ದಿನದ ಸುದ್ದಿ
‘ಕನ್ನಡ ಪುಸ್ತಕ ಸೊಗಸು’ ಬಹುಮಾನಕ್ಕೆ ಕೃತಿಗಳ ಆಹ್ವಾನ
ಸುದ್ದಿದಿನ, ಬೆಂಗಳೂರು: ಕನ್ನಡ ಪುಸ್ತಕ ಪ್ರಾಧಿಕಾರವು 2019ರ ಜನವರಿಯಿಂದ ಡಿಸೆಂಬರ್ ಮಾಹೆಯ ಅವಧಿಯಲ್ಲಿ ಕನ್ನಡದಲ್ಲಿ ಪ್ರಕಟವಾದ ಕೃತಿಗಳಿಗೆ ಅವುಗಳ ಮುದ್ರಣ, ಮುಖಪುಟ ವಿನ್ಯಾಸ, ಗುಣಮಟ್ಟವನ್ನು ಪರಿಗಣಿಸಿ, ಆಯ್ಕೆಯಾದ ಕೃತಿಗಳ ಪ್ರಕಾಶಕರು, ಮುದ್ರಕರು, ಕಲಾವಿದರಿಗೆ ಕನ್ನಡ ಪುಸ್ತಕ ಸೊಗಸು-2019 ಬಹುಮಾನವನ್ನು ನೀಡಲು ಉದ್ದೇಶಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತ ಪ್ರಕಾಶಕರು, ಮುದ್ರಕರು, ಕಲಾವಿದರು, ಲೇಖಕರುಗಳು ಸ್ವಯಂ ಅರ್ಜಿ ಸಲ್ಲಿಸಬಹುದಾಗಿದೆ. ಪುಸ್ತಕದ ಹೆಸರು, ಲೇಖಕರ ಹೆಸರು, ಪ್ರಕಟವಾದ ವರ್ಷ, ಪ್ರಕಾಶಕರ ಹೆಸರು, ಮುದ್ರಣಾಲಯದ ಹೆಸರು, ಮುಖಪುಟ ಚಿತ್ರ ರಚನೆಯ ಕಲಾವಿದರ ಹೆಸರು, ಚಿತ್ರ ಕಲಾವಿದರ ಪೂರ್ಣ ವಿಳಾಸ ಮತ್ತಿತರ ಎಲ್ಲಾ ವಿವರಗಳೊಂದಿಗೆ ಪುಸ್ತಕದ ಎರಡು ಪ್ರತಿಗಳನ್ನು ಏಪ್ರಿಲ್ 04ರೊಳಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡಭವನ, ಜೆ.ಸಿ.ರಸ್ತೆ, ಬೆಂಗಳೂರು-2 ವಿಳಾಸಕ್ಕೆ ಕಳುಹಿಸಿಕೊಡಬಹುದಾಗಿದೆ.
ಮಾಹಿತಿಗಾಗಿ ಪ್ರಾಧಿಕಾರದ ಜಾಲತಾಣ www.kannadapustakapradhikara.comನ್ನು ಅಥವಾ ದೂರವಾಣಿ ಸಂಖ್ಯೆ 080-22484516, 22107704ನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ.ಕಿರಣ್‍ಸಿಂಗ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.