ದಿನದ ಸುದ್ದಿ

ಎಡಿಜಿಪಿ-ಐಪಿಎಸ್ ಅಧಿಕಾರಿ ಬಂಧನ: ಕಾನೂನಿಗಿಂತ ಯಾರು ದೊಡ್ಡವರಲ್ಲ : ಐಪಿಎಸ್ ಅಧಿಕಾರಿ ಡಿ.ರೂಪಾ ಟ್ವೀಟ್

Published

on

ಸುದ್ದಿದಿನ,ಬೆಂಗಳೂರು: ಹೈಕೋರ್ಟ್ ಚಾಟಿ ಬೀಸಿದ ಬಳಿಕ ಒಂದೇ ದಿನದಲ್ಲಿ ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳನ್ನು ಎಸಿಬಿ ಹಾಗೂ ಸಿಐಡಿ ಅಧಿಕಾರಿಗಳನ್ನು ಬಂಧಿಸಿದ್ದಾರೆ. ರಾಜ್ಯ ಪೊಲೀಸ್ ಇಲಾಖೆಯಲ್ಲಿ ಎಡಿಜಿಪಿ ಅಮೃತ್ ಪಾಲ್​ ಬಂಧಿಸುವ ಹೊಸ ಸಂಚಲನ ಮೂಡಿಸಿದ್ದ ಬೆನ್ನಲ್ಲೇ ಐಎಎಸ್ ಅಧಿಕಾರಿ ಮಂಜುನಾಥ್ ಅವರನ್ನ‌ ಎಸಿಬಿ ಬಂಧಿಸಿದೆ‌. ಈ ನಡುವೆ ಐಪಿಎಸ್ ಅಧಿಕಾರಿ ರೂಪಾ ಕಾನೂನಿನಗಿಂತ ಯಾರು ದೊಡ್ಡವರಲ್ಲ ಎಂದು ಟ್ವೀಟ್ ಮಾಡಿದ್ದಾರೆ.

ಉನ್ನತ ಮಟ್ಟದ ಅಧಿಕಾರಿಗಳ ಮೇಲೆ ಯಾವುದೇ ಶಿಸ್ತುಕ್ರಮ ಆಗುವುದಿಲ್ಲ ಎಂದು ಬಹಳಷ್ಟು ಜನ ನನಗೆ ಹೇಳ್ತಾ ಇದ್ದದ್ದು ಸುಳ್ಳು ಎಂಬುದು ಇಂದಿನ ಬಂಧನ ತೋರಿಸಿಕೊಟ್ಟಿದೆ. ಮೊದಲ ಬಾರಿಗೆ ರಾಜ್ಯದಲ್ಲಿ ನಡೆದ ಎಡಿಜಿಪಿ ಹುದ್ದೆಯ ಐಪಿಎಸ್ ಅಧಿಕಾರಿ ಬಂಧನವೇ ಇದಕ್ಕೆ ಸಾಕ್ಷಿ. ಕಾನೂನಿನ ಮುಂದೆ ಎಲ್ಲರೂ ಒಂದೇ. ಅಖಿಲ ಭಾರತ ಸಿವಿಲ್ ಸೇವಾ ನಿಯಮದಡಿ ಬಂಧನ ಆದರೆ ಸಸ್ಪೆಂಡ್ ಕೂಡ ಮಾಡಲೇಬೇಕಾಗುತ್ತದೆ ಎಂದು ಬರೆದುಕೊಂಡಿದ್ದಾರೆ.

ನೇಮಕಾತಿ ಉಸ್ತುವಾರಿ ಹೊತ್ತಿರುವ ಹಿರಿಯ ಅಧಿಕಾರಿಗಳಿಂದ ಹಿಡಿದು ಟ್ರಾನ್ಸ್‌ಫರ್ ಶಿಸ್ತುಕ್ರಮ ಅಲ್ಲ. ಇಲ್ಲವಾದಲ್ಲಿ ಅಧಿಕಾರಿಗಳು ಆಡಿದ್ದೇ ಆಟ ಎಂದು ಟ್ವೀಟ್ ಮಾಡಿದ್ದಾರೆ ಎಂದು ತಮ್ಮ ಟ್ವಿಟ್​ ಖಾತೆಯಲ್ಲಿ ಬರೆದು ಕೊಂಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version