Connect with us

ದಿನದ ಸುದ್ದಿ

ದಾವಣಗೆರೆ | ಕೊರೊನಾ ಒಂದು ಶಂಕಿತ ಪ್ರಕರಣ : ಗಂಟಲು ದ್ರವ ಮಾದರಿ ಪರೀಕ್ಷೆಗೆ ಜಿಲ್ಲಾಧಿಕಾರಿಗಳಿಂದ ಐಸೊಲೇಟೆಡ್ ವಾರ್ಡ್‍ಗಳ ಪರಿಶೀಲನೆ

Published

on

ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ಇದುವರೆಗೆ ಕೊರೊನಾ ವೈರಸ್ (ಕೋವಿಡ್-19) ಸೋಂಕಿನ ಯಾವುದೇ ಪ್ರಕರಣ ವರದಿಯಾಗಿಲ್ಲ. ಆದರೆ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯ ಜಿಲ್ಲಾಸ್ಪತ್ರೆ, ಬಾಪೂಜಿ ಮತ್ತು ಎಸ್. ಎಸ್.ಆಸ್ಪತ್ರೆ ಸೇರಿದಂತೆ ಒಟ್ಟು 132 ಬೆಡ್‍ಗಳನ್ನು ಈ ಸೋಂಕಿಗೆ ಚಿಕಿತ್ಸೆ ನೀಡಲೆಂದು ಮೀಸಲಿರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದರು.

ಕೊರೊನ ವೈರಸ್ ಸೋಂಕು ಮುನ್ನೆಚ್ಚರಿಕೆ ಕ್ರಮದ ಹಿನ್ನೆಲೆ ಇಂದು ನಗರದ ಜಿಲ್ಲಾ ಚಿಗಟೇರಿ ಆಸ್ಪತ್ರೆ, ಬಾಪೂಜಿ, ಎಸ್.ಎಸ್.ಆಸ್ಪತ್ರೆಗಳಿಗೆ ಭೇಟಿ ನೀಡಿ ಕೊರೊನಾ ವೈರಸ್ ಸೋಂಕಿತರಿಗೆ ಚಿಕಿತ್ಸೆ ನೀಡಲೆಂದು ಮುನ್ನೆಚ್ಚರಿಕೆ ಕ್ರಮವಾಗಿ ಮೀಸಲಿಡಲಾಗಿರುವ ಐಸೊಲೇಟೆಡ್ ವಾರ್ಡ್‍ಗಳನ್ನು ಪರಿಶೀಲಿಸಿದ ನಂತರ ಮಾತನಾಡಿದರು.

ಕೊರೊನಾ ಸೋಂಕಿನ ಚಿಕಿತ್ಸೆಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯಲ್ಲಿ ಒಟ್ಟು 132 ಬೆಡ್‍ಗಳನ್ನು ಸಿದ್ದಪಡಿಸಿದ್ದೇವೆ. ಜಿಲ್ಲಾ ಚಿಗಟೇರಿ ಆಸ್ಪತ್ರೆಯಲ್ಲಿ ಒಟ್ಟು 10 ಬೆಡ್‍ಗಳು, ಬಾಪೂಜಿ ಆಸ್ಪತ್ರೆಯಲ್ಲಿ 15 ಬೆಡ್‍ಗಳು ಹಾಗೂ ಎಸ್.ಎಸ್.ಆಸ್ಪತ್ರೆಯಲ್ಲಿ 15 ಬೆಡ್‍ಗಳುಳ್ಳ ಐಸೊಲೇಟೆಡ್ ವಾರ್ಡ್‍ಗಳನ್ನು ಮೀಸಲಿಡಲಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಒಂದೆಡೆ ಮೂರು ಮತ್ತು ಒಂದೆಡೆ ನಾಲ್ಕು ಬೆಡ್ ವ್ಯವಸ್ಥೆ ಮಾಡಲಾಗಿದೆ. ಹಾಗೂ ತಾಲ್ಲೂಕು ಮಟ್ಟದಲ್ಲಿ ಐಸೊಲೇಟೆಡ್ ವಾರ್ಡ್‍ಗಳ ವ್ಯವಸ್ಥೆ ಮಾಡಲಾಗಿದೆ.

ಶಂಕಿತ ಪ್ರಕರಣ-ನಿಗಾ

11ನೇ ತಾರೀಖಿನಂದು ಹರಪನಹಳ್ಳಿ ತಾಲ್ಲೂಕಿನ ಕಂಚಿಕೇರಿ ಗ್ರಾಮಕ್ಕೆ ಸುಮಾರು 26 ವರ್ಷದ ಯುವಕ ದುಬೈನಿಂದ ಬಂದಿದ್ದು, ಬಳ್ಳಾರಿ ಜಿಲ್ಲಾಧಿಕಾರಿಗಳು ಕಂಚಿಕೇರಿ ದಾವಣಗೆರೆಗೆ ಸಮೀಪವಿರುವ ಕಾರಣ ಜಿಲ್ಲಾ ಚಿಗಟೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವಂತೆ ಕೇಳಿಕೊಂಡ ಹಿನ್ನೆಲೆಯಲ್ಲಿ ಚಿಗಟೇರಿ ಆಸ್ಪತ್ರೆಯಲ್ಲಿ ತಪಾಸಣೆ ನಡೆಸಲಾಗಿದೆ. ಆ ಯುವಕನಿಗೆ ಕೊರೊನಾ ವೈರಸ್ ಸೋಂಕಿನ ಯಾವ ಲಕ್ಷಣಗಳೂ ಕಂಡು ಬಂದಿಲ್ಲ. ಹಾಗೂ ಆತ ಕೂಡ ಊರಿಗೆ ಹೋಗುವುದಾಗಿ ಹೇಳುತ್ತಿದ್ದಾರೆ.

ಆದರೆ ಬಳ್ಳಾರಿ ಜಿಲ್ಲಾಧಿಕಾರಿಗಳು ಆತನಿಗೆ ಗಂಟಲು ನೋವಿದೆ ಎಂದು ಹೇಳಲಾಗುತ್ತಿರುವ ಹಿನ್ನೆಲೆ ಪರೀಕ್ಷೆ ಮಾಡಿಸುವಂತೆ ತಿಳಿಸಿರುತ್ತಾರೆ. ಈ ಹಿನ್ನಲೆಯಲ್ಲಿ ಆತನ ಗಂಟಲು ದ್ರವ ಮಾದರಿಯನ್ನು ಪರೀಕ್ಷೆ ಕಳುಹಿಸಲಾಗಿದ್ದು ನಾಳೆಗೆ ಆ ಪರೀಕ್ಷೆಯ ವರದಿ ಬರಲಿದೆ. ಸದ್ಯಕ್ಕೆ ಮುಂಜಾಗೃತಾ ಕ್ರಮವಾಗಿ ಆಸ್ಪತ್ರೆಯಲ್ಲೇ ಇರಿಸಿಕೊಳ್ಳಲಾಗಿದೆ. ನಂತರದಲ್ಲಿ ಯಾವುದೇ ಲಕ್ಷಣಗಳು ಕಂಡು ಬರದಿದ್ದರೂ ಆತನನ್ನು ಮನೆಯಲ್ಲೇ 14 ದಿನ ನಿಗಾವಣೆಯಲ್ಲಿರುವಂತೆ ಸೂಚಿಸಲಾಗುವುದು.

  • ಮಹಾಂತೇಶ ಬೀಳಗಿ, ಜಿಲ್ಲಾಧಿಕಾರಿಗಳು

ವಿದೇಶ ಹೋಗಿ ಬಂದ ಇತಿಹಾಸವಿರುವ 49 ಜನ ಜಿಲ್ಲೆಯಲ್ಲಿದ್ದು, 14 ಜನ 14 ದಿನ ಅವಲೋಕನ ಅವಧಿ ಮುಗಿಸಿದ್ದಾರೆ. ಒಬ್ಬರು 28 ದಿನ ಅವಲೋಕನ ಅವಧಿ ಮುಗಿಸಿದ್ದಾರೆ. ಇನ್ನುಳಿದವರು ಅವಲೋಕನ ಅವಧಿಯ ಬೇರೆ ಬೇರೆ ಹಂತದಲ್ಲಿದ್ದು, ಯಾರಲ್ಲೂ ಸೋಂಕಿನ ಲಕ್ಷಣ ಇಲ್ಲ. ಸೋಂಕಿನ ಲಕ್ಷಣಗಳಿದ್ದ ನಾಲ್ಕು ಜನರ ವರದಿ ನÉಗೆಟೆವ್ ಇದ್ದು ಜಿಲ್ಲೆಯಲ್ಲಿ ಯಾವುದೇ ಖಚಿತಪಟ್ಟ ಪ್ರಕರಣಗಳು ವರದಿಯಾಗಿಲ್ಲ ಎಂದರು.

ಇಂದು ವಿಡಿಯೋ ಕಾನ್ಫರೆನ್ಸ್‍ನಲ್ಲಿ ಮಾನ್ಯ ಮುಖ್ಯಂತ್ರಿಗಳು ದಿನಸಿ ವಸ್ತುಗಳು, ದೈನಂದಿನ ವಸ್ತುಗಳನ್ನು ಮಾರಾಟ ಮಾಡಲಾಗುವು ಮೋರ್, ಬಿಗ್‍ಬಜಾರ್‍ಗಳಂತಹ ಶಾಪ್‍ಗಳನ್ನು ಬಂದ್ ಮಾಡಬಾರದು. ಕೆಲವರು ಮಾಡಿರುವುದು ಗಮನಕ್ಕೆ ಬಂದಿದ್ದು ತೆರೆಯುವಂತೆ ಸೂಚನೆ ನೀಡಲು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿಯೂ ಇಂತಹ ಶಾಪ್‍ಗಳನ್ನು ತೆರೆಯುವಂತೆ ಪಾಲಿಕೆ ಆಯುಕ್ತರ ಮೂಲಕ ಸೂಚನೆ ನೀಡಿದ್ದೇವೆ. ಜನಸಂದಣಿಯಾವುಂತಹ ಕಾರ್ಯಕ್ರಮಗಳು, ಘಟನೆಗಳ ನಿಯಂತ್ರಣಕ್ಕಾಗಿ ಹಬ್ಬ, ಜಾತ್ರೆ, ಸಂತೆಗಳನ್ನು ನಿಷೇಧಿಸಲು ಕ್ರಮ ವಹಿಸಲಾಗಿದೆ. ದೈವದ ಕೃಪೆಯಿಂದ ಜಿಲ್ಲೆಯಲ್ಲಿ ಆತಂಕಕಾರಿ ಎನ್ನುವ ಸ್ಥಿತಿ ಇಲ್ಲ. ಆದರೆ ಕೊರೊನಾ ವೈರಸ್ ಸೋಂಕಿನ ನಿಯಂತ್ರಣ ಮತ್ತು ತಡೆಗಾಗಿ ಎಲ್ಲ ರೀತಿಯ ಪೂರ್ವ ತಯಾರಿ ಮಾಡಿಕೊಳ್ಳಲಾಗಿದೆ ಎಂದರು.

ಈ ವೇಳೆ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹನುಮಂತರಾಯ, ಜಿ.ಪಂ.ಸಿಇಓ ಪದ್ಮಾ ಬಸವಂತಪ್ಪ, ಡಿಹೆಚ್‍ಓ ಡಾ.ರಾಘವೇಂದ್ರಸ್ವಾಮಿ, ಪಾಲಿಕೆ ಆಯುಕ್ತರು, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ವಿಜಯ್ ಕುಮಾರ್, ಎಸ್‍ಎಸ್‍ಐಎಂ ಪ್ರಾಂಶುಪಾಲರಾದ ಪ್ರಸಾದ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಡಿ ಆರ್ ಆರ್ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ‘ಶೈಕ್ಷಣಿಕ ಪೀಠಿಕೆ ಕಾರ್ಯಕ್ರಮ’

Published

on

ಸುದ್ದಿದಿನ,ದಾವಣಗೆರೆ: ನಗರದ ಡಿ ಆರ್ ಆರ್ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಪ್ರಥಮ ವರ್ಷದ ಹಾಗೂ ಲ್ಯಾಟರಲ್ ಎಂಟ್ರಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪೀಠಿಕೆ ಕಾರ್ಯಕ್ರಮವನ್ನು ಪ್ರಾಂಶುಪಾಲರಾದ ರಶ್ಮಿ . ಸಿ. ಹೆಚ್ ಅವರು ಉದ್ಘಾಟಿಸಿದರು.

ಸನಾವುಲ್ಲಾ ನವಿಲೇಹಾಳು ಅವರು ಉಪನ್ಯಾಸ ಮಾಡಿ ಹೊಸ ತಲೆಮಾರಿನವರು ಸಮಾಜಿಕ ಜಾಲತಾಣಗಳಲ್ಲಿ ಗೇಮ್ , ರೀಲ್ಸ್ ಇತರೆ ವಿಷಯಗಳಲ್ಲಿ ಮುಳುಗಿ ಬಿಕ್ಕಟ್ಟಿಗೆ ಸಿಲುಕಿದ್ದಾರೆ. ಶಿಕ್ಷಣ ಪಡೆದು ಉತ್ತಮ ವ್ಯಕ್ತಿತ್ವ ಕಟ್ಟಿಕೊಳ್ಳಬೇಕು. ತ್ಯಾಗ ಮತ್ತು ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಕರೆಕೊಟ್ಟರು.

ಉಪಸ್ಥಿತರಿದ್ದ ಕಾಲೇಜಿನ ಕುಲಸಚಿವರಾದ ಶ್ರೀ ಜಗದೀಶ್ ಹೆಚ್ ಅವರು ಮಾತನಾಡಿ ವಿದ್ಯಾರ್ಥಿಗಳು ತಮಗೆ ಎದುರಾಗುವ ಸಮಸ್ಯೆಗಳನ್ನು ಮೆಟ್ಟಿನಿಂತು ಶಿಕ್ಷಣಕ್ಕೆ ಮೊದಲ ಆದ್ಯತೆ ಕೊಡಬೇಕು ಎಂದರು. ಸಿಸಿಟೆಕ್ ಮ್ಯಾನೇಜರ್ ಆದ ಶ್ರೀ ಶಿವಕುಮಾರ ಸ್ವಾಮಿ ಎಸ್.ಹೆಚ್. ಸಂಯೋಜಕರಾದ ಶ್ರೀ ಮತಿ ಆಸೀಯಾ ಬಾನು ಬಿ. ಪ್ರಾಸ್ಥಾವಿಕವಾಗಿ ಮಾತನಾಡಿದರು ಹಾಗೂ ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

ವಿದ್ಯಾರ್ಥಿನಿ ಬೃಂದ ಕಾರ್ಯಕ್ರಮ ನಿರೂಪಿಸಿದರು,
ವೈಷ್ಣವಿ, ಲಾವಣ್ಯ, ಭಾವನ ಪ್ರಾರ್ಥಿಸಿದರು, ಉಪನ್ಯಾಸಕಿ ಪ್ರಿಯಾಂಕ ಟಿ ಎಸ್ ವಂದಿಸಿದರು‌.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ

Published

on

ಸುದ್ದಿದಿನ ಡೆಸ್ಕ್:ಬೆಂಗಳೂರಿನಲ್ಲಿ ಪ್ರೀತಿಯೊಂದು ರಕ್ತಸಿಕ್ತ ಅಂತ್ಯ ಕಂಡಿದೆ. ಮದುವೆಗೆ ನಿರಾಕರಿಸಿದ ಪ್ರೇಯಸಿಯನ್ನು ಪ್ರಿಯಕರನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ಪೈಪ್‌ಲೈನ್ ರಸ್ತೆಯಲ್ಲಿ ನಡೆದಿದೆ.

23 ವರ್ಷದ ಅಂಜಲಿ ಕೊಲೆಯಾದ ಯುವತಿಯಾಗಿದ್ದು, ರಾಜೀವ್ ಬಂಧಿತ ಆರೋಪಿ. ಕಳೆದ ಮೂರು-ನಾಲ್ಕು ವರ್ಷಗಳಿಂದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಈ ಹಿಂದೆ ಕೆಲಸ ಮಾಡುತ್ತಿದ್ದ ಸ್ಥಳದಲ್ಲೇ ಪರಿಚಯವಾಗಿ ಸ್ನೇಹ ಬೆಳೆದು, ಬಳಿಕ ಅದು ಪ್ರೀತಿಗೆ ತಿರುಗಿತ್ತು.

ಆದರೆ ರಾಜೀವ್‌ಗೆ ಕ್ರಿಮಿನಲ್ ಹಿನ್ನೆಲೆ ಇದ್ದ ಕಾರಣ ಅಂಜಲಿ ಕುಟುಂಬಸ್ಥರು ಈ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ಹಲವು ಬಾರಿ ಕುಟುಂಬಸ್ಥರನ್ನು ಒಪ್ಪಿಸಲು ರಾಜೀವ್ ಪ್ರಯತ್ನಿಸಿದ್ದರೂ ಫಲಿಸಿರಲಿಲ್ಲ. ಇತ್ತೀಚೆಗೆ ಪೋಷಕರ ಒತ್ತಾಯಕ್ಕೆ ಮಣಿದ ಅಂಜಲಿ ರಾಜೀವ್‌ನಿಂದ ದೂರವಾಗಲು ಆರಂಭಿಸಿದ್ದಳು. ಇಂದು ಸಂಜೆ ಅಂಜಲಿಯನ್ನು ಊಟದ ನೆಪದಲ್ಲಿ ಕರೆಸಿಕೊಂಡಿದ್ದ ರಾಜೀವ್, ಮತ್ತೊಮ್ಮೆ ಮದುವೆ ವಿಚಾರ ಪ್ರಸ್ತಾಪಿಸಿದ್ದಾನೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು, ಕೋಪಗೊಂಡ ರಾಜೀವ್ ಚಾಕುವಿನಿಂದ ಅಂಜಲಿಯ ಕುತ್ತಿಗೆಗೆ ಇರಿದಿದ್ದಾನೆ.

ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಂಜಲಿಯನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃ*ತಪಟ್ಟಿದ್ದಾಳೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಪರಿಶೀಲನೆ ನಡೆಸಿ, ಕೆಲವೇ ನಿಮಿಷಗಳಲ್ಲಿ ಆರೋಪಿ ರಾಜೀವ್‌ನನ್ನು ಬಂಧಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್‍ ಆಹ್ವಾನ

Published

on

ಸುದ್ದಿದಿನ ಡೆಸ್ಕ್:ಸುಪ್ರಿಯಾನ್ವಿ ಪ್ರೊಡಕ್ಷನ್ಸ್ ಸಂಸ್ಥೆಯಡಿ ಪ್ರಿಯಾ ಸುದೀಪ್‍ ನಿರ್ಮಿಸಿದ ಮೊದಲ ಚಿತ್ರ ‘ಮ್ಯಾಂಗೋ ಪಚ್ಚ’. ಸಂಚಿತ್‍ ಸಂಜೀವ್‍ ಅಭಿನಯದ ಈ ಚಿತ್ರ ಹೆಚ್ಚು ಸದ್ದು ಮಾಡಲಿಲ್ಲ.

ಈ ಸೋಲನ್ನು ಹಿಂದಕ್ಕೆ ಹಾಕಿ, ಪ್ರಿಯಾ ಸುದೀಪ್‍ ಇನ್ನಷ್ಟು ಹೊಸ ಕಥೆಗಳನ್ನು ತೆರೆಗೆ ತರುವುದಕ್ಕೆ, ಹೊಸ ಚಿತ್ರಗಳನ್ನು ನಿರ್ಮಿಸುವುದಕ್ಕೆ ಮುಂದಾಗಿದ್ದಾರೆ. ಕಥೆಗಾರರಿಗೆ ಆಹ್ವಾನ ನೀಡಿದ್ದಾರೆ. ‘ನಾವು ಹುಡುಕುತ್ತಿರುವುದು ಕೇವಲ ಕಥೆಗಳಲ್ಲ. ಮನಸ್ಸುಗಳನ್ನು ಮುಟ್ಟುವ ಭಾವನೆಗಳು, ಚಿಂತನೆಗೆ ಹಚ್ಚುವ ವಿಚಾರಗಳು ಮತ್ತು ಪರದೆಯ ಮೇಲೆ ಹೊಸ ಇತಿಹಾಸ ಬರೆಯುವ ಕಲ್ಪನೆಗಳು.

ನಿಮ್ಮ ಬಳಿ ಮೌಲಿಕ ಕಥೆ-ಚಿತ್ರಕಥೆ ಇದ್ದರೆ ಅಥವಾ ವಿಶಿಷ್ಟ ಕಥಾ ಪರಿಕಲ್ಪನೆ ಇದ್ದರೆ, ಅದನ್ನು ನಮ್ಮೊಂದಿಗೆ ಹಂಚಿಕೊಳ್ಳಿ. ತಮ್ಮದೇ ಆದ ವಿಶಿಷ್ಟ ದೃಷ್ಟಿಕೋನ ಮತ್ತು ಸೃಜನಾತ್ಮಕತೆಯನ್ನು ಹೊಂದಿರುವ ಲೇಖಕರು, ಕಥೆಗಾರರು ಮತ್ತು ಸೃಜನಶೀಲ ಮನಸ್ಸುಗಳನ್ನು ನಾವು ಸ್ವಾಗತಿಸುತ್ತೇವೆ. ಎಲ್ಲಾ ಪ್ರಕಾರಗಳು ಮತ್ತು ಎಲ್ಲಾ ಮಾದರಿಗಳಲ್ಲಿನ ಕಥಾ ಸಲ್ಲಿಕೆಗಳನ್ನು ನಾವು ಸ್ವಾಗತಿಸುತ್ತೇವೆ. ನಿಮ್ಮ ಕಥೆಯೇ ಮುಂದಿನ ದೊಡ್ಡ ಪ್ರಯಾಣದ ಆರಂಭವಾಗಬಹುದು’ ಎಂದು ಪ್ರಿಯಾ ಸುದೀಪ್‍, ಸೋಷಿಯಲ್‍ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಜೊತೆಗೆ ಒಂದು ಮೊಬೈಲ್‍ ಸಂಖ್ಯೆಯನ್ನು ಸಹ ಹಂಚಿಕೊಂಡಿದ್ದಾರೆ. ಆದರೆ, ಕರೆ ಮಾಡುವಂತಿಲ್ಲ. ಚಾಟ್‍ ಮಾತ್ರ ಮಾಡಬಹುದು. ಕಥೆಗಳಿದ್ದರೆ 6663307434 ಸಂಖ್ಯೆಯನ್ನು ಸಂಪರ್ಕಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending