ದಿನದ ಸುದ್ದಿ
ಚಿರು ಸರ್ಜಾ ಮೂರನೇ ದಿನದ ಹಾಲು ತುಪ್ಪ ಕಾರ್ಯ : ಕುಟುಂಬದವರು ಭಾಗಿ
ಸುದ್ದಿದಿನ,ಬೆಂಗಳೂರು: ಯುವ ನಟ ಚಿರಂಜೀವಿ ಸರ್ಜಾ ಬಾರದ ಲೋಕಕ್ಕೆ ಪ್ರಯಾಣ ಬೆಳೆಸಿದ್ದಾರೆ. ಇಂದು ಚಿರು ಸರ್ಜಾ ಅವರ ಮೂರನೇ ದಿನದ ಹಾಲು ತುಪ್ಪ ಕಾರ್ಯ ನಡೆಯುತ್ತಿದೆ.
ಕನಕಪುರ ನೆಲಗುಳಿ ಗ್ರಾಮದಲ್ಲಿರುವ ಧ್ರುವ ಸರ್ಜಾ ಫಾರ್ಮ್ ಹೌಸ್‍ನಲ್ಲಿರುವ ಚಿರು ಸಮಾಧಿ ಬಳಿ ಪುರೋಹಿತರಿಂದ ಹಾಲು ತುಪ್ಪ ಕಾರ್ಯ ನಡೆಯುತ್ತಿದೆ. ಸೋಮವಾರ ಸಂಜೆ 6 ಗಂಟೆ ಹೊತ್ತಿಗೆ ಹಿಂದೂ ಸಂಪ್ರದಾಯದಂತೆ ಚಿರಂಜೀವಿ ಸರ್ಜಾ ಅಂತ್ಯಕ್ರಿಯೆ ನೆರವೇರಿತ್ತು. ಅಂತ್ಯಕ್ರಿಯೆ ವಿಧಿವಿಧಾನ ನಡೆಸಿಕೊಟ್ಟ ಮೋಹನ್ ಪುರೋಹಿತರಿಂದಲೇ ಇಂದು ಚಿರುವಿನ ಹಾಲು ತುಪ್ಪ ಕಾರ್ಯ ನಡೆಯುತ್ತಿದೆ.
ಇಂದು ಬೆಳಗ್ಗೆಯೇ ಸರ್ಜಾ ಕುಟುಂಬ ಮತ್ತು ಮೇಘನಾ ರಾಜ್ ಕುಟುಂಬದವರು ಕೆ.ಆರ್ ರಸ್ತೆಯಲ್ಲಿರುವ ನಿವಾಸದಿಂದ ಬೃಂದಾವನ ಫಾರ್ಮ್ ಹೌಸ್‍ಗೆ ಹೋಗಿದ್ದರು. ಚಿರು ಹಾಲು ತುಪ್ಪ ಕಾರ್ಯದಲ್ಲಿ ಕುಟುಂಬ ಸದಸ್ಯರು ಮತ್ತು ಕೆಲ ಆಪ್ತರು ಮಾತ್ರ ಪಾಲ್ಗೊಂಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243