಒಟ್ಟು 22 ವಸತಿ ಶಾಲೆಗಳು ಕಾರ್ಯನಿರ್ವಹಿಸುತ್ತಿದ್ದು, ಈ ವಸತಿ...

Trending