ಲೈಫ್ ಸ್ಟೈಲ್
ಚಿಕನ್ ಪಕೋಡ ಮಾಡೋದು ಹೇಗೆ ಗೊತ್ತಾ..?
ಚಿಕನ್ ಪಕೋಡ ರೆಸಿಪಿ
ಅರ್ಧ ಕೇಜಿ ಮೂಳೆಯಿಲ್ಲದ (bone less) ಚಿಕನ್ನನ್ನು ಉಪ್ಪು ಹಾಕಿ ತೊಳೆದು ಕೊಂಡು ಸಣ್ಣದಾಗಿ ತುಂಡು ಮಾಡಿಕೊಳ್ಳಿ. (ಈರುಳ್ಳಿ ಸಣ್ಣಗೆ ಉದ್ದಕ್ಕೆ ಹೆಚ್ಚಿಕೊಳ್ಳೋ ತರ)
ಪಾಯಸಕ್ಕೆ ಉಪಯೋಗಿಸುವ ಶಾವಿಗೆಯನ್ನು ಬಿಸಿ ನೀರಲ್ಲಿ ಬೇಯಿಸಿಕೊಳ್ಳಬೇಕು. ನೀರು ಕುದಿ ಬಂದ ಕೂಡಲೇ ಒಲೆ ಆಫ್ ಮಾಡಿ, ನಂತರ ಶಾವಿಗೆಯನ್ನು ಬಿಸಿನೀರಿನಿಂದ ಬಸಿದು, ತಕ್ಷಣ ತಣ್ಣೀರು ಹಾಕಿ ಬಸಿದುಕೊಳ್ಳಿ.
ನಂತರ ಒಂದು ಬಟ್ಟಲಲ್ಲಿ ತುಂಡು ಮಾಡಿದ ಚಿಕನ್, ಬೇಯಿಸಿದ ಶಾವಿಗೆ, ನಾಲ್ಕು ಚಮಚೆ ಕಾರ್ನ್ ಫ್ಲೋರ್, ಉಪ್ಪು, ಕರಿಮೆಣಸು ಪುಡಿ, ಕಾರದ ಪುಡಿ, ಜೀರಿಗೆ, ಶುಂಟಿ ಬೆಳ್ಳುಳ್ಳಿ ಪೇಸ್ಟ್. ಚೂರು ನಿಂಬೆ ರಸ ಇಷ್ಟನ್ನೂ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ.
ಎಣ್ಣೆಯನ್ನು ಚೆನ್ನಾಗಿ ಬಿಸಿ ಮಾಡಿ ಕಲಸಿದ ಮಿಶ್ರಣಕ್ಕೆ ಸ್ವಲ್ಪವೇ ನೀರು ಬೆರೆಸಿ ಮಿಶ್ರಣವನ್ನು ಪಕೋಡ ತರ ಎಣ್ಣೆಯಲ್ಲಿ ಬಿಡಿ. ಎಣ್ಣೆ ಬಿಸಿಯಾದ ನಂತರ ಸಣ್ಣ ಉರಿಯಲ್ಲೇ ನಿಧಾನವಾಗಿ ಪಕೋಡಗಳನ್ನು ಬೇಯಿಸಬೇಕು. ಟಮೋಟೋ ಚಟ್ನಿಯೊಂದಿಗಿನ ಈ ಪಕೋಡ ಮಕ್ಕಳಿಗಂತೂ ತುಂಬಾ ಇಷ್ಟವಾಗುತ್ತೆ.

ದಿನದ ಸುದ್ದಿ
ನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್ ಆಹ್ವಾನ
ಸುದ್ದಿದಿನ ಡೆಸ್ಕ್:ಸುಪ್ರಿಯಾನ್ವಿ ಪ್ರೊಡಕ್ಷನ್ಸ್ ಸಂಸ್ಥೆಯಡಿ ಪ್ರಿಯಾ ಸುದೀಪ್ ನಿರ್ಮಿಸಿದ ಮೊದಲ ಚಿತ್ರ ‘ಮ್ಯಾಂಗೋ ಪಚ್ಚ’. ಸಂಚಿತ್ ಸಂಜೀವ್ ಅಭಿನಯದ ಈ ಚಿತ್ರ ಹೆಚ್ಚು ಸದ್ದು ಮಾಡಲಿಲ್ಲ.
ಈ ಸೋಲನ್ನು ಹಿಂದಕ್ಕೆ ಹಾಕಿ, ಪ್ರಿಯಾ ಸುದೀಪ್ ಇನ್ನಷ್ಟು ಹೊಸ ಕಥೆಗಳನ್ನು ತೆರೆಗೆ ತರುವುದಕ್ಕೆ, ಹೊಸ ಚಿತ್ರಗಳನ್ನು ನಿರ್ಮಿಸುವುದಕ್ಕೆ ಮುಂದಾಗಿದ್ದಾರೆ. ಕಥೆಗಾರರಿಗೆ ಆಹ್ವಾನ ನೀಡಿದ್ದಾರೆ. ‘ನಾವು ಹುಡುಕುತ್ತಿರುವುದು ಕೇವಲ ಕಥೆಗಳಲ್ಲ. ಮನಸ್ಸುಗಳನ್ನು ಮುಟ್ಟುವ ಭಾವನೆಗಳು, ಚಿಂತನೆಗೆ ಹಚ್ಚುವ ವಿಚಾರಗಳು ಮತ್ತು ಪರದೆಯ ಮೇಲೆ ಹೊಸ ಇತಿಹಾಸ ಬರೆಯುವ ಕಲ್ಪನೆಗಳು.
ನಿಮ್ಮ ಬಳಿ ಮೌಲಿಕ ಕಥೆ-ಚಿತ್ರಕಥೆ ಇದ್ದರೆ ಅಥವಾ ವಿಶಿಷ್ಟ ಕಥಾ ಪರಿಕಲ್ಪನೆ ಇದ್ದರೆ, ಅದನ್ನು ನಮ್ಮೊಂದಿಗೆ ಹಂಚಿಕೊಳ್ಳಿ. ತಮ್ಮದೇ ಆದ ವಿಶಿಷ್ಟ ದೃಷ್ಟಿಕೋನ ಮತ್ತು ಸೃಜನಾತ್ಮಕತೆಯನ್ನು ಹೊಂದಿರುವ ಲೇಖಕರು, ಕಥೆಗಾರರು ಮತ್ತು ಸೃಜನಶೀಲ ಮನಸ್ಸುಗಳನ್ನು ನಾವು ಸ್ವಾಗತಿಸುತ್ತೇವೆ. ಎಲ್ಲಾ ಪ್ರಕಾರಗಳು ಮತ್ತು ಎಲ್ಲಾ ಮಾದರಿಗಳಲ್ಲಿನ ಕಥಾ ಸಲ್ಲಿಕೆಗಳನ್ನು ನಾವು ಸ್ವಾಗತಿಸುತ್ತೇವೆ. ನಿಮ್ಮ ಕಥೆಯೇ ಮುಂದಿನ ದೊಡ್ಡ ಪ್ರಯಾಣದ ಆರಂಭವಾಗಬಹುದು’ ಎಂದು ಪ್ರಿಯಾ ಸುದೀಪ್, ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
ಜೊತೆಗೆ ಒಂದು ಮೊಬೈಲ್ ಸಂಖ್ಯೆಯನ್ನು ಸಹ ಹಂಚಿಕೊಂಡಿದ್ದಾರೆ. ಆದರೆ, ಕರೆ ಮಾಡುವಂತಿಲ್ಲ. ಚಾಟ್ ಮಾತ್ರ ಮಾಡಬಹುದು. ಕಥೆಗಳಿದ್ದರೆ 6663307434 ಸಂಖ್ಯೆಯನ್ನು ಸಂಪರ್ಕಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಿದ್ಯಾರ್ಥಿಗಳು ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು: ಹೆಚ್ ಎನ್ ಶಿವಕುಮಾರ್
ಸುದ್ದಿದಿನ,ರಾಣೇಬೆನ್ನೂರ: ಸಾಮಾಜಿಕ ಹಾಗೂ ಶೈಕ್ಷಣಿಕ ಜವಾಬ್ದಾರಿಗಳ ಅಗತ್ಯವು ವಿದ್ಯಾರ್ಥಿಗಳಿಗೆ ಅವಶ್ಯಕವಾಗಿದೆ. ವಿದ್ಯಾರ್ಥಿಗಳು ತಮಗೆ ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು.ಸದಾಕಾಲ ಜ್ಞಾನವನ್ನು ಪಡೆಯುವ ತನಕ ಹೊಂದಿ ಜ್ಞಾನಿಗಳಾಗುವ ಗುರಿ ಹೊಂದಲು ಬಾಪೂಜಿ ಮಹಾವಿದ್ಯಾಲಯ ಉಪ ಪ್ರಾಚಾರ್ಯರಾದ ಎಚ್ ಎನ್ ಶಿವಕುಮಾರ್ ನುಡಿದರು.
ಅವರು ಸ್ಥಳೀಯ ಬಿಎಜೆಎಸ್ಎಸ್ ಪ್ರಥಮ ದರ್ಜೆ ಕಾಲೇಜಿನ ಪ್ರತಿಭಾ ಪುರಸ್ಕಾರ, ಬಿಳ್ಕೋಡಿಗೆ ಕಾರ್ಯಕ್ರಮ ಮತ್ತು ವಿದ್ಯಾರ್ಥಿ ಒಕ್ಕೂಟದ, ಎನ್ ಎಸ್ ಎಸ್ ಚಟುವಟಿಕೆ, ಯುವ ರೆಡ್ ಕ್ರಾಸ್ ಘಟಕದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.
ವಿಶೇಷ ಅತಿಥಿಗಳಾಗಿ ಉಪಸ್ಥಿತರಿದ್ದ ಬಿಎ ಜೆಎಸ್ಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಅಧಿಕಾರಿಗಳು ಡಾ.ಆರ್ ಎಂ ಕುಬೇರಪ್ಪ ಮಾತನಾಡಿ ವಿದ್ಯೆಯನ್ನು ವಿನಯದಿಂದ ವಿದ್ಯೆಕಲಿಯಬೇಕು ಸಂಸ್ಕಾರವಂತರಾಗ ಬೇಕು, ಸಂಸ್ಕಾರ ಹೊಂದಿರುವ ವ್ಯಕ್ತಿಗಳು ಪುರಸ್ಕಾರ ಪಡೆದರೆ ಸಂಸ್ಕಾರ ಇಲ್ಲದವರು ಸಮಾಜದಲ್ಲಿ ತಿರಸ್ಕಾರಕ್ಕೆ ಒಳಗಾಗುವರು.ನಿಮ್ಮ ಬದುಕನ್ನು ನೀವೆ ಕಟ್ಟಿಕೊಳ್ಳುವ ನೆಲೆಯಲ್ಲಿ ಪ್ರಯತ್ನಿಸಬೇಕು ಎಂದು ನುಡಿದರು.
ಪ್ರಾಚಾರ್ಯರಾದ ಪ್ರಕಾಶ್ ಬಸಪ್ಪನವರ್ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಎಚ್ ಎನ್ ಭೀಕ್ಷಾವರ್ತಿಮಠ ಹಾಗೂ ಕೆ ಕೆ ಹಾವಿನಾಳ ರವರು ವಿದ್ಯಾರ್ಥಿಗಳಿಗೆ ಹಿತವಚನ ನುಡಿದರು.ಆರಂಭದಲ್ಲಿಪ್ರೋ.ಎಂ ಡಿ ಹೊನ್ನಮ್ಮನವರ ಸ್ವಾಗತಿಸಿದರು.ಪ್ರೋ.ಶ್ರೀಕಾಂತ ಕುಂಚೂರ, ಪ್ರಾಸ್ತಾವಿಕ ಮಾತನಾಡಿ ವಾರ್ಷಿಕ ವರದಿ ವಾಚಿಸಿದರು.
ಕೊನೆಯಲ್ಲಿ ಪ್ರೋ.ಪುಷ್ಟಾ ಕಬ್ಬಿನಾಲೆ ವಂದಿಸಿದರು.ಇದೆ ಸಮಾರಂಭದಲ್ಲಿ ಕ್ರೀಡೆ, ಸಾಂಸ್ಕೃತಿಕ, ಸಾಮಾಜಿಕ ಸೇವೆಗಳಲ್ಲಿವಿದ್ಯಾರ್ಥಿಗಳ ಸಾಧನೆ ಗುರುತಿಸಿ ಪುರಸ್ಕಾರ ಮಾಡಲಾಯಿತು.ವರ್ಷದ ಮಹಾವಿದ್ಯಾಲಯ ಉತ್ತಮ ವಿದ್ಯಾರ್ಥಿಗಳನ್ನು ಗುರುತಿಸಿ ಪುರಸ್ಕಾರ ಪ್ರದಾನ ಮಾಡಲಾಯಿತು.ವಿವಿಧ ವಿಷಯದ ಉಪನ್ಯಾಸಕರು, ವಿದ್ಯಾರ್ಥಿಗಳು, ಸಿಬ್ಬಂದಿ ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಗವಿಸಿದ್ಧ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿಗೆ ದಾವಣಗೆರೆಯ ಪಾಪು ಗುರು ಆಯ್ಕೆ
ಸುದ್ದಿದಿನ,ದಾವಣಗೆರೆ: ಕವಿ ಗವಿಸಿದ್ಧ ಎನ್. ಬಳ್ಳಾರಿ ವೇದಿಕೆ ಹಾಗೂ ಗವಿಸಿದ್ಧ ಎನ್. ಬಳ್ಳಾರಿ ಸಾಂಸ್ಕೃತಿಕ, ಕಲಾ, ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಸೇವಾ ಸಂಸ್ಥೆ, ಕೊಪ್ಪಳ ವತಿಯಿಂದ ನೀಡಲಾಗುವ **”ಗವಿಸಿದ್ಧ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ – 2026″**ಕ್ಕೆ ದಾವಣಗೆರೆಯ ಕವಿ ಹಾಗೂ ಪತ್ರಕರ್ತ ಪಾಪು ಗುರು ಅವರ “ಈ ಹೊತ್ತಿಗೆ ಇಷ್ಟು ಸಾಕು” ಕವನ ಹಸ್ತ ಪ್ರತಿ ಆಯ್ಕೆಯಾಗಿದೆ.
ಪ್ರಶಸ್ತಿಗೆ ಈ ಬಾರಿ ರಾಜ್ಯದ ವಿವಿಧ ಭಾಗಗಳಿಂದ ಒಟ್ಟು 53 ಕವನ ಹಸ್ತಪ್ರತಿಗಳು ಬಂದಿದ್ದು, ಅಂತಿಮ ಆಯ್ಕೆ ಪ್ರಕ್ರಿಯೆಯಲ್ಲಿ ಪಾಪು ಗುರು ಅವರ ಕೃತಿ ಪ್ರಶಸ್ತಿಗೆ ಪಾತ್ರವಾಗಿದೆ.
ಪ್ರಶಸ್ತಿಯು ₹5,000 ನಗದು ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ನವೆಂಬರ್ ತಿಂಗಳಲ್ಲಿ ಕೊಪ್ಪಳದಲ್ಲಿ ನಡೆಯಲಿರುವ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದೆ ಎಂದು ಸಾಹಿತ್ಯೋತ್ಸವದ ಸಂಚಾಲಕ ಮಹೇಶ್ ಬಳ್ಳಾರಿ ತಿಳಿಸಿದ್ದಾರೆ.
ಈಗಾಗಲೇ ಸಾಹಿತ್ಯ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಪಾಪು ಗುರು ಅವರ ‘ಮುಳ್ಳೆಲೆಯ ಮದ್ದು’, ‘ಮಣ್ಣೇ ಮೊದಲು’ ಕವನ ಸಂಕಲನಗಳು ಹಾಗೂ ‘ಸೂಜಿ’ ಕಾದಂಬರಿ ಪ್ರಕಟವಾಗಿವೆ. ಅಲ್ಲದೆ ‘ಕೆಂಪು ಕಾಂಡದ ಹೂ’ ಮತ್ತು ‘ಹಸಿರು ಹಾದಿಯ ಹೆಜ್ಜೆಗಳು’ ಕೃತಿಗಳನ್ನು ಸಂಪಾದನೆ ಮಾಡಿದ್ದಾರೆ. ಅವರ ಸೂಳೆಕೆರೆಯ ಇತಿಹಾಸದ ಹಿನ್ನೆಲೆ ಇರುವ ‘ಶಾಂತದೇವಿ’ ಕಾದಂಬರಿ ಮುದ್ರಣ ಹಂತದಲ್ಲಿದೆ.
ಸಾಹಿತ್ಯ, ಪತ್ರಿಕೋದ್ಯಮ ಮತ್ತು ಸೃಜನಶೀಲ ಬರವಣಿಗೆಯ ಮೂಲಕ ತಮ್ಮದೇ ಆದ ಛಾಪು ಮೂಡಿಸಿರುವ ಪಾಪು ಗುರು ಅವರಿಗೆ ದೊರೆತಿರುವ ಈ ಪ್ರಶಸ್ತಿ ಸಾಹಿತ್ಯ ವಲಯದಲ್ಲಿ ಸಂತಸಕ್ಕೆ ಕಾರಣವಾಗಿದೆ. ಇವರಿಗೆ ಜಿಲ್ಲೆಯ ಅಭಿಮಾನಿಗಳು, ಪತ್ರಕರ್ತರು ಮತ್ತು ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಸಾಹಿತಿ ಸಂತೆಬೆನ್ನೂರು ಫೈಜ್ನಟ್ರಾಜ್ ಹಾಗೂ ಹೆಚ್ ಬಿ. ಇಂದ್ರಕುಮಾರ್ ಅಭಿನಂದನೆ ಸಲ್ಲಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoದಾವಣಗೆರೆ | ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ
-
ದಿನದ ಸುದ್ದಿ18 hours agoಪಲ್ಸ್ ಪೋಲಿಯೋದಿಂದ ಯಾವುದೇ ಮಗು ವಂಚಿತವಾಗದಂತೆ ಕ್ರಮವಹಿಸಿ: ಜಿ.ಪಂ. ಸಿಇಒ ಗಿತ್ತೆ ಮಾಧವ ವಿಠ್ಠಲರಾವ್
-
ದಿನದ ಸುದ್ದಿ17 hours agoದುರಂತ | ಮೇಲ್ಛಾವಣಿ ಕುಸಿದು ಮೂವರು ಸಾವು
-
ದಿನದ ಸುದ್ದಿ3 hours agoನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್ ಆಹ್ವಾನ

