ದಿನದ ಸುದ್ದಿ
ಡಿ.ಇಎಲ್.ಇಡಿ. ಕೋರ್ಸಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ : 2022-23 ನೇ ಸಾಲಿನ ಡಿ.ಇಎಲ್.ಇಡಿ. ಕೋರ್ಸಿಗೆ ದಾಖಲಾತಿ ಪಡೆಯಲು ಅರ್ಜಿಗಳನ್ನು ಆಹ್ವಾನಿಸಿದ್ದು, ಅರ್ಜಿಗಳನ್ನು ಸಲ್ಲಿಸಲು ಜು.05 ರಿಂದ 31ರವರೆಗೆ ಅವಕಾಶ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯಬೇಕಾಗಿ ಹಾಗೂ ದ್ವಿತೀಯ ಪಿ.ಯು.ಸಿ. ಪೂರಕ ಪರೀಕ್ಷೆಯನ್ನು ಬರೆದು ಫಲಿತಾಂಶಕ್ಕಾಗಿ ಕಾಯುತ್ತಿರುವವರೂ ಸಹ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಅರ್ಜಿ ನಮೂನೆಗಳನ್ನು www.schooleducation.kar.nic.in ನಲ್ಲಿ ಡೌನ್‍ಲೋನ್ ಮಾಡಿಕೊಂಡು ನಿಗದಿತ ದಾಖಲೆಗಳು ಮತ್ತು ಅರ್ಜಿ ಶುಲ್ಕವನ್ನು ಪಾವತಿಸಿದ ಡಿ.ಡಿ.ಯೊಂದಿಗೆ ನೋಡಲ್ ಕೇಂದ್ರವಾದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ(ಡಯಟ್), ದಾವಣಗೆರೆ ಇಲ್ಲಿ ನಿಗದಿತ ದಿನಾಂಕದೊಳಗೆ ಸಲ್ಲಿಸುವುದು.
ಅರ್ಜಿ ಸಲ್ಲಿಸುವ ವಿಧಾನ, ಶುಲ್ಕದ ಮಾಹಿತಿ, ಅರ್ಹತೆ, ಮೀಸಲಾತಿ ವಿವರಗಳು ಮತ್ತು ಹೆಚ್ಚಿನ ಮಾಹಿತಿಗಳನ್ನು www.schooleducation.kar.nic.in ಹಾಗೂ ದೂರವಾಣಿ ಸಂಖ್ಯೆ: 884881816, 9844401092, 08192-231156. ಯನ್ನು ಸಂಪರ್ಕಿಸಬಹುದು ಎಂದು ದಾವಣಗೆರೆ ಡಯಟ್ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243