ಬಹಿರಂಗ
ಬುದ್ಧನನ್ನು ಕೊಂದ ಬ್ರಾಹ್ಮಣರು..!
- ವಿ.ಎಸ್. ಬಾಬು
ಮೌರ್ಯವಂಶದ ಕೊನೆಯ ದೊರೆಯಾದ ಬ್ರಹದ್ರಥ ಮೌರ್ಯನನ್ನು ಸೇನಾಪತಿ ಪುಶ್ಯಮಿತ್ರ ಶುಂಗನೆಂಬ ಸಾಮವೇದಿ ಬ್ರಾಹ್ಮಣರು ಕೊಂದು ಶುಂಗ ಸಾಮ್ರಾಜ್ಯವನ್ನು ಕಟ್ಟಿದ. ಅಂದಿನಿಂದ ಪ್ರಾರಂಭವಾಗಿದ್ದು ಶುಂಗ ಸಾಮ್ರಾಜ್ಯ. ಮೌರ್ಯ ಸಾಮ್ರಾಜ್ಯದ ಶ್ರೇಷ್ಠ ಮೌಲ್ಯಗಳನ್ನು ನಾಶಪಡಿಸಿ ಮತ್ತೆ ಆರ್ಯರ ಕುಲಾಚಾರಗಳನ್ನು ವಿಧಿವತ್ತಾಗಿ ಜಾರಿಗೆ ತಂದವನು ಈ ಪುಶ್ಯಮಿತ್ರ ಶುಂಗ ಯಾವ ಧರ್ಮ ಇಡೀ ಜಗತ್ತಿಗೆ ಬೆಳಕು ತೋರುವ ಧರ್ಮವಾಗಿ ಸತ್ಯ, ಅಹಿಂಸೆ, ಕರುಣೆ ಜಗತ್ತಿಗೆ ಶಾಶ್ವತವಾಗಿ ಕೊಟ್ಟು, ಪ್ರೀತಿಯಿಂದಲೇ ಜಗತ್ತನ್ನು ಗೆದ್ದಿತೋ ‘ನಿನಗೆ ನೀನೇ ಬೆಳಕಾಗು’ ಎಂದು ಬೋಧಿಸಿತ್ತೋ ಬೌದ್ಧ ಧರ್ಮದ ಅವನತಿ ಪ್ರಾರಂಭವಾಗಿದ್ದು ಇದೇ ಪುಶ್ಯಮಿತ್ರ ಶುಂಗನ ಆಡಳಿತ ಪ್ರಾರಂಭವಾದ ಮೇಲೆ.
ಯಾವ ಯಜ್ಞಯಾಗಗಳನ್ನು ಬಹಿಷ್ಕರಿಸಿ, ಅನಾಗರಿಕ ಆಚಾರಗಳಿಗೇ, ವ್ಯಭಿಚಾರಕ್ಕೆ ಮುಂಬರುವ ಕೊನೆ ಹಾಡಿದ್ದರೋ ಅವೆಲ್ಲವನ್ನೂ ವಿಧಿವತ್ತಾಗಿ ಪುಶ್ಯಮಿತ್ರ ಶುಂಗನು ಜಾರಿಗೆ ತಂದನು. ಸುಮಾರು 90 ಅಶ್ವಮೇಧ ಯಾಗಗಳನ್ನು ಮಾಡುವ ಮೂಲಕ ಅಧಿಕಾರ ಸ್ವೀಕರಿಸಿದ ಪುಶ್ಯಮಿತ್ರನ ಆಡಳಿತವನ್ನು ಖ್ಯಾತ ಇತಿಹಾಸಕಾರರಾದ Vincent Smith, E.J. Ropson ಮುಂತಾದವರು Revival of Brahmanism’ ಎಂದು ಹೇಳಿದ್ದಾರೆ.
ಈ ಕಾಲಘಟ್ಟವನ್ನು ಆರ್ಯರು ಬಹಳ ವಿಜೃಂಭಣೆಯಿಂದ ಕೊಂಡಾಡಲು ಪ್ರಾರಂಭಿಸಿದರು. ಇವರು ಹೇಳುವ ‘ಸುವರ್ಣ ಯುಗ’ ಎಲ್ಲರಿಗೂ ಅನ್ವಯಿಸ ತಕ್ಕದಲ್ಲ. ಕಾರಣ ಈ ಆರ್ಯರಿಗೆ ಎಲ್ಲ ಸುಖಭೋಗಗಳು ಸವಲತ್ತುಗಳು ಅನಾಯಾಸವಾಗಿ ಸಿಗುತ್ತಿದ್ದಂತಹ ಸಂದರ್ಭಗಳನ್ನು ‘ಸುವರ್ಣ ಯುಗ’ವೆಂದು ಕರೆಯುತ್ತಾರೆ. ಆದರೆ ಇಲ್ಲಿನ ಮೂಲ ನಿವಾಸಿಗಳಾದ ಬಹುಜನರಿಗೆ ಅಂತ ಕಾಲಘಟ್ಟಗಳು ‘ಕತ್ತಲ ಯುಗ’ಗಳಾಗಿವೆ.
ಪುಶ್ಯಮಿತ್ರ ಶೃಂಗನ ಆಳ್ವಿಕೆಯಲ್ಲಿ ‘ಮನುಸ್ಮೃತಿ’ಯು ರಚನೆಯಾಯಿತು. ಇದು ಆರ್ಯರ ಆಡಳಿತದಲ್ಲಿ ವಿದ್ಯುಕ್ತವಾಗಿ ಜಾರಿಗೆ ಬಂದ ಸಂವಿಧಾನವಾಯಿತು. ಇದನ್ನು ಬರೆದವನು ಸುಮತಿ ಭಾರ್ಗವನೆಂಬ ಬ್ರಾಹ್ಮಣ. ಅಂದಿನಿಂದ ವರ್ಣವ್ಯವಸ್ಥೆ ಜಾರಿಯಾಯಿತು. Vertical Order ರೂಪದಲ್ಲಿ ಸಮಾಜ ಸ್ಥಾಪನೆಯಾಗಿ ಪುಶ್ಯಮಿತ್ರ ಶೃಂಗ ಬ್ರಾಹ್ಮಣ ವಾದದ, ಬ್ರಾಹ್ಮಣ್ಯದ ಹರಿಕಾರನೆಂದು ಅಂದಿನಿಂದ ಗುರುತಿಸ್ಪಟ್ಟ ಹಾಗೆ ಜಗತ್ತಿಗೆ ಪ್ರಪ್ರಥಮವಾಗಿ ಬಂದ ಈ ಮನುಸ್ಮೃತಿಯು ‘ಈ ಧರ್ಮಶಾಸ್ತ್ರವನ್ನು ಸ್ವಯಂ ಸೃಷ್ಟಿಕರ್ತನಾದ ಬ್ರಹ್ಮನೇ ರಚಿಸಿ ಅದನ್ನು ಮೊದಲಲ್ಲಿ ನನಗೆ ಉಪದೇಶಿಸಿದನು. ಅಲ್ಲಿಂದ ಅದನ್ನು ಮರೀಚಿಗೆ, ಭೃಗು ಮುನಿ ಬಳಿಕ ಬ್ರಾಹ್ಮಣರಿಗೆ ಹೇಳಿದನು’ ಎಂಬ ಕಂತೆಬೊಂತೆಗಳಂತೆ ಕೂಡಿದ ಸಂವಿಧಾನವು ಜಾರಿಗೆ ಬಂತು.
ಅಂದ ಹಾಗೆ ಆಗ ಪ್ರಾರಂಭವಾದ ‘Hinduisation’ ಅಥವಾ ಬ್ರಾಹ್ಮಣೀಕರಣ ಇಂದಿನವರೆಗೆ ಮುಂದುವರೆದಿದೆ. ಬುದ್ಧ ಭಾರತದ ಕಾಲದಲ್ಲಿ ಭಗವಾನ್ ಬುದ್ಧರು ತಮ್ಮ ಶ್ರೇಷ್ಠ ಸಂದೇಶಗಳನ್ನು ಸಾರಿದ್ದ, ಪ್ರಸಿದ್ಧ ಬೌದ್ಧ ಕೇಂದ್ರಗಳಾಗಿದ್ದ ಕಾಶಿ, ಮಥುರಾ, ವಾರಣಾಸಿ, ಗಯಾ ಮುಂತಾದ ಸ್ಥಳಗಳು ಧ್ಯಾನಕ್ಕೆ, ಶಾಂತಿಗೆ, ವಿದ್ಯೆಗೆ ಜಗತ್ತಿನಾದ್ಯಂತ ಮನ್ನಣೆ ಪಡೆದಿದ್ದವು. ಲಕ್ಷಾಂತರ ಬೌದ್ಧ ವಿಹಾರಗಳು ಪ್ರತಿಭಾ ಕೇಂದ್ರಗಳಾಗಿ, ಸಕಲ ವಿದ್ಯೆಗಳಲ್ಲೂ ಪರಿಣಿತಿ ಹೊಂದಿದ್ದರು ಲಕ್ಷಾಂತರ ಗೌತಮ ಬುದ್ಧರ, ಬೌದ್ಧ ಬಿಕ್ಕುಗಳ ಪ್ರತಿಮೆಗಳು ಇಡೀ ವಿಶ್ವದ ತುಂಬಾ ಇದ್ದವು. ವಿಶ್ವ ಧರ್ಮವಾಗಿ ಬೆಳಗಿದ ಬೌದ್ಧ ಧರ್ಮವು ಅಂದು ಸಾರಿದ್ದ ಸರ್ವಕಾಲಿಕ ಸತ್ಯಗಳಿಂದ ವಿಶ್ವ ಮನ್ನಣೆ ಪಡೆದಿತ್ತು. ಸಾಮ್ರಾಟ್ ಅಶೋಕನ ಕಾಲದಲ್ಲಿ ಬೌದ್ಧ ಧರ್ಮವು ತನ್ನ ಉಚ್ಛ್ರಾಯ ಸ್ಥಿತಿಯನ್ನು ತಲುಪಿ, ಭಾರತವು ‘ಬೌದ್ಧ ಯುಗ ಸುವರ್ಣಯುಗ ಎಂದು ಪಡೆಯಿತು.
ಆದರೆ.., ಬೌದ್ಧ ಧರ್ಮದ ಅವನತಿ ಪುಶ್ಯಮಿತ್ರ ಶುಂಗನಿಂದ ಪ್ರಾರಂಭವಾಗಿ 7ನೆಯ ಶತಮಾನದಲ್ಲಿ ಶಂಕರಾಚಾರ್ಯರಿಂದ ಬೌದ್ಧಧರ್ಮ ಬೌದ್ಧ ಭಿಕ್ಕುಗಳು ಲಕ್ಷಾಂತರ ಸಂಖ್ಯೆಯಲ್ಲಿ ಕೊಲ್ಲಲ್ಪಡುವ ಮಟ್ಟಕ್ಕೆ ತಲುಪಿತು. ಸ್ವತಹ ಶಂಕರಾಚಾರ್ಯರು ಕ್ರಿ. ಶ. 7ನೇಯ ಶತಮಾನದಲ್ಲಿ ಬೌದ್ಧ ಭಿಕ್ಕುಗಳನ್ನು ಸಂಹಾರ ಮಾಡುವ ಮೂಲಕ, ಬೌದ್ಧ ವಿಹಾರಗಳನ್ನು ಧ್ವಂಸ ಮಾಡುವ ಮೂಲಕ ಹಿಂದೂ ಧರ್ಮದ ಪ್ರತಿಪಾದಕರಾಗಿ ಕಾಣಿಸಿಕೊಂಡರು. ಇತಿಹಾಸಕಾರರಾದ ಕನ್ನಿಂಗ್ ಹ್ಯಾಮ್ ರವರು ‘The most terrible antibuddhist was sage Shankaracharya’ ಎಂದು ಹೇಳಿದ್ದಾರೆ.
ಬೌದ್ಧ ವಿಹಾರಗಳಲ್ಲಿ ವಾಸಿಸುತ್ತಿದ್ದ ಭಿಕ್ಕುಗಳ ರುಂಡ ಮುಂಡಗಳನ್ನು ಚಂಡಾಡಿ, ಒಬ್ಬ ಬೌದ್ಧ ಭಿಕ್ಕುವಿನ ತಲೆಯನ್ನು ತಂದುಕೊಟ್ಟರೆ ನೂರು ವರಹಗಳ ಬಹುಮಾನವನ್ನು ಘೋಷಿಸಿದ್ದ ಶಂಕರಾಚಾರ್ಯರು ಭಾರತದಲ್ಲಿ ಬೌದ್ಧ ಧರ್ಮ ತತ್ತರಿಸುವಂತೆ ಮಾಡಿದರು. ಶಂಕರಾಚಾರ್ಯ ವಿರಚಿತ ಭಾಷ್ಯ ಅಥವಾ ಬ್ರಹ್ಮಸೂತ್ರ ಎಂಬ ಗ್ರಂಥದಲ್ಲಿ Buddha was an enemy of the people and taught contradictory and Confusing things’ ಎಂದು ಹೇಳಿದ್ದಾರೆ!
ಬ್ರಾಹ್ಮಣ್ಯದ ಪುನರುತ್ಥಾನಕ್ಕೆ ಅಪಾರವಾಗಿ ಶ್ರಮಿಸಿದವರು, ಬೌದ್ಧ ಧರ್ಮವನ್ನು ಉಗ್ರವಾಗಿ ವಿರೋಧಿಸುತ್ತಿದ್ದ ಶಂಕರರ ಜೊತೆಗೆ ದಿಮಾರಿಲಭಟ್ಟ, ವಾಚಸ್ಪತಿ ಮಿಶ್ರ, ಉದಯನ ಉದ್ಯುತಾಕರ ಮುಂತಾದವರು ಪ್ರಮುಖರು. ಶಂಕರಾಚಾರ್ಯರ ‘ಶಂಕರ ದಿಗ್ವಿಜಯಂ’ ಗ್ರಂಥದಲ್ಲಿ ಬೌದ್ಧ ಧರ್ಮವನ್ನು ನಾಶ ಮಾಡಿದ ಸವಿಸ್ತಾರ ವಿವರಣೆಗಳು ಹೇರಳವಾಗಿದೆ.
ಕ್ರಿ.ಶ. 788 ರ ಕಾಲಘಟ್ಟವನ್ನು ‘ಬೌದ್ಧ ಧರ್ಮದ ಅವನತಿಯು ತನ್ನ ಪರಾಕಾಷ್ಟೆಗೆ ತಲುಪಿದ ಯುಗ’ವೆಂದು ಇತಿಹಾಸಕಾರರು ಬಣ್ಣಿಸಿದ್ದಾರೆ. ಬೌದ್ಧಧರ್ಮವನ್ನು ವಿನಾಶಕಾರಿ ಅಥವಾ ಸರ್ವ ವಿನಾಶಕಾರಿ ಎಂದು ವರ್ಣಿಸುವ ಶಂಕರಾಚಾರ್ಯ ತನ್ನ ಧರ್ಮಯಾತ್ರೆ ಬೌದ್ಧ ವಿಹಾರಗಳ ನಾಶಕ್ಕಾಗಿ, ಬೌದ್ಧ ಭಿಕ್ಕುಗಳ ಸಂಹಾರಕ್ಕಾಗಿ ಎಂದು ಹೇಳಿದ್ದಾರೆ.
ಉಜ್ಜಯನಿಯ ರಾಜನಾದ ಸುಧನ್ವನೆಂಬವನು ಭೌದ್ಧ ಬಿಕ್ಕುಗಳ ತಲೆಗಳನ್ನು ಚಂಡಾಡಿದ್ದನ್ನು ಮಹಾನ್ ಯಾತ್ರಿಕ ಹ್ಯುಯನ್ ತ್ಯಾಂಗ್ ನು ದಾಖಲಿಸಿದ್ದಾನೆ. ಮೃಚ್ಛಕಟಿಕದಲ್ಲಿ ಬೌದ್ಧ ಬಿಕ್ಕುಗಳ ಮೂಗಿಗೆ ಸರಪಳಿ ಹಾಕಿ ಎತ್ತಿನಂತೆ ಎಳೆಸುತ್ತಿದ್ದುದರ ವಿವರಣೆಯಿದೆ! ಟಿಬ್ಬೆಟ್ಟಿನ ಬೌದ್ಧ ಗ್ರಂಥಗಳಲ್ಲಿ “Shankara lead a religious expendition againinst the Buddhas and caused their destruction from the Himalayas to the Indian Ocean” ಎಂದು ಹೇಳಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
Mysuru Dasara Elephants: ದಸರಾ ಗಜಪಡೆಯ ತೂಕ ಪರೀಕ್ಷೆ: ಶ್ರೀಕಂಠ ಭಾರೀ ಗಜ, ಏಕಲವ್ಯಕ್ಕೆ 2ನೇ ಸ್ಥಾನ; ಅಂಬಾರಿ ಆನೆ ಆಯ್ಕೆ ಇನ್ನೂ ಬಾಕಿ
ಸುದ್ದಿದಿನ,ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಮೊದಲ ಹಂತದಲ್ಲಿ ಆಗಮಿಸಿರುವ 9 ಆನೆಗಳಿಗೆ ಸಾಂಪ್ರದಾಯಿಕ ತೂಕ ಪರೀಕ್ಷೆ ನಡೆಸಲಾಗಿದೆ. ಈ ಬಾರಿ ಮತ್ತಿಗೋಡು ಶಿಬಿರದ 57 ವರ್ಷದ ಶ್ರೀಕಂಠ 5,790 ಕೆಜಿ ತೂಕದೊಂದಿಗೆ ಗಜಪಡೆಯಲ್ಲೇ ಅತ್ಯಂತ ಭಾರವಾದ ಆನೆಯಾಗಿ ಮೊದಲ ಸ್ಥಾನ ಪಡೆದುಕೊಂಡಿದ್ದಾನೆ. ಭೀಮನಕಟ್ಟೆ ಶಿಬಿರದ 41 ವರ್ಷದ ಏಕಲವ್ಯ 5,600 ಕೆಜಿ ತೂಗಿ ಎರಡನೇ ಸ್ಥಾನದಲ್ಲಿದ್ದಾನೆ.
ನಗರದ ಧನ್ವಂತರಿ ರಸ್ತೆಯಲ್ಲಿರುವ ಎಲೆಕ್ಟ್ರಾನಿಕ್ ವೇ ಬ್ರಿಡ್ಜ್‌ನಲ್ಲಿ ಭಾನುವಾರ ಬೆಳಗ್ಗೆ ಎಲ್ಲ 9 ಆನೆಗಳ ತೂಕ ಪರೀಕ್ಷೆ ನಡೆಸಲಾಯಿತು. ಕಳೆದ ವರ್ಷ ಭೀಮ ಮತ್ತು ಅಭಿಮನ್ಯು ಕ್ರಮವಾಗಿ ಮೊದಲ ಎರಡು ಸ್ಥಾನದಲ್ಲಿದ್ದರು. ಆದರೆ ಈ ಬಾರಿ ಇವರಿಬ್ಬರನ್ನೂ ದಸರಾಗೆ ಕರೆತಂದಿಲ್ಲ. ಹೀಗಾಗಿ ಶ್ರೀಕಂಠನ ತೂಕವೇ ಈ ವರ್ಷದ ಗಜಪಡೆಯ ಗಮನ ಸೆಳೆದಿದೆ.
ಹೈಲೈಟ್ಸ್: 57 ವರ್ಷದ ಶ್ರೀಕಂಠನೇ ಗಜಪಡೆಯ ತೂಕದ ಬಾದ್‌ಷಾ |
|
http://Visit : www.suddidina.com
ಗಂಡಾನೆಗಳ ತೂಕ 5 ಸಾವಿರ ಕೆಜಿಗೂ ಅಧಿಕ
ಈ ಬಾರಿಯ ಮೊದಲ ಹಂತದ ಗಜಪಡೆಯ ವಿಶೇಷತೆಯೆಂದರೆ ಬಹುತೇಕ ಗಂಡಾನೆಗಳು 5 ಸಾವಿರ ಕೆಜಿಗೂ ಹೆಚ್ಚು ತೂಕ ಹೊಂದಿರುವುದು. ಆದರೆ ಆನೆಗಳ ತೂಕ ಹೆಚ್ಚಿಸುವುದೇ ಅರಣ್ಯ ಇಲಾಖೆಯ ಮುಖ್ಯ ಗುರಿಯಲ್ಲ. ಬದಲಿಗೆ ಅವುಗಳ ಆರೋಗ್ಯ, ದೈಹಿಕ ಸಾಮರ್ಥ್ಯ ಮತ್ತು ತಾಲೀಮಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ.
ಡಿಸಿಎಫ್ ಡಾ. ಐ.ಬಿ. ಪ್ರಭುಗೌಡ ಅವರ ಪ್ರಕಾರ, ಆನೆಗಳ ತೂಕದ ಆಧಾರದ ಮೇಲೆ ಅವುಗಳಿಗೆ ನೀಡಬೇಕಾದ ಆಹಾರದ ಪ್ರಮಾಣ ಮತ್ತು ಪೌಷ್ಟಿಕ ಆಹಾರವನ್ನು ನಿರ್ಧರಿಸಲಾಗುತ್ತದೆ. ಪ್ರತಿಯೊಂದು ಆನೆಯ ದೈಹಿಕ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ತಾಲೀಮು ರೂಪಿಸಲಾಗುತ್ತದೆ.
9 ಆನೆಗಳ ತೂಕದ ಆಧಾರದಲ್ಲೇ ಆಹಾರ
ದಸರಾ ಗಜಪಡೆಯಲ್ಲಿರುವ ಆನೆಗಳ ಆರೋಗ್ಯ ಕಾಪಾಡುವುದು ಪ್ರಮುಖ ಆದ್ಯತೆಯಾಗಿದೆ. ತೂಕ ಪರೀಕ್ಷೆಯ ಮೂಲಕ ಆನೆಗಳ ದೈಹಿಕ ಸ್ಥಿತಿಯ ಬಗ್ಗೆ ಅಗತ್ಯ ಮಾಹಿತಿ ಪಡೆಯಲಾಗುತ್ತದೆ. ಅದರ ಆಧಾರದ ಮೇಲೆ ಪೌಷ್ಟಿಕ ಆಹಾರ, ದಿನನಿತ್ಯದ ಚಟುವಟಿಕೆ ಹಾಗೂ ತಾಲೀಮಿನಲ್ಲಿ ಅಗತ್ಯ ಬದಲಾವಣೆ ಮಾಡಲಾಗುತ್ತದೆ.
ಅರಣ್ಯ ಇಲಾಖೆ ಅಧಿಕಾರಿಗಳ ಪ್ರಕಾರ, ಈಗಿರುವ ಎಲ್ಲ ಆನೆಗಳೂ ಅಂಬಾರಿ ಹೊರುವ ಸಾಮರ್ಥ್ಯ ಹೊಂದಿವೆ. ಅನುಭವಿ ಆನೆಗಳಾಗಿರುವುದರಿಂದ ಅಂತಿಮ ತಾಲೀಮು ಅತ್ಯಂತ ಮಹತ್ವ ಪಡೆಯಲಿದೆ.
ಅಂಬಾರಿ ಆನೆ ಯಾರು? ಕುತೂಹಲ
ಈ ಬಾರಿಯ ದಸರಾ ಜಂಬೂಸವಾರಿಯಲ್ಲಿ ಚಿನ್ನದ ಅಂಬಾರಿ ಹೊರುವ ಆನೆ ಯಾರು ಎಂಬ ಕುತೂಹಲ ಈಗಾಗಲೇ ಹೆಚ್ಚಾಗಿದೆ. ಕೇವಲ ತೂಕದ ಆಧಾರದ ಮೇಲೆ ಅಂಬಾರಿ ಆನೆಯನ್ನು ಆಯ್ಕೆ ಮಾಡುವುದಿಲ್ಲ. ಆನೆಯ ಆರೋಗ್ಯ, ಸಾಮರ್ಥ್ಯ, ಅನುಭವ, ತಾಲೀಮು ಮತ್ತು ಅಂತಿಮ ಹಂತದ ಪ್ರದರ್ಶನವನ್ನು ಪರಿಗಣಿಸಿ ಆಯ್ಕೆ ಮಾಡಲಾಗುತ್ತದೆ.
ಮೊದಲ ಹಂತದ ತಾಲೀಮು ಮುಗಿದ ಬಳಿಕ ನಡೆಯುವ ಅಂತಿಮ ತಾಲೀಮಿನ ನಂತರವೇ ಚಿನ್ನದ ಅಂಬಾರಿ ಹೊರುವ ಆನೆಯನ್ನು ಅಂತಿಮಗೊಳಿಸಲಾಗುತ್ತದೆ. ಹೀಗಾಗಿ ಶ್ರೀಕಂಠ ತೂಕದಲ್ಲಿ ನಂಬರ್ 1 ಆಗಿದ್ದರೂ, ಅಂಬಾರಿ ವಿಚಾರದಲ್ಲಿ ಅಂತಿಮ ನಿರ್ಧಾರ ಇನ್ನೂ ಬಾಕಿಯಿದೆ.
ಆನೆಗಳ ಬಳಿ ಸಾರ್ವಜನಿಕರಿಗೆ ನಿರ್ಬಂಧ
ದಸರಾ ಆನೆಗಳ ವೀಕ್ಷಣೆಗೆ ಯಾವುದೇ ಟಿಕೆಟ್ ವ್ಯವಸ್ಥೆ ಮಾಡಿಲ್ಲ ಎಂದು ಡಿಸಿಎಫ್ ಸ್ಪಷ್ಟಪಡಿಸಿದ್ದಾರೆ. ಸಾರ್ವಜನಿಕರು ಆನೆಗಳ ಬಳಿ ತೆರಳದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ದಸರಾ ಆನೆಗಳ ಕುರಿತು ಸುಳ್ಳು ಮಾಹಿತಿ ಹರಡಿದರೆ ಕ್ರಮ ಕೈಗೊಳ್ಳುವುದಾಗಿಯೂ ಅರಣ್ಯ ಇಲಾಖೆ ಎಚ್ಚರಿಕೆ ನೀಡಿದೆ.
“ಆನೆಗಳಿಗೆ ಹಂತ ಹಂತವಾಗಿ ತಾಲೀಮು ಮಾಡಲಾಗುತ್ತದೆ. ಸದ್ಯಕ್ಕೆ ಎಲ್ಲ ಆನೆಗಳ ಆರೋಗ್ಯ ಚೆನ್ನಾಗಿದೆ. ಅಂತಿಮ ಹಂತದ ತಾಲೀಮಿನ ಬಳಿಕ ಅಂಬಾರಿ ಹೊರುವ ಆನೆ ಆಯ್ಕೆ ಮಾಡಲಾಗುವುದು.”
– ಡಾ.ಐ.ಬಿ.ಪ್ರಭುಗೌಡ, ಡಿಸಿಎಫ್
ದಸರಾ ಗಜಪಡೆಯ ತೂಕದ ವಿವರ
- ಶ್ರೀಕಂಠ: 5,790 ಕೆಜಿ
- ಏಕಲವ್ಯ: 5,600 ಕೆಜಿ
- ಧನಂಜಯ: 5,530 ಕೆಜಿ
- ಮಹೇಂದ್ರ: 5,490 ಕೆಜಿ
- ಪ್ರಶಾಂತ: 5,205 ಕೆಜಿ
- ಗೋಪಿ: 5,170 ಕೆಜಿ
- ಶ್ರೀರಾಮ: 4,820 ಕೆಜಿ
- ಲಕ್ಷ್ಮೀ: 3,990 ಕೆಜಿ
- ಕಾವೇರಿ: 3,075 ಕೆಜಿ

ದಿನದ ಸುದ್ದಿ
ಬೆಂಗಳೂರು ಕಟ್ಟಡ ತೆರವು ಕಾರ್ಯಾಚರಣೆ: 18 ಅಂತಸ್ತಿನ ಅಪಾರ್ಟ್‌ಮೆಂಟ್‌ಗೆ ‘ಡೆಮಾಲಿಷನ್’ ಶುರು!
ಕೂಡ್ಲುಗೇಟ್‌ನ ಎಸ್‌ಎನ್‌ಎನ್ ರಾಜ್ ಎಟರ್ನಿಯಾ ಸಂಕೀರ್ಣದ 49 ಫ್ಲ್ಯಾಟ್‌ಗಳ ತೆರವು; ₹200 ಕೋಟಿ ವೆಚ್ಚದ ಕಟ್ಟಡಕ್ಕೆ ಹೊಸ ರೂಪ
ಸುದ್ದಿದಿನ,ಬೆಂಗಳೂರು: ನಗರದ ಪ್ರಮುಖ ವಸತಿ ಯೋಜನೆಗಳಲ್ಲಿ ಒಂದಾಗಿರುವ ಕೂಡ್ಲುಗೇಟ್‌ನ ಎಸ್‌ಎನ್‌ಎನ್ ಎಸ್ಟೇಟ್ ಒಡೆತನದ 18 ಅಂತಸ್ತಿನ ಕಟ್ಟಡದ ತೆರವು ಕಾರ್ಯಾಚರಣೆ ಶುಕ್ರವಾರದಿಂದ ಆರಂಭವಾಗಿದೆ. ಬೆಂಗಳೂರಿನ ಗಮನ ಸೆಳೆದಿದ್ದ ಈ ಪ್ರಕರಣದಲ್ಲಿ ಎಸ್‌ಎನ್‌ಎನ್ ರಾಜ್ ಕಾರ್ಪ್ ಸಂಸ್ಥೆಯು ಎಚ್‌ಎಸ್‌ಆರ್ ಲೇಔಟ್‌ನಲ್ಲಿರುವ ತನ್ನ ಎಸ್‌ಎನ್‌ಎನ್ ರಾಜ್ ಎಟರ್ನಿಯಾ ಪ್ರೀಮಿಯಂ ವಸತಿ ಸಂಕೀರ್ಣದ 49 ಅಪಾರ್ಟ್‌ಮೆಂಟ್ ಘಟಕಗಳನ್ನು ನಿಯಂತ್ರಿತ ರೀತಿಯಲ್ಲಿ ಕೆಡವುವ ಪ್ರಕ್ರಿಯೆಗೆ ಚಾಲನೆ ನೀಡಿದೆ.
ಒಟ್ಟು 972 ಮನೆಗಳನ್ನು ಹೊಂದಿರುವ ಈ ವಸತಿ ಯೋಜನೆಯಲ್ಲಿನ 49 ಘಟಕಗಳ ತೆರವು ಈಗ ಭಾರಿ ಕುತೂಹಲ ಮೂಡಿಸಿದೆ. ಕಟ್ಟಡದ ಸುರಕ್ಷತೆ ಕುರಿತು ತಾಂತ್ರಿಕ ಪರಿಶೀಲನೆ ನಡೆಸಿದ ಬಳಿಕ ಈ ಕ್ರಮಕ್ಕೆ ಮುಂದಾಗಲಾಗಿದೆ.
₹200 ಕೋಟಿ ವೆಚ್ಚದ ಕಟ್ಟಡದಲ್ಲಿ ದೋಷ ಪತ್ತೆ
ಸುಮಾರು ₹200 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಕಟ್ಟಡ ಇದಾಗಿದೆ. ತಾಂತ್ರಿಕ ಪರಿಶೀಲನೆ ವೇಳೆ ಕಟ್ಟಡದ ರಚನೆಯಲ್ಲಿ ಹಾನಿಯಾಗಿರುವುದು ಹಾಗೂ ಕಟ್ಟಡ ವಾಲಿರುವುದು ಬೆಳಕಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ ನಿವಾಸಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಕಟ್ಟಡದ ನಿರ್ದಿಷ್ಟ ಭಾಗಗಳನ್ನು ತೆರವುಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ.
ತೆರವು ಕಾರ್ಯಾಚರಣೆಯನ್ನು ಯಾವುದೇ ರೀತಿಯ ಆತಂಕ ಅಥವಾ ಅಪಾಯ ಉಂಟಾಗದಂತೆ ಅತ್ಯಂತ ನಿಯಂತ್ರಿತ ರೀತಿಯಲ್ಲಿ ನಡೆಸಲಾಗುತ್ತಿದೆ. ಕಟ್ಟಡ ತೆರವು ಸಂದರ್ಭದಲ್ಲಿ ಸುತ್ತಮುತ್ತಲಿನ ಪ್ರದೇಶಕ್ಕೂ ಸಮಸ್ಯೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.
ಮುಂಬೈ ಮೂಲದ ಖಾಸಗಿ ಕಂಪನಿಗೆ ಗುತ್ತಿಗೆ
ತೆರವು ಕಾರ್ಯವನ್ನು ಮುಂಬೈ ಮೂಲದ ಖಾಸಗಿ ಕಂಪನಿಗೆ ಗುತ್ತಿಗೆ ನೀಡಲಾಗಿದೆ ಎಂದು ಎಸ್‌ಎನ್‌ಎನ್ ಅಪಾರ್ಟ್‌ಮೆಂಟ್ ನಿರ್ದೇಶಕ ಅನೂಜ್ ತಿಳಿಸಿದ್ದಾರೆ. ಫ್ಲ್ಯಾಟ್‌ಗಳನ್ನು ಹಂತ ಹಂತವಾಗಿ ತೆರವುಗೊಳಿಸುವ ಮೂಲಕ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಈ ಕುರಿತು ಮಾತನಾಡಿರುವ ಅವರು, ಬಿಬಿಎಂಪಿಗೂ ಸಂಸ್ಥೆಯ ವತಿಯಿಂದ ಪತ್ರ ಬರೆಯಲಾಗಿದೆ ಎಂದು ತಿಳಿಸಿದ್ದಾರೆ. ಯಾವುದೇ ರೀತಿಯ ಸಮಸ್ಯೆ ಉಂಟಾಗದಂತೆ ತೆರವು ಕಾರ್ಯ ನಡೆಸಲಾಗುವುದು ಎಂಬ ಭರವಸೆಯನ್ನೂ ನೀಡಿದ್ದಾರೆ.
ಅದೇ ಜಾಗದಲ್ಲಿ ಹೊಸ ಅಪಾರ್ಟ್‌ಮೆಂಟ್ ನಿರ್ಮಾಣ
ಪ್ರಸ್ತುತ ಕಟ್ಟಡದ ತೆರವು ಕಾರ್ಯ ಪೂರ್ಣಗೊಂಡ ಬಳಿಕ ಅದೇ ಜಾಗದಲ್ಲಿ ಹೊಸ ಅಪಾರ್ಟ್‌ಮೆಂಟ್ ನಿರ್ಮಿಸುವ ಯೋಜನೆ ಇದೆ ಎಂದು ಸಂಸ್ಥೆ ತಿಳಿಸಿದೆ. ಈಗಾಗಲೇ ಕೆಲವು ಫ್ಲ್ಯಾಟ್‌ಗಳು ಮುಂಗಡವಾಗಿ ಬುಕ್ ಆಗಿದ್ದ ಹಿನ್ನೆಲೆಯಲ್ಲಿ ಖರೀದಿದಾರರೊಂದಿಗೆ ಮಾತುಕತೆ ನಡೆಸಿ ಸಮಸ್ಯೆ ಪರಿಹರಿಸುವುದಾಗಿ ಸಂಸ್ಥೆ ಹೇಳಿದೆ.
ಯಾರಿಗೂ ತೊಂದರೆಯಾಗದಂತೆ ಸಂಪೂರ್ಣ ಪ್ರಕ್ರಿಯೆ ನಡೆಸುವುದಾಗಿ ಸ್ಪಷ್ಟಪಡಿಸಿರುವ ಸಂಸ್ಥೆ, ನಿವಾಸಿಗಳು ಹಾಗೂ ಖರೀದಿದಾರರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಕ್ರಮ ಕೈಗೊಳ್ಳಲಿದೆ.

ದಿನದ ಸುದ್ದಿ
ಪಾಕ್ ಗಡಿಯಿಂದ ಡ್ರೋನ್ ಎಂಟ್ರಿ ಶಂಕೆ: ಪೂಂಚ್‌ನಲ್ಲಿ ಹೈ ಅಲರ್ಟ್, 3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಬೇಟೆ
ಸುದ್ದಿದಿನ,ಜಮ್ಮುಕಾಶ್ಮೀರ: ಜಮ್ಮು-ಕಾಶ್ಮೀರದ ಗಡಿ ಪ್ರದೇಶದಲ್ಲಿ ಮತ್ತೆ ಡ್ರೋನ್ ಹಾರಾಟದ ಆತಂಕ ಎದುರಾಗಿದೆ. ಪೂಂಚ್ ಜಿಲ್ಲೆಯ ಮೆಂಧರ್ ಸೆಕ್ಟರ್‌ನಲ್ಲಿ ಪಾಕಿಸ್ತಾನ ಮೂಲದ್ದೆಂದು ಶಂಕಿಸಲಾದ ಡ್ರೋನ್‌ವೊಂದು ಕಾಣಿಸಿಕೊಂಡಿರುವುದು ಭದ್ರತಾ ಪಡೆಗಳನ್ನು ಅಲರ್ಟ್ ಮಾಡಿದೆ. ಗಡಿಯಾಚೆಯಿಂದ ನಡೆಯಬಹುದಾದ ಯಾವುದೇ ಅನುಮಾನಾಸ್ಪದ ಚಟುವಟಿಕೆಗಳನ್ನು ತಡೆಯಲು ಸೇನೆ ಹಾಗೂ ಭದ್ರತಾ ಪಡೆಗಳು ನಿಗಾ ಮತ್ತಷ್ಟು ಬಿಗಿಗೊಳಿಸಿವೆ.
ಹೈಲೈಟ್ಸ್ |
|
http://Visit : www.suddidina.com
ಬೆಹ್ರೂಟಿ ಗ್ರಾಮದ ಬಳಿ ಕಾಣಿಸಿಕೊಂಡ ಶಂಕಿತ ಡ್ರೋನ್
ಶುಕ್ರವಾರ ಸಂಜೆ ಬಾಲಕೋಟೆ ಪ್ರದೇಶದ ಬೆಹ್ರೂಟಿ ಗ್ರಾಮದ ಸಮೀಪ ಆಕಾಶದಲ್ಲಿ ಶಂಕಿತ ಡ್ರೋನ್ ಹಾರಾಟ ನಡೆಸಿರುವುದು ಸ್ಥಳೀಯರ ಹಾಗೂ ಭದ್ರತಾ ಪಡೆಗಳ ಗಮನಕ್ಕೆ ಬಂದಿದೆ. ಬಳಿಕ ಅದು ಮಂಗಲ್ನಾರ್-ದಬ್ರೋಟ್ ಪ್ರದೇಶದತ್ತ, ಅಂದರೆ ಗಡಿ ಪ್ರದೇಶದ ಸಮೀಪಕ್ಕೆ ತೆರಳಿ ಪಾಕಿಸ್ತಾನದ ದಿಕ್ಕಿನಲ್ಲಿ ವಾಪಸ್ ಹೋಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಡ್ರೋನ್ ಕಾಣಿಸಿಕೊಂಡ ಮಾಹಿತಿ ಸಿಗುತ್ತಿದ್ದಂತೆ LoC ವ್ಯಾಪ್ತಿಯಲ್ಲಿ ಭದ್ರತಾ ಕ್ರಮಗಳನ್ನು ತೀವ್ರಗೊಳಿಸಲಾಗಿದೆ. ಬೆಳಗ್ಗೆಯಿಂದಲೇ ಸರ್ಚ್ ಆಪರೇಷನ್ ಆರಂಭಿಸಲಾಗಿದ್ದು, ಡ್ರೋನ್ ಮೂಲಕ ಯಾವುದೇ ವಸ್ತು, ಶಸ್ತ್ರಾಸ್ತ್ರ ಅಥವಾ ಅನುಮಾನಾಸ್ಪದ ಸಾಮಗ್ರಿಗಳನ್ನು ಕೆಳಗೆ ಇಳಿಸಲಾಗಿದೆಯೇ ಎಂಬುದರ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ.
3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಶೋಧ
ಡ್ರೋನ್ ಆತಂಕದ ನಡುವೆಯೇ ಜಮ್ಮು-ಕಾಶ್ಮೀರದ ಉಧಂಪುರ, ಕಥುವಾ ಮತ್ತು ರಾಜೌರಿ ಜಿಲ್ಲೆಗಳ ವಿಶಾಲ ಅರಣ್ಯ ಪ್ರದೇಶಗಳಲ್ಲೂ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ತೀವ್ರಗೊಳಿಸಿವೆ.
ಉಧಂಪುರ-ಕಥುವಾ ಅರಣ್ಯ ಪ್ರದೇಶದ ಖುಬನ್, ನಾಗೈನ್, ಖ್ಟ್ರೈಲ್, ಗೋಡು ಫಲಾಲ್, ಪದೇತಾರ್, ಚೋರ್ ಮೊಟ್ಟು, ಕಿಯಾ, ಖೇಬಾ, ಭೇದ್, ಮಾರ್ತಾ ಹಾಗೂ ಜೋಫರ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಪೊಲೀಸರು, ಸೇನೆ ಮತ್ತು ಅರೆಸೇನಾ ಪಡೆಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿವೆ.
ರಾಜೌರಿಯಲ್ಲಿ ಶಸ್ತ್ರಸಜ್ಜಿತರ ಶಂಕೆ
ರಾಜೌರಿ ಜಿಲ್ಲೆಯ ಗೈಬಾಸ್, ಮಿಥಿಯಾನಿ, ಮೊಗ್ಲಾ ಮತ್ತು ನಾರ್ಲಾ ಪ್ರದೇಶಗಳಲ್ಲೂ ಪ್ರತ್ಯೇಕ ಸರ್ಚ್ ಆಪರೇಷನ್ ಕೈಗೊಳ್ಳಲಾಗಿದೆ. ಇಬ್ಬರು ಶಸ್ತ್ರಸಜ್ಜಿತ ವ್ಯಕ್ತಿಗಳು ಸಂಚರಿಸುತ್ತಿರುವುದನ್ನು ಗ್ರಾಮಸ್ಥರು ಗಮನಿಸಿ ಭದ್ರತಾ ಪಡೆಗಳಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.
ಮಾಹಿತಿ ಆಧರಿಸಿ ಭದ್ರತಾ ಪಡೆಗಳು ವ್ಯಾಪಕ ಶೋಧ ನಡೆಸಿದರೂ, ಇದುವರೆಗೆ ಯಾವುದೇ ಶಂಕಿತ ವ್ಯಕ್ತಿಗಳು ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗಡಿಯಲ್ಲಿ ಹೆಚ್ಚಿದ ಕಣ್ಗಾವಲು
ಡ್ರೋನ್ ಹಾರಾಟ ಹಾಗೂ ಅರಣ್ಯ ಪ್ರದೇಶಗಳಲ್ಲಿ ಶಂಕಿತ ವ್ಯಕ್ತಿಗಳ ಚಲನವಲನದ ಮಾಹಿತಿ ಹಿನ್ನೆಲೆಯಲ್ಲಿ ಗಡಿ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಯಾವುದೇ ಅನುಮಾನಾಸ್ಪದ ಚಟುವಟಿಕೆ ಕಂಡುಬಂದರೂ ತಕ್ಷಣ ಮಾಹಿತಿ ನೀಡುವಂತೆ ಸ್ಥಳೀಯರಿಗೂ ಸೂಚನೆ ನೀಡಲಾಗಿದೆ.
ಪ್ರಸ್ತುತ ಕಾರ್ಯಾಚರಣೆಯ ಪ್ರಮುಖ ಉದ್ದೇಶ ಗಡಿಯಾಚೆಯಿಂದ ಸಂಭವಿಸಬಹುದಾದ ಒಳನುಸುಳುವಿಕೆ ಅಥವಾ ಅನುಮಾನಾಸ್ಪದ ಸಾಗಾಟವನ್ನು ತಡೆಯುವುದು ಮತ್ತು ಪ್ರದೇಶದಲ್ಲಿ ಭದ್ರತೆಯನ್ನು ಖಚಿತಪಡಿಸಿಕೊಳ್ಳುವುದಾಗಿದೆ.



