ಬಹಿರಂಗ
‘ಕೋರೆಗಾಂವ್’ ಎಂಬ ಶೋಷಿತರು ನಡೆಸಿದ ಶ್ರೇಷ್ಠ ಯುದ್ಧದ ಬಗ್ಗೆ
- ರಘೋತ್ತಮ. ಹೊಬ
ಭಾರತದ ಇತಿಹಾಸದಲ್ಲಿ ನಡೆದಿರುವ ವಿವಿಧ ಯುದ್ಧಗಳಲ್ಲಿ, ಬರೇ ಆ ರಾಜರು ಈ ರಾಜರ ವಿರುದ್ಧ, ಮಹಮ್ಮದೀಯರು ಬ್ರಿಟಿಷರ ವಿರುದ್ಧ, ಬ್ರಿಟಿಷರು ಫ್ರೆಂಚರ ವಿರುದ್ಧ, ಫ್ರೆಂಚರು ಡಚ್ಚರ ವಿರುದ್ಧ… ಹೀಗೆ ಸಾಮ್ರಾಜ್ಯಶಾಹಿಗಳು ನಡೆಸಿದ ಯುದ್ಧಗಳ ಬಗ್ಗೆಯಷ್ಟೆ ಚರಿತ್ರೆ ದಾಖಲಿಸಲಾಗಿದೆ. ಆದರೆ ಶೋಷಿತರು ಮೇಲ್ಜಾತಿ ಶೋಷಕರ ವಿರುದ್ಧ, ಅವರ ಶೋಷಣೆಯ ನಡವಳಿಕೆಯ ವಿರುದ್ಧ ಯುದ್ಧ ಘೋಷಿಸಿದ, ನಡೆಸಿ ಗೆಲುವು ದಾಖಲಿಸಿದ ಬಗ್ಗೆ ಎಲ್ಲಿಯೂ ದಾಖಲಾಗಿಲ್ಲ! ಇತಿಹಾಸ ಕೃತಿಯ ಯಾವ ಪುಟದಲ್ಲೂ ಅಂತಹದ್ದೊಂದು ಯುದ್ಧದ ಬಗ್ಗೆ ಉಲ್ಲೇಖವಿಲ್ಲ. ಯಾಕೆ? ಖಂಡಿತ ಅದು ಶೋಷಿತ ಸಮುದಾಯದ ಬಗೆಗಿನ ಇತಿಹಾಸಕಾರರ ದಿವ್ಯ ತಾತ್ಸಾರವಷ್ಟೆ!
ಈ ನಿಟ್ಟಿನಲ್ಲಿ ಶೋಷಿತರು ಶೋಷಕ ಶಕ್ತಿಗಳ ವಿರುದ್ಧ ಸಾರಿದ ಯುದ್ಧದ ಬಗ್ಗೆ ಹೇಳಲೇಬೇಕಾಗುತ್ತದೆ. ಖಂಡಿತ, ಆ ಯುದ್ಧ ಕೋರೇಗಾಂವ್ ಯುದ್ಧ. ಭೀಮಾ ನದಿಯ ತೀರದಲ್ಲಿ ನಡೆದಿದ್ದರಿಂದ ಅದು ಇತಿಹಾಸದಲ್ಲಿ ‘ಭೀಮಾ ಕೋರೇಗಾಂವ್ ಯುದ್ಧ’ವೆಂದೇ ಪ್ರಸಿದ್ಧವಾಗಿದೆ. ಹಾಗಿದ್ದರೆ ಆ ಯುದ್ಧ ಯಾರ ವಿರುದ್ಧ ನಡೆಯಿತು? ಯಾರು ನಡೆಸಿದರು? ಎಂಬ ಪ್ರಶ್ನೆ ಮೂಡುತ್ತದೆ. ಈ ನಿಟ್ಟಿನಲ್ಲಿ 1818ರ ಹೊಸ ವರ್ಷದ ಸಂದರ್ಭದಲ್ಲಿ ನಡೆದ ಆ ಯುದ್ಧದ details ಹೇಳುವುದಕ್ಕೂ ಮುನ್ನ ಆ ಸಮಯದಲ್ಲಿ ಇದ್ದ ಸಾಮಾಜಿಕ ಸ್ಥಿತಿಗತಿಯನ್ನು ದಾಖಲಿಸುವುದು ಸೂಕ್ತವೆನಿಸುತ್ತದೆ.
ಹೌದು, 1818 ಅದು ಮಹಾರಾಷ್ಟ್ರದಲ್ಲಿ ಪೇಶ್ವೆಗಳ ಆಡಳಿತದ ಕಾಲ. ಆಗಿನ ಪೇಶ್ವೆ ಅಥವಾ ಬ್ರಾಹ್ಮಣ ಮಂತ್ರಿ 2ನೇ ಬಾಜೀರಾಯನಾಗಿದ್ದ. ಹಾಗಿದ್ದರೆ ಪೇಶ್ವೆಗಳ ಆ ಕಾಲದಲ್ಲಿ ಸಾಮಾಜಿಕ ಪರಿಸ್ಥಿತಿ ಹೇಗಿತ್ತು? ಬಾಬಾಸಾಹೇಬ್ ಅಂಬೇಡ್ಕರರ ಪ್ರಕಾರವೇ ಹೇಳುವುದಾದರೆ “ಮರಾಠರ ರಾಜ್ಯದಲ್ಲಿ ಪೇಶ್ವೆಗಳ ಆಡಳಿತದಲ್ಲಿ, ಅಸ್ಪೃಶ್ಯರ ನೆರಳು ಹಿಂದೂವೊಬ್ಬನ ಮೇಲೆ ಬಿದ್ದು ಆತ ಮಲಿನವಾಗುವುದನ್ನು ತಪ್ಪಿಸಲು ಸಾರ್ವಜನಿಕ ಬೀದಿಗಳಲ್ಲಿ ಅಸ್ಪೃಶ್ಯರಿಗೆ ಪ್ರವೇಶವನ್ನು ನಿರಾಕರಿಸಲಾಗಿತ್ತು. ಒಂದು ವೇಳೆ by mistake ಅಸ್ಪೃಶ್ಯನೊಬ್ಬನನ್ನು ಹಿಂದೂವೊಬ್ಬ ಮುಟ್ಟಿದರೆ ಆಗ ಆ ಹಿಂದೂ ಮಲಿನಗೊಳ್ಳುವುದನ್ನು ತಪ್ಪಿಸಲು ಅಸ್ಪೃಶ್ಯನು ತನ್ನ ಕುತ್ತಿಗೆಗೆ ಅಥವಾ ಮುಂಗೈಗೆ ಕಪ್ಪು ದಾರವೊಂದನ್ನು ಕಟ್ಟಿಕೊಳ್ಳುವುದು ಆ ದಿನಗಳಲ್ಲಿ ಕಡ್ಡಾಯವಾಗಿತ್ತು.
ಅಲ್ಲದೆ ಪೇಶ್ವೆಗಳ ಆಗಿನ ರಾಜಧಾನಿಯಾದ ಪೂನಾದಲ್ಲಿ ಅಸ್ಪೃಶ್ಯನೋರ್ವ ನಡೆದ ದಾರಿಯಲ್ಲಿ ಹಿಂದೂಗಳು ನಡೆದು ಸದರಿ ಹಿಂದೂ ಮಲಿನಗೊಳ್ಳುವುದನ್ನು ತಡೆಯಲು ಅಸ್ಪೃಶ್ಯನು ತನ್ನ ನಡುವಿಗೆ ಹಗ್ಗವೊಂದನ್ನು ಬಿಗಿದು ಅದಕ್ಕೆ ಕಸಪೊರಕೆಯೊಂದನ್ನು ಕಟ್ಟಿ ತಾನು ನಡೆದ ದಾರಿಯನ್ನು ತಾನೇ ಗುಡಿಸಬೇಕಾಗಿತ್ತು! ಅದಲ್ಲದೆ ಅದೇ ಪೂನಾ ನಗರದಲ್ಲಿ ಅಕಸ್ಮಾತ್ ಅಸ್ಪೃಶ್ಯನೊಬ್ಬ ದಾರಿಯಲ್ಲಿ ಉಗಿದರೆ ಮತ್ತು ಆ ಉಗುಳನ್ನು ಹಿಂದೂವೊಬ್ಬ ತುಳಿದು ಆತ ಮಲಿನವಾಗುವುದನ್ನು ತಪ್ಪಿಸಲು ಅಸ್ಪೃಶ್ಯ ತನ್ನ ಕೊರಳಿಗೆ ಮಣ್ಣಿನ ಮಡಕೆಯೊಂದನ್ನು ನೇತುಹಾಕಿಕೊಳ್ಳಬೇಕಾಗುತ್ತಿತ್ತು ಮತ್ತು ಉಗಿಯಬೇಕೆಂದಾಗ ಆತ ಆ ಮಡಕೆಯಲ್ಲಿ ಉಗಿಯಬೇಕಾಗಿತ್ತು”! ಪೇಶ್ವೆಗಳ ಕಾಲದ ಅಸ್ಪೃಶ್ಯರ ಸ್ಥಿತಿಗತಿಯನ್ನು ಅಂಬೇಡ್ಕರರು ಹೀಗೆ ವಿವರಿಸುತ್ತಾ ಹೋಗುತ್ತಾರೆ.
ಹೀಗಿರುವಾಗ ಇಂತಹ ವಿಚಿತ್ರ ಸಾಮಾಜಿಕ ದುಸ್ಥಿತಿಯ ಸಂದರ್ಭದಲ್ಲಿ ಮಾಹಾರಾಷ್ಟ್ರದ ಅಸ್ಪೃಶ್ಯರಾದ ಮಹಾರರಿಗೆ ದೌರ್ಜನ್ಯಕೋರ ಇಂತಹ ಪೇಶ್ವೆಗಳ, ಮತ್ತವರ ಸಾಮ್ರಾಜ್ಯದ ವಿರುದ್ಧ ಹೋರಾಡುವ ಅದ್ಭುತ ಅವಕಾಶವೊಂದು ಬರುತ್ತದೆ. ಹೌದು, ಅದೇ ಕೋರೇಗಾಂವ್ ಯುದ್ಧ! ಅಂದಹಾಗೆ ಇದೇನು ಅಸ್ಪೃಶ್ಯರು ಮೇಲ್ಜಾತಿಗಳ ವಿರುದ್ಧ, ಅವರ ದೌರ್ಜನ್ಯದ ವಿರುದ್ಧ ನೇರಾನೇರ ಕಾದಾಟಕ್ಕಿಳಿದದ್ದಲ್ಲ. ಆದರೆ ಯಾವ ಜಾತಿ/ವರ್ಣವ್ಯವಸ್ಥೆಯಲ್ಲಿ ಶಸ್ತ್ರಹಿಡಿಯುವುದು ಇಂತಹ ಜಾತಿಗೆ/ವರ್ಣಕ್ಕೆ ಎಂದು ಮೀಸಲಾಗಿತ್ತೋ ಅಂತಹ ಶ್ರೇಣೀಕೃತ ಜಾತಿವ್ಯವಸ್ಥೆಯ ಸಮಯದಲ್ಲಿ ಬ್ರಿಟಿಷರ ಪರವಾಗಿ, ಅವರ ಸೇನೆಯಲ್ಲಿ ಸೈನಿಕರಾಗಿಯಷ್ಟೆ ಅಸ್ಪೃಶ್ಯ ಮಹಾರರು ಕಾದಾಡಿದ್ದು.
ಹಾಗಿದ್ದರೆ ಆ ಹೋರಾಟ ಹೇಗಿತ್ತು? ಬಾಬಾಸಾಹೇಬ್ ಅಂಬೇಡ್ಕರರ ಬರಹಗಳು ಮತ್ತು ಭಾಷಣಗಳು, ಸಂಪುಟ 17, ಭಾಗ 3(ಇಂಗ್ಲೀಷ್ ಆವೃತ್ತಿ) ಪುಟ.4ರ ಪ್ರಕಾರ ಹೇಳುವುದಾದರೆ “ಭೀಮಾನದಿಯ ತೀರದಲ್ಲಿದ್ದ ಆ ಕೋರೇಗಾಂವ್ ರಣಾಂಗಣದಲ್ಲಿ ಬಾಂಬೆ ರೆಜಿಮೆಂಟ್‍ನ ಕೇವಲ 500 ಜನ ಮಹಾರ್ ಕಾಲ್ದಳದ ಸೈನಿಕರು ಪೂನಾದ 250 ಅಶ್ವದಳದವರ ನೆರವಿನೊಂದಿಗೆ, ಜೊತೆಗೆ ಮದ್ರಾಸ್‍ನ 24 ಗನ್‍ಮೆನ್‍ಗಳ ಸಹಾಯದಿಂದ 20000 ಅಶ್ವದಳವಿದ್ದ, 8000ದಷ್ಟು ಕಾಲ್ದಳವಿದ್ದ ಪೇಶ್ವೆಯ ಬೃಹತ್ ಸೇನೆಯ ವಿರುದ್ಧ 1818 ಜನವರಿ 1ರಂದು ಬೆಳಿಗ್ಗೆ 9 ಗಂಟೆಯಿಂದ ರಾತ್ರಿ 9 ಗಂಟೆಯ ತನಕ ಸತತ 12ಗಂಟೆಗಳು ಯಾವುದೇ ವಿಶ್ರಾಂತಿ ಆಯಾಸವಿಲ್ಲದೆ, ಆಹಾರ-ನೀರಿನ ಪರಿವಿಲ್ಲದೆ ಕ್ಯಾಪ್ಟನ್ ಎಫ್.ಎಫ್.ಸ್ಟಾಂಟನ್‍ನ ನೇತೃತ್ವದಲ್ಲಿ ಹೋರಾಡಿ ಅಭೂತಪೂರ್ವ ಗೆಲುವು ಸಾಧಿಸುತ್ತಾರೆ”!
ಸವಿಸ್ತಾರವಾಗಿ ಹೇಳುವುದಾದರೆ ಕ್ಯಾಪ್ಟನ್ ಸ್ಟಾಂಟನ್‍ನ ನೇತೃತ್ವದಲ್ಲಿ ಸಿರೂರ್‍ನಿಂದ 1818 ಡಿಸೆಂಬರ್ 31ರ ರಾತ್ರಿ ಹೊರಟ ಮಹಾರ್ ಸೇನೆ ಸತತ 27 ಕಿ.ಮೀ ನಡೆದು ಮಾರನೇ ದಿನ 1ನೇ ತಾರೀಖು ಬೆಳಿಗ್ಗೆ ಕೋರೇಗಾಂವ್ ರಣಾಂಗಣವನ್ನು ತಲುಪುತ್ತದೆ. ಅದೇ ಸಮಯದಲ್ಲಿ ಮೂರೂ ದಿಕ್ಕುಗಳಿಂದಲೂ ತಲಾ 600ರಷ್ಟಿದ್ದ ಪೇಶ್ವೆಯ ಕಾಲ್ದಳದ 3 ತುಕಡಿಗಳು ಕ್ಯಾಪ್ಟನ್ ಸ್ಟಾಂಟನ್‍ನ ಪಡೆಯನ್ನು ಸುತ್ತುವರೆಯುತ್ತವೆ.
ಅಲ್ಲದೆ ಪೇಶ್ವೆಯ ಈ ಸೈನ್ಯದ ಬೆಂಬಲಕ್ಕೆ ಬೃಹತ್ ಅಶ್ವದಳ, ರಾಕೆಟ್‍ದಳ ಬೇರೆ! ಒಟ್ಟಾರೆ ಸಂದಿಗ್ಧ ಸ್ಥಿತಿಯಲ್ಲಿ ಬ್ರಿಟಿಷ್ ಸೇನೆಯು ಪೇಶ್ವೆಗಳ ಕಾಲ್ದಳ ಮತ್ತು ಫಿರಂಗಿದಳಗಳಿಂದ ಸಂಪೂರ್ಣ ವೃತ್ತಾಕಾರ ಮಾದರಿಯಲ್ಲಿ ಸುತ್ತುವರಿಯಲ್ಪಡುತ್ತದೆ. ಹೇಗೆಂದರೆ ಪಕ್ಕದಲ್ಲೇ ಇದ್ದ ಭೀಮಾನದಿಗೆ ಹೋಗುವ ದಾರಿಗಳೆಲ್ಲ ಬಂದ್ ಆಗುವ ಮಟ್ಟಿಗೆ! ಕಡೆಗೆ ವಿಧಿಯಿಲ್ಲದೆ ಎರಡೂ ದಳಗಳೂ ಕೋರೇಗಾಂವ್ ಗ್ರಾಮವನ್ನು ಪ್ರವೇಶಿಸುತ್ತವೆ.
ಕೋರೇಗಾಂವ್ ಗ್ರಾಮವನ್ನು ಪ್ರವೇಶಿಸಿದ್ದೇ ತಡ ಎರಡೂ ಪಡೆಗಳೂ ಬೀದಿಬೀದಿಗಳಲ್ಲಿ, ಮನೆ-ಗುಡಿಸಲುಗಳ ಮುಂದೆ ಕೈಕೈ ಮಿಲಾಯಿಸುತ್ತಾ ನೇರಾ-ನೇರ ಕಾದಾಟಕ್ಕಿಳಿಯುತ್ತವೆ. ಅದರಲ್ಲೂ ಬಹುತೇಕ ಮಹಾರರೇ ತುಂಬಿದ್ದ ಬ್ರಿಟಿಷ್ ಸೈನ್ಯಕ್ಕೆ ಬಹಳ ಹಾನಿಯಾಗುತ್ತದೆ.
ಆದರೂ ಎದೆಗುಂದದ ಮಹಾರ್ ಸೈನಿಕರು ಅತ್ಯುತ್ಕೃಷ್ಟ ಧೈರ್ಯದಿಂದ ಮುನ್ನುಗ್ಗುತ್ತಲೇ ಹೋಗುತ್ತಾರೆ. ಪಡೆಯ ನೇತೃತ್ವ ವಹಿಸಿದ್ದ ಕ್ಯಾಪ್ಟನ್ ಸ್ಟಾಂಟನ್‍ನಂತೂ “ಕಡೆಯ ಸೈನಿಕನಿರುವ ತನಕ, ಕಡೆಯ ಬುಲೆಟ್ ಇರುವ ತನಕ ಹೋರಾಡುತ್ತಲೇ ಇರಿ” ಎಂದು ಹುರಿದುಂಬಿಸುತ್ತಲೇ ಇರುತ್ತಾನೆ. ಪರಿಣಾಮವಾಗಿ ಮಹಾರ್ ಸೈನಿಕರು ಅತ್ಯಮೋಘ ಧೈರ್ಯದಿಂದ, ಎಲ್ಲಾ ದುರಾದೃಷ್ಟಗಳ ನಡುವೆ ಹೋರಾಡುತ್ತ ವೀರಾವೇಶದಿಂದ ಮುನ್ನುಗ್ಗುತ್ತಾರೆ. ಅಂದಹಾಗೆ ಮಹಾರ್ ಸೈನಿಕರ ಅಂತಹ ಮುನ್ನುಗ್ಗುವಿಕೆಯಲ್ಲಿ ಅದೆಂತಹ, ಅದೆಷ್ಟು ಶತಮಾನಗಳ ನೋವಿನ ಆಕ್ರೋಶವಿತ್ತು? ತತ್ಫಲವಾಗಿ ಬಹುಸಂಖ್ಯೆಯಲ್ಲಿದ್ದರೂ ಕೂಡ ಪೇಶ್ವೆಯ ಸೈನ್ಯ ಹಿಮ್ಮೆಟ್ಟಿ ಸೋತು ರಾತ್ರಿ 9 ಗಂಟೆಗೆ ಧಾಳಿಯನ್ನು ನಿಲ್ಲಿಸುತ್ತದೆ ಹಾಗೂ ವಿಧಿಯಿಲ್ಲದೆ ಕೋರೇಗಾಂವ್‍ನಿಂದ ರಾತ್ರೋರಾತ್ರಿ ಕಾಲ್ಕೀಳುತ್ತದೆ!
ಒಟ್ಟಾರೆ ಅತ್ಯಮೋಘ ಧೈರ್ಯ ಮತ್ತು ಶಿಸ್ತುಬದ್ಧ ಶೌರ್ಯವನ್ನು ಪ್ರದರ್ಶಿಸಿದ ಮಹಾರ್ ಸೈನಿಕರು ಶೋಷಕ ಪೇಶ್ವೆಗಳ ವಿರುದ್ಧ ಅಭೂತಪೂರ್ವ ಜಯ ದಾಖಲಿಸುತ್ತಾರೆ. ಅಂದಹಾಗೆ ಈ ಯುದ್ಧದ ನಂತರ ಮಹಾರಾಷ್ಟ್ರದಲ್ಲಿ ಪೇಶ್ವೆಗಳ ಆಡಳಿತ ಕೊನೆಗೊಳ್ಳುತ್ತದೆ. ಹಾಗೆಯೇ ಅಸ್ಪೃಶ್ಯರ ದಯನೀಯ ಸ್ಥಿತಿ ಕೂಡ ಸುಧಾರಣೆ ಕಾಣಲು ಆರಂಭಿಸುತ್ತದೆ. ಈ ಯುದ್ಧದಲ್ಲಿ ಜಯ ತಂದುಕೊಟ್ಟು ಮಡಿದ 22 ಮಹಾರ್ ಸೈನಿಕರ ಸ್ಮರಣಾರ್ಥ ಕೋರೇಗಾಂವ್‍ನಲ್ಲಿ ಮಹಾರ್ ಸೈನಿಕರು ಪ್ರಥಮ ಗುಂಡು ಸಿಡಿಸಿದ ಸ್ಥಳದಲ್ಲೇ 65 ಅಡಿ ಎತ್ತರದ ಒಂದು ಶಿಲಾ ಸ್ಮಾರಕ ಕೂಡ 1821 ಮಾರ್ಚ್ 26ರಂದು ನಿರ್ಮಾಣಗೊಳ್ಳುತ್ತದೆ. ಹಾಗೂ ಆ ಸ್ಮಾರಕದಲ್ಲಿ ಮಡಿದ 22 ಸೈನಿಕರ ಜೊತೆಗೆ ಗಾಯಗೊಂಡವರ ಹೆಸರನ್ನೂ ಕೆತ್ತಿಸಲಾಗುತ್ತದೆ.
ಒಂದು ವಾಸ್ತವ, ಅದೆಂದರೆ “ಇತಿಹಾಸ ಮರೆತವರು ಇತಿಹಾಸ ಸೃಷ್ಟಿಸಲಾರರು” ಎಂದು ಹೇಳಿದ ಬಾಬಾಸಾಹೇಬ್ ಅಂಬೇಡ್ಕರರಿಗೆ ತನ್ನ ಜನರ ಇಂತಹ ಅದ್ಭುತ ಐತಿಹಾಸಿಕ ಜಯದ ಬಗ್ಗೆ ಬಹಳ ಹೆಮ್ಮೆ ಇತ್ತು. ಆ ಕಾರಣಕ್ಕಾಗಿ ಕೋರೆಗಾಂವ್‍ನಲ್ಲಿನ ಮಹಾರ್ ಸೈನಿಕರ ಈ ಸ್ಮಾರಕಕ್ಕೆ ಅಂಬೇಡ್ಕರರು ಪ್ರತೀ ವರ್ಷ ಕುಟುಂಬ ಸಮೇತರಾಗಿ ಭೇಟಿ ನೀಡುತ್ತಿದ್ದರು.
ಅಲ್ಲದೆ ಅಗಲಿದ ಯೋಧರಿಗೆ ಬಾಬಾಸಾಹೇಬರು ತಮ್ಮ ಅಭೂತಪೂರ್ವ ನಮನ ಸಲ್ಲಿಸುತ್ತಿದ್ದರು. ಯಾಕೆಂದರೆ ಬಾಬಾಸಾಹೇಬರಿಗೆ ತಿಳಿದಿತ್ತು ಕೋರೇಗಾಂವ್‍ನಲ್ಲಿ ಮಹಾರ್ ಸೈನಿಕರು ಹೋರಾಡಿದ್ದು ಒಂದು ಸಾಮ್ರಾಜ್ಯದ ವಿರುದ್ಧವಲ್ಲ ವ್ಯವಸ್ಥೆಯ ವಿರುದ್ಧ, ಯಾವ ವ್ಯವಸ್ಥೆ ತಮ್ಮನ್ನು ಕೀಳಾಗಿ ಕಾಣುತ್ತಿತ್ತೋ ಪ್ರಾಣಿಗಳಿಗಿಂತ ಹೀನಾಯವಾಗಿ ನಡೆಸಿಕೊಳ್ಳುತ್ತಿತ್ತೋ ಅಂತಹ ದೌರ್ಜನ್ಯಕೋರ ಸಂಸ್ಕೃತಿಯ ವಿರುದ್ಧ ಎಂದು.
ಒಂದು ವೇಳೆ ಕೋರೇಗಾಂವ್ ಯುದ್ಧ ನಡೆಯದಿದ್ದರೆ ಪೇಶ್ವೆಗಳ ಅಟ್ಟಹಾಸ ಮತ್ತೂ ಮುಂದುವರಿದಿರುತ್ತಿತ್ತು. ಅಂದಹಾಗೆ ಅಂತಹ ಅಟ್ಟಹಾಸದ ವಾತಾವರಣದಲ್ಲಿ ಆ ಯುದ್ಧ ನಡೆದು 73 ವರ್ಷಗಳ ನಂತರ(1891) ಹುಟ್ಟಿದ ಬಾಬಾಸಾಹೇಬ್ ಅಂಬೇಡ್ಕರರು ಶಿಕ್ಷಣ ಪಡೆಯಲಾಗುತ್ತಿತ್ತೇ? ವಿದೇಶಿ ವ್ಯಾಸಂಗಕ್ಕೆ ತೆರಳಲಾಗುತ್ತಿತ್ತೆ? ಸಂವಿಧಾನ ಶಿಲ್ಪಿಯಾಗಲು ಸಾಧ್ಯವಿತ್ತೆ? ಈ ನಿಟ್ಟಿನಲ್ಲಿ ಕೋರೇಗಾಂವ್ ಯುದ್ಧ ಅಸ್ಪೃಶ್ಯರ ಹೋರಾಟದ ಇತಿಹಾಸದಲ್ಲಿ ಒಂದು ಅಪರೂಪದ ಮೈಲುಗಲ್ಲಾಗಿ ಉಳಿಯುತ್ತದೆ. ಹಾಗೆಯೇ ಸ್ಫೂರ್ತಿಯ ಸಂಕೇತವೂ ಅದಾಗುತ್ತದೆಯೆಂದರೆ ಅತಿಶಯೋಕ್ತಿಯೇನಲ್ಲ.
(ಈ ಲೇಖನ 2014 ರಲ್ಲಿ ಬಿಡುಗಡೆಯಾದ ನನ್ನ ಮೂರನೇ ಕೃತಿ “ಎದೆಗೆ ಬಿದ್ದ ಗಾಂಧಿ” ಯಲ್ಲಿ ಪ್ರಕಟವಾಗಿದೆ. – ರಹೊಬ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರವಸೆ ಕೊಟ್ಟು ಯುವಜನರನ್ನು ಮನೆಗೆ ಕಳುಹಿಸಿದ ಸರ್ಕಾರಕ್ಕೆ ಈಗ ಪ್ರತಿಭಟನೆಯ ಬಿಸಿ: ಸೆ.5ಕ್ಕೆ ದೆಹಲಿಯಲ್ಲಿ CJP ಬೃಹತ್ ಮೆರವಣಿಗೆ!
ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ
- ಜುಲೈ 25ರ ಭರವಸೆ ಜಾರಿಗೆ ವಿಳಂಬ: CJP ತೀವ್ರ ಆಕ್ರೋಶ
- ಇಂಡಿಯಾ ಗೇಟ್‌ನಿಂದ ಪೊಲೀಸ್ ಕೇಂದ್ರ ಕಚೇರಿವರೆಗೆ ಮೆರವಣಿಗೆ
- NEET ಅಭ್ಯರ್ಥಿಗಳ ಕುಟುಂಬಸ್ಥರು, ಪೊಲೀಸ್ ದೌರ್ಜನ್ಯ ಸಂತ್ರಸ್ತರು ಮುಂಚೂಣಿಯಲ್ಲಿ
- “ನಮ್ಮ ತಾಳ್ಮೆಯನ್ನು ದೌರ್ಬಲ್ಯವೆಂದು ಭಾವಿಸಬೇಡಿ” ಎಂದ CJP
ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ
ಸುದ್ದಿದಿನ,ನವದೆಹಲಿ: ದೇಶದ ಯುವಜನರಿಗೆ ನೀಡಿರುವ ಭರವಸೆಗಳನ್ನು ಸರ್ಕಾರ ಈಡೇರಿಸಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ ಕಾಕ್‌ರೋಚ್ ಜನತಾ ಪಾರ್ಟಿ (CJP) ಸೆಪ್ಟೆಂಬರ್ 5ರಂದು ನವದೆಹಲಿಯಲ್ಲಿ ಶಾಂತಿಯುತ ಪ್ರತಿಭಟನಾ ಮೆರವಣಿಗೆ ನಡೆಸಲು ಕರೆ ನೀಡಿದೆ. ಜುಲೈ 25ರಂದು ಸಾರ್ವಜನಿಕವಾಗಿ ನೀಡಲಾಗಿದ್ದ ಭರವಸೆಗಳಿಗೆ ಒಂದು ತಿಂಗಳು ಕಳೆದರೂ ಅವುಗಳ ಅನುಷ್ಠಾನಕ್ಕೆ ಸ್ಪಷ್ಟ ಕ್ರಮಗಳು ಗೋಚರಿಸುತ್ತಿಲ್ಲ ಎಂಬುದು CJPಯ ಪ್ರಮುಖ ಆರೋಪವಾಗಿದೆ.
CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಲಾಗಿದ್ದು, ಸರ್ಕಾರ ಹಾಗೂ ಬಿಜೆಪಿ-ಎನ್‌ಡಿಎ ಆಡಳಿತದ ರಾಜ್ಯಗಳು ಯುವಜನರಿಗೆ ನೀಡಿದ್ದ ಭರವಸೆಗಳ ಅನುಷ್ಠಾನವನ್ನು ಪರಿಶೀಲಿಸಿದ ಬಳಿಕ ಪ್ರತಿಭಟನೆ ನಡೆಸುವ ನಿರ್ಧಾರವನ್ನು ಸರ್ವಾನುಮತದಿಂದ ಕೈಗೊಳ್ಳಲಾಗಿದೆ ಎಂದು ಪಕ್ಷ ತಿಳಿಸಿದೆ.
http://Visit : www.suddidina.com
ಇಂಡಿಯಾ ಗೇಟ್‌ನಿಂದ ಮೆರವಣಿಗೆ
ಸೆಪ್ಟೆಂಬರ್ 5ರಂದು ಇಂಡಿಯಾ ಗೇಟ್‌ನಿಂದ ಪ್ರತಿಭಟನಾ ಮೆರವಣಿಗೆ ಆರಂಭವಾಗಿ ನವದೆಹಲಿ ಪೊಲೀಸ್ ಕೇಂದ್ರ ಕಚೇರಿಯತ್ತ ಸಾಗಲಿದೆ. ಮೃತ NEET ಅಭ್ಯರ್ಥಿಗಳ ಕುಟುಂಬಸ್ಥರು ಹಾಗೂ ಪೊಲೀಸ್ ದೌರ್ಜನ್ಯಕ್ಕೆ ಒಳಗಾದವರು ಮೆರವಣಿಗೆಯ ಮುಂಚೂಣಿಯಲ್ಲಿ ಸಾಗಲಿದ್ದಾರೆ ಎಂದು CJP ಹೇಳಿದೆ.
ದೇಶದ ವಿವಿಧ ಭಾಗಗಳಿಂದ ವಿದ್ಯಾರ್ಥಿಗಳು, ಯುವ ಸಂಘಟನೆಗಳ ಪ್ರತಿನಿಧಿಗಳು ಮತ್ತು ಯುವಜನರು ಪ್ರತಿಭಟನೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಸರ್ಕಾರ ನೀಡಿದ್ದ ಭರವಸೆಗಳನ್ನು ಜಾರಿಗೆ ತರಬೇಕು ಎಂಬ ಒಂದೇ ಪ್ರಮುಖ ಬೇಡಿಕೆಯೊಂದಿಗೆ ಯುವಜನರು ಶಾಂತಿಯುತವಾಗಿ ಧ್ವನಿ ಎತ್ತಲಿದ್ದಾರೆ ಎಂದು ಪಕ್ಷ ಹೇಳಿದೆ.
‘ನಮ್ಮ ತಾಳ್ಮೆಯನ್ನು ದೌರ್ಬಲ್ಯವೆಂದು ಭಾವಿಸಬೇಡಿ’
ಜುಲೈ 25ರಂದು ನೀಡಿದ ಭರವಸೆಗಳನ್ನು ನಂಬಿ ದೇಶಾದ್ಯಂತ ನಡೆದಿದ್ದ ಪ್ರತಿಭಟನೆಗಳನ್ನು ಯುವಜನರು ಉತ್ತಮ ನಂಬಿಕೆಯಿಂದ ಹಿಂಪಡೆದಿದ್ದರು. ಆದರೆ, ಭರವಸೆಗಳ ಅನುಷ್ಠಾನದಲ್ಲಿ ವಿಳಂಬವಾಗುತ್ತಿರುವುದು ಯುವಜನರಲ್ಲಿ ಮತ್ತೆ ಅಸಮಾಧಾನ ಮೂಡಿಸಿದೆ ಎಂದು CJP ಆರೋಪಿಸಿದೆ.
“ನಮ್ಮ ತಾಳ್ಮೆಯನ್ನು ದೌರ್ಬಲ್ಯವೆಂದು ಭಾವಿಸಬೇಡಿ. ನಮ್ಮ ಸದುದ್ದೇಶವನ್ನು ಸರ್ಕಾರ ಯುವಜನರಿಗೆ ದ್ರೋಹ ಮಾಡುವ ಅವಕಾಶವಾಗಿ ಬಳಸಿಕೊಳ್ಳಬಾರದು” ಎಂದು CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಎಚ್ಚರಿಕೆ ನೀಡಿದೆ.
“ಭರವಸೆಗಳನ್ನು ಜಾರಿಗೆ ತರುವ ಬದಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳುವುದನ್ನು ವಿಳಂಬಿಸುತ್ತಿದೆ, ತಾಂತ್ರಿಕ ಕಾರಣಗಳ ಹಿಂದೆ ಅಡಗಿಕೊಳ್ಳುತ್ತಿದೆ ಹಾಗೂ ಸುಪ್ರೀಂ ಕೋರ್ಟ್‌ನ ಮುಂದೆಯೂ ಸ್ಪಷ್ಟ ಭರವಸೆ ನೀಡುವುದನ್ನು ತಪ್ಪಿಸುತ್ತಿದೆ”
|
ಮಾತಿನಿಂದ ಹಿಂದೆ ಸರಿಯಲು ಸಾಧ್ಯವಿಲ್ಲ
ಜುಲೈ 25ರಂದು ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಸಾರ್ವಜನಿಕವಾಗಿ ನೀಡಿದ್ದ ಭರವಸೆಗಳನ್ನು ಸರ್ಕಾರ ಈಡೇರಿಸಬೇಕು ಎಂಬುದು CJPಯ ಆಗ್ರಹ. ಮಕ್ಕಳನ್ನು ಕಳೆದುಕೊಂಡ ಕುಟುಂಬಗಳು ಹಾಗೂ ಪೊಲೀಸ್ ದೌರ್ಜನ್ಯಕ್ಕೆ ಒಳಗಾದವರ ನೋವಿನ ನಡುವೆ ನಡೆಯಲಿರುವ ಈ ಮೆರವಣಿಗೆ, ಯುವಜನರ ವಿಶ್ವಾಸ ಮತ್ತು ಸರ್ಕಾರದ ಹೊಣೆಗಾರಿಕೆಯ ಪ್ರಶ್ನೆಯನ್ನು ಮುನ್ನೆಲೆಗೆ ತರುವ ಪ್ರಯತ್ನವಾಗಿದೆ.
ಕೇಂದ್ರ ಸರ್ಕಾರ ಭರವಸೆಗಳನ್ನು ಜಾರಿಗೆ ತರುವ ಬದಲು ಕ್ರಮ ಕೈಗೊಳ್ಳುವುದನ್ನು ವಿಳಂಬಿಸುತ್ತಿದೆ, ತಾಂತ್ರಿಕ ಕಾರಣಗಳ ಹಿಂದೆ ಅಡಗಿಕೊಳ್ಳುತ್ತಿದೆ ಹಾಗೂ ಸುಪ್ರೀಂ ಕೋರ್ಟ್‌ನ ಮುಂದೆಯೂ ಸ್ಪಷ್ಟ ಭರವಸೆ ನೀಡುವುದನ್ನು ತಪ್ಪಿಸುತ್ತಿದೆ ಎಂದು CJP ಆರೋಪಿಸಿದೆ.
ಸೆಪ್ಟೆಂಬರ್ 5ರಂದು ಹೆಚ್ಚಿನ ಸಂಖ್ಯೆಯಲ್ಲಿ ಇಂಡಿಯಾ ಗೇಟ್‌ನಲ್ಲಿ ಸೇರಿ ಶಾಂತಿಯುತ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಯುವಜನರು, ವಿದ್ಯಾರ್ಥಿಗಳು ಹಾಗೂ ಯುವ ಸಂಘಟನೆಗಳಿಗೆ CJP ಮನವಿ ಮಾಡಿದೆ. ಪ್ರತಿಭಟನೆ ಸಂಪೂರ್ಣವಾಗಿ ಶಾಂತಿಯುತ ಮತ್ತು ಪ್ರಜಾಸತ್ತಾತ್ಮಕ ರೀತಿಯಲ್ಲಿ ನಡೆಯಲಿದೆ ಎಂದು ಅದು ಪುನರುಚ್ಚರಿಸಿದೆ.

ದಿನದ ಸುದ್ದಿ
KPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ
KPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ
-
329 ಅಭ್ಯರ್ಥಿಗಳಿಗೆ ಏಕಕಾಲದಲ್ಲಿ ವಿಚಾರಣಾ ನೋಟಿಸ್
-
658 OMR ಕಾರ್ಬನ್ ಶೀಟ್‌ಗಳು FSLಗೆ
-
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ವಿರುದ್ಧ ED ಗಂಭೀರ ಆರೋಪ
-
₹70–80 ಲಕ್ಷ ಲಂಚದ ಆರೋಪವೂ ತನಿಖೆಯಲ್ಲಿದೆ
-
ಪ್ರಶ್ನೆಪತ್ರ ಸಿದ್ಧತೆ, ಮುದ್ರಣದ CCTV ದೃಶ್ಯಗಳ ಬಗ್ಗೆಯೂ ಅನುಮಾನ
ಸುದ್ದಿದಿನ,ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (KPSC) ಪಶುವೈದ್ಯಾಧಿಕಾರಿ ನೇಮಕಾತಿ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮದ ತನಿಖೆ ದಿನದಿಂದ ದಿನಕ್ಕೆ ಹೊಸ ತಿರುವು ಪಡೆಯುತ್ತಿದೆ. ಈಗಾಗಲೇ ಜಾರಿ ನಿರ್ದೇಶನಾಲಯ (ED) ರಾಜ್ಯದ ವಿವಿಧೆಡೆ 21ಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ ನಡೆಸಿದ್ದು, ಅದರ ಬೆನ್ನಲ್ಲೇ ಅಪರಾಧ ತನಿಖಾ ಇಲಾಖೆ (CID) ಎಲ್ಲಾ 329 ಅಭ್ಯರ್ಥಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ.
http://Visit : www.suddidina.com
329 ಅಭ್ಯರ್ಥಿಗಳಿಗೆ ನೋಟಿಸ್ ಏಕೆ?
ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ ಅಭ್ಯರ್ಥಿಗಳಿಂದ ಈಗಾಗಲೇ 658 OMR ಕಾರ್ಬನ್ ಶೀಟ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಅವುಗಳನ್ನು ಮೂಲ OMR ಉತ್ತರ ಪತ್ರಿಕೆಗಳೊಂದಿಗೆ ಹೋಲಿಕೆ ಮಾಡಲು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ (FSL) ಕಳುಹಿಸಲಾಗಿದೆ. ಅಭ್ಯರ್ಥಿಗಳು ಗುರುತಿಸಿದ್ದ ಉತ್ತರಗಳ ಕಾರ್ಬನ್ ಪ್ರತಿಯಲ್ಲಿ ಮತ್ತು ಮೂಲ OMRನಲ್ಲಿ ವ್ಯತ್ಯಾಸವಿದೆಯೇ ಎಂಬುದನ್ನು ಪರಿಶೀಲಿಸುವುದು ತನಿಖೆಯ ಪ್ರಮುಖ ಭಾಗವಾಗಿದೆ.
ಇದೀಗ 329 ಅಭ್ಯರ್ಥಿಗಳನ್ನೂ ವಿಚಾರಣೆಗೆ ಒಳಪಡಿಸುವ CID ಕ್ರಮ ಪ್ರಕರಣದ ವ್ಯಾಪ್ತಿಯನ್ನು ಮತ್ತಷ್ಟು ವಿಸ್ತರಿಸಿದೆ. ಈ ವಿಚಾರಣೆಯ ಮೂಲಕ ಪರೀಕ್ಷಾ ಪ್ರಕ್ರಿಯೆಯಲ್ಲಿ ಯಾವುದೇ ಅಕ್ರಮ ನಡೆದಿದೆಯೇ, ಅಭ್ಯರ್ಥಿಗಳಿಗೆ ಪ್ರಶ್ನೆಪತ್ರಿಕೆ ಅಥವಾ ಉತ್ತರಗಳ ಮಾಹಿತಿ ಮುಂಚಿತವಾಗಿ ಸಿಕ್ಕಿತೇ, OMR ಉತ್ತರ ಪತ್ರಿಕೆಗಳಲ್ಲಿ ತಿದ್ದುಪಡಿ ನಡೆದಿದೆಯೇ ಎಂಬುದರ ಬಗ್ಗೆ ತನಿಖಾಧಿಕಾರಿಗಳು ಮಾಹಿತಿ ಕಲೆಹಾಕುತ್ತಿದ್ದಾರೆ.
IAS ಅಧಿಕಾರಿಯತ್ತ ತನಿಖೆಯ ಚಿತ್ತ
ಈ ಪ್ರಕರಣದಲ್ಲಿ IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಅವರ ಹೆಸರು ಪ್ರಮುಖವಾಗಿ ಕೇಳಿಬಂದಿದೆ. ಅವರು ಫೆಬ್ರವರಿ 2024ರಿಂದ ಮಾರ್ಚ್ 2026ರವರೆಗೆ KPSCಯ ಪರೀಕ್ಷಾ ನಿಯಂತ್ರಕರಾಗಿ ಕಾರ್ಯನಿರ್ವಹಿಸಿದ್ದರು. ಪ್ರಸ್ತುತ ಅವರು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಲ್ಲಿ MSME ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರ ಬೆಂಗಳೂರಿನ ನಿವಾಸ ಸೇರಿದಂತೆ ಉತ್ತರ ಪ್ರದೇಶದ ಬರೇಲಿಯಲ್ಲಿರುವ ನಿವಾಸದ ಮೇಲೂ ED ಶೋಧ ನಡೆಸಿದೆ.
ED ಆರೋಪದ ಪ್ರಕಾರ, ಗಂಗ್ವಾರ್ ಅವರು ತಮ್ಮ ಇಬ್ಬರು ಪುತ್ರರಿಗೆ KPSC ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಹೆಚ್ಚಿನ ಅಂಕಗಳನ್ನು ದೊರಕಿಸಿಕೊಡಲು ವ್ಯಕ್ತಿಯೊಬ್ಬರಿಂದ ಸುಮಾರು ₹1.1 ಕೋಟಿ ಪಡೆದಿದ್ದಾರೆ ಎನ್ನಲಾಗಿದೆ. ಈ ಆರೋಪ ಇನ್ನೂ ತನಿಖೆಯ ಹಂತದಲ್ಲಿದ್ದು, ಆರೋಪ ಸಾಬೀತಾಗಿಲ್ಲ.
ಪ್ರಶ್ನೆಪತ್ರಿಕೆ ಸಿದ್ಧತೆಯಲ್ಲೂ ಅನುಮಾನ
ಪರೀಕ್ಷಾ ನಿಯಂತ್ರಕರಾಗಿದ್ದ ಅವಧಿಯಲ್ಲಿ ಪ್ರಶ್ನೆಪತ್ರಿಕೆ ಸಿದ್ಧಪಡಿಸುವ ಮತ್ತು ಮುದ್ರಿಸುವ ಪ್ರಕ್ರಿಯೆಗೆ ಸಂಬಂಧಿಸಿದ CCTV ದೃಶ್ಯಾವಳಿಗಳ ಅನುಪಸ್ಥಿತಿಯನ್ನೂ ED ಅಧಿಕಾರಿಗಳು ಪ್ರಶ್ನಿಸಿದ್ದಾರೆ ಎನ್ನಲಾಗಿದೆ. ಇಂತಹ ಪ್ರಕ್ರಿಯೆಯಲ್ಲಿ CCTV ದಾಖಲೆಗಳು ಪ್ರಮುಖ ಭದ್ರತಾ ಕ್ರಮವಾಗಿರುವುದರಿಂದ, ಅವುಗಳ ಲಭ್ಯತೆ ಮತ್ತು ನಿರ್ವಹಣೆಯೂ ತನಿಖೆಯ ಪ್ರಮುಖ ಅಂಶವಾಗಿದೆ.
ಇದರ ಜೊತೆಗೆ, ಪಶುವೈದ್ಯಾಧಿಕಾರಿ ನೇಮಕಾತಿಯಲ್ಲಿ ಅಭ್ಯರ್ಥಿಗಳಿಂದ ₹70–80 ಲಕ್ಷದವರೆಗೆ ಲಂಚ ಕೇಳಲಾಗಿದೆ ಎಂಬ ಆರೋಪಗಳೂ ತನಿಖೆಯಲ್ಲಿವೆ. ಪ್ರಶ್ನೆಪತ್ರಿಕೆ ಸೋರಿಕೆ, OMR ತಿದ್ದುಪಡಿ ಮತ್ತು ನೇಮಕಾತಿ ಪ್ರಕ್ರಿಯೆಯ ಮೇಲೆ ಪ್ರಭಾವ ಬೀರಿದ ಆರೋಪಗಳ ಕುರಿತು ತನಿಖೆ ಮುಂದುವರಿದಿದೆ.
KPSCಯಂತಹ ನೇಮಕಾತಿ ಸಂಸ್ಥೆಯ ಮೇಲಿನ ವಿಶ್ವಾಸಕ್ಕೆ ಧಕ್ಕೆ ತರುವ ಆರೋಪಗಳಾಗಿರುವುದರಿಂದ, CID ಮತ್ತು ED ತನಿಖೆಯ ಮುಂದಿನ ಹಂತಗಳು ಮಹತ್ವ ಪಡೆದುಕೊಂಡಿವೆ. 329 ಅಭ್ಯರ್ಥಿಗಳ ವಿಚಾರಣೆ, OMR ಕಾರ್ಬನ್ ಶೀಟ್‌ಗಳ FSL ವರದಿ ಹಾಗೂ ಹಣಕಾಸು ವ್ಯವಹಾರಗಳ ಪರಿಶೀಲನೆಯ ಬಳಿಕ ಪ್ರಕರಣದ ನಿಜವಾದ ಚಿತ್ರಣ ಇನ್ನಷ್ಟು ಸ್ಪಷ್ಟವಾಗುವ ನಿರೀಕ್ಷೆಯಿದೆ.
ಮೇಲಿನ ಹಣ, ಅಕ್ರಮ ಮತ್ತು ಅಧಿಕಾರಿಯ ವಿರುದ್ಧದ ಆರೋಪಗಳು ತನಿಖಾ ಸಂಸ್ಥೆಗಳು ಮುಂದಿಟ್ಟಿರುವ ಆರೋಪಗಳಾಗಿದ್ದು, ನ್ಯಾಯಾಲಯದಲ್ಲಿ ಸಾಬೀತಾಗುವವರೆಗೆ ಆರೋಪಗಳೆಂದೇ ಪರಿಗಣಿಸಬೇಕೆಂದು ಕೋರ್ಟ್ ತಿಳಿಸಿದೆ.

ದಿನದ ಸುದ್ದಿ
₹25 ಕೋಟಿ ಮೌಲ್ಯದ ಬಿಡಿಎ ಆಸ್ತಿ ವಶಕ್ಕೆ: ರಾಜಾಜಿನಗರ ಬಡಾವಣೆಯಲ್ಲಿ ಅನಧಿಕೃತ ನಿರ್ಮಾಣಕ್ಕೆ ಬಿತ್ತು ಬೀಗ
ರಾಜಾಜಿನಗರದಲ್ಲಿ ಬಿಡಿಎ ಭರ್ಜರಿ ಕಾರ್ಯಾಚರಣೆ: 13,000 ಚದರ ಅಡಿ ಜಾಗ ವಶಕ್ಕೆ
- 13,000 ಚದರ ಅಡಿ ಪ್ರದೇಶ ತೆರವು; ಪೊಲೀಸ್ ಭದ್ರತೆಯಲ್ಲಿ ಬಿಡಿಎ ಕಾರ್ಯಾಚರಣೆ
ನಿವೇಶನ 13 ಮತ್ತು 17ರಲ್ಲಿ ಅನಧಿಕೃತ ನಿರ್ಮಾಣ ತೆರವು; ಪೊಲೀಸ್ ಸಹಕಾರದಲ್ಲಿ ಕಾರ್ಯಾಚರಣೆ
ಸುದ್ದಿದಿನ,ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಅನಧಿಕೃತ ನಿರ್ಮಾಣಗಳ ವಿರುದ್ಧದ ತನ್ನ ಕಾರ್ಯಾಚರಣೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದು, ರಾಜಾಜಿನಗರ ಬಡಾವಣೆಯ ಇಂಡಸ್ಟ್ರೀಯಲ್ ಸಬರ್ಬ್ 2ನೇ ಹಂತದಲ್ಲಿ ಮಹತ್ವದ ತೆರವು ಕಾರ್ಯಾಚರಣೆ ನಡೆಸಿದೆ. ಕಾರ್ಯಾಚರಣೆಯಲ್ಲಿ ಸುಮಾರು ₹25 ಕೋಟಿ ಮೌಲ್ಯದ ಆಸ್ತಿಯನ್ನು ಪ್ರಾಧಿಕಾರ ತನ್ನ ಸುಪರ್ದಿಗೆ ಪಡೆದುಕೊಂಡಿದೆ.
ಬೆಂಗಳೂರು ಉತ್ತರ ತಾಲ್ಲೂಕಿನ ಯಶವಂತಪುರ ಹೋಬಳಿಯ ಪೀಣ್ಯ ಗ್ರಾಮದ ಸರ್ವೆ ನಂಬರ್ 79 ಮತ್ತು 70ರಲ್ಲಿ ಬರುವ ಇಂಡಸ್ಟ್ರೀಯಲ್ ಸಬರ್ಬ್, 2ನೇ ಹಂತ, ರಾಜಾಜಿನಗರ ಬಡಾವಣೆಯ ನಿವೇಶನ ಸಂಖ್ಯೆ 13 ಮತ್ತು 17ರಲ್ಲಿ ಈ ಕಾರ್ಯಾಚರಣೆ ನಡೆದಿದೆ. ಸುಮಾರು 13,000 ಚದರ ಅಡಿ ವಿಸ್ತೀರ್ಣದ ಪ್ರದೇಶದಲ್ಲಿ ನಿರ್ಮಿಸಲಾಗಿದ್ದ ಅನಧಿಕೃತ ಕಟ್ಟಡ ಹಾಗೂ ನಿರ್ಮಾಣಗಳನ್ನು ತೆರವುಗೊಳಿಸಿ, ಜಾಗವನ್ನು ಬಿಡಿಎ ವಶಕ್ಕೆ ಪಡೆದುಕೊಂಡಿದೆ.
http://Visit : www.suddidina.com
ಅನಧಿಕೃತ ನಿರ್ಮಾಣಕ್ಕೆ ಬಿಡಿಎ ಬ್ರೇಕ್:
ಬಿಡಿಎಗೆ ಸೇರಿದ ಅಥವಾ ಪ್ರಾಧಿಕಾರದ ವ್ಯಾಪ್ತಿಯಲ್ಲಿರುವ ಜಾಗಗಳಲ್ಲಿ ನಿಯಮಬಾಹಿರವಾಗಿ ನಿರ್ಮಾಣವಾಗುತ್ತಿರುವ ಕಟ್ಟಡಗಳ ವಿರುದ್ಧ ಕ್ರಮ ಕೈಗೊಳ್ಳುವ ಭಾಗವಾಗಿ ಈ ಕಾರ್ಯಾಚರಣೆ ನಡೆಸಲಾಗಿದೆ. ತೆರವು ಕಾರ್ಯಾಚರಣೆಯ ಬಳಿಕ ಆಸ್ತಿಯನ್ನು ಪ್ರಾಧಿಕಾರದ ನೇರ ಸುಪರ್ದಿಗೆ ತೆಗೆದುಕೊಳ್ಳಲಾಗಿದ್ದು, ಸಾರ್ವಜನಿಕ ಹಾಗೂ ಸರ್ಕಾರಿ ಆಸ್ತಿಗಳ ಸಂರಕ್ಷಣೆಗೆ ಬಿಡಿಎ ಕೈಗೊಳ್ಳುತ್ತಿರುವ ಕ್ರಮಕ್ಕೆ ಇದು ಮತ್ತೊಂದು ಉದಾಹರಣೆಯಾಗಿದೆ.
ಸುಮಾರು ₹25 ಕೋಟಿ ಮೌಲ್ಯದ ಆಸ್ತಿ ಇರುವುದರಿಂದ, ಈ ಕಾರ್ಯಾಚರಣೆ ನಗರದ ಆಸ್ತಿ ಸಂರಕ್ಷಣೆ ಹಾಗೂ ಅನಧಿಕೃತ ನಿರ್ಮಾಣಗಳ ನಿಯಂತ್ರಣದ ದೃಷ್ಟಿಯಿಂದ ಮಹತ್ವ ಪಡೆದುಕೊಂಡಿದೆ. ದೊಡ್ಡ ಪ್ರಮಾಣದ ಭೂಮಿಯಲ್ಲಿ ನಿಯಮ ಉಲ್ಲಂಘಿಸಿ ನಿರ್ಮಾಣ ನಡೆಸಿದರೆ ಯಾವುದೇ ಕಾರಣಕ್ಕೂ ಅದನ್ನು ಮುಂದುವರಿಸಲು ಅವಕಾಶ ನೀಡುವುದಿಲ್ಲ ಎಂಬ ಸಂದೇಶವನ್ನು ಈ ಕ್ರಮ ನೀಡಿದೆ.
https://x.com/BDAOfficialGok/status/2092121239175512436?s=20
ಬಹು ಇಲಾಖೆಗಳ ಸಮನ್ವಯದಲ್ಲಿ ಕಾರ್ಯಾಚರಣೆ:
ತೆರವು ಕಾರ್ಯಾಚರಣೆಯನ್ನು ಬಿಡಿಎಯ ವಲಯ ಆಯುಕ್ತರು, ಆರಕ್ಷಕ ಅಧೀಕ್ಷಕರು, ಅಭಿಯಂತರ ಅಧಿಕಾರಿ-1, ಕಾರ್ಯನಿರತ ಆರಕ್ಷಕ ಪಡೆ, ಪಶ್ಚಿಮ ವಿಭಾಗದ ಅಭಿಯಂತರರು ಹಾಗೂ ಸರ್ವೆಯರ್‌ಗಳು ಒಳಗೊಂಡ ತಂಡ ಕೈಗೊಂಡಿತು. ಸ್ಥಳೀಯ ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ಕಾರ್ಯಾಚರಣೆ ನಡೆಸಲಾಗಿದ್ದು, ಯಾವುದೇ ಅಡಚಣೆ ಉಂಟಾಗದಂತೆ ಅಗತ್ಯ ಭದ್ರತಾ ವ್ಯವಸ್ಥೆ ಮಾಡಲಾಗಿತ್ತು.
ಸ್ಥಳ ಪರಿಶೀಲನೆ, ನಿರ್ಮಾಣ ತೆರವು ಹಾಗೂ ಜಾಗದ ಸ್ವಾಧೀನ ಪ್ರಕ್ರಿಯೆಯನ್ನು ಸಂಬಂಧಪಟ್ಟ ಅಧಿಕಾರಿಗಳು ಸಮನ್ವಯದಿಂದ ಪೂರ್ಣಗೊಳಿಸಿದರು. ಕಾರ್ಯಾಚರಣೆ ಬಳಿಕ ತೆರವುಗೊಳಿಸಲಾದ ಪ್ರದೇಶವನ್ನು ಬಿಡಿಎ ತನ್ನ ನಿಯಂತ್ರಣಕ್ಕೆ ತೆಗೆದುಕೊಂಡಿದೆ.
ನಗರದ ಭೂ ಸಂಪತ್ತಿನ ರಕ್ಷಣೆಗೆ ಕಠಿಣ ಹೆಜ್ಜೆ
ಬೆಂಗಳೂರು ವೇಗವಾಗಿ ವಿಸ್ತರಿಸುತ್ತಿರುವ ಸಂದರ್ಭದಲ್ಲಿ ಸರ್ಕಾರಿ ಹಾಗೂ ಪ್ರಾಧಿಕಾರಕ್ಕೆ ಸೇರಿದ ಜಾಗಗಳ ಮೇಲೆ ಅಕ್ರಮ ನಿರ್ಮಾಣಗಳು ನಡೆಯದಂತೆ ನಿಗಾ ವಹಿಸುವುದು ಪ್ರಮುಖ ಸವಾಲಾಗಿದೆ. ಈ ಹಿನ್ನೆಲೆಯಲ್ಲಿ ಬಿಡಿಎ ಕೈಗೊಂಡಿರುವ ₹25 ಕೋಟಿ ಮೌಲ್ಯದ ಆಸ್ತಿ ವಶಪಡಿಸಿಕೊಳ್ಳುವ ಕ್ರಮ, ಅನಧಿಕೃತ ನಿರ್ಮಾಣಗಳ ವಿರುದ್ಧದ ಕಾರ್ಯಾಚರಣೆಗೆ ಮತ್ತಷ್ಟು ಬಲ ನೀಡಿದೆ.
ಬೆಂಗಳೂರು ನಗರದ ಭೂ ಸಂಪತ್ತನ್ನು ಕಾಪಾಡುವ ನಿಟ್ಟಿನಲ್ಲಿ ಬಿಡಿಎಯ ಈ ತೆರವು ಕಾರ್ಯಾಚರಣೆ, ನಿಯಮ ಉಲ್ಲಂಘಿಸುವವರಿಗೆ ಎಚ್ಚರಿಕೆಯ ಸಂದೇಶವಾಗಿದ್ದು, ಮುಂದಿನ ದಿನಗಳಲ್ಲೂ ಇಂತಹ ಕಾರ್ಯಾಚರಣೆಗಳು ಮುಂದುವರಿಯುವ ಸಾಧ್ಯತೆ ಇದೆ.

-
ದಿನದ ಸುದ್ದಿ5 days agoವಿಶ್ವ ವೆಂಕಟೇಶ್ವರ ಸಂಸ್ಥೆಯ ಹೆಸರು ಹಾಳು ಮಾಡುವ ಹುನ್ನಾರ: ವಿಠಲ ರುಕ್ಮಿಣಿ ಮಠದ ವಿರುದ್ಧ ಗಂಭೀರ ಆರೋಪ
-
ಅಂತರಂಗ3 days agoಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು
-
ದಿನದ ಸುದ್ದಿ24 hours agoಭರವಸೆ ಕೊಟ್ಟು ಯುವಜನರನ್ನು ಮನೆಗೆ ಕಳುಹಿಸಿದ ಸರ್ಕಾರಕ್ಕೆ ಈಗ ಪ್ರತಿಭಟನೆಯ ಬಿಸಿ: ಸೆ.5ಕ್ಕೆ ದೆಹಲಿಯಲ್ಲಿ CJP ಬೃಹತ್ ಮೆರವಣಿಗೆ!
-
ದಿನದ ಸುದ್ದಿ1 day agoKPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ
-
ದಿನದ ಸುದ್ದಿ1 day agoಭದ್ರಾ ಡ್ಯಾಂ ನೀರು ಹರಿಸುವಂತೆ ಆಗ್ರಹಿಸಿ ಕರೆ ನೀಡಿದ್ದ ದಾವಣಗೆರೆ ಬಂದ್ ನೀರಸ
-
ದಿನದ ಸುದ್ದಿ1 day agoತುಂಗಭದ್ರಾದಲ್ಲಿ ನೀರಿನ ಹರಿವು ಕುಸಿತ: ಹರಿಹರದ 24×7 ‘ಜಲಸಿರಿ’ಗೆ ಬ್ರೇಕ್, ನೀರು ಪೂರೈಕೆ ಸಮಯ ಕಡಿತ
-
ದಿನದ ಸುದ್ದಿ24 hours agoಉದ್ದಿಮೆದಾರರಿಗೆ ನೆರವು ಯೋಜನೆ; ಅರ್ಜಿ ಆಹ್ವಾನ
-
ದಿನದ ಸುದ್ದಿ1 day agoಸರ್ವರ್ ಡೌನ್, ಅಧಿಕಾರಿಗಳ ವಿಳಂಬ: ‘ಎ-ಖಾತೆ’ಗಾಗಿ ಕಾದು ಕುಳಿತ 60 ಸಾವಿರಕ್ಕೂ ಹೆಚ್ಚು ಅರ್ಜಿದಾರರು!







