ದಿನದ ಸುದ್ದಿ
ನಾಲ್ಕು ದಿನಗಳಲ್ಲಿ 2ನೇ ಸಲ ‘ಐಪಿಎಸ್ ಅಧಿಕಾರಿ ರೂಪಾ’ರಿಂದ ವಂಚನೆ ದೂರು ಸಲ್ಲಿಕೆ..!
ಸುದ್ದಿದಿನ, ಬೆಂಗಳೂರು : ‘ಡಿ_ರೂಪಾ_ಐಪಿಎಸ್’ ಹೆಸರಿನಲ್ಲಿ ‘ಇನ್ಸ್ಟಾಗ್ರಾಂ’ನಲ್ಲಿ ನಕಲಿ ಖಾತೆ ತೆರೆದಿದ್ದ ಅಪರಿಚಿತರು, ‘ಬಡ ಹೆಣ್ಣು ಮಕ್ಕಳ ಏಳಿಗೆಗೆ ಸಹಾಯ ಮಾಡಿ’ ಎಂಬ ಪೋಸ್ಟ್ ಹಾಕಿದ್ದರು. ಈ ವಿಚಾರ ತಮ್ಮ ಗಮನಕ್ಕೆ ಬರುತ್ತಿದ್ದಂತೆಯೇ ‘ನಾನು ಯಾವುದೇ ಇನ್ಸ್ಟಾಗ್ರಾಂ ಖಾತೆ ಹೊಂದಿಲ್ಲ. ಯಾರೂ ಹಣ ಹಾಕಬೇಡಿ’ ಎಂದು ಟ್ವೀಟ್ ಮೂಲಕ ರೂಪಾ ಸ್ಪಷ್ಟಪಡಿಸಿದ್ದರು.ಈ ಸಂಬಂಧ 2018ರ ಡಿ.30ರಂದು ಸೈಬರ್ ಕ್ರೈಂ ಠಾಣೆಗೂ ದೂರು ನೀಡಿದ್ದರು ರೂಪಾ.
ಬೆಂಗಳೂರಿನಲ್ಲಿ ಐಪಿಎಸ್ ಅಧಿಕಾರಿ ಡಿ.ರೂಪಾ ಹೆಸರಿನಲ್ಲಿ ವಂಚನೆ ಮಾಡಿದ್ದು, ಮಹಿಳೆಯೊಬ್ಬರು ತಮ್ಮ ಹೆಸರು ದುರ್ಬಳಕೆ ಮಾಡಿಕೊಂಡು ಲಖನೌ ಪೊಲೀಸರಿಗೆ ಕರೆಮಾಡಿನಾನು ಗೃಹರಕ್ಷಕದಳದ ಐಜಿಪಿ ಡಿ.ರೂಪಾ ಮಾತನಾಡುತ್ತಿದ್ದೇನೆ. ಕೆಲಸದ ನಿಮಿತ್ತ ಲಖನೌಗೆ ಬರುತ್ತಿದ್ದೇನೆ.ಡಿ.29ರಿಂದ ಜ.3ರವರೆಗೆ ಹೋಟೆಲ್ನಲ್ಲಿ ರೂಂ ಬುಕ್ ಮಾಡಿ ಎಂದು ಹೇಳಿದ್ದರು ಆ ಮಹಿಳೆ.
This is not my account. I'm not on Instagram. This is brought to my notice only now. Will complain to Cyber crime police station @CIDKarnataka . Meanwhile request those on @instagram to report this issue https://t.co/DBYNDzzTog
— D Roopa IPS (@D_Roopa_IPS) December 28, 2018
ಅವರ ಮಾತನ್ನು ನಂಬಿದ್ದ ಅಧಿಕಾರಿ, ರೂಂ ಬುಕ್ ಮಾಡಿದ್ದರು. ಈ ಬಗ್ಗೆ ಪರಿಚಯದ ಅಧಿಕಾರಿ ವಿಕಾಸ್ ಚಂದ್ರ ತ್ರಿಪಾಠಿ ರೂಪಾಗೆ ಕರೆ ಮಾಡಿ ವಿಚಾರಿಸಿದಾಗ ಕೃತ್ಯ ಬಯಲಾಗಿದೆ. ನಾನು ರೂಂ ಬುಕ್ ಮಾಡುವಂತೆ ಯಾರಿಗೂ ಕರೆ ಮಾಡಿಲ್ಲವಲ್ಲ ಎಂದಿದ್ದ ರೂಪಾ. ಯಾರೋ ನಿಮ್ಮ ಹೆಸರು ಹೇಳಿಕೊಂಡು 9449990544 ಸಂಖ್ಯೆಯಿಂದ ಕರೆ ಮಾಡಿದ್ದರು ಎಂದಿದ್ದರು ತ್ರಿಪಾಠಿ. ಬಳಿಕ ಆ ಸಂಖ್ಯೆಗೆ ಕರೆ ಮಾಡಿದ್ದ ಅಧಿಕಾರಿ ರೂಪಾ ಅವರು ಆ ಮಹಿಳೆ ಸರಿಯಾಗಿ ಮಾತನಾಡದ ಕಾರಣ ಬನಶಂಕರಿ ಪೊಲೀಸ್ ಠಾಣೆಗೆ ದೂರು ಕೊಟ್ಟಿದ್ದಾರೆ ರೂಪಾ.
Posted by We Support D Roopa IPS on Saturday, 29 December 2018
ಮೊಬೈಲ್ ಸಂಖ್ಯೆಯ ಮೂಲ ಪತ್ತೆ ಹಚ್ಚಿರುವ ಪೊಲೀಸರು ಮಂಗಳೂರಿನ ಬಲ್ಮಠದಲ್ಲಿರುವ ಚಿರಾಗ್’ ಅಪಾರ್ಟ್ಮೆಂಟ್ ನಿವಾಸಿ ಮಹಿಳೆಯ ನಂಬರ್ ಅದಾಗಿತ್ತು, ಆದರೆ ತಿಂಗಳ ಹಿಂದೆಯೇ ನನ್ನ ಮೊಬೈಲ್ ಕಳೆದುಹೋಗಿತ್ತು ಎಂದಿರೋ ಮಹಿಳೆ, ಈ ಸಂಬಂಧ ಪಾಂಡೇಶ್ವರ ಠಾಣೆಗೆ ದೂರು ಕೊಟ್ಟಿದಾಗಿ ಹೇಳಿದ್ದಾರೆ.
Gave complaint to cyber crime police to register FIR for the Instagram fraud @BlrCityPolice. I sincerely hope @instagram deactivates this account also. pic.twitter.com/6b6GpCQX9A
— D Roopa IPS (@D_Roopa_IPS) December 29, 2018
ಎಫ್ಐಆರ್ ಹಾಗೂ ದೂರು ಸ್ವೀಕೃತಿ ಅರ್ಜಿಯನ್ನು ಬಿಎಸ್ಎನ್ಎಲ್ ಕಚೇರಿಗೆ ಸಲ್ಲಿಸಿ, ಅದೇ ಸಂಖ್ಯೆಯ ಹೊಸ ಸಿಮ್ ಖರೀದಿಸಿದ್ದೇನೆ’ ಎಂದು ಹೇಳಿಕೆ ಕೊಟ್ಟಿದ್ದಾರೆ ಮಹಿಳೆ. ಆದರೆ, ಕರೆ ಹೋದ ದಿನ ಆ ಮೊಬೈಲ್ ಸಂಖ್ಯೆಯನ್ನು ಅದೇ ಮಹಿಳೆ ಬಳಸುತ್ತಿದ್ದರೋ? ಇಲ್ಲವೋ ಗೊತ್ತಿಲ್ಲ. ಈ ಬಗ್ಗೆ ಎಲ್ಲಾ ಆಯಾಮಗಳಿಂದಲೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಮಹಿಳೆಗೆ ಮೀಸಲಾತಿ ಬೇಡ, ಸಮಾನ ಪ್ರಾತಿನಿಧ್ಯ ಕೊಡಿ : ಡಾ.ಜ್ಯೋತಿ ಟಿ.ಬಿ

ಸುದ್ದಿದಿನ, ಚನ್ನಗಿರಿ (ಬಸವಾಪಟ್ಟಣ) : ಭಾರತೀಯ ಸಮಾಜದಲ್ಲಿ ಮೀಸಲಾತಿಯಿಂದ ಮಾತ್ರ ಮಹಿಳಾ ಪ್ರಗತಿ ಸಾಧ್ಯವಿಲ್ಲ. ಅವಳಿಗೆ ಪುರುಷನಂತೆ ಸಮಾನವಾದ ಪ್ರಾತಿನಿಧ್ಯ ನೀಡಿದಲ್ಲಿ ಮಾತ್ರವೇ ಮಹಿಳಾ ಪ್ರಗತಿ ಸಾಧ್ಯ. ಆಗ ಮಾತ್ರವೇ ಸದೃಢವಾದ ಭಾರತ ನಿರ್ಮಾಣವಾಗಲು ಸಾಧ್ಯ ಎಂದು ಸಂತೆಬೆನ್ನೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕಿ ಡಾ.ಜ್ಯೋತಿಯವರು ಅಭಿಪ್ರಾಯ ವ್ಯಕ್ತಪಡಿಸಿದರು.
ಜನತಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಆಯೋಜಿಸಿದ್ದ ರಾಷ್ಟ್ರೀಯ ಐಕ್ಯತ ಸಪ್ತಾಹದ ಅಡಿಯಲ್ಲಿ ‘ಭಾರತೀಯ ಸಮಾಜ ಹಾಗೂ ರಾಷ್ಟ್ರದ ಪ್ರಗತಿಯಲ್ಲಿ ಮಹಿಳೆಯರ ಪ್ರಾಮುಖ್ಯತೆ’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದ ಅವರು, ಮಹಿಳೆಗೆ ಎಲ್ಲಿಯವರೆಗೆ ಮುಕ್ತವಾದ ಪ್ರಾತಿನಿಧ್ಯ ಲಭಿಸುವುದಿಲ್ಲವೋ ಅಲ್ಲಿಯವರೆಗೆ ಎಷ್ಟೇ ಕಾಯ್ದೆ, ಕಾನೂನುಗಳು ಜಾರಿಯಾದರೂ ಮಹಿಳೆಯರ ಬದುಕಿನಲ್ಲಿ ಸಮಗ್ರ ಬದಲಾವಣೆ ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಪ್ರಾಂಶುಪಾಲರಾದ ಡಾ.ಎಂ.ಆರ್. ಲೋಕೇಶ್ ಅವರು ಮಾತನಾಡಿ ಭಾರತೀಯ ಸಮಾಜದಲ್ಲಿ ಹೆಣ್ಣು ಸ್ವಾಭಿಮಾನದ ಬದುಕನ್ನು ಕಟ್ಟಿಕೊಳ್ಳುವುದು ಕೇವಲ ಆರ್ಥಿಕತೆಯಿಂದ ಸಾಧ್ಯವಿಲ್ಲ ಎಂದರು.
ನೈತಿಕತೆ, ಸಂಸ್ಕಾರವು ಕೂಡ ಅತ್ಯಂತ ಮಹತ್ವದ ಪಾತ್ರ ವಹಿಸುತ್ತದೆ. ಹೀಗಾಗಿಯೇ ಶರಣರು ಗಂಡು-ಹೆಣ್ಣು ಎಂಬ ಬೇಧವನ್ನು ಮೆಟ್ಟಿ ನಿಂತು ‘ಒಳಗೆ ಸುಳಿವ ಆತ್ಮ ಹೆಣ್ಣು ಅಲ್ಲ, ಗಂಡು ಅಲ್ಲ’ ಎಂಬ ತಾತ್ವಿಕತೆಯ ಮೂಲಕ ಸರ್ವರನ್ನು ಸಮಾನವಾಗಿ ಕಾಣುವಂತಹ ಸಮಾಜಕ್ಕಾಗಿ ಶ್ರಮಿಸಿದರು. ಭಾರತದ ನೆಲದಲ್ಲಿ ಶರಣರು, ದಾರ್ಶನಿಕರು ರೂಪಿಸಿಕೊಟ್ಟ ಮಾರ್ಗದಲ್ಲಿ ನಡೆದು ಇಂದಿನ ಮಹಿಳೆಯರು ಸಬಲರಾಗಬೇಕು ಎಂಬುದಾಗಿ ತಿಳಿಸಿದರು.
ಸಮಾಜಶಾಸ್ತ್ರದ ಮುಖ್ಯಸ್ಥರಾದ ಡಾ.ಎ.ಡಿ.ಬಸವರಾಜ್ ಅವರು ಪ್ರಾಸ್ತವಿಕ ಮಾತುಗಳನ್ನಾಡಿದರು. ಕಾರ್ಯಕ್ರಮದಲ್ಲಿ ಬೋಧಕರಾದ ಹನುಮಂತಪ್ಪ, ಪ್ರಕಾಶ್, ಮಧುಸೂಧನ್, ರೆಹಮತ್ಬಿ, ಸಂದೀಪ್ ಮುಂತಾದವರು ಹಾಜರಿದ್ದರು. ಕಾರ್ಯಕ್ರಮವನ್ನು ಗೋವಿಂದರೆಡ್ಡಿ ಅವರು ನಿರೂಪಿಸಿದರು. ವಿದ್ಯಾರ್ಥಿನಿ ಸೌಂದರ್ಯ ಸ್ವಾಗತಿಸಿದರು, ಯಶೋಧ, ಸಹನಾ ಪ್ರಾರ್ಥಿಸಿದರು, ರಕ್ಷಿತ ವಂದಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭಾರತೀಯರೆಲ್ಲರ ಪವಿತ್ರಗ್ರಂಥ ಭಾರತದ ಸಂವಿಧಾನ : ಡಾ.ಕೆ.ಎ.ಓಬಳೇಶ್

ಸುದ್ದಿದಿನ,ದಾವಣಗೆರೆ : ಸಂವಿಧಾನ ಪೂರ್ವದ ಭಾರತದ ಸ್ಥಿತಿಗತಿ ಹಾಗೂ ಸಂವಿಧಾನದ ನಂತರ ಭಾರತದಲ್ಲಾದ ಸಾಮಾಜಿಕ, ಧಾರ್ಮಿಕ ಹಾಗೂ ರಾಜಕೀಯ ಬದಲಾವಣೆಗ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಹಾಗೆಯೇ ಸಂವಿಧಾನ ರಚನೆ ಮಾಡುವ ಸಮಯದಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ಮುಂದಿದ್ದ ಬಿಕ್ಕಟ್ಟುಗಳನ್ನು ಏಕಾಂತಗಿರಿ ಟ್ರಸ್ಟ್ ನ ಕಾರ್ಯದರ್ಶಿ ಡಾ.ಕೆ.ಎ.ಓಬಳೇಶ್ ಅವರು ತಿಳಿಸಿಕೊಟ್ಟರು.
ನಗರದ ಪ್ರೇರಣ ಮಕ್ಕಳ ಆರೈಕೆ ಕೇಂದ್ರದಲ್ಲಿ ವಿ.ಬಿ.ಪಿ ಫೌಂಡೇಷನ್ ಹಾಗೂ ಏಕಾಂತಗಿರಿ ಟ್ರಸ್ಟ್ ಇವರ ಸಂಯುಕ್ತಾಶ್ರಯದಲ್ಲಿ ಸಂವಿಧಾನ ದಿನಾಚರಣೆಯನ್ನು ಭಾನುವಾರ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ದೇವನಗರಿ ಸುದ್ಧಿದಿನ ಪತ್ರಿಕೆಯ ಸಂಪಾದಕರಾದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದು, ವಿದ್ಯಾರ್ಥಿಗಳಿಗೆ ಭಾರತದ ಸಂವಿಧಾನದ ಕಳಶದಂತಿರುವ ಸಂವಿಧಾನ ಪೀಠಿಕೆಯ ಮಹತ್ವವನ್ನು ಪರಿಚಯಿಸುವ ಮೂಲಕ ಸಂವಿಧಾನ ಪೀಠಿಕೆಯನ್ನು ಬೋಧಿಸಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಸ್ಕೈ ಲೈನ್ ಸಂಸ್ಥೆಯ ಸಂಸ್ಥಾಪಕರಾದ ಬಾಲಚಂದ್ರ ಅವರು ಸಂವಿಧಾನ ಇರುವ ಕಾಲದಲ್ಲಿಯೇ ದಲಿತರು, ದಮನಿತರು ಹಾಗೂ ಮಹಿಳೆಯರ ಸ್ಥಿತಿಯು ಅತ್ಯಂತ ಶೋಚನೀಯವಾಗಿದೆ. ಆದರೆ ಸಂವಿಧಾನವಿಲ್ಲದ ಭಾರತವನ್ನು ನಾವು ಊಹಿಸಿಕೊಳ್ಳುವುದು ಕಷ್ಟ ಸಾಧ್ಯ ಎಂಬುದಾಗಿ ತಿಳಿಸಿದರು.
ಪ್ರೇರಣ ಆರೈಕೆ ಕೇಂದ್ರದ ಶಿಕ್ಷಕರಾದ ಕುಮಾರ್ ಅವರು ಮಾತನಾಡಿ, ಸರ್ವರನ್ನು ಸಮಾನವಾಗಿ ಕಾಣುವ ಸಂವಿಧಾನವು ನಮ್ಮೆಲ್ಲರ ಪವಿತ್ರ ಗ್ರಂಥ ಎಂಬುದಾಗಿ ತಿಳಿಸಿದರು. ಕುಮಾರಿ ಪೂಜಾ ಅವರು ಅತಿಥಿಗಳನ್ನು ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಪ್ರೇರಣ ಸಂಸ್ಥೆಯ ಮಕ್ಕಳು ಹಾಜರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸರ್ಕಾರಕ್ಕೆ ಸೆಡ್ಡು ಹೊಡೆದ ದಾವಣಗೆರೆ ರೈತರು

- ಪುರಂದರ್ ಲೋಕಿಕೆರೆ
ಸುದ್ದಿದಿನ, ದಾವಣಗೆರೆ : ಸರ್ಕಾರದ ಭದ್ರಾ ಅಚ್ಚುಕಟ್ಟು ಪ್ರದೇಶದ ನೀರಾವರಿ ಇಲಾಖೆಯ ಚಿತಾವಣೆಗೆ ಸೆಡ್ಡು ಹೊಡೆದು ಕೇವಲ 110-120 ದಿನಗಳ ಒಳಗಾಗಿಅಲ್ಪಾವಧಿ ತಳಿ ನಾಟಿ ಮಾಡಿ ಯಶಸ್ವಿಯಾಗಿ ಕಾಲುವೆ ನೀರು ಬಳಸಿಕೊಂಡು ಭತ್ತ ಬೆಳೆಯುವ ಮೂಲಕ ಮಾದರಿಯಾಗಿದ್ದಾರೆ ದಾವಣಗೆರೆ ಭಾಗದ ರೈತರು.
ಬೇಸಿಗೆ ಕಾಲದಲ್ಲಿ ನಮಗೆ ತೋಟಗಳಿಗೆ ನೀರು ಹರಿಸಲು ಆನ್ ಆಪ್ ಪದ್ದತಿ ಮಾಡಿ ಎಂದು ಒತ್ತಡ ಹಾಕಿದ ಶಿವಮೊಗ್ಗ ಜಿಲ್ಲೆಯ ಅಡಿಕೆ ದಣಿಗಳಿಗೇ ಮುಖಕ್ಕೆ ಹೊಡೆದಂತೆ ಭತ್ತ ಬೆಳೆದು ತೋರಿಸಿರುವುದು ಶ್ಲಾಘನೀಯ.
100 ದಿನಗಳು ನೀರು ಹರಿಸಲು ಆದೇಶ ಹೊರಡಿಸಿ ರೈತರೆಲ್ಲ ನಾಟಿ ಮಾಡಿದ ಮೇಲೆ ಎಂದೂ ಗದ್ದೆ ನೀರು ಕಟ್ಟದ ಐಷಾರಾಮೀ ರಾಜಕಾರಣಿ ಪುತ್ರ ರತ್ನ ಸಚಿವ ಮಧು ಬಂಗಾರಪ್ಪ ಅಡಿಕೆ ತೋಟದ ರೈತರಿಗೆ ಮನ ಸೋತವರು.
ಕಲ್ಲು ಬಂಡೆ ಹೊಡೆದು ಭರ್ಜರಿ ಜೀವನ ಸಾಗಿಸುವ ಸಂಪನ್ಮೂಲ ಸಚಿವ, ಉಸ್ತುವಾರಿ ಸಚಿವರ ನಿರ್ಲಕ್ಷ್ಯ ಬೇಸತ್ತ ರೈತ ರಸ್ತೆ ತಡೆದು ನೀರು ಕೊಡಿ ಎಂದು ಹೋರಾಟ ಮಾಡಿದರೂ ಕಿವಿ ಕೇಳೋಲ್ಲ ಎಂಬಂತೆ ವರ್ತಿಸಿದೆ ಆಡಳಿತ ಯಂತ್ರ.
ಆದರೆ ಈ ನಡುವೆ ಎರಡು ಭಾರಿ ಪ್ರಕೃತಿ ವರದಾನ ದಿಂದ ಭತ್ತ ಬೆಳೆಯುವ ಮೂಲಕ ಅನ್ನನೀಡುವ ರೈತ ಭತ್ತ ಬೆಳೆದು ಬಿಟ್ಟ. ಈ ಮೂರು ತಿಂಗಳ ಭತ್ತಕ್ಕೆ ನೀರು ಬಿಡುವುದು ಎಷ್ಟು ತ್ರಾಸದಾಯಕ. ಸರ್ಕಾರಗಳು ಯಾರು ಪರ ಎಂದು ಬೆತ್ತಲೆ ತೋರಿಸಿಕೊಂಡಿವೆ.
ಈಗಲಾದರೂ ಕಾಲ ಮಿಂಚಿಲ್ಲ ಕಟಾವು ಮಾಡಿದ ಭತ್ತ ಒಳ್ಳೆಯ ಗುಣಮಟ್ಟದ್ದು ಆಗಿದೆ.3000-3500 ರೂಂ ದರ ನಿಗದಿ ಮಾಡಿದರೆ ರೈತ ಸಾಲಶೂಲದಿಂದಮುಕ್ತಿ ಆಗಬಹುದು. ಭದ್ರಾ ನೀರು ಬೇಸಿಗೆ ಕಾಲದಲ್ಲಿ ಕೊಡುವುದೇ ಇಲ್ಲ ಎಂದು ಹೇಳಿರುವುದು ರೈತ ವಿರೋಧಿ ನೀತಿ.
ಗುಂಡುರಾವ್ ಕಾಲಾವಧಿಯಲ್ಲಿ 158ಅಡಿ ನೀರಿದ್ದರೂ ಭದ್ರಾ ನೀರು ಹರಿಸಲಾಗಿರುವ ದಾಖಲೆ ಇದೆ. ಕಡೆ ಪಕ್ಷ ಈ ಭಾರಿಯ ಭತ್ಖಕ್ಕೆ ವೈಜ್ಞಾನಿಕ ಬೆಲೆ ನಿಗದಿ ಮಾಡಿ, ಇಲ್ಲವೇ ಯಾವ ರೈತರ ಬಳಿ ಭತ್ತ ಖರೀದಿ ನಿಲ್ಲಿಸಿ. ರೈತರೇ ಸ್ವಂತ ಮಾರುಕಟ್ಟೆ ಹುಡುಕಿಕೊಳ್ಳುವ ಪ್ರಯತ್ನ ಮಾಡಲಿ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ3 days ago
ಚನ್ನಗಿರಿ | ಅತಿಥಿ ಉಪನ್ಯಾಸಕರಿಂದ ಅನಿರ್ದಿಷ್ಟಾವಧಿ ಮುಷ್ಕರ ; ತಹಶೀಲ್ದಾರರಿಗೆ ಮನವಿ
-
ದಿನದ ಸುದ್ದಿ5 days ago
ದೇಹದಾಡ್ಯ ಸ್ಪರ್ಧೆ | ಶ್ರೀ ಶಿವಲಿಂಗೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಪ್ರೇಮ್ ಕುಮಾರ್ ಗೆ ‘ಮಿಸ್ಟರ್ ದಾವಣಗೆರೆ’ ಪ್ರಶಸ್ತಿ
-
ದಿನದ ಸುದ್ದಿ18 hours ago
ಭಾರತೀಯರೆಲ್ಲರ ಪವಿತ್ರಗ್ರಂಥ ಭಾರತದ ಸಂವಿಧಾನ : ಡಾ.ಕೆ.ಎ.ಓಬಳೇಶ್
-
ದಿನದ ಸುದ್ದಿ3 days ago
ಸರ್ಕಾರಕ್ಕೆ ಸೆಡ್ಡು ಹೊಡೆದ ದಾವಣಗೆರೆ ರೈತರು
-
ದಿನದ ಸುದ್ದಿ4 hours ago
ಮಹಿಳೆಗೆ ಮೀಸಲಾತಿ ಬೇಡ, ಸಮಾನ ಪ್ರಾತಿನಿಧ್ಯ ಕೊಡಿ : ಡಾ.ಜ್ಯೋತಿ ಟಿ.ಬಿ