ದಿನದ ಸುದ್ದಿ

ಸಿಎಂಕೆಕೆವೈ | ಉಚಿತ ತರಬೇತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : ಪ್ರಸಕ್ತ ಸಾಲಿನ ಮುಖ್ಯಮಂತ್ರಿಗಳ ಕೌಶಲ್ಯ ಕರ್ನಾಟಕ ಯೋಜನೆ (ಸಿಎಂಕೆಕೆವೈ), ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆ ಮೂಲಕ 18 ರಿಂದ 35 ವರ್ಷದೊಳಗಿನ ಎಲ್ಲಾ ವರ್ಗದ ನಿರುದ್ಯೋಗಿ ಯುವಕ/ಯುವತಿಯರಿಗಾಗಿ ಉದ್ಯೋಗಾವಕಾಶ ಹೆಚ್ಚಿಸಲು ಉಚಿತವಾಗಿ ತರಬೇತಿ ನೀಡಲು ಉದ್ದೇಶಿಸಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಡಿಪ್ಲೋಮಾ ಮೆಕಾನಿಕಲ್, ಬಿ.ಇ ಮೆಕಾನಿಕಲ್, ಮತ್ತು ಯಾವುದೇ ಪದವಿ ಪಾಸ್ ಆಗಿರುವ ಅಭ್ಯರ್ಥಿಗಳಿಗೆ ಡೊಮೆಸ್ಟಿಕ್ ಡಾಟಾ ಎಂಟ್ರಿ ಆಪರೇಟರ್, ಸಿ.ಎನ್.ಸಿ ಆಪರೇಟರ್ ಟನಿರ್ಂಗ್, ಸಿ.ಎನ್.ಸಿ ಪ್ರೋಗ್ರಾಮರ್, ಕನ್‍ವೆನ್‍ಷನಲ್ ಟರ್ನಿಂಗ್ ಮಷಿನ್ ಆಪರೇಟರ್, ಮಿಲ್ಲಿಂಗ್ ಮಸಿನ್ ಆಪರೇಟರ್, ಸರ್ಫೇಸ್ ಗ್ರೈಡಿಂಗ್ ಮಷಿನ್ ಆಪರೇಟರ್, ಡಿಸೈನರ್-ಮೆಕಾನಿಕಲ್, ಪ್ರೊಡಕ್ಷನ್ ಇಂಜಿನಿಯರ್, ಟೂಲ್ ರೂಮ್ ಮಷಿನಿಷ್ಟ್ ಕೋರ್ಸ್‍ಗಳಲ್ಲಿ ಅಲ್ಪಾವಧಿ ತರಬೇತಿಗಳನ್ನು ಉಚಿತವಾಗಿ ನೀಡಿ ತರಬೇತಿಯ ಅವಧಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಶಿಷ್ಯವೇತನ ನೀಡುವುದರ ಜೊತೆಗೆ ತರಬೇತಿ ಮುಗಿದ ನಂತರ ಉದ್ಯೋಗಾವಕಾಶಕ್ಕೆ ಮಾರ್ಗದರ್ಶನ ನೀಡಲಾಗುತ್ತದೆ.

ಅರ್ಜಿ ಸಲ್ಲಿಸಲು ಮಾರ್ಚ್ 04 ಕೊನೆಯ ದಿನವಾಗಿದ್ದು ಹೆಚ್ಚಿನ ವಿವರಗಳಿಗಾಗಿ ಪ್ರಾಂಶುಪಾಲರು, ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, 22 ಸಿ ಅಂಡ್ ಡಿ, ಕೆಐಎಡಿಬಿ, ಇಂಡಸ್ಟ್ರಿಯಲ್ ಏರಿಯ ಹರ್ಲಾಪುರ, ಕೆಎಸ್‍ಆರ್‍ಟಿಸಿ ಡಿಪೋ ಹತ್ತಿರ ಹರಿಹರ, ಫೋ: 08192-243937, 9916018111, 8884488202, 8711913947 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version