Connect with us

ದಿನದ ಸುದ್ದಿ

ದಾವಣಗೆರೆ | ಬಿರ್ಸಾ ಮುಂಡಾ ಜನ್ಮ ದಿನಾಚರಣೆ ; ಬುಡಕಟ್ಟು ಜನರ ಆರ್ಥಿಕ ಸಬಲೀಕರಣಕ್ಕಾಗಿ ಯೋಜನೆಗಳ ಸಮರ್ಪಕ ಬಳಕೆಗೆ ಸೂಚನೆ: ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

Published

on

ಸುದ್ದಿದಿನ,ದಾವಣಗೆರೆ:ರಾಷ್ಟ್ರದ ಸ್ವಾತಂತ್ರ್ಯಕ್ಕಾಗಿ ಹಾಗೂ ಬುಡಕಟ್ಟು ಜನಾಂಗದವರ ಏಳಿಗೆಗಾಗಿ ಹೋರಾಡಿದ ಧೀಮಂತ ವ್ಯಕ್ತಿ ಬಿರ್ಸಾ ಮುಂಡಾ ಅವರಾಗಿದ್ದು ಕೇಂದ್ರ ಸರ್ಕಾರ ಬುಡಕಟ್ಟು ಜನರ ಅಭಿವೃದ್ದಿಗಾಗಿ ಅನುಷ್ಟಾನ ಮಾಡುತ್ತಿರುವ ಯೋಜನೆಗಳನ್ನು ಸಮರ್ಪಕವಾಗಿ ಬಳಕೆ ಮಾಡಿಕೊಂಡು ಜಿಲ್ಲೆಯ ಜನರ ಅಭಿವೃದ್ದಿ ಮಾಡಲು ಕ್ರಮವಹಿಸಲಾಗುತ್ತದೆ ಎಂದು ದಾವಣಗೆರೆ ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ ತಿಳಿಸಿದರು.

ಅವರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನವಂಬರ್ 15 ರಂದು ನಡೆದ ಜನಜಾತಿಯ ಗೌರವ್ ದಿವಾಸ್ ಆಚರಣೆ ಸಮಾರಂಭದಲ್ಲಿ ಆದಿವಾಸಿ ಬಿರ್ಸಾ ಮುಂಡಾ ಅವರ ಜನ್ಮ ದಿನಾಚರಣೆಯಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.

ಆದಿವಾಸಿ ಹೋರಾಟಗಾರ ಬಿರ್ಸಾ ಮುಂಡಾ ಅವರ ಜನ್ಮ ದಿನಾಚರಣೆ ಅಂಗವಾಗಿ ಜನಜಾತಿಯ ಗೌರವ್ ದಿವಸ್ ಎಂದು ಪ್ರತಿ ವರ್ಷ ನವಂಬರ್ 15 ರಂದು ಆಚರಿಸಲಾಗುತ್ತದೆ.
ಜನಜಾತಿಯ ಗೌರವ್ ದಿವಸದಂದು ದೇಶದ ಜನಜಾತಿಯ ಜನರ ಸಾಧನೆಗಳು, ಸಂಸ್ಕøತಿಗಳು, ಐತಿಹ್ಯಗಳು ಮತ್ತು ಭಾರತೀಯ ಸ್ವಾತಂತ್ರ್ಯ ಹೋರಾಟದಲ್ಲಿ ಅವರು ನೀಡಿದ ಕೊಡುಗೆಗಳನ್ನು ಸ್ಮರಿಸಲಾಗುತ್ತದೆ ಎಂದು ಹೇಳಿದರು.

ಕೇಂದ್ರ ಬುಡಕಟ್ಟು ವ್ಯವಹಾರಗಳ ಮಂತ್ರಾಲಯದ ಅಡಿಯಲ್ಲಿ ಕೇಂದ್ರ ಸರ್ಕಾರವು ಆದಿವಾಸಿಗಳ ಸಬಲೀಕರಣಕ್ಕಾಗಿ ಪ್ರಧಾನ ಮಂತ್ರಿ ಆದಿ ಆದರ್ಶ ಗ್ರಾಮ ಯೋಜನೆ ಹಾಗೂ ಧರ್ತಿ ಆಬಾ ಜನಜಾತಿಯ ಉತ್ಕರ್ಷ ಅಭಿಯಾನ ಕಾರ್ಯಕ್ರಮಗಳ ಅಡಿಯಲ್ಲಿ ಆದಿವಾಸಿಗಳಿಗೆ ಹಾಗೂ ಎಸ್‍ಟಿ ಜನರ ಸ್ವಸಹಾಯ ಗುಂಪುಗಳಿಗೆ ಜಿಲ್ಲಾ ಪಂಚಾಯತ್‍ನಿಂದ ಎನ್‍ಆರ್‍ಎಲ್‍ಎಂ ರಡಿ ಪ್ರಧಾನ ಮಂತ್ರಿ ವನಧನ್ ಯೋಜನೆಯಡಿ ಜಿಲ್ಲೆಯಲ್ಲಿನ 5 ವನಧನ್ ವಿಕಾಸ ಕೇಂದ್ರಗಳ ಸ್ವಸಹಾಯ ಸಂಘದ ಮಹಿಳಾ ಗುಂಪುಗಳಿಗೆ 37 ಲಕ್ಷದ ವೆಚ್ಚದಲ್ಲಿ 22 ವಿವಿಧ ಪರಿಕರಗಳನ್ನು ವಿತರಣೆ ಮಾಡಲಾಗಿದೆ. ಇದರಲ್ಲಿ ಸ್ವ ಉದ್ಯೋಗ ನೀಡುವ ಅಗರಬತ್ತಿ ತಯಾರಿಸುವ ಯಂತ್ರ, ಅಡಿಕೆ ಕತ್ತರಿಸುವ ಯಂತ್ರ, ಎಣ್ಣೆ ಗಾಣ, ಹಿಟ್ಟಿನ ಗಿರಣಿ, ಅಡಿಕೆ ತಟ್ಟೆ ಯಂತ್ರ, ರೊಟ್ಟಿ ಮಾಡುವ ಯಂತ್ರಗಳನ್ನು ವಿತರಣೆ ಮಾಡಲಾಗಿದೆ.

ವನಧನ್ ಯೋಜನೆ ಐದು ವರ್ಷಗಳ ಕಾರ್ಯಕ್ರಮವಾಗಿದ್ದು ಈ ಯೋಜನೆಯನ್ನು ಸಮರ್ಪಕವಾಗಿ ಅನುಷ್ಟಾನ ಮಾಡಿ ಅತ್ಯುತ್ತಮ ಜಿಲ್ಲೆ ಎಂದು ಹೆಸರು ಗಳಿಸುವ ಮೂಲಕ ಕೇಂದ್ರದ ಹೆಚ್ಚಿನ ಅನುದಾನ ದಾವಣಗೆರೆಗೆ ಪಡೆದು ಕ್ಷೇತ್ರದಲ್ಲಿನ ಬುಡಕಟ್ಟು ಹಾಗೂ ಪ.ಪಂಗಡದ ಜನರ ಆರ್ಥಿಕಾಭಿವೃದ್ದಿ ಮತ್ತು ಇವರು ವಾಸಿಸುವ ಕಡೆ ಮೂಲಭೂತ ಸೌಕರ್ಯ, ಆಶ್ರಮ ಶಾಲೆಯಲ್ಲಿನ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಕ್ರಮ ವಹಿಸಬೇಕೆಂದು ತಿಳಿಸಿ ಸ್ವ ಉದ್ಯೋಗ ಕೈಗೊಂಡ ಮಹಿಳೆಯರು ಮುಂದಿನ ದಿನಗಳಲ್ಲಿ ತಮ್ಮ ಆರ್ಥಿಕ ಅನುಕೂಲತೆಗಳ ಮತ್ತು ಅಭಿವೃದ್ದಿ ಕುರಿತು ಯಶೋಗಾಥೆಗಳನ್ನು ಇಲಾಖೆಯೊಂದಿಗೆ ಹಂಚಿಕೆ ಮಾಡಿಕೊಳ್ಳುವಂತಾಗಬೇಕೆಂದು ಆಶಿಸಿದರು.

ಬಿರ್ಸಾ ಮುಂಡಾ ಜನ್ಮ ದಿನಾಚರಣೆ ಹಾಗೂ ಧರ್ತಿ ಆಬಾ ಜನ್‍ಜಾತಿಯ ಗ್ರಾಮ ಉತ್ಕರ್ಷ ಅಭಿಯಾನದಡಿ ಬುಡಕಟ್ಟು ಗುಂಪುಗಳಿಗೆ ಸ್ವ ಉದ್ಯೋಗದ ವಿವಿಧ ಯಂತ್ರೋಪಕರಣಗಳನ್ನು ವಿತರಣೆ ಮಾಡಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಕೃಷ್ಣನಾಯ್ಕ್, ಮುಖ್ಯ ಯೋಜನಾಧಿಕಾರಿ ಮಲ್ಲಾನಾಯ್ಕ್, ಯೋಜನಾ ನಿರ್ದೇಶಕರಾದ ರೇಷ್ಮಕೌಸರ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.

ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್‍ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್‍ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್‍ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ  ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

Continue Reading

ದಿನದ ಸುದ್ದಿ

ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ

Published

on

ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.

Continue Reading

Trending