Connect with us

ದಿನದ ಸುದ್ದಿ

ಕೋವಿಡ್ ವ್ಯಾಕ್ಸಿನ್ 2ನೇ ಡೋಸ್ ಹಾಕಿಸಿಕೊಳ್ಳದಿದ್ದರೆ ಲಸಿಕೆ ಫಲಕಾರಿಯಾಗುವುದಿಲ್ಲ

Published

on

ಸುದ್ದಿದಿನ,ದಾವಣಗೆರೆ : ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅಧ್ಯಕ್ಷತೆಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ಜನಸ್ಪಂದನ ಸಭೆಯ ನಂತರ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಮಾಲೋಚನೆ ಸಭೆ ನಡೆಯಿತು. ಈ ವೇಳೆ ಡಿಹೆಚ್‍ಒ ಡಾ.ನಾಗರಾಜ್ ಮಾತನಾಡಿ, ಕೊರೋನ ಎರಡನೇ ಅಲೆ ಪ್ರಾರಂಭವಾಗಿದ್ದು ಇದರ ನಿಯಂತ್ರಣಕ್ಕೆ ಲಸಿಕೆ ನೀಡಲಾಗುತ್ತಿದೆ.

ಆರೋಗ್ಯ ಕಾರ್ಯಕರ್ತರು ಮತ್ತು ಫ್ರಂಟ್‍ಲೈನ್ ವರ್ಕರ್ಸ್ ಮೊದಲ ಡೋಸ್ ಹಾಕಿಸಿಕೊಂಡಿದ್ದು, ಎರಡನೇ ಡೋಸ್ ಹಾಕಿಸಿಕೊಳ್ಳಲು ಮುಂದೆ ಬರುತ್ತಿಲ್ಲ. ಒಂದು ವೇಳೆ 2ನೇ ಡೋಸ್ ಹಾಕಿಸಿಕೊಳ್ಳದೇ ಹೋದರೆ ಲಸಿಕೆ ಫಲಕಾರಿಯಾಗುವುದಿಲ್ಲ ಎಂದು ತಿಳಿಸಿದರು.

ಜಿಲ್ಲಾಧಿಕಾರಿಗಳು ಪ್ರತಿಕ್ರಿಯಿಸಿ, ಎಲ್ಲರೂ ಕಡ್ಡಾಯವಾಗಿ ಲಸಿಕೆ ಪಡೆದುಕೊಳ್ಳಬೇಕು. ಇಲ್ಲವೆಂದರೆ ಮೊದಲ ಡೋಸ್ ಪಡೆದುಕೊಂಡಿದ್ದು ವ್ಯರ್ಥವಾಗತ್ತದೆ ಎಂದು ತಿಳಿಸಿದರು.
ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ರೇಷ್ಮಾ ಕೌಸರ್ ಮಾತನಾಡಿ, ಮಹಿಳಾ ಹಾಸ್ಟೆಲ್‍ಗಳಲ್ಲಿ ವಿದ್ಯಾರ್ಥಿಗಳು ಹೆಚ್ಚಾಗಿದ್ದು ವಾರಕ್ಕೆ ಒಂದು ಬಾರಿ ನೀರು ಬಿಡುತ್ತಾರೆ. ನೀರಿನ ಕೊರತೆ ಅತೀ ಹೆಚ್ಚಾಗಿ ಇರುವುದಲ್ಲದೇ ಕೊರೆಸಿದ ಬೋರ್ ವೆಲ್‍ಗಳಿಂದ ನೀರು ಬೀಳುತ್ತಿಲ್ಲ. ಬೇಸಿಗೆ ದಿನಗಳಲ್ಲಿ ನೀರು ಒಣಗುತ್ತಿದೆ. ಇದಕ್ಕೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದರು.

ಜಿಲ್ಲಾಧಿಕಾರಿ ಪ್ರತಿಕ್ರಿಯಿಸಿ ವಾರಕ್ಕೆ ಎರಡು ಬಾರಿ ಟ್ಯಾಂಕರ್ ನೀರು ತಲುಪಿಸುವಂತೆ ಪಾಲಿಕೆ ಆಯುಕ್ತರಿಗೆ ಸೂಚಿಸಿದರು.
ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಎಸ್.ಆರ್.ಗಂಗಪ್ಪ ಮಾತನಾಡಿ, ಗಿರಿಯಪ್ಪ ಲೇಔಟ್ ಅಲ್ಲಿ ಕುಡಿಯುವ ನೀರಿನ ಕೊರತೆ ಹೆಚ್ಚಾಗಿದ್ದು, ಈಗಾಗಲೇ 3 ಬಾರಿ ಬೋರ್‍ವೆಲ್ ಕೊರೆಸಿದರೂ ನೀರು ಬಿದ್ದಿಲ್ಲ.

ಇದನ್ನೂ ಓದಿ | ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ | ಇಂದು ತಿಪ್ಪಗೊಂಡನಹಳ್ಳಿ ಹಾಗೂ ರಾಜಗೊಂಡನಹಳ್ಳಿ ಗ್ರಾಮದಲ್ಲಿ ಗ್ರಾಮವಾಸ್ತವ್ಯ

ಪಾಲಿಕೆಯ ಪೈಪ್‍ಲೈನ್ ಕೂಡ ಲೇಔಟ್ ನಿಂದ ದೂರದಲ್ಲಿದ್ದು ಸಂಪರ್ಕ ನೀಡಿಲ್ಲ. ಆದ್ದರಿಂದ ಈ ಲೇಔಟ್ ಗೆ ಪೈಪ್‍ಲೈನ್ ವ್ಯವಸ್ಥೆ ಮಾಡಿ ಹಾಗೂ ವಾರಕ್ಕೆ 2-3 ಬಾರಿ ಟ್ಯಾಂಕರ್ ನೀರನ್ನು ಬಿಡುವ ವ್ಯವಸ್ಥೇ ಮಾಡುವಂತೆ ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ವಾರಕ್ಕೆ 2 ಬಾರಿ ಟ್ಯಾಂಕರ್ ನೀರು ಬಿಡುವಂತೆ ಹಾಗೂ ಪೈಪ್‍ಲೈನ್ ಅಳವಡಿಸುವಂತೆ ಪಾಲಿಕೆ ಆಯುಕ್ತರಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಪೂಜಾರ ವೀರಮಲ್ಲಪ್ಪ, ಮಹಾನಗರ ಪಾಲಿಕೆ ಆಯುಕ್ತರಾದ ವಿಶ್ವನಾಥ ಮುದ್ದಜ್ಜಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ವಿಜಯ್ ಕುಮಾರ್, ಕೌಸರ್ ಬಾನು, ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | 18 ನೇ ವಾರ್ಡ್ ನಲ್ಲಿ ಕೈ ಅಭ್ಯರ್ಥಿ ಸಮರ್ಥ ಶಾಮನೂರು ಪ್ರಚಾರ

Published

on

ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಸಮರ್ಥ್ ಶಾಮನೂರು ಅವರು ಮಂಗಳವಾರ 18 ನೇ ವಾರ್ಡ್ ವ್ಯಾಪ್ತಿಯಲ್ಲಿ ಅಬ್ಬರ ಪ್ರಚಾರ ನಡೆಸಿದರು.

ನಗರದ ಬಾರ್ ಲೈನ್ ದರ್ಗಕ್ಕೆ ತೆರಳಿ ಚಾದರ ಅರ್ಪಿಸಿದ ಸಮರ್ಥ ಶಾಮನೂರು ಅವರಿಗೆ ಮುಸ್ಲಿಂ ಸಮಾಜದ ಬಾಂಧವರು ಆತ್ಮೀಯವಾಗಿ ಸನ್ಮಾನಿಸಿದರು. ಬಳಿಕ ಅಲ್ಲಿಂದ ಪ್ರಚಾರವನ್ನು ಆರಂಭಿಸಿದ ಅವರು ಎಂ.ಬಿ ಕೇರಿ, ಮಟನ್ ಮಾರ್ಕೇಟ್, ಗಡಿಯಾರ ಕಂಬ, ಸ್ವಾಗೇರ್ ಪೇಟೆ, ಹೊಂಡದ ರಸ್ತೆ, ಕಾಯಿಪೇಟೆಯ ಮನೆ ಮನೆಗೆ ತೆರಳಿ ಮತಯಾಚಿಸಿದರು.

ಕಾಂಗ್ರೆಸ್ ಪಕ್ಷದ ಮುಖಂಡರಾದ ನರಸಿಂಹಪ್ಪ, ರವಿಕುಮಾರ್, ಕಾಶಿನಾಥ್ ಅವರ ಮನೆಗೆ ಅಭ್ಯರ್ಥಿ ಸಮರ್ಥ ಶಾಮನುರು ಅವರು ಭೇಟಿ ನೀಡಿದಾಕ್ಷಣ ಕುಟುಂಬಸ್ಥರು ದಿವಂಗತರಾದ ಡಾ.ಶಾಮನೂರು ಶಿವಶಂಕರಪ್ಪ ಅವರನ್ನು ನೆನೆದು ಭಾವುಕರಾದರು. ಶಾಮನೂರು ಸಮರ್ಥ ಅವರಿಗೆ ದಕ್ಷಿಣ ಕ್ಷೇತ್ರದಲ್ಲಿ ಪ್ರಚಂಡ ಬಹುಮತವನ್ನು ನೀಡಿ ಗೆಲ್ಲಿಸುತ್ತೇವೆ ಎಂದು ಮತದಾರರು ಅಭಿಪ್ರಾಯ ವ್ಯಕ್ತಪಡಿಸಿದರು.

ಸ್ಥಳೀಯ ಮುಖಂಡರಾದ ಚಂದ್ರ ಶೇಖರ್, ಸೋಗಿ ಶಾಂತಕುಮಾರ್, ಪ್ರವೀಣ್ ರಾವ್, ಬಕ್ಕೇಶ್, ಪರಮೇಶ್, ಜಯರಾಜ್, ಹನುಮಂತ್, ರಾಘವೇಂದ್ರ, ಭೀಮಣ್ಣ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಕರ್ನಾಟಕ ಜಾಹೀರಾತು ನೀತಿಗೆ ಸಂಪಾದಕರ ವಿರೋಧ ; ಸಿಎಂಗೆ ಮನವಿ

Published

on

ನೀತಿಯನ್ನು ಪರಿಶೀಲಿಸುವ ಭರವಸೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಸುದ್ದಿದಿನ,ದಾವಣಗೆರೆ: ಕರ್ನಾಟಕ ಜಾಹೀರಾತು ನೀತಿ-2026 ರಲ್ಲಿ ಪತ್ರಿಕೆಗಳಿಗೆ ಮಾರಕವಾದ ನಿಯಮಗಳನ್ನು ಕೈಬಿಡುವಂತೆ ಕೋರಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ದಾವಣಗೆರೆ ಜಿಲ್ಲಾ ವರದಿಗಾರರ ಕೂಟದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸೋಮವಾರ ಮಧ್ಯಾಹ್ನ ನಗರದ ಎಂ.ಬಿ.ಎ ಗ್ರೌಂಡ್ ಹೆಲಿಪ್ಯಾಡ್ ನಲ್ಲಿ ಮನವಿ ಸಲ್ಲಿಸಲಾಯಿತು.

ರಾಜ್ಯದಲ್ಲಿ ಜಾರಿಗೆ ತರಲು ಹೊರಟಿರುವ ಕರ್ನಾಟಕ ಜಾಹೀರಾತು ನೀತಿ-2026 ಜಿಲ್ಲಾ‌ ಮಟ್ಟದ ಮತ್ತು ಪ್ರಾದೇಶಿಕ ಮಟ್ಟದ ಪತ್ರಿಕೆಗಳಿಗೆ ಮಾರಕವಾಗಿದ್ದು,ಇದರಿಂದ ಶತಶತಮಾನಗಳಿಂದ ಸಮಾಜದ ಮತ್ತು ಸರ್ಕಾರದ ಕೊಂಡಿಯಾಗಿ ಸೇವೆ ಮಾಡುತ್ತಿರುವ ಪತ್ರಿಕೆಗಳು ಮುಚ್ಚುತ್ತವೆ‌. ಯಾವುದೇ ಕಾರಣಕ್ಕೂ ಪತ್ರಿಕೆಗಳಿಗೆ ಮಾರಕವಾಗುವ ನಿಯಮಗಳನ್ನು ಅಳವಡಿಸದೇ ಪತ್ರಿಕೆಗಳ ಏಳಿಗೆಗೆ ಪೂರಕವಾದ ಅಂಶಗಳನ್ನು ಸೇರಿಸಿ ಕರ್ನಾಟಕ ಜಾಹೀರಾತು ನೀತಿಯನ್ನು ಜಾರಿಗೆ ತರಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ , ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರಿಗೆ ಮನವರಿಕೆ ಮಾಡಿಕೊಡಲಾಯಿತು.

ಸಂಘಗಳ ಮನವಿ ಸ್ವೀಕರಿಸಿದ ಮುಖ್ಯಮಂತ್ರಿಗಳು ಜಾಹೀರಾತು ನೀತಿ ಪರಿಶೀಲಿಸುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯಾಧ್ಯಕ್ಷರಾದ ಎ.ಸಿ.ತಿಪ್ಪೇಸ್ವಾಮಿ, ಜಿಲ್ಲಾ ಘಟಕದ ಅಧ್ಯಕ್ಷರಾದ ಸುರೇಶ್ ಆರ್ ಕುಣೆಬೆಳಕೆರೆ, ಖಜಾಂಜಿ ಶಿವಮೂರ್ತಿ ಟಿ.ಜಿ , ರಾಜ್ಯ ಸಂಘದ ನಾಮನಿರ್ದೇಶನ ಸದಸ್ಯ ಕೆ.ಜೈಮುನಿ ಮತ್ತು
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕರಾದ ಇ.ಎಂ.ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಬದ್ರಿನಾಥ್, ಖಜಾಂಚಿ ಜೆ.ಎಸ್.ವೀರೇಶ್ ಹಾಗೂ ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷರಾದ ನಾಗರಾಜ ಬಡದಾಳ್ , ಹಿರಿಯ ಪತ್ರಕರ್ತರಾದ ಕೆ.ಏಕಾಂತಮ್ಮ, ಬಿ.ಎನ್.ಮಲ್ಲೇಶ್, ಮಲ್ಲಿಕಾರ್ಜುನ ಕಬ್ಬೂರು, ಆರ್.ಎಸ್.ತಿಪ್ಪೇಸ್ವಾಮಿ, ಕೊಟ್ರೇಶ್ ಅಣಬೂರುಮಠ, ನಿಂಗಪ್ಪ, ಗೋವಿಂದ ರಾಜು, ಫಕೃದ್ದೀನ್, ಆರ್.ರವಿ,ಬಿ.ವಾಸುದೇವ, ರಾಘವೇಂದ್ರ ರಾವ್, ವೇದಮೂರ್ತಿ,ನಿಂಗಪ್ಪ, ಪರಶುರಾಮ, ನಂದಕುಮಾರ್ ಮುಂತಾದವರು ಇದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಹರಿಹರ ನಗರಸಭೆಯು 04 ಸಂಖ್ಯಾತಿರಿಕ್ತ ಪೌರಕಾರ್ಮಿಕರ ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಪ್ರಸ್ತುತ ಹರಿಹರ ನಗರಸಭೆಯಲ್ಲಿ ಕೆಲಸ ನಿರ್ವಹಿಸುತ್ತಿರುವವರು ಹಾಗೂ ಈ ನಿಯಮ ಜಾರಿಗೆ ಬಂದ ದಿನಾಂಕದಲ್ಲಿಯೂ ಸದರಿ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮಾರ್ಚ್ 11 ರಿಂದ ಅರ್ಜಿಗಳನ್ನು ಪಡೆದುಕೊಳ್ಳಬಹುದು.

ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಏಪ್ರಿಲ್ 10 ಕಡೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಅರ್ಜಿಗಳನ್ನು ಹರಿಹರ ನಗರಸಭೆ ಕಚೇರಿಯಿಂದ ಮಾತ್ರ ಪಡೆದುಕೊಳ್ಳಬೇಕು. ಹುದ್ದೆಗಳ ವರ್ಗೀಕರಣ, ಷರತ್ತುಗಳು, ವಯೋಮಿತಿ ಮತ್ತು ಅಗತ್ಯ ಅರ್ಹತೆಗಳ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಕಚೇರಿ ಸಮಯದಲ್ಲಿ ಹರಿಹರ ನಗರಸಭೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ದಾವಣಗೆರೆಯ ಜಿಲ್ಲಾಧಿಕಾರಿಗಳು ಹಾಗೂ ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending