ದಿನದ ಸುದ್ದಿ
ರಾಜ್ಯಪಾಲರಿಂದ ಸಿಟಿ ರವಿ ರಾಜೀನಾಮೆ ಅಂಗೀಕಾರ
ಸುದ್ದಿದಿನ,ಬೆಂಗಳೂರು: ಬಿಜೆಪಿ ಪಕ್ಷದಲ್ಲಿ ಒಬ್ಬ ವ್ಯಕ್ತಿಗೆ ಒಂದೇ ಹುದ್ದೆ ನೀಡಬೇಕು ಎಂಬ ನಿಯಮವಿದೆ. ಅದರಂತೆಯೇ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾದ ಸಿಟಿ ರವಿಯ ಅವರ ರಾಜೀನಾಮೆಯನ್ನು ರಾಜ್ಯಪಾಲ ವಿಆರ್ ವಾಲಾ ಅವರು ಶನಿವಾರ ಅಂಗೀಕಾರ ಮಾಡಿದರು.
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ರಾಜ್ಯ ಸರ್ಕಾರದಲ್ಲಿ ಪ್ರವಾಸೋದ್ಯಮ, ಕನ್ನಡ ಮತ್ತ ಸಂಸ್ಕೃತಿ ಇಲಾಖೆ ಸಚಿವರಾಗಿದ್ದ ಸಿಟಿ ರವಿಯರವನ್ನು, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಆಯ್ಕೆ ಮಾಡಿದ್ದರಿಂದ ಸಿಟಿ ರವಿಯವರು ಇತ್ತೀಚೆಗಷ್ಟೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಅಕ್ಟೋಬರ್ ಮೂರನೇ ತಾರೀಖಿನಂದು ಸಿಎಂ ಯಡಿಯೂರಪ್ಪ ಅವರಿಗೆ ಸಿಟಿ ರವಿ ಅವರು ರಾಜೀನಾಮೆ ನೀಡಿದ್ದರು. ಆದರೆ ಅವರ ರಾಜೀನಾಮೆ ಕೆಲವು ಕಾರಣಗಳಿಗಾಗಿ ಅಂಗೀಕಾರ ಆಗಿರಲಿಲ್ಲ. ಆದರೆ ಇಂದು ರಾಜ್ಯಪಾಲ ವಿಆರ್ ವಾಲಾ ಅವರು ಅಧಿಕೃತವಾಗಿ ಸಿಟಿ ರವಿ ಅವರ ರಾಜೀನಾಮೆಯನ್ನು ಅಂಗೀಕಾರ ಮಾಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243