ಲೈಫ್ ಸ್ಟೈಲ್
ಪಕ್ಷಿ ಪರಿಚಯ | ಕಾಜಾಣ
- ಭಗವತಿ ಎಂ.ಆರ್
ಕಾಜಾಣವು ವಿಶೇಷವೆ ಎನ್ನಬಹುದಾದ ಪಕ್ಷಿ. ಅದರ ಸ್ವಭಾವವೇ ಅದಕ್ಕೆ ಕಾರಣ. ರಾಜಕಾಗೆ” ಅಂತಲೂ ಕರೆಯುತ್ತಾರೆ. ದೂರದಿಂದ ನೋಡಿದಾಗ ಕಾಗೆಯಂತೆಯೇ ಕಾಣಬಹುದಾದರೂ ಕಾಗೆಯ ಜಾತಿಗೆ ಸೇರಿದ ಪಕ್ಷಿಯಲ್ಲ. ಇದನ್ನು “ಕಪ್ಪುಮಿಶ್ರಿತ ಬೂದು ಬಣ್ಣದ, ಕವಲೊಡೆದ ಬಾಲದ, ಮಿಂಚುವ ಕೆಂಪು ಕಣ್ಣುಗಳ, ಸಪೂರ ದೇಹವುಳ್ಳ ಕಾಜಾಣ ಬಹಳ ದೈರ್ಯಶಾಲಿ.
ತನಗಿಂತ ಗಾತ್ರದಲ್ಲಿ ದೊಡ್ಡದಾದ ಪಕ್ಷಿಗಳ ಮೇಲೆ ಯಾವುದೇ ಭಯವಿಲ್ಲದೆ ಎರಗುತ್ತದೆ. ಕಾಜಾಣದ ಗೂಡಿರುವ ಜಾಗದಲ್ಲಿ, ಇತರೆ ಸಣ್ಣಪುಟ್ಟ ಪಕ್ಷಿಗಳು ಗೂಡು ಕಟ್ಟಿಕೊಂಡಿರುತ್ತವೆ. ಕಾಜಾಣವು ಗೂಡಿನ ಬಳಿ ಬರುವ ಇತರೆ ಆಕ್ರಮಣಕಾರಿ ಪಕ್ಷಿಗಳನ್ನು ಓಡಿಸುತ್ತವೆ. ಕಾಜಾಣ ನಿಂತಲ್ಲಿ ನಿಲ್ಲಲಾರದು. ಬಹಳ ಚುರುಕು, ಆದರೆ, ಮೂಗಿನ ಮೇಲೆ ಕೋಪ ಅವಕ್ಕೆ !
ಕನ್ನಡದಲ್ಲಿ ಕಾಜಾಣ ಅಂದರೆ ನೆನಪಿಗೆ ಬರುವುದು ಶ್ರೀ ಕುವೆಂಪು. “ನಿನಗೆ ನಮೋ ಓ ಕಾಜಾಣ” ಎಂದಿದ್ದಾರೆ “ಕಾಜಾಣ” ಪದ್ಯದಲ್ಲಿ. ಕುವೆಂಪುರವರ ಪುಸ್ತಕಗಳ ಮುಖಪುಟಗಳಲ್ಲಿ ತಂತಿಬಾಲದ ಕಾಜಾಣದ ಜೋಡಿಯ ಚಿತ್ರ ಇದ್ದೇ ಇರುತ್ತದೆ. ರೈತರ ಹೊಲಗಳಲ್ಲಿ ಬೆಳೆಗಳನ್ನು ಹಾಳು ಮಾಡುವ ಕೀಟಗಳನ್ನು ಹಿಡಿದು ತಿನ್ನುವುದರಿಂದ ಸಹಜವಾಗಿಯೇ ರೈತನಿಗೆ ಉಪಕಾರಿಯಾದ ಪಕ್ಷಿ ಇದು. ಈ ಪಕ್ಷಿ ನಮ್ಮ ಸುತ್ತಮುತ್ತ ಇದ್ದಾಗ ಬೇರೆ ಹಕ್ಕಿಗಳ ಕೂಗನ್ನು ಅನುಮಾನಿಸಿ ನೋಡಬೇಕಾಗುತ್ತದೆ. ಬೇರೆ ಪಕ್ಷಿಗಳನ್ನು ಅನುಕರಿಸುವಲ್ಲಿ ಕಾಜಾಣ ಬಲುಜಾಣ!
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ
ಸುದ್ದಿದಿನ ಡೆಸ್ಕ್:ಬೆಂಗಳೂರಿನಲ್ಲಿ ಪ್ರೀತಿಯೊಂದು ರಕ್ತಸಿಕ್ತ ಅಂತ್ಯ ಕಂಡಿದೆ. ಮದುವೆಗೆ ನಿರಾಕರಿಸಿದ ಪ್ರೇಯಸಿಯನ್ನು ಪ್ರಿಯಕರನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ಪೈಪ್‌ಲೈನ್ ರಸ್ತೆಯಲ್ಲಿ ನಡೆದಿದೆ.
23 ವರ್ಷದ ಅಂಜಲಿ ಕೊಲೆಯಾದ ಯುವತಿಯಾಗಿದ್ದು, ರಾಜೀವ್ ಬಂಧಿತ ಆರೋಪಿ. ಕಳೆದ ಮೂರು-ನಾಲ್ಕು ವರ್ಷಗಳಿಂದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಈ ಹಿಂದೆ ಕೆಲಸ ಮಾಡುತ್ತಿದ್ದ ಸ್ಥಳದಲ್ಲೇ ಪರಿಚಯವಾಗಿ ಸ್ನೇಹ ಬೆಳೆದು, ಬಳಿಕ ಅದು ಪ್ರೀತಿಗೆ ತಿರುಗಿತ್ತು.
ಆದರೆ ರಾಜೀವ್‌ಗೆ ಕ್ರಿಮಿನಲ್ ಹಿನ್ನೆಲೆ ಇದ್ದ ಕಾರಣ ಅಂಜಲಿ ಕುಟುಂಬಸ್ಥರು ಈ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ಹಲವು ಬಾರಿ ಕುಟುಂಬಸ್ಥರನ್ನು ಒಪ್ಪಿಸಲು ರಾಜೀವ್ ಪ್ರಯತ್ನಿಸಿದ್ದರೂ ಫಲಿಸಿರಲಿಲ್ಲ. ಇತ್ತೀಚೆಗೆ ಪೋಷಕರ ಒತ್ತಾಯಕ್ಕೆ ಮಣಿದ ಅಂಜಲಿ ರಾಜೀವ್‌ನಿಂದ ದೂರವಾಗಲು ಆರಂಭಿಸಿದ್ದಳು. ಇಂದು ಸಂಜೆ ಅಂಜಲಿಯನ್ನು ಊಟದ ನೆಪದಲ್ಲಿ ಕರೆಸಿಕೊಂಡಿದ್ದ ರಾಜೀವ್, ಮತ್ತೊಮ್ಮೆ ಮದುವೆ ವಿಚಾರ ಪ್ರಸ್ತಾಪಿಸಿದ್ದಾನೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು, ಕೋಪಗೊಂಡ ರಾಜೀವ್ ಚಾಕುವಿನಿಂದ ಅಂಜಲಿಯ ಕುತ್ತಿಗೆಗೆ ಇರಿದಿದ್ದಾನೆ.
ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಂಜಲಿಯನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃ*ತಪಟ್ಟಿದ್ದಾಳೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಪರಿಶೀಲನೆ ನಡೆಸಿ, ಕೆಲವೇ ನಿಮಿಷಗಳಲ್ಲಿ ಆರೋಪಿ ರಾಜೀವ್‌ನನ್ನು ಬಂಧಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್ ಆಹ್ವಾನ
ಸುದ್ದಿದಿನ ಡೆಸ್ಕ್:ಸುಪ್ರಿಯಾನ್ವಿ ಪ್ರೊಡಕ್ಷನ್ಸ್ ಸಂಸ್ಥೆಯಡಿ ಪ್ರಿಯಾ ಸುದೀಪ್ ನಿರ್ಮಿಸಿದ ಮೊದಲ ಚಿತ್ರ ‘ಮ್ಯಾಂಗೋ ಪಚ್ಚ’. ಸಂಚಿತ್ ಸಂಜೀವ್ ಅಭಿನಯದ ಈ ಚಿತ್ರ ಹೆಚ್ಚು ಸದ್ದು ಮಾಡಲಿಲ್ಲ.
ಈ ಸೋಲನ್ನು ಹಿಂದಕ್ಕೆ ಹಾಕಿ, ಪ್ರಿಯಾ ಸುದೀಪ್ ಇನ್ನಷ್ಟು ಹೊಸ ಕಥೆಗಳನ್ನು ತೆರೆಗೆ ತರುವುದಕ್ಕೆ, ಹೊಸ ಚಿತ್ರಗಳನ್ನು ನಿರ್ಮಿಸುವುದಕ್ಕೆ ಮುಂದಾಗಿದ್ದಾರೆ. ಕಥೆಗಾರರಿಗೆ ಆಹ್ವಾನ ನೀಡಿದ್ದಾರೆ. ‘ನಾವು ಹುಡುಕುತ್ತಿರುವುದು ಕೇವಲ ಕಥೆಗಳಲ್ಲ. ಮನಸ್ಸುಗಳನ್ನು ಮುಟ್ಟುವ ಭಾವನೆಗಳು, ಚಿಂತನೆಗೆ ಹಚ್ಚುವ ವಿಚಾರಗಳು ಮತ್ತು ಪರದೆಯ ಮೇಲೆ ಹೊಸ ಇತಿಹಾಸ ಬರೆಯುವ ಕಲ್ಪನೆಗಳು.
ನಿಮ್ಮ ಬಳಿ ಮೌಲಿಕ ಕಥೆ-ಚಿತ್ರಕಥೆ ಇದ್ದರೆ ಅಥವಾ ವಿಶಿಷ್ಟ ಕಥಾ ಪರಿಕಲ್ಪನೆ ಇದ್ದರೆ, ಅದನ್ನು ನಮ್ಮೊಂದಿಗೆ ಹಂಚಿಕೊಳ್ಳಿ. ತಮ್ಮದೇ ಆದ ವಿಶಿಷ್ಟ ದೃಷ್ಟಿಕೋನ ಮತ್ತು ಸೃಜನಾತ್ಮಕತೆಯನ್ನು ಹೊಂದಿರುವ ಲೇಖಕರು, ಕಥೆಗಾರರು ಮತ್ತು ಸೃಜನಶೀಲ ಮನಸ್ಸುಗಳನ್ನು ನಾವು ಸ್ವಾಗತಿಸುತ್ತೇವೆ. ಎಲ್ಲಾ ಪ್ರಕಾರಗಳು ಮತ್ತು ಎಲ್ಲಾ ಮಾದರಿಗಳಲ್ಲಿನ ಕಥಾ ಸಲ್ಲಿಕೆಗಳನ್ನು ನಾವು ಸ್ವಾಗತಿಸುತ್ತೇವೆ. ನಿಮ್ಮ ಕಥೆಯೇ ಮುಂದಿನ ದೊಡ್ಡ ಪ್ರಯಾಣದ ಆರಂಭವಾಗಬಹುದು’ ಎಂದು ಪ್ರಿಯಾ ಸುದೀಪ್, ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
ಜೊತೆಗೆ ಒಂದು ಮೊಬೈಲ್ ಸಂಖ್ಯೆಯನ್ನು ಸಹ ಹಂಚಿಕೊಂಡಿದ್ದಾರೆ. ಆದರೆ, ಕರೆ ಮಾಡುವಂತಿಲ್ಲ. ಚಾಟ್ ಮಾತ್ರ ಮಾಡಬಹುದು. ಕಥೆಗಳಿದ್ದರೆ 6663307434 ಸಂಖ್ಯೆಯನ್ನು ಸಂಪರ್ಕಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಿದ್ಯಾರ್ಥಿಗಳು ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು: ಹೆಚ್ ಎನ್ ಶಿವಕುಮಾರ್
ಸುದ್ದಿದಿನ,ರಾಣೇಬೆನ್ನೂರ: ಸಾಮಾಜಿಕ ಹಾಗೂ ಶೈಕ್ಷಣಿಕ ಜವಾಬ್ದಾರಿಗಳ ಅಗತ್ಯವು ವಿದ್ಯಾರ್ಥಿಗಳಿಗೆ ಅವಶ್ಯಕವಾಗಿದೆ. ವಿದ್ಯಾರ್ಥಿಗಳು ತಮಗೆ ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು.ಸದಾಕಾಲ ಜ್ಞಾನವನ್ನು ಪಡೆಯುವ ತನಕ ಹೊಂದಿ ಜ್ಞಾನಿಗಳಾಗುವ ಗುರಿ ಹೊಂದಲು ಬಾಪೂಜಿ ಮಹಾವಿದ್ಯಾಲಯ ಉಪ ಪ್ರಾಚಾರ್ಯರಾದ ಎಚ್ ಎನ್ ಶಿವಕುಮಾರ್ ನುಡಿದರು.
ಅವರು ಸ್ಥಳೀಯ ಬಿಎಜೆಎಸ್ಎಸ್ ಪ್ರಥಮ ದರ್ಜೆ ಕಾಲೇಜಿನ ಪ್ರತಿಭಾ ಪುರಸ್ಕಾರ, ಬಿಳ್ಕೋಡಿಗೆ ಕಾರ್ಯಕ್ರಮ ಮತ್ತು ವಿದ್ಯಾರ್ಥಿ ಒಕ್ಕೂಟದ, ಎನ್ ಎಸ್ ಎಸ್ ಚಟುವಟಿಕೆ, ಯುವ ರೆಡ್ ಕ್ರಾಸ್ ಘಟಕದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.
ವಿಶೇಷ ಅತಿಥಿಗಳಾಗಿ ಉಪಸ್ಥಿತರಿದ್ದ ಬಿಎ ಜೆಎಸ್ಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಅಧಿಕಾರಿಗಳು ಡಾ.ಆರ್ ಎಂ ಕುಬೇರಪ್ಪ ಮಾತನಾಡಿ ವಿದ್ಯೆಯನ್ನು ವಿನಯದಿಂದ ವಿದ್ಯೆಕಲಿಯಬೇಕು ಸಂಸ್ಕಾರವಂತರಾಗ ಬೇಕು, ಸಂಸ್ಕಾರ ಹೊಂದಿರುವ ವ್ಯಕ್ತಿಗಳು ಪುರಸ್ಕಾರ ಪಡೆದರೆ ಸಂಸ್ಕಾರ ಇಲ್ಲದವರು ಸಮಾಜದಲ್ಲಿ ತಿರಸ್ಕಾರಕ್ಕೆ ಒಳಗಾಗುವರು.ನಿಮ್ಮ ಬದುಕನ್ನು ನೀವೆ ಕಟ್ಟಿಕೊಳ್ಳುವ ನೆಲೆಯಲ್ಲಿ ಪ್ರಯತ್ನಿಸಬೇಕು ಎಂದು ನುಡಿದರು.
ಪ್ರಾಚಾರ್ಯರಾದ ಪ್ರಕಾಶ್ ಬಸಪ್ಪನವರ್ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಎಚ್ ಎನ್ ಭೀಕ್ಷಾವರ್ತಿಮಠ ಹಾಗೂ ಕೆ ಕೆ ಹಾವಿನಾಳ ರವರು ವಿದ್ಯಾರ್ಥಿಗಳಿಗೆ ಹಿತವಚನ ನುಡಿದರು.ಆರಂಭದಲ್ಲಿಪ್ರೋ.ಎಂ ಡಿ ಹೊನ್ನಮ್ಮನವರ ಸ್ವಾಗತಿಸಿದರು.ಪ್ರೋ.ಶ್ರೀಕಾಂತ ಕುಂಚೂರ, ಪ್ರಾಸ್ತಾವಿಕ ಮಾತನಾಡಿ ವಾರ್ಷಿಕ ವರದಿ ವಾಚಿಸಿದರು.
ಕೊನೆಯಲ್ಲಿ ಪ್ರೋ.ಪುಷ್ಟಾ ಕಬ್ಬಿನಾಲೆ ವಂದಿಸಿದರು.ಇದೆ ಸಮಾರಂಭದಲ್ಲಿ ಕ್ರೀಡೆ, ಸಾಂಸ್ಕೃತಿಕ, ಸಾಮಾಜಿಕ ಸೇವೆಗಳಲ್ಲಿವಿದ್ಯಾರ್ಥಿಗಳ ಸಾಧನೆ ಗುರುತಿಸಿ ಪುರಸ್ಕಾರ ಮಾಡಲಾಯಿತು.ವರ್ಷದ ಮಹಾವಿದ್ಯಾಲಯ ಉತ್ತಮ ವಿದ್ಯಾರ್ಥಿಗಳನ್ನು ಗುರುತಿಸಿ ಪುರಸ್ಕಾರ ಪ್ರದಾನ ಮಾಡಲಾಯಿತು.ವಿವಿಧ ವಿಷಯದ ಉಪನ್ಯಾಸಕರು, ವಿದ್ಯಾರ್ಥಿಗಳು, ಸಿಬ್ಬಂದಿ ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ24 hours agoನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್ ಆಹ್ವಾನ
-
ದಿನದ ಸುದ್ದಿ21 hours agoಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ
-
ದಿನದ ಸುದ್ದಿ2 days agoದುರಂತ | ಮೇಲ್ಛಾವಣಿ ಕುಸಿದು ಮೂವರು ಸಾವು
-
ದಿನದ ಸುದ್ದಿ2 days agoಪಲ್ಸ್ ಪೋಲಿಯೋದಿಂದ ಯಾವುದೇ ಮಗು ವಂಚಿತವಾಗದಂತೆ ಕ್ರಮವಹಿಸಿ: ಜಿ.ಪಂ. ಸಿಇಒ ಗಿತ್ತೆ ಮಾಧವ ವಿಠ್ಠಲರಾವ್


