ದಿನದ ಸುದ್ದಿ
ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿ ಜಾರಿಗೆ ತೀರ್ಮಾನ : ಸಿಎಂ ಸಿದ್ದರಾಮಯ್ಯ
ಸುದ್ದಿದಿನ,ಬೆಂಗಳೂರು:ಮುಂಬರುವ ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿ ಜಾರಿಗೆ ಸಂಬಂಧಿಸಿದ ಚರ್ಚೆಯ ನಂತರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಅಕ್ಟೋಬರ್ 18ರಂದು ಸಂಪುಟ ಸಭೆ ನಡೆಯಲಿದೆ ಎಂದು ಅವರು ತಿಳಿಸಿದರು.
ವಿಧಾನಸೌಧದಲ್ಲಿಂದು ಹಿಂದುಳಿದ ವರ್ಗಗಳ ಶಾಸಕರುಗಳೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಪಕ್ಷಗಳ ನಾಯಕರೂ ಸೇರಿದಂತೆ ಹಿಂದುಳಿದ ವರ್ಗಗಳ ಸುಮಾರು ೩೦ ಶಾಸಕರು, ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆಯನ್ನು ಅಂಗೀಕಾರ ಮಾಡಿ, ಜಾರಿಗೆ ತರಬೇಕೆಂದು ಒತ್ತಾಯಿಸಿ ಮನವಿಯನ್ನು ಸಲ್ಲಿಸಿದ್ದಾರೆ ಎಂದರು.
ಕಾಂತರಾಜು ವರದಿ ವರದಿಯನ್ನು ಜಾರಿಗೊಳಿಸಲು ಎಲ್ಲರಿಂದಲೂ ಒತ್ತಾಯ ಬಂದಿದೆ. ಈ ಹಿನ್ನಲೆಯಲ್ಲಿ ಇಂದು ಹಿಂದುಳಿದ ವರ್ಗಗಳ ಶಾಸಕರು ಸಭೆ ನಡೆಸಿ ವರದಿಯನ್ನು ಜಾರಿಗೊಳಿಸುವಂತೆ ಮನವಿ ಸಲ್ಲಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿವರಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243