ರಾಜಕೀಯ
ಆಪರೇಷನ್ ‘ಹಸ್ತ’..?
ಸುದ್ದಿದಿನ, ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ಕುದುರೆ ವ್ಯಾಪಾರ ನಡೆಯುವ ಲಕ್ಷಣಗಳು ಕಾಣುತ್ತಿದ್ದು, ಕಾಂಗ್ರೆಸ್ ಆಪರೇಷನ್ ಹಸ್ತ ನಡೆಸಲು ತೀರ್ಮಾನಿಸಿದೆ.
ಇದಕ್ಕಾಗಿ ‘ಸೂಸೈಡ್ ಸ್ಕಾಡ್ ಅನ್ನು ಆರಂಭಿಸಿರುವ ಕಾಂಗ್ರೆಸ್, ಕಮಲ ಪಾಳಯದ ಶಾಸಕರನ್ನು ಕಾಂಗ್ರೆಸ್‌ಗೆ ಸೆಳೆಯಲು ರಣತಂತ್ರ ಹೆಣೆದಿದೆ. ಸದ್ಯ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಡಿಸಿಎಂ ಪರಮೇಶ್ವರ್, ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಸೇರಿ ಹಲವು ಕಾಂಗ್ರೆಸ್ ಮುಖಂಡರು ಈ ಆಪರೇಷನ್ ಹಸ್ತಕ್ಕೆ ಕೈ ಹಾಕಿದ್ದಾರೆ. ಈ ಆಪರೇಷನ್ ಹಸ್ತಕ್ಕೆ ಜೆಡಿಎಸ್ ಸಹಕಾರ ನೀಡಿದೆ ಎಂದು ಮೂಲಗಳು ತಿಳಿಸಿವೆ.
ಕಾಂಗ್ರೆಸ್ ಉತ್ತರ ಕರ್ನಾಟಕದ ಬಿಜೆಪಿ ಶಾಸಕರಿಗೆ ಬಲಿ ಬೀಸಿದ್ದು, ಅದಲ್ಲಿ ಹೊಳಲ್ಕೆರೆ ಶಾಸಕ ಗೂಳಿಹಟ್ಟಿ ಶೇಖರ್, ಜಗಳೂರು ಶಾಸಕ ರಾಮಚಂದ್ರಪ್ಪ ಸೇರಿ ಹಲವರನ್ನು ಕಾಂಗ್ರೆಸ್‌ಗೆ ಬರಮಾಡಿಕೊಳ್ಳಲು ಸಚಿವ ಡಿ.ಕೆ. ಶಿವಕುಮಾರ್ ತಂತ್ರ ಹೆಣೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಅಲ್ಲದೆ, ಸಮ್ಮಿಶ್ರ ಸರ್ಕಾರ ರಚನೆಯಲ್ಲಿ ಮುಖ್ಯ ಪಾತ್ರ ನಿರ್ವಹಿಸಿದ್ದ ಸಚಿವ ಡಿ.ಕೆ. ಶಿವಕುಮಾರ್, ಬಿಜೆಪಿ ಶಾಸಕರೇ ನಮ್ಮ ವಶದಲ್ಲಿದ್ದಾರೆ. ಬಿಜೆಪಿ ಒಂದು ಹೆಜ್ಜೆ ಮುಂದಿಟ್ಟರೆ ಏನು ಮಾಡಬೇಕೆಂಬುದು ನಮಗೆ ಗೊತ್ತು ಎಂದು ಹೇಳಿರುವುದು ಕಮಲ ಪಾಳಯದಲ್ಲಿ ಸಂಚಲನ ಮೂಡಿಸಿದೆ. ಅಲ್ಲದೇ ಸಿಎಂ ಕುಮಾರಸ್ವಾಮಿ ಸಹ ನಮಗೆ ಜತೆಗೆ ಬಿಜೆಪಿಯ 6 ಶಾಸಕರು ಸಂಪರ್ಕದಲ್ಲಿದ್ದಾರೆ ಎಂದು ಹೇಳಿದ್ದಾರೆ. ಈ ಮೂಲಕ ‘ಸೂಸೈಡ್ ಸ್ಕ್ವಾಡ್ ಆಪರೇಷನ್ ಹಸ್ತ ಆರಂಭಿಸಿರುವುದು ಸ್ಪಷ್ಟವಾಗಿದೆ.