ದಿನದ ಸುದ್ದಿ

ಕ್ಲಿಷ್ಟ ಪರಿಸ್ಥಿತಿಯಲ್ಲಿ ಕೂಡ ಅಭಿವೃದ್ಧಿಗೆ ಅನುದಾನ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ:ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷವಾಗಿದೆ. ಈ ನಾಲ್ಕು ವರ್ಷದ ಅವಧಿಯಲ್ಲ್ಲಿ ರಾಜ್ಯವನ್ನು ಮಾದರಿ ರಾಜ್ಯವನ್ನಾಗಿ ಮಾಡಬೇಕು ಎನ್ನುವ ಸಿಎಂ ಅವರಿಗೆ ಕನಸಿತ್ತು. ಒಂದು ಕಡೆ ಬರ, ಇನ್ನೊಂದು ಕಡೆ ಪ್ರವಾಹ ಜೊತೆಗೆ ಕೊರೊನಾ ಅವರಿಸಿತ್ತು. ಇಂತಹ ಸಂದರ್ಭದಲ್ಲಿಯೂ ಕೂಡ ಸಿಎಂ ಅವರು ತಾವು ಕಂಡಂತಹ ಕನಸು ನನಸು ಮಾಡುತ್ತಿದ್ದಾರೆ. ಕ್ಲಿಷ್ಟ ಪರಿಸ್ಥಿತಿಯಲ್ಲಿ ಕೂಡ ಅಭಿವೃದ್ಧಿಗೆ ಅನುದಾನ ನೀಡುತ್ತಿದ್ದಾರೆ ಎಂದು ಡಿಸಿಎಂ ಗೋವಿಂದ ಕಾರಜೋಳ ಪ್ರಶಂಸಿಸಿದರು.

ನ್ಯಾಮತಿಯಲ್ಲಿ ಶನಿವಾರ ಹೊನ್ನಾಳಿ-ನ್ಯಾಮತಿ ಅವಳಿ ತಾಲ್ಲೂಕುಗಳ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಹಾಗೂ ವಿವಿಧ ಸರ್ಕಾರಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು,

ಕೊರೊನಾ ವೇಳೆ ಇಡೀ ಪ್ರಪಂಚಕ್ಕೆ ಆರ್ಥಿಕ ಸಂಕಷ್ಟ ಒದಗಿತ್ತು. ಈ ಸಂದರ್ಭದಲ್ಲಿ ಪ್ರಧಾನಿ ಮೋದಿಯವರು ಅತ್ಯಂತ ಯಶಸ್ವಿಯಾಗಿ ತಮ್ಮ ಜವಾಬ್ದಾರಿ ನಿರ್ವಹಿಸಿದ್ದಾರೆ ಎಂದರು. ನೇರೆ ದೇಶವಾದ ಚೀನಾ ನಿತ್ಯ ತನ್ನ ಕ್ಯಾತೆಯನ್ನು ತೊರಿಸುತ್ತಿದೆ. ಇತಂಹ ಪರಿಸ್ಥಿತಿಯಲ್ಲಿ ದೇಶವನ್ನು ಸುಭದ್ರವಾಗಿಸುವಲ್ಲಿ ಮತ್ತು ಅಭಿವೃದ್ಧಿ ಪಡಿಸುವಲ್ಲಿ ಪ್ರಯತ್ನಿಸುತ್ತಿದ್ದಾರೆ. ಜೊತೆಗೆ ನಮ್ಮ ದೇಶದ ಆಡಳಿತವನ್ನು ಬೇರೆ ದೇಶಗಳು ನೋಡುವಂತೆ ಮಾಡಿದ್ದಾರೆ ಎಂದು ಬಣ್ಣಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346246

Trending

Exit mobile version