ದಿನದ ಸುದ್ದಿ
ವಿಶ್ವದಾದ್ಯಂತ 20 ಲಕ್ಷ ಮೀರಿದ ಕೊರೋನಾ ಸೋಂಕಿತರ ಸಂಖ್ಯೆ..!
ಸುದ್ದಿದಿನ ಡೆಸ್ಕ್ : ವಿಶ್ವಾದ್ಯಂತ ಅಟ್ಟಹಾಸ ಮೆರೆಯುತ್ತಿರುವ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 20 ಲಕ್ಷದ ಗಡಿ ತಲುಪಿದ್ದು, ಅಮೆರಿಕ ಮತ್ತು ಇಟಲಿಯಲ್ಲಿ ಅತೀ ಹೆಚ್ಚು ಸೋಂಕಿತ ಪ್ರಕರಣ ವರದಿಯಾಗಿದೆ. ಈ ಎರಡು ರಾಷ್ಟ್ರಗಳಲ್ಲಿ 20 ಸಾವಿರಕ್ಕೂ ಅಧಿಕ ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.
ಜಗತ್ತಿನಾದ್ಯಂತ 19,25,853 ಮಂದಿಗೆ ಸೋಂಕು ತಗುಲಿದ್ದು, ಈವರೆಗೆ 1,19,719 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಹಾಗೆಯೇ 4,52,333 ಮಂದಿ ಗುಣಮುಖರಾಗಿದ್ದಾರೆ. ದಿನೇ ದಿನೇ ವಿಶ್ವದೆಲ್ಲೆಡೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಕೊರೊನಾ ಅಟ್ಟಹಾಸಕ್ಕೆ ಬಲಿಷ್ಠ ರಾಷ್ಟ್ರಗಳೇ ತತ್ತರಿಸಿ ಹೋಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243