ದಿನದ ಸುದ್ದಿ
ಹೆಚ್ಚು ಶುಲ್ಕ ವಿಧಿಸಿದರೆ ‘ಕೇಬಲ್ ಟಿವಿ’ ವಿರುದ್ಧ ದೂರು ನೀಡಿ
ಸುದ್ದಿದಿನ,ಕಲಬುರಗಿ: ಕೇಬಲ್ ಟೆಲಿವಿಷನ್ ನೆಟ್‍ವರ್ಕ್ (ರೆಗ್ಯುಲೇಷನ್) ಅಧಿನಿಯಮ-1995ರ ವ್ಯಾಪ್ತಿಗೊಳಪಡುವ ಕಾರ್ಯಕ್ರಮ ಸಂಕೇತ ಹಾಗೂ ಜಾಹೀರಾತು ಸಂಕೇತದ ಉಲ್ಲಂಘನಾ ಪ್ರಕರಣಗಳು, ಅಕ್ಷೇಪಾರ್ಹ ಅಂಶಗಳು, ಕೇಬಲ್ ಟಿ.ವಿ.ನಲ್ಲಿ ಪ್ರಸಾರವಾಗುವ ಕಾರ್ಯಕ್ರಮ ವೀಕ್ಷಿಸಲು ಮತ್ತು ಕೇಳಲು ಸಂಕೇತಾಕ್ಷರಗಳು ಗುಣಮಟ್ಟದಿಂದ ಕೂಡಿರದಿದ್ದಲ್ಲಿ ಅಥವಾ ನಿಗದಪಡಿಸಿದ್ದಕ್ಕಿಂತ ಹೆಚ್ಚಿನ ಶುಲ್ಕ ವಿಧಿಸುವ ಪ್ರಕರಣಗಳು ಕಂಡು ಬಂದಲ್ಲಿ ಗ್ರಾಹಕರು ಮುಕ್ತವಾಗಿ ದೂರು ಸಲ್ಲಿಸಬಹುದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಶಂಕರ ವಣಿಕ್ಯಾಳ ಅವರು ತಿಳಿಸಿದ್ದಾರೆ.
ಅವರು ಗುರುವಾರ ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೇಬಲ್ ಟೆಲಿವಿಷನ್ ನೆಟ್‍ವರ್ಕ್ (ರೆಗ್ಯುಲೇಷನ್) ಅಧಿನಿಯಮ-1995 ಮತ್ತು ಅದರ ಮೇರೆಗೆ ಮಾಡಲಾದ ನಿಯಮಗಳ ಜಾರಿಯ ಮೇಲ್ವಿಚಾರಣೆ ಮಾಡಲು ರಚಿಸಿರುವ ಜಿಲ್ಲಾ ಮಟ್ಟದ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.
ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿ, ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮುಂತಾದೆಡೆ ದೂರು ಪೆಟ್ಟಿಗೆ ಇಡಲಾಗಿದ್ದು, ದೂರು ಸಲ್ಲಿಸಬಹುದು. ಜೊತೆಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆಂಗಳೂರು ದೂರವಾಣಿ ಸಂಖ್ಯೆ 080- 2202 8013ಗೆ ಕರೆ ಮಾಡಬಹುದು ಅಥವಾ 94808 41212 ಮೊಬೈಲ್ ನಂಬರ್‍ಗೆ ವಾಟ್ಸಾಪ್ ಮಾಡಿ ದೂರು ಸಲ್ಲಿಸಬಹುದು ಎಂದು ತಿಳಿಸಿದರು.
ಸಭೆಯಲ್ಲಿ ಸುದ್ದಿ ಸಮಯ ಚಾನೆಲ್ (ಡೆನ್ ಕೇಬಲ್ ನೆಟ್‍ವರ್ಕ್)ನ ಭವಾನಿ ಸಿಂಗ್ ಠಾಕೂರ ಅವರು ಮಾತನಾಡಿ, ಯಾವುದೇ ಆಕ್ಷೇಪಾರ್ಹ ದೃಶ್ಯಗಳನ್ನು ಪ್ರಸಾರ ಮಾಡಿರುವುದಿಲ್ಲ, ಸರ್ಕಾರದ ಕಾರ್ಯಕ್ರಮಗಳನ್ನು ಪ್ರಸಾರ ಮಾಡುವ ಮೂಲಕ ಸರ್ಕಾರದ ಭಾಗವಾಗಿ ಕೆಲಸ ಮಾಡುತ್ತೇವೆ ಎಂದು ಸಭೆಗೆ ಮಾಹಿತಿ ನೀಡಿದರು. ಗುಲ್ಬರ್ಗಾ ನ್ಯೂಸ್ (ಇನ್ ಕೇಬಲ್ ನೆಟ್‍ವರ್ಕ್)ನ ಸಂಜೀವ ರೆಡ್ಡಿ ಅವರು ಮಾತನಾಡಿ, ಪಲ್ಸ್ ಪೋಲಿಯೋ, ಆನೆಕಾಲು ಲಸಿಕೆ ಮುಂತಾದ ಸರ್ಕಾರಿ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ರಾಜ್ಯ ಮತ್ತು ರಾಷ್ಟ್ರಮಟ್ಟದ ಕೆಲ ಸುದ್ದಿ ವಾಹಿನಿಗಳು ತಪ್ಪು ಮಾಹಿತಿಯಿಂದ ಕೂಡಿರುವ ಸುದ್ದಿಗಳನ್ನು ಪ್ರಸಾರ ಮಾಡಿದ್ದಾರೆ ಎಂದು ಆರೋಪಿಸಿ ಕಲಬುರಗಿಯ ವ್ಯಕ್ತಿಯೊಬ್ಬರು ದೂರು ಸಲ್ಲಿಸಿದ್ದು, ದೂರಿನ ಅರ್ಜಿಯನ್ನು ರಾಜ್ಯ ಮಟ್ಟದ ಸಮಿತಿಗೆ ಕಳುಹಿಸಲು ಸಭೆ ತೀರ್ಮಾನಿಸಿತು.
ಸಭೆಯಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಸನ್ನ ದೇಸಾಯಿ, ಸಹಾಯಕ ಪೊಲೀಸ್ ಆಯುಕ್ತ ಗಂಗಾಧರ್, ಪ್ರಧಾನ ಅಂಚೆ ಕಚೇರಿಯ ಪೋಸ್ಟ್ ಮಾಸ್ಟರ್ ಈಶ್ವರಪ್ಪ, ಸಮಿತಿಯ ಸದಸ್ಯರಾದ ಕಲಬುರಗಿ ಮಹಿಳಾ ಸರ್ಕಾರಿ ಪದವಿ ಕಾಲೇಜಿನ ಪ್ರಾಚಾರ್ಯರಾದ ಪ್ರೊ. ಖಂಡೇರಾವ್, ಕಲಬುರಗಿಯ ಅವ್ವಾ ಅಭಿವೃದ್ಧಿ ಸೇವಾ ಸಂಸ್ಥೆಯ ಅಧ್ಯಕ್ಷ ಶಿವಾನಂದ ಅಣಜಗಿ, ಕಲಬುರಗಿ ಜಿಲ್ಲಾ ಸಾರ್ವಜನಿಕ ಆಸ್ಪತ್ರೆಯ ಮನ:ಶಾಸ್ತ್ರಜ್ಞರಾದ ಡಾ. ರೇಣುಕಾ ಬಗಾಲೆ, ವಿಶ್ವಭಾರತಿ ಸೇವಾ ಸಂಸ್ಥೆ ಅಧ್ಯಕ್ಷರಾದ ಡಾ. ಶಾರಾದಾ ಯಾಕಾಪೂರ್ ಹಾಗೂ ಗುಲ್ಬರ್ಗಾ ನ್ಯೂಸ್ (ಇನ್ ಕೇಬಲ್ ನೆಟ್‍ವರ್ಕ್) ಮುಖ್ಯಸ್ಥ ಸಂತೋಷ್ ಜೋಷಿ ಹಾಜರಿದ್ದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪನಿರ್ದೇಶಕ ಸಿದ್ದೇಶ್ವರಪ್ಪ. ಜಿ. ಬಿ. ಅವರು ಸ್ವಾಗತಿಸಿ, ಹಿಂದಿನ ಸಭೆಯ ಅನುಪಾಲನಾ ವರದಿ ಮಂಡಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಂಚನೆ | ಪ್ರಭಾರ ಕಾರ್ಯಪಾಲಕ ಅಭಿಯಂತರ ಸೋಮ್ಲನಾಯ್ಕ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: 2023-24 ಮತ್ತು 2024-25ನೇ ಸಾಲಿನಲ್ಲಿ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳಲ್ಲಿ ಬರುವ ಸಮಸ್ಯಾತ್ಮಕ ಗ್ರಾಮಗಳಲ್ಲಿ 4215 ತುರ್ತು ಕುಡಿಯುವ ನೀರಿನ ಕಾಮಗಾರಿಯಲ್ಲಿ ನಡೆದಿರುವ ಅವ್ಯವಹಾರ ಮತ್ತು ನಕಲಿ ಕಾಮಗಾರಿಗಳನ್ನು ತನಿಖೆಗೆ ಒಳಪಡಿಸುವಂತೆ ದೂರು ನೀಡಿ 6 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇಲ್ಲಿನ ಪ್ರಭಾರ ಕಾರ್ಯಪಾಲಕ ಅಭಿಯಂತರರಾದ ಟಿ. ಸೋಮ್ಲನಾಯ್ಕ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ 2023-24 ಮತ್ತು 2024-25ನೇ ಸಾಲಿನ ತುರ್ತು ಕುಡಿಯುವ ನೀರಿನ ಯೋಜನೆಗೆ ಸಂಬAಧಿಸಿದ ಕಾಮಗಾರಿಗಳಿಗೆ ಸಂಬAಧಿಸಿದAತೆ ಹೊನ್ನಾಳಿ ಉಪವಿಭಾಗದ ಅಡಿಯಲ್ಲಿ ನಡೆದಿರುವ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳಲ್ಲಿ ನಾಲ್ಕು ಹಂತದ ತುರ್ತು ಕುಡಿಯುವ ನೀರಿನ ಯೋಜನೆಯ ಕಾಮಗಾರಿಗಳ ಸಂಪೂರ್ಣ ಕಡತವನ್ನು ಪಡೆದು ಪರಿಶೀಲನೆ ಮಾಡಿದಾಗ, ಇಲ್ಲಿ ಸಾಕಷ್ಟು ಅವ್ಯವಹಾರ ಹಾಗೂ ಲೋಪಗಳು ಕಂಡುಬAದಿರುತ್ತವೆ. ಅಂತಹ ಪ್ರಮುಖ ಲೋಪಗಳನ್ನು ಉಲ್ಲೇಖಿಸಿ ಸೂಕ್ತ ತನಿಖೆಗೆ ಒಳಪಡಿಸುವಂತೆ ದಿನಾಂಕ: 01-12-2025 ರಂದು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರಿಗೆ ದೂರು ನೀಡಲಾಗಿತ್ತು.
ಈ ದೂರು ಅರ್ಜಿಗೆ ಸಂಬಂಧಿಸಿದಂತೆ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರು 2 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದ ಕಾರಣ ದಿನಾಂಕ: 27-01-2026 ರಂದು ಜ್ಞಾಪನವನ್ನು ನೀಡಲಾಗಿರುತ್ತದೆ. ಆದರೆ ಜ್ಞಾಪನ ನೀಡಿ 6 ತಿಂಗಳು ಕಳೆಯುತ್ತ ಬಂದರೂ ಈ ದೂರು ಅರ್ಜಿಗೆ ಸಂಬAಧಿಸಿದAತೆ ಕಾರ್ಯಪಾಲಕ ಅಭಿಯಂತರರು (ಪ್ರಭಾರ), ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರು ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿರುತ್ತಾರೆ.
ಈ ದೂರು ಅರ್ಜಿಯನ್ನು ತನಿಖೆಗೆ ಒಳಪಡಿಸುವಲ್ಲಿ ತೋರಿದ ನಿರ್ಲಕ್ಷö್ಯಕ್ಕೆ ಪ್ರಮುಖ ಕಾರಣವೆಂದರೆ, ಹೊನ್ನಾಳಿ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರೇ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇಲ್ಲಿನ ಪ್ರಭಾರ ಕಾರ್ಯಪಾಲಕ ಅಭಿಯಂತರರಾಗಿ ಕಾರ್ಯನಿರ್ವಹಿಸಿರುತ್ತಾರೆ. ಈ ಕಾರಣಕ್ಕಾಗಿ ತನ್ನ ಮೇಲಿನ ಆರೋಪವನ್ನು ತನಿಖೆಗೆ ಒಳಪಡಿಸುವಲ್ಲಿ ನಿರ್ಲಕ್ಷö್ಯ ತೋರಿ, ಈ ದೂರು ಅರ್ಜಿಯನ್ನು ಮೂಲೆ ಗುಂಪಾಗಿಸಿರುತ್ತಾರೆ. ಆದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಭಾರ ಕಾರ್ಯಪಾಲಕ ಅಭಿಯಂತರರಾದ ಸೋಮ್ಲನಾಯ್ಕ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಇಂಗ್ಲಿಷ್ ಕಲಿಯಲು ಬಂದ ಜಪಾನ್ ಯುವಕ ಜೈಲು ಸೇರಿದ ; 75000 ಪರಿಹಾರ ಪಡೆದ
ಸುದ್ದಿದಿನಡೆಸ್ಕ್:ಜಪಾನ್‌ನ ಹಿರೋತೋಷಿ ತನಕಾ ಇಂಗ್ಲಿಷ್ ಕಲಿಯಲು ಬೆಂಗಳೂರಿಗೆ ಬಂದಿದ್ದರು. ಆದರೆ ಇಂಗ್ಲಿಷ್ ಅಕಾಡೆಮಿಯಲ್ಲಿ ಸರಿಯಾಗಿ ಇಂಗ್ಲೀಷ್ ಕಲಿಸುತ್ತಿಲ್ಲವೆಂದು ಅಕಾಡೆಮಿ ಮುಖ್ಯಸ್ಥರೊಂದಿಗೆ ಜಗಳ ನಡೆದ ಬಳಿಕ ತನಕಾ ವಿರುದ್ಧ ಪೊಲೀಸ್ ಪ್ರಕರಣ ದಾಖಲಾಗಿತು. ಅವರನ್ನು ಬಂಧಿಸಿ 19 ದಿನ ಜೈಲಿನಲ್ಲಿ ಇರಿಸಲಾಯಿತು.
ತಮ್ಮ ಬಂಧನ ಸರಿಯಲ್ಲ ಎಂದು ತನಕಾ ಮಾನವ ಹಕ್ಕುಗಳ ಆಯೋಗದ ಮೊರೆ ಹೋದರು. ವೀಸಾ ಅವಧಿ ಮುಗಿಯುತ್ತಿದ್ದಂತೆ, ಪ್ರಕರಣ ಮುಗಿಯುವವರೆಗೂ ಭಾರತದಲ್ಲೇ ಇರಲು ವಿಚಿತ್ರ ಪ್ರಯತ್ನವೂ ಮಾಡಿದರು. ಪೊಲೀಸ್ ಠಾಣೆಯಿಂದ ಪ್ಲಾಸ್ಟಿಕ್ ಕುರ್ಚಿಯೊಂದನ್ನು ತೆಗೆದುಕೊಂಡು ಹೋಗಿ, ಮತ್ತೆ ಬಂಧನಕ್ಕೊಳಗಾಗಲು ಪ್ರಯತ್ನಿಸಿದರು!
ಅದು ಆಗದೇ ಇದ್ದಾಗ ಜಪಾನ್ ಗೆ ಮರಳಿ . ಅಲ್ಲಿಂದಲೇ ತಮ್ಮ ಹೋರಾಟ ಮುಂದುವರಿಸಿದ ತನಕಾ ಅವರ ಹೋರಾಟಕ್ಕೆ ಜಯ ಸಿಕ್ಕಿದೆ ಸಿಕ್ಕಿದೆ. ಕರ್ನಾಟಕದಿಂದ 75,000 ಪರಿಹಾರವನ್ನು ಪಡೆದುಕೊಂಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಡಾಲಿಯ ಕನಸು ಒಂದೇ ಹೀರೋ ಆಗೋದು
ಮೈಸೂರಿನ ರಂಗಾಯಣದಲ್ಲಿ ನಾಟಕ ತಂಡಗಳಲ್ಲಿ ಗುರುತಿಸಿಕೊಂಡ ದಿನಗಳಿಂದಲೇ ಡಾಲಿ ಧನಂಜಯ್ ಅವರದ್ದು ಒಂದೇ ಕನಸು—ಸಿನಿಮಾ ಹೀರೋ ಆಗಬೇಕು!
ಕಾಲೇಜು ಯುವಕರಾಗಿದ್ದಾಗಲೂ ಮೌನ ಸ್ವಭಾವದ, ವಿಧೇಯ, ಪರಿಶ್ರಮಿ ಮತ್ತು ಗುರಿಯ ಮೇಲೆ ಸಂಪೂರ್ಣ ಗಮನ ಹೊಂದಿದ್ದವರು. ಯಾವುದೇ ಡೈವರ್ಷನ್ ಇಲ್ಲ, ಸಿನಿಮಾ ಕನಸಿನ ಕಡೆ ಮಾತ್ರ ಗಮನ!
ಇಂದು ಬಹುಭಾಷಾ ನಟನಾಗಿ ದೊಡ್ಡ ಎತ್ತರಕ್ಕೇರಿದ್ದರೂ, ತಮ್ಮ ಬೇರುಗಳನ್ನು ಅವರು ಮರೆತಿಲ್ಲ. ಇಂದಿಗೂ ತಮ್ಮ ಹಳೆಯ ಸ್ನೇಹಿತರ ಜೊತೆಗೂಡಿ ಸಿನಿಮಾ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ. ನಿರ್ಮಾಪಕರಾಗಿಯೂ ಗುರುತಿಸಿಕೊಂಡಿರುವ ಅವರು, ಅನೇಕ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಿದ್ದಾರೆ.
ಅಂದಿನ ಅದೇ ಸರಳತೆ, ಅದೇ ನಡವಳಿಕೆ ಇಂದಿಗೂ ಇದೆ!
ಒಬ್ಬ ಕಾಲೇಜು ಯುವಕನಿಂದ ಬಹುಭಾಷಾ ತಾರೆಯವರೆಗೆ—ಎಂತಹ ಸ್ಪೂರ್ತಿದಾಯಕ ಪಯಣ! ಹ್ಯಾಪಿ ಬರ್ತ್ಡೇ ಡಾಲಿ
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂತರಂಗ3 days agoಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು
-
ದಿನದ ಸುದ್ದಿ5 days agoವಿಶ್ವ ವೆಂಕಟೇಶ್ವರ ಸಂಸ್ಥೆಯ ಹೆಸರು ಹಾಳು ಮಾಡುವ ಹುನ್ನಾರ: ವಿಠಲ ರುಕ್ಮಿಣಿ ಮಠದ ವಿರುದ್ಧ ಗಂಭೀರ ಆರೋಪ
-
ದಿನದ ಸುದ್ದಿ1 day agoಭರವಸೆ ಕೊಟ್ಟು ಯುವಜನರನ್ನು ಮನೆಗೆ ಕಳುಹಿಸಿದ ಸರ್ಕಾರಕ್ಕೆ ಈಗ ಪ್ರತಿಭಟನೆಯ ಬಿಸಿ: ಸೆ.5ಕ್ಕೆ ದೆಹಲಿಯಲ್ಲಿ CJP ಬೃಹತ್ ಮೆರವಣಿಗೆ!
-
ದಿನದ ಸುದ್ದಿ1 day agoKPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ
-
ದಿನದ ಸುದ್ದಿ16 hours agoವಂಚನೆ | ಪ್ರಭಾರ ಕಾರ್ಯಪಾಲಕ ಅಭಿಯಂತರ ಸೋಮ್ಲನಾಯ್ಕ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ1 day agoಉದ್ದಿಮೆದಾರರಿಗೆ ನೆರವು ಯೋಜನೆ; ಅರ್ಜಿ ಆಹ್ವಾನ
-
ದಿನದ ಸುದ್ದಿ2 days agoಭದ್ರಾ ಡ್ಯಾಂ ನೀರು ಹರಿಸುವಂತೆ ಆಗ್ರಹಿಸಿ ಕರೆ ನೀಡಿದ್ದ ದಾವಣಗೆರೆ ಬಂದ್ ನೀರಸ
-
ದಿನದ ಸುದ್ದಿ1 day agoಸರ್ವರ್ ಡೌನ್, ಅಧಿಕಾರಿಗಳ ವಿಳಂಬ: ‘ಎ-ಖಾತೆ’ಗಾಗಿ ಕಾದು ಕುಳಿತ 60 ಸಾವಿರಕ್ಕೂ ಹೆಚ್ಚು ಅರ್ಜಿದಾರರು!

