Connect with us

ದಿನದ ಸುದ್ದಿ

ಬುದ್ಧರ ಬೋಧನೆಯ ಮಧ್ಯಮ ಮಾರ್ಗ

Published

on

  • ರಘೋತ್ತಮ ಹೊ.ಬ

ಗವಾನ್ ಬುದ್ಧನ ಬೋಧನೆಯ ಪ್ರಮುಖ ಅಂಶವೇನು? ಹೀಗೊಂದು ಪ್ರಶ್ನೆ ಇಟ್ಟರೆ ಎಲ್ಲರೂ ಕಣ್ಣುಮುಚ್ಚಿಕೊಂಡು ಹೇಳುವ ಉತ್ತರ ‘ಆಸೆಯೇ ದುಃಖಕ್ಕೆ ಮೂಲ’ ಎಂದು. ಇದು ಎಷ್ಟು ಸರಿ? ಬುದ್ಧನ ಬೋಧನೆ ಇಷ್ಟೊಂದು ಸರಳವೇ ಅಥವ ಆಸೆಯೇ ಬೇಡವೆನ್ನುವಷ್ಟು ಅತಿಯದ್ದೆ? ಖಂಡಿತ, ಇದೊಂದು ಬುದ್ಧನ ಬೋಧನೆಗೆ ಎಸಗುತ್ತಿರುವ ಅಪಪ್ರಚಾರ. ಹಾಗಿದ್ದರೆ ವಾಸ್ತವ? ಬುದ್ಧ ಹೇಳಿದ್ದು “ಆಸೆಯೇ ಬೇಡ ಎನ್ನುವ ಅತಿಯೂ ಅಲ್ಲದ, ಆಸೆಯೇ ತುಂಬಿರಬೇಕು ಎಂಬ ಆ ಅತಿಯೂ ಅಲ್ಲದ ಎರಡರ ನಡುವಿನ ಮಧ್ಯಮ ರೀತಿ”ಯದ್ದು. ಅದೇ ಮಧ್ಯಮ ಮಾರ್ಗ. ಪಾಳಿ ಬಾಷೆಯಲ್ಲಿ ಹೇಳುವುದಾದರೆ ‘ಮಜ್ಜಿಮ ಪತಿಪಾದ’.

ಮಧ್ಯಮ ಮಾರ್ಗ, ಹಾಗಿದ್ದರೆ ಇದು ಏನು? ಇದಕ್ಕೆ ಬುದ್ಧ ಕೊಡುವ ಉದಾಹರಣೆ “ಕೆಲವರು ಹೇಳುತ್ತಾರೆ ನಾಳೆಯೇ ನಾವು ಸಾಯುವುದರಿಂದ ಇಂದೇ ಕುಡಿದು ತಿಂದು ಮಜಾ ಮಾಡಿಬಿಡೋಣ. ಮತ್ತೂ ಕೆಲವರು ಹೇಳುತ್ತಾರೆ ಎಲ್ಲ ಆಸೆಗಳನ್ನು ಬಲಿಕೊಡೋಣ. ಯಾಕೆಂದರೆ ಅವು ಮರುಜನ್ಮ ತರುತ್ತವೆ”. ಬುದ್ಧ ಇವೆರಡನ್ನು ತಿರಸ್ಕರಿಸಿದ.

ಇದಕ್ಕೆ ಆತ ನೀಡಿದ ಕಾರಣ ಇವೆರಡೂ ಮಾನವ ಪರಿಪೂರ್ಣತೆ ಪಡೆಯುವುದಕ್ಕೆ ತೊಡಕಾಗುತ್ತವೆ ಎಂದು. ಅಂದರೆ “ಕುಡಿದು ತಿಂದು ಸಾಯುವ ಅತಿಯೂ ತಪ್ಪು, ಹಾಗೆಯೇ ಎಲ್ಲವನ್ನು ತ್ಯಜಿಸುವ ಆ ಅತಿಯೂ ತಪ್ಪು”. ಹಾಗಿದ್ದರೆ ಇವೆರಡರ ನಡುವಿನ ಮಧ್ಯಮದ್ದು ಎಂದರೆ? ಬುದ್ಧ ಹೇಳಿದ್ದು “ನಿನ್ನ ದೇಹದ ಅಗತ್ಯಕ್ಕೆ ತಕ್ಕಂತೆ ಕುಡಿ, ತಿನ್ನು. ಹಾಗೆಯೇ ಆಸೆಯನ್ನು ತ್ಯಜಿಸಬೇಡ. ಬದಲಿಗೆ ನಿನ್ನನ್ನು ನೀನು ನಿಯಂತ್ರಣದಲ್ಲಿಟ್ಟುಕೋ”.

ಅಂದಹಾಗೆ ಬುದ್ಧನ ಈ ಮಧ್ಯಮ ಮಾರ್ಗ ಇಷ್ಟೊಂದು ಸರಳವೇ? ಅಥವಾ ಅದರಲ್ಲಿ ಬೇರೇನು ಇಲ್ಲವೆ? ನಿಜ ಹೇಳಬೇಕೆಂದರೆ ಮಧ್ಯಮ ಮಾರ್ಗ ಎನ್ನುತ್ತಲೇ ಬುದ್ಧ ಮಾನವ ಪರಿಪೂರ್ಣತೆಯ ಮಾರ್ಗವನ್ನು ಪರಿಚಯಿಸುತ್ತಾ ಹೋಗುತ್ತಾನೆ. ಈ ಹಿನ್ನೆಲೆಯಲ್ಲಿ ಆತ “ತನ್ನ ಧರ್ಮದ ಕೇಂದ್ರ ಬಿಂದು ಮನುಷ್ಯ ಮತ್ತು ಪ್ರಾಪಂಚಿಕ ಜೀವನದಲ್ಲಿ ಮನುಷ್ಯ-ಮನುಷ್ಯರ ನಡುವಿನ ಸಂಬಂಧ” ಎಂದು ಸ್ಪಷ್ಟಪಡಿಸುತ್ತಾನೆ. ಹಾಗೆ ಹೇಳುವಾಗ ಬುದ್ಧ ಇದರ ನಡುವೆ ದೇವರುದಿಂಡಿರನ್ನು ತರುವುದಿಲ್ಲ ಎಂಬುದಿಲ್ಲಿ ಗಮನಾರ್ಹ.

ಧಮ್ಮದ ಕೇಂದ್ರ ಮನುಷ್ಯ ಯಾಕೆ? ಬುದ್ಧ ಹೇಳುವುದು “ಮನುಷ್ಯರು ದುಃಖ, ನೋವು ಮತ್ತು ಬಡತನದಲ್ಲಿ ಬದುಕುತ್ತಿದ್ದಾರೆ. ಈ ಪ್ರಪಂಚವು ನೋವಿನ ಸಾಗರದಲ್ಲಿ ಮುಳುಗಿದೆ ಮತ್ತು ಇಂತಹ ನೋವಿನಿಂದ ಪ್ರಪಂಚವನ್ನು ಹೇಗೆ ಮುಕ್ತಗೊಳಿಸಬೇಕು ಎಂಬುದೇ ನನ್ನ ಧಮ್ಮದ ಉದ್ದೇಶ. ಇದನ್ನು ಬಿಟ್ಟು ಬೇರೆ ಏನೂ ಇಲ್ಲ”. ದುಃಖ, ನೋವು, ಬಡತನದಿಂದ ಮನುಷ್ಯ ಮುಕ್ತಿ ಹೊಂದಿದಾಗ ಅಲ್ಲಿ ನೆಲೆಗೊಳ್ಳುವುದು ಸಂತಸ, ಸಂಭ್ರಮ, ಶ್ರೀಮಂತಿಕೆ ಎಂಬುದು ಕೂಡ ಇಲ್ಲಿ ಗಮನಿಸಬೇಕಾದ ಅಂಶ. ಅಂದರೆ ಮಾನವನ ನೆಮ್ಮದಿಯೇ ಬುದ್ಧನ ಧ್ಯೇಯ ಎಂಬುದು ಸ್ಪಷ್ಟ.

ಹಾಗಿದ್ದರೆ ಆ ನೆಮ್ಮದಿಯನ್ನು ಪಡೆಯಲು ಕೆಲವನ್ನಾದರೂ ತತ್ವಗಳನ್ನು ಮನುಷ್ಯರು ಆಚರಿಸಲೇಬೇಕಾಗುತ್ತದಲ್ಲವೆ? ಬುದ್ಧ ಹೇಳಿದ್ದು ಅದನ್ನೆ. ಪಂಚಶೀಲ ಎಂಬ ಆ ತತ್ವವನ್ನು. ಅದರಲ್ಲಿ ಮೊದಲನೆ ತತ್ವ ಹೇಳುವುದು “ಕೊಲೆ ಮಾಡಬೇಡ, ಯಾರನ್ನೂ ಗಾಯಗೊಳಿಸಬೇಡ”, ಎರಡನೆಯದು “ಬೇರೆಯವರಿಗೆ ಸೇರಿದ್ದನ್ನು ವಶಪಡಿಸಿಕೊಳ್ಳಬೇಡ ಅಥವಾ ಕಳ್ಳತನ ಮಾಡಬೇಡ’, ಮೂರನೆಯದು ‘ಅಸತ್ಯವನ್ನು ನುಡಿಯಬೇಡ’, ನಾಲ್ಕನೆಯದು ‘ಅತಿಯಾಸೆ ಅಥವಾ ಕಾಮಾತುರತೆಗೆ ಒಳಗಾಗಬೇಡ’ ಮತ್ತು ಐದನೆಯದು ‘ಮದ್ಯಪಾನಗಳಿಗೆ ದಾಸನಾಗಬೇಡ’.

ಬುದ್ಧರು ಈ ಐದು ತತ್ವಗಳನ್ನು ಮನುಷ್ಯನೊಬ್ಬ ತಾನು ಏನು ಮಾಡುತ್ತಿರುವೆನು ಎಂಬುದನ್ನು ನಿರ್ಧರಿಸಿಕೊಳ್ಳಲು ನಿರ್ದಿಷ್ಟ ಮಾದರಿಯಾಗಿ ಬಳಸಬೇಕು ಎಂದು ಸಲಹೆ ನೀಡುತ್ತಾರೆ. ಈ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ಎಲ್ಲವನ್ನು ಕಳೆದುಕೊಂಡಿದ್ದರೆ ಆಗ ಆತ ಮೇಲಿನ ಐದು ಶೀಲಗಳನ್ನು ಮಾದರಿಯಾಗಿಟ್ಟುಕೊಂಡು ತನ್ನನ್ನು ತಾನು ಗಮನಿಸಕೊಳ್ಳಬೇಕಾಗುತ್ತದೆ. ಈ ಐದು ಶೀಲಗಳನ್ನು ಅಥವ ತತ್ವಗಳನ್ನು ಆತ ಪಾಲಿಸುತ್ತಿಲ್ಲವೆಂದರೆ ಆಗ ಆತ ತನನ್ನು ತಾನು ಕಳೆದುಕೊಳ್ಳುತ್ತಿದ್ದಾನೆ ಎಂದೂ… ಇದನ್ನು ಗಮನಿಸಿ ಆತ ಪಾಲಿಸಲು ಪ್ರಾರಂಭಿಸಿದರೆ ಆಗ ಆತ ತನ್ನನ್ನು ತಾನು ನಿಯಂತ್ರಣದಲ್ಲಿಟ್ಟುಕೊಳ್ಳುತ್ತಿದ್ದಾನೆ ಎಂದರ್ಥ. ಅಂದಹಾಗೆ ಆತ ಹೀಗೆ ತನ್ನನ್ನು ತಾನು ನಿಯಂತ್ರಣದಲ್ಲಿಟ್ಟುಕೊಂಡರೆ ಆಗ ಆತ ಬುದ್ಧನ ಮಧ್ಯಮಾರ್ಗದಲ್ಲಿದ್ದಾನೆ ಅಥವ ಬುದ್ಧನನ್ನು ಅನುಸರಿಸುತ್ತಿದ್ದಾನೆ ಎಂದೇ ಅರ್ಥ.

ಮುಂದುವರಿದು ತನ್ನ ಈ ಮಧ್ಯಮಮಾರ್ಗಕ್ಕೆ ಪೂರಕವಾಗಿ ಬುದ್ಧ ಮತ್ತೊಂದು ಮಾರ್ಗವನ್ನು ಬೋಧಿಸುತ್ತಾರೆ. ಅದೇ ಅಷ್ಠಾಂಗ ಮಾರ್ಗ ಅಥವ ಎಂಟು ಶೇಷ್ಠ ಗುಣಗಳ ಮಾರ್ಗ. ಅವುಗಳೆಂದರೆ,

  1. ಸರಿಯಾದ ದೃಷ್ಟಿ: ಅಂದರೆ ಅಜ್ಞಾನದ ನಾಶವೇ ಸರಿಯಾದ ದೃಷ್ಟಿ. ಇದಕ್ಕೆ ವಿರುದ್ಧವಾದದ್ದು ಮಿಥ್ಯಾ ದೃಷ್ಟಿ.
  2. ಸರಿಯಾದ ಸಂಕಲ್ಪ: ಅಂದರೆ ಆಸೆ ಆಕಾಂಕ್ಷೆಗಳು ಶ್ರೇಷ್ಠ ಮಟ್ಟದ್ದಾಗಿರಬೇಕು, ಕೀಳು ದರ್ಜೆಯದ್ದಾಗಿರಬಾರದು.
  3. ಸರಿಯಾದ ಮಾತು: ಅಂದರೆ ನಾವಾಡುವ ಮಾತು ಬೇರೆಯವರ ಮನಸ್ಸನ್ನು ನೋಯಿಸದಂತಿರಬಾರದು.
  4. ಸರಿಯಾದ ವರ್ತನೆ: ನಮ್ಮ ವರ್ತನೆ ಬೇರೆಯವರ ಭಾವನೆಗಳನ್ನು ಗೌರವಿಸುವಂತಿರಬೇಕು
  5. ಸರಿಯಾದ ಸಂಪಾದನೆಯ ಮಾರ್ಗ: ವ್ಯಕ್ತಿಯೊಬ್ಬ ಅನ್ಯಾಯದ, ಬೇರೆಯವರಿಗೆ ನೋವು ತರುವ ಸಂಪಾದನೆಯ ಮಾರ್ಗವನ್ನು ಅನುಸರಿಸಬಾರದು.
  6. ಸರಿಯಾದ ಪ್ರಯತ್ನ: ಮನಸ್ಸಿನ ಅಜ್ಞಾನವನ್ನು ನಿರ್ಮೂಲನೆಗೊಳಿಸಿಕೊಳ್ಳುವ ಪ್ರಯತ್ನ.
  7. ಸರಿಯಾದ ಜಾಗ್ರತೆ: ಕೆಡುಕಿನ ವಿರುದ್ಧ ಮನಸ್ಸು ಸದಾ ಎಚ್ಚರದಿಂದಿರುವುದು.
  8. ಸರಿಯಾದ ಏಕಾಗ್ರತೆ: ಧನಾತ್ಮಕ ಧ್ಯಾನಸ್ಥ ಮನಸ್ಥಿತಿ

ಈ ಹಿನ್ನೆಲೆಯಲ್ಲಿ ಮನುಷ್ಯನ ಶ್ರೇಯಸ್ಸೇ, ಆತ ಉತ್ತಮ ಬದುಕನ್ನು ಹೊಂದುವಂತಾಗುವುದೇ ಬುದ್ಧನ ಬೋಧನೆಯ ಈ ಅಷ್ಟಾಂಗ ಮಾರ್ಗಗಳ, ಪಂಚಶೀಲಗಳ, ಒಟ್ಟಾರೆ ಮಧ್ಯಮ ಮಾರ್ಗದ ತಿರುಳು. ಈ ತಿರುಳನ್ನು ಅರ್ಥಮಾಡಿಕೊಂಡರೆ ಬುದ್ಧ ಅರ್ಥವಾಗುತ್ತಾನೆ. ಹಾಗೆಯೇ ಜಗತ್ತು ಕೂಡ ಅರ್ಥವಾಗುತ್ತದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸೋಶಿಯಲ್ ಮೀಡಿಯಾ ಪೋಸ್ಟ್‌ಗೆ ಕೇಸ್‌, ಉಡುಪಿಯಿಂದ ವ್ಯಕ್ತಿಯನ್ನು ಠಾಣೆಗೆ ಕರೆತಂದ ಕ್ರಮಕ್ಕೆ ಹೈಕೋರ್ಟ್‌ ಗರಂ

Published

on

Kunal Kamra Show Row: ‘ವೈಟ್‌ಫೀಲ್ಡ್‌ ಅಲ್ಲ, ಡಾರ್ಕ್‌ಫೀಲ್ಡ್‌ ಮಾಡಿ’! ಪೊಲೀಸರಿಗೆ ಹೈಕೋರ್ಟ್‌ ಫುಲ್ ಕ್ಲಾಸ್

ಸುದ್ದಿದಿನ,ಬೆಂಗಳೂರು: ಹಾಸ್ಯ ಕಲಾವಿದ ಕುನಾಲ್‌ ಕಾಮ್ರಾ ಕಾರ್ಯಕ್ರಮ ರದ್ದಾದ ವಿಚಾರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ವ್ಯಕ್ತಿಯನ್ನು ವಿಚಾರಣೆ ಹೆಸರಿನಲ್ಲಿ ಠಾಣೆಗೆ ಕರೆತಂದ ವೈಟ್‌ಫೀಲ್ಡ್ ಪೊಲೀಸರ ಕ್ರಮಕ್ಕೆ ಕರ್ನಾಟಕ ಹೈಕೋರ್ಟ್‌ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಪ್ರಕರಣ ರದ್ದು ಕೋರಿ ಮೋಹನ್‌ಗೌಡ ಸಲ್ಲಿಸಿರುವ ಅರ್ಜಿ ವಿಚಾರಣೆ ವೇಳೆ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಪೊಲೀಸ್ ಅಧಿಕಾರಿಗಳನ್ನು ಖಾರವಾಗಿ ಪ್ರಶ್ನಿಸಿದೆ.

http://Visit : www.suddidina.com

ನ್ಯಾಯಾಲಯದ ಮುಂದೆ ಡಿಸಿಪಿ ಸೈದುಲು ಅಡಾವತ್‌, ಎಸಿಪಿ ರೀನಾ ಸುವರ್ಣ ಹಾಗೂ ತನಿಖಾಧಿಕಾರಿ ಹಾಜರಾಗಿದ್ದರು. ಈ ವೇಳೆ ಪೊಲೀಸ್ ಠಾಣೆಯ ಕಾರ್ಯವೈಖರಿ, ಬಂಧನದ ಕ್ರಮ ಮತ್ತು ಸಾಮಾಜಿಕ ಜಾಲತಾಣದ ಪೋಸ್ಟ್‌ಗಳ ಆಧಾರದ ಮೇಲೆ ಪ್ರಕರಣ ದಾಖಲಿಸಿರುವ ಬಗ್ಗೆ ನ್ಯಾಯಪೀಠ ಹಲವು ಪ್ರಶ್ನೆಗಳನ್ನು ಕೇಳಿತು.

‘ವೈಟ್‌ಫೀಲ್ಡ್‌ ಠಾಣೆ ಡಾರ್ಕ್‌ಫೀಲ್ಡ್‌ ಆಗಲಿ’

ವೈಟ್‌ಫೀಲ್ಡ್‌ ಠಾಣೆಯಲ್ಲಿ ವಿದ್ಯುತ್ ಹಾಗೂ ಸಿಸಿಟಿವಿ ವ್ಯವಸ್ಥೆ ಕುರಿತ ವಿಚಾರವನ್ನೂ ನ್ಯಾಯಪೀಠ ಪ್ರಸ್ತಾಪಿಸಿತು. ಠಾಣೆಯ ಚಟುವಟಿಕೆಗಳೇ ಅಂಧಕಾರದಲ್ಲಿವೆ ಎಂದು ವ್ಯಂಗ್ಯವಾಡಿದ ನ್ಯಾಯಮೂರ್ತಿಗಳು, ‘ವೈಟ್‌ಫೀಲ್ಡ್‌ ಠಾಣೆಯನ್ನು ಡಾರ್ಕ್‌ಫೀಲ್ಡ್‌ ಠಾಣೆಯನ್ನಾಗಿ ಬದಲಾಯಿಸಿಕೊಳ್ಳಿ’ ಎಂದು ಕಿಡಿಕಾರಿದರು.

ಉಡುಪಿಗೆ ತೆರಳಿ ಮೋಹನ್‌ಗೌಡರನ್ನು ವಶಕ್ಕೆ ಪಡೆದಿದ್ದೇಕೆ, ಬೆಳಗಿನ ಜಾವ 2 ಗಂಟೆಗೆ ಎಫ್‌ಐಆರ್‌ ದಾಖಲಿಸಿ ಕ್ರಮ ಕೈಗೊಂಡಿದ್ದೇಕೆ ಎಂಬುದರ ಕುರಿತು ಅಧಿಕಾರಿಗಳಿಂದ ನ್ಯಾಯಪೀಠ ವಿವರಣೆ ಕೇಳಿತು.

ಡಿಸಿಪಿ ಪರವಾಗಿ, ಮೋಹನ್‌ಗೌಡ ಹಲವು ಟ್ವೀಟ್‌ಗಳನ್ನು ಮಾಡಿದ್ದರು. ಅವರನ್ನು ಬಂಧಿಸಿರಲಿಲ್ಲ, ಫೋನ್‌ ಮಾಡಿದರೂ ಪ್ರತಿಕ್ರಿಯಿಸದ ಹಿನ್ನೆಲೆಯಲ್ಲಿ ಅವರು ಕಾರಿನಲ್ಲಿ ಬಂದಿದ್ದರು. ಹೇಳಿಕೆ ಪಡೆದು ಕಳುಹಿಸಲಾಗಿದೆ ಎಂದು ಉತ್ತರಿಸಲಾಯಿತು.

‘ಯೂನಿಫಾರ್ಮ್ ಇದ್ದರೆ ಏನು ಬೇಕಾದರೂ ಮಾಡಬಹುದೇ?’

ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ ಮಾತ್ರಕ್ಕೆ ಪೊಲೀಸರು ಮನಬಂದಂತೆ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂದು ನ್ಯಾಯಪೀಠ ಸ್ಪಷ್ಟಪಡಿಸಿತು. ಯೂನಿಫಾರ್ಮ್‌ ಧರಿಸಿರುವ ಕಾರಣಕ್ಕೆ ನಾಗರಿಕರ ಸ್ವಾತಂತ್ರ್ಯ ಕಸಿಯಲು ಸಾಧ್ಯವಿಲ್ಲ ಎಂದು ಕೋರ್ಟ್‌ ಎಚ್ಚರಿಸಿತು.

ಸಾಮಾಜಿಕ ಜಾಲತಾಣದ ಪೋಸ್ಟ್‌ಗಳ ಕುರಿತು ಕ್ರಮ ಕೈಗೊಳ್ಳುವಾಗ ಸುಪ್ರೀಂಕೋರ್ಟ್‌ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಪೊಲೀಸರು ತಮ್ಮನ್ನು ತಾವೇ ಕಾನೂನು ಎಂದು ಭಾವಿಸಬಾರದು. ಬಂಧನದ ಅಧಿಕಾರವನ್ನು ವಿವೇಚನೆಯಿಲ್ಲದೆ ಬಳಸಬಾರದು ಎಂದು ನ್ಯಾಯಪೀಠ ತಿಳಿಸಿತು.

ಪೊಲೀಸ್ ಠಾಣೆಗಳಲ್ಲಿ CCTV ಆಡಿಟ್‌ಗೆ ಸೂಚನೆ

ರಾಜ್ಯದ ಎಲ್ಲ ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ ವ್ಯವಸ್ಥೆ ಮತ್ತು ಯುಪಿಎಸ್‌ ಬ್ಯಾಕಪ್‌ 24 ಗಂಟೆಯೂ ಕಾರ್ಯನಿರ್ವಹಿಸುತ್ತಿದೆಯೇ ಎಂಬುದನ್ನು ಪರಿಶೀಲಿಸಲು ರಾಜ್ಯಮಟ್ಟದ ಆಡಿಟ್‌ ನಡೆಸುವಂತೆ ಪೊಲೀಸ್ ಮಹಾನಿರ್ದೇಶಕರಿಗೆ ನ್ಯಾಯಪೀಠ ನಿರ್ದೇಶನ ನೀಡಿದೆ.

ಅಧಿಕಾರ ದುರುಪಯೋಗ ಅಥವಾ ನ್ಯಾಯಾಲಯದ ಆದೇಶ ಉಲ್ಲಂಘನೆ ಕಂಡುಬಂದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಇಲಾಖಾ ತನಿಖೆ ನಡೆಸಬೇಕು. ಪೊಲೀಸ್ ಠಾಣೆಗಳಲ್ಲಿ ಸುಪ್ರೀಂಕೋರ್ಟ್‌ ತೀರ್ಪುಗಳ ಕುರಿತು ಅರಿವು ಮೂಡಿಸಬೇಕು ಎಂದು ಸೂಚಿಸಿರುವ ನ್ಯಾಯಾಲಯ, ವಿಚಾರಣೆಯನ್ನು ಸೆಪ್ಟೆಂಬರ್‌ 25ಕ್ಕೆ ಮುಂದೂಡಿದೆ.

ಪ್ರಕರಣದ ಹಿನ್ನೆಲೆ

ಕುನಾಲ್‌ ಕಾಮ್ರಾ ಶೋ ವಿರೋಧಿಸಿ ದೂರುಗಳು ಬಂದ ಹಿನ್ನೆಲೆಯಲ್ಲಿ ಕಾರ್ಯಕ್ರಮ ರದ್ದಾಗಿತ್ತು. ಈ ಬೆಳವಣಿಗೆಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ಮೋಹನ್‌ಗೌಡ ವಿರುದ್ಧ ವೈಟ್‌ಫೀಲ್ಡ್ ಪೊಲೀಸರು ಪ್ರಕರಣ ದಾಖಲಿಸಿದ್ದರು. ಉಡುಪಿಯಿಂದ ಅವರನ್ನು ಠಾಣೆಗೆ ಕರೆತಂದು ವಿಚಾರಣೆ ನಡೆಸಿದ್ದ ಕ್ರಮ ಪ್ರಶ್ನಿಸಿ ಅವರು ಹೈಕೋರ್ಟ್‌ ಮೊರೆ ಹೋಗಿದ್ದರು.

Continue Reading

ದಿನದ ಸುದ್ದಿ

ಗೃಹಲಕ್ಷ್ಮೀ ಯೋಜನೆಯಲ್ಲಿ ಮಹತ್ವದ ಬದಲಾವಣೆ: ಅರ್ಹ ಫಲಾನುಭವಿಗಳ ಖಚಿತತೆಗೆ ಮನೆ-ಮನೆ ಪರಿಶೀಲನೆ

Published

on

Gruha Lakshmi Scheme: ಗೃಹಲಕ್ಷ್ಮೀ ಫಲಾನುಭವಿಗಳಿಗೆ ಬಯೋಮೆಟ್ರಿಕ್‌, ಫೇಸ್‌ ವೆರಿಫಿಕೇಷನ್ ಕಡ್ಡಾಯ; ಮನೆ-ಮನೆ ಸಮೀಕ್ಷೆಗೆ ಸರ್ಕಾರದ ಆದೇಶ!

ಸುದ್ದಿದಿನ,ಬೆಂಗಳೂರು: ರಾಜ್ಯದ ಮಹಿಳೆಯರಿಗೆ ಆರ್ಥಿಕ ನೆರವು ನೀಡುವ ಗೃಹಲಕ್ಷ್ಮೀ ಯೋಜನೆಯಲ್ಲಿ ಸರ್ಕಾರ ಮಹತ್ವದ ಪರಿಶೀಲನಾ ಕ್ರಮಕ್ಕೆ ಮುಂದಾಗಿದೆ. ಅರ್ಹ ಫಲಾನುಭವಿಗಳಿಗೆ ಮಾತ್ರ ಯೋಜನೆಯ ಪ್ರಯೋಜನ ತಲುಪಬೇಕು ಎಂಬ ಉದ್ದೇಶದಿಂದ, ಎಲ್ಲಾ ಫಲಾನುಭವಿಗಳ ಬಯೋಮೆಟ್ರಿಕ್‌ ಮತ್ತು ಮುಖಚಹರೆ ದೃಢೀಕರಣವನ್ನು ಕಡ್ಡಾಯಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಪ್ರಕ್ರಿಯೆಯನ್ನು ವಿದ್ಯುನ್ಮಾನ ನಾಗರಿಕ ಸೇವಾ ವಿತರಣಾ (ಇಡಿಸಿಎಸ್‌) ನಿರ್ದೇಶನಾಲಯ ಅಭಿವೃದ್ಧಿಪಡಿಸಿರುವ ಮೊಬೈಲ್‌ ಆ್ಯಪ್‌ ಮೂಲಕ ಕೈಗೊಳ್ಳಲಾಗುತ್ತದೆ.

http://Visit : www.suddidina.com

ಮನೆ-ಮನೆ ಸಮೀಕ್ಷೆಯ ಜತೆಗೆ ಗ್ರಾಮ ಒನ್‌, ಕರ್ನಾಟಕ ಒನ್‌, ಬೆಂಗಳೂರು ಒನ್‌ ಮತ್ತು ಬಾಪೂಜಿ ಸೇವಾ ಕೇಂದ್ರಗಳ ಮೂಲಕವೂ ಪರಿಶೀಲನಾ ಪ್ರಕ್ರಿಯೆ ನಡೆಸಲು ವ್ಯವಸ್ಥೆ ಮಾಡಲಾಗಿದೆ. ಸರ್ಕಾರ ನಿಗದಿಪಡಿಸಿರುವ ಪ್ರಮಾಣಿತ ಕಾರ್ಯಾಚರಣಾ ಕಾರ್ಯವಿಧಾನ (SOP) ಪ್ರಕಾರವೇ ಫಲಾನುಭವಿಗಳ ಮರುಪರಿಶೀಲನೆ ನಡೆಯಬೇಕು ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

ಒಂದು ತಿಂಗಳಲ್ಲಿ ಕ್ಷೇತ್ರ ಪರಿಶೀಲನೆ ಪೂರ್ಣಗೊಳಿಸಲು ಸೂಚನೆ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಗತ್ಯ ಮಾದರಿ ನಮೂನೆಗಳನ್ನು ಸಿದ್ಧಪಡಿಸಲಿದೆ. ಮಾಸ್ಟರ್‌ ತರಬೇತುದಾರರ ಮೂಲಕ ಕ್ಷೇತ್ರ ಗಣತಿದಾರರಿಗೆ ತರಬೇತಿ ನೀಡಲಾಗುತ್ತದೆ. ಆಗಸ್ಟ್‌ 30ರಿಂದ ಒಂದು ತಿಂಗಳೊಳಗೆ ಕ್ಷೇತ್ರ ಪರಿಶೀಲನಾ ಕಾರ್ಯವನ್ನು ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ.

ಜಿಲ್ಲಾ ಹಾಗೂ ತಾಲೂಕು ಗ್ಯಾರಂಟಿ ಸಮಿತಿಗಳು ಮತ್ತು ಸ್ಥಳೀಯ ಮಟ್ಟದ ಸಮಿತಿಗಳು ನಿಗದಿತ ಅವಧಿಯಲ್ಲಿ ಪರಿಶೀಲನೆ ಪೂರ್ಣಗೊಳಿಸಬೇಕು. ನಗರ ಪ್ರದೇಶಗಳಲ್ಲಿ ಕಂದಾಯ ನಿರೀಕ್ಷಕರು, ಬಿಲ್‌ ಕಲೆಕ್ಟರ್‌ಗಳು ಹಾಗೂ ಅಂಗನವಾಡಿ ಕಾರ್ಯಕರ್ತೆಯರನ್ನು ಗಣತಿದಾರರನ್ನಾಗಿ ಬಳಸಲಾಗುತ್ತದೆ. ಗ್ರಾಮೀಣ ಪ್ರದೇಶಗಳಲ್ಲಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳು ಮತ್ತು ಸಿಬ್ಬಂದಿಯನ್ನು ಈ ಕಾರ್ಯಕ್ಕೆ ನಿಯೋಜಿಸಲಾಗುತ್ತದೆ.

ಮನೆ ಬಾಗಿಲಿಗೆ ಬರಲಿದೆ ಪರಿಶೀಲನಾ ತಂಡ

ಫಲಾನುಭವಿಗಳ ಮನೆಗಳಿಗೆ ಕಡ್ಡಾಯವಾಗಿ ಭೇಟಿ ನೀಡುವಂತೆ ಗ್ಯಾರಂಟಿ ಸಮಿತಿ ಸದಸ್ಯರು ಹಾಗೂ ಸಿಬ್ಬಂದಿಗೆ ಸೂಚಿಸಲಾಗಿದೆ. ಫಲಾನುಭವಿ ಅಥವಾ ಕುಟುಂಬದ ಸದಸ್ಯರು ಗಣತಿ ನಮೂನೆಯನ್ನು ಭರ್ತಿ ಮಾಡಿ ಹಿಂತಿರುಗಿಸಬೇಕು. ಯಾವುದೇ ಕಾರಣಕ್ಕೂ ಮನೆ ಭೇಟಿ ತಪ್ಪಿಸಬಾರದು ಎಂದು ಆದೇಶದಲ್ಲಿ ಕಟ್ಟುನಿಟ್ಟಾಗಿ ತಿಳಿಸಲಾಗಿದೆ.

ಗಣತಿದಾರರು ಮೊಬೈಲ್‌ ಆ್ಯಪ್‌ ಮೂಲಕ ಫಲಾನುಭವಿಯ ಭಾವಚಿತ್ರ ಅಥವಾ ಮನೆಯ ಫೋಟೊ, ಜಿಪಿಎಸ್‌ ಮ್ಯಾಪಿಂಗ್‌, ಮುಖಚಹರೆ ದೃಢೀಕರಣ ಮತ್ತು ಮತದಾರರ ಗುರುತಿನ ಚೀಟಿ ವಿವರಗಳನ್ನು ಸ್ಥಳದಲ್ಲಿಯೇ ದಾಖಲಿಸಬೇಕು. ಈ ಮೂಲಕ ಫಲಾನುಭವಿಯ ಗುರುತು ಹಾಗೂ ವಾಸ್ತವಿಕ ಸ್ಥಿತಿಯನ್ನು ಪರಿಶೀಲಿಸುವ ಉದ್ದೇಶ ಹೊಂದಲಾಗಿದೆ.

ಜಿಲ್ಲಾಧಿಕಾರಿಗಳು, ಸಿಇಒಗಳಿಗೆ ಹೊಣೆ

ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ವಾರ್ಡ್‌ ಹಾಗೂ ಗ್ರಾಮವಾರು ಸ್ಪಷ್ಟ ನಿಯೋಜನೆಯೊಂದಿಗೆ ಗಣತಿದಾರರಿಗೆ ಲಿಖಿತ ಆದೇಶ ನೀಡಬೇಕು. ಪರಿಶೀಲನಾ ಪ್ರಕ್ರಿಯೆ ನಿಗದಿತ ಅವಧಿಯಲ್ಲಿ ಪೂರ್ಣಗೊಳ್ಳುವಂತೆ ಮೇಲ್ವಿಚಾರಣೆ ನಡೆಸಬೇಕಿದೆ.

ಒಟ್ಟಿನಲ್ಲಿ, ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳ ಪಟ್ಟಿಯನ್ನು ಮತ್ತಷ್ಟು ನಿಖರಗೊಳಿಸಿ, ಅರ್ಹರಿಗೆ ಮಾತ್ರ ಸರ್ಕಾರದ ನೆರವು ತಲುಪಿಸುವುದು ಈ ಮರುಪರಿಶೀಲನೆಯ ಪ್ರಮುಖ ಉದ್ದೇಶವಾಗಿದೆ. ಮನೆ-ಮನೆ ಸಮೀಕ್ಷೆ ಮತ್ತು ಡಿಜಿಟಲ್‌ ದೃಢೀಕರಣದ ಬಳಿಕ ಫಲಾನುಭವಿಗಳ ಪಟ್ಟಿಯಲ್ಲಿ ಯಾವುದೇ ಬದಲಾವಣೆಗಳಾಗಲಿವೆಯೇ ಎಂಬುದು ಮುಂದಿನ ದಿನಗಳಲ್ಲಿ ಕುತೂಹಲ ಮೂಡಿಸಿದೆ.

Continue Reading

ದಿನದ ಸುದ್ದಿ

ಬೆಂಗಳೂರು ಮೆಟ್ರೋದಲ್ಲಿ ಸುರಕ್ಷತೆಗೆ ಹೊಸ ಕವಚ: PSD ಕಾಮಗಾರಿ ಯಾವಾಗ?

Published

on

Namma Metro PSD Delay: 3ನೇ ಹಂತದ ಕೇಂದ್ರ ಒಪ್ಪಿಗೆಗೆ ಕಾಯುವ ಬೆಂಗಳೂರು; 177 ನಿಲ್ದಾಣಗಳಲ್ಲಿ ₹1,274 ಕೋಟಿ ವೆಚ್ಚದ ಸುರಕ್ಷತಾ ಯೋಜನೆ!

ಸುದ್ದಿದಿನ,ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರ ಸುರಕ್ಷತೆ ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ರೂಪಿಸಿರುವ ಪ್ಲಾಟ್‌ಫಾರ್ಮ್ ಸ್ಕ್ರೀನ್‌ ಡೋರ್‌ (PSD) ಯೋಜನೆಗೆ ಕೇಂದ್ರದ ಅನುಮೋದನೆಯ ವಿಳಂಬವೇ ದೊಡ್ಡ ಅಡ್ಡಿಯಾಗಿದೆ. ಮೆಟ್ರೋ 3ನೇ ಹಂತದ ಕೆಂಪು ಮಾರ್ಗದ ಡಿಪಿಆರ್‌ಗೆ ಕೇಂದ್ರ ಸರಕಾರದಿಂದ ಒಪ್ಪಿಗೆ ದೊರೆಯುವವರೆಗೆ PSD ಅಳವಡಿಕೆ ಕಾಮಗಾರಿ ಆರಂಭಿಸುವುದು ಕಷ್ಟವಾಗಲಿದೆ ಎಂದು ರಾಜ್ಯ ಸರಕಾರ ಸ್ಪಷ್ಟಪಡಿಸಿದೆ.

ಪ್ರಸ್ತುತ ಮತ್ತು ಭವಿಷ್ಯದ ಮೆಟ್ರೋ ಯೋಜನೆಗಳನ್ನು ಪರಿಗಣಿಸಿದರೆ ಬೆಂಗಳೂರಿನಲ್ಲಿ ಒಟ್ಟು 191 ನಿಲ್ದಾಣಗಳು ನಿರ್ಮಾಣವಾಗುವ ನಿರೀಕ್ಷೆಯಿದೆ. ಈ ಪೈಕಿ 177 ನಿಲ್ದಾಣಗಳಲ್ಲಿ PSD ಅಳವಡಿಸಲು ಬಿಎಂಆರ್‌ಸಿಎಲ್‌ ಯೋಜನೆ ರೂಪಿಸಿದೆ. ಇದಕ್ಕಾಗಿ ಅಂದಾಜು ₹1,274 ಕೋಟಿ ವೆಚ್ಚವಾಗಲಿದೆ.

ಹೈಲೈಟ್ಸ್:

  • 177 ಮೆಟ್ರೋ ನಿಲ್ದಾಣಗಳಲ್ಲಿ PSD ಅಳವಡಿಕೆ ಗುರಿ
  • ಯೋಜನೆಗೆ ಅಂದಾಜು ₹1,274 ಕೋಟಿ ವೆಚ್ಚ
  • ಕೇಂದ್ರದ 3ಎ ಹಂತದ ಅನುಮೋದನೆಗೆ PSD ಯೋಜನೆ ಜೋಡಣೆ
  • ಹಾಲಿ ನಿಲ್ದಾಣಗಳಲ್ಲಿ ರಾತ್ರಿ ವೇಳೆ ತಾಂತ್ರಿಕ ಕಾಮಗಾರಿ
  • ಹೆಬ್ಬಾಳ–ಸರ್ಜಾಪುರ 3ಎ ಯೋಜನೆಯ ಪರಿಷ್ಕೃತ ವೆಚ್ಚ ₹25,999 ಕೋಟಿ

http://Visit : www.suddidina.com

₹1,274 ಕೋಟಿ ಯೋಜನೆ: ಎಲ್ಲಿ ಎಷ್ಟು ಖರ್ಚು?

PSD ಯೋಜನೆಯ ಒಟ್ಟು ವೆಚ್ಚದಲ್ಲಿ ಸಾಮಗ್ರಿ ಖರೀದಿಗೆ ಸುಮಾರು ₹747 ಕೋಟಿ, ಸಿವಿಲ್ ಕಾಮಗಾರಿಗಳಿಗೆ ₹317 ಕೋಟಿ ಹಾಗೂ ಸಿಗ್ನಲಿಂಗ್, ಟೆಲಿಕಾಂ ಮತ್ತು ವಿದ್ಯುತ್ ವ್ಯವಸ್ಥೆಗಳ ಮಾರ್ಪಾಡಿಗೆ ₹210 ಕೋಟಿ ಮೀಸಲಿಡುವ ಪ್ರಸ್ತಾವನೆ ಇದೆ.

ಆದರೆ ಈ ಪ್ರಸ್ತಾವನೆಯನ್ನು ಕೇಂದ್ರಕ್ಕೆ ಪ್ರತ್ಯೇಕವಾಗಿ ಸಲ್ಲಿಸಲಾಗಿಲ್ಲ. ಹೆಬ್ಬಾಳ–ಸರ್ಜಾಪುರ 3ಎ ಹಂತದ ಡಿಪಿಆರ್‌ನ ಭಾಗವಾಗಿಯೇ ಕಳುಹಿಸಲಾಗಿದೆ. ಹೀಗಾಗಿ 3ಎ ಹಂತದ ಯೋಜನೆಗೆ ಕೇಂದ್ರದ ಗೃಹ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಅನುಮೋದನೆ ದೊರೆಯುವವರೆಗೆ PSD ಯೋಜನೆಗೂ ಅಂತಿಮ ಒಪ್ಪಿಗೆ ಸಿಗುವುದಿಲ್ಲ.

ಹಾಲಿ ನಿಲ್ದಾಣಗಳಲ್ಲಿ ಕಾಮಗಾರಿ ಸವಾಲು

ಹೊಸ ನಿಲ್ದಾಣಗಳಲ್ಲಿ PSD ಅಳವಡಿಕೆ ತುಸು ಸುಲಭವಾದರೂ, ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ನೇರಳೆ, ಹಸಿರು ಮತ್ತು ಹಳದಿ ಮಾರ್ಗಗಳ ನಿಲ್ದಾಣಗಳಲ್ಲಿ ಕಾಮಗಾರಿ ನಡೆಸುವುದು ಸವಾಲಿನ ಕೆಲಸವಾಗಿದೆ. ತಾಂತ್ರಿಕ ಕಾಮಗಾರಿಗಳನ್ನು ಮುಖ್ಯವಾಗಿ ರಾತ್ರಿ ವೇಳೆ, ರೈಲು ಸಂಚಾರ ಸ್ಥಗಿತಗೊಂಡ ಬಳಿಕ ನಡೆಸಬೇಕಾಗುತ್ತದೆ. ಅಗತ್ಯವಿದ್ದರೆ ರೈಲುಗಳ ವೇಗ ಕಡಿಮೆ ಮಾಡುವುದು ಅಥವಾ ಸಂಚಾರವನ್ನು ತಾತ್ಕಾಲಿಕವಾಗಿ ನಿಯಂತ್ರಿಸುವ ಪರಿಸ್ಥಿತಿಯೂ ಎದುರಾಗಬಹುದು.

ಟ್ರ್ಯಾಕ್‌ಗೆ ಇಳಿಯುವ ಘಟನೆಗಳು ಆತಂಕ

ಮೆಟ್ರೋ ನಿಲ್ದಾಣಗಳಲ್ಲಿ ಪ್ರಯಾಣಿಕರು ಟ್ರ್ಯಾಕ್‌ಗೆ ಇಳಿಯುವುದನ್ನು ತಡೆಯಲು ಈಗಾಗಲೇ ಭದ್ರತಾ ಸಿಬ್ಬಂದಿ ಹಾಗೂ ಸ್ಟೀಲ್ ಗ್ರಿಲ್‌ಗಳಂತಹ ಕ್ರಮಗಳನ್ನು ಕೈಗೊಳ್ಳಲಾಗಿದೆ. ಆದರೂ ಟ್ರ್ಯಾಕ್‌ಗೆ ಇಳಿಯುವ ಘಟನೆಗಳು ಸಂಪೂರ್ಣವಾಗಿ ನಿಂತಿಲ್ಲ. ಈ ಹಿನ್ನೆಲೆಯಲ್ಲಿ PSD ಅಳವಡಿಕೆ ಪ್ರಯಾಣಿಕರ ಸುರಕ್ಷತೆಗೆ ಮಹತ್ವದ ಹೆಚ್ಚುವರಿ ಕವಚವಾಗಬಹುದು.

3ಎ ಹಂತದ ಪರಿಷ್ಕೃತ ಡಿಪಿಆರ್‌

ಹೆಬ್ಬಾಳ–ಸರ್ಜಾಪುರ 37 ಕಿ.ಮೀ. ಕಾರಿಡಾರ್‌ನ ಪರಿಷ್ಕೃತ ಡಿಪಿಆರ್‌ ಕೇಂದ್ರದ ಅನುಮೋದನೆಗಾಗಿ ಕಾಯುತ್ತಿದೆ. ವೆಚ್ಚ ಪರಿಷ್ಕರಣೆಯ ಬಳಿಕ ಯೋಜನೆಯ ಅಂದಾಜು ₹28,405 ಕೋಟಿಯಿಂದ ₹25,999 ಕೋಟಿಗೆ ಇಳಿಕೆಯಾಗಿದೆ. ಕೇಂದ್ರದ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿಯ ಒಪ್ಪಿಗೆ ದೊರೆತ ಬಳಿಕವೇ ಮುಂದಿನ ಹಂತದ ಕಾಮಗಾರಿಗಳಿಗೆ ವೇಗ ಸಿಗಲಿದೆ.

Continue Reading

Trending