Connect with us

ದಿನದ ಸುದ್ದಿ

ಒಲವನ್ನೇ ಎಲ್ಲದಕೂ ಬಳಸಿಕೊಂಡ ಕವಿ ದ.ರಾ. ಬೇಂದ್ರೆ : ಡಾ. ಹೊನ್ನಪ್ಪ ಹೊನ್ನಪ್ಪನವರ್

Published

on

ಸುದ್ದಿದಿನ,ದಾವಣಗೆರೆ : ಒಲವಿಂದಲೇ ಬದುಕಿಗೆ ಚೆಲುವು. ಒಲವೊಂದೇ ಬದುಕಿನ ಬಲವು ಎಂಬುದನ್ನು ಅರಿತಿದ್ದ ಅವರು ಬದುಕಿನ ಎಲ್ಲಾ ಹಂತದಲ್ಲೂ ಎಲ್ಲದಕ್ಕೂ ಒಲವನ್ನೇ ಬಳಸಿಕೊಂಡು ಅಜರಾಮರರಾಗಿದ್ದಾರೆ ಎಂದು ಹನುಮನಮಟ್ಟಿ ಕೃಷಿ ವಿಜ್ಞಾನ ಮಹಾವಿದ್ಯಾಲಯದ ಕನ್ನಡ ಉಪನ್ಯಾಸಕರು ಹಾಗೂ ವಾಗ್ಮಿಗಳಾದ ಡಾ. ಹೊನ್ನಪ್ಪ ಹೊನ್ನಪ್ಪನವರ್ ಕನ್ನಡದ ಮೇರು ಕವಿ ದ. ರಾ ಬೇಂದ್ರೆಯವರನ್ನು ಹೃನ್ಮನದಿಂದ ಸ್ಮರಿಸಿದರು.

ದಾವಣಗೆರೆ ತಿಂಗಳ ಅಂಗಳ ಸಾಹಿತ್ಯ ಸಾಂಸ್ಕೃತಿಕ ಬಳಗದ ವತಿಯಿಂದ ದಿನಾಂಕ : 30.07.2021 ರ ಶುಕ್ರವಾರ ಸಂಜೆ 7 ಗಂಟೆಗೆ ಆಯೋಜಿಸಲಾಗಿದ್ದ ಆನ್ ಲೈನ್ ಕಾರ್ಯಕ್ರಮದಲ್ಲಿ ” ದ.ರಾ. ಬೇಂದ್ರೆಯವರ ಕಾವ್ಯದಲ್ಲಿ ದಾಂಪತ್ಯ ಜೀವನ ” ವಿಷಯ ಕುರಿತು ಉಪನ್ಯಾಸ ನೀಡಿದ ಅವರು ಒಲವೇ ದ.ರಾ. ಬೇಂದ್ರೆಯವರ ಕಾವ್ಯದ ಜೀವಸೆಲೆಯಾಗಿತ್ತು. ಈ ಭಾವ ಕೇವಲ ದಾಂಪತ್ಯ ಗೀತೆಗಳಲ್ಲಿ ಮಾತ್ರವಲ್ಲದೆ ಅವರ ಎಲ್ಲಾ ಕಾವ್ಯ ಕೃತಿಗಳಲ್ಲಿ ಅನುಭಾವಮೃತದ ಹೂರಣವಾಗಿ ಓದುಗರಿಗೆ ರಸಕವಳ ಉಣಿಸಿದೆ ಎಂದು ಬಣ್ಣಿಸಿದರು.

ಜೀವನದುದ್ದಕ್ಕೂ ಕಡು ಕಷ್ಟಗಳ ಅನುಭವಿಸಿದ ಬೇಂದ್ರೆಯವರು ತಮ್ಮ ಜೀವನ ಪ್ರೇಮ ಮತ್ತು ಸಕಾರಾತ್ಮಕ ದೃಷ್ಟಿಕೋನದಿಂದಾಗಿಯೇ ಎಲ್ಲವನ್ನೂ ಸೈರಿಸಿ ಜಯಿಸಿದವರು. ಹಾಗಾಗಿಯೇ ಬೇಂದ್ರೆ ಸಾಹಿತ್ಯ ಬದುಕಿನ ಮಾರ್ಮಿಕ ಸತ್ಯವನ್ನು ಬೋಧಿಸುತ್ತದೆ. ಮಾನವ ಸಹಜ ಬದುಕಿನ ಸರ್ವೇ ಸಾಮಾನ್ಯ ವಿಚಾರಗಳಿಂದ ಹಿಡಿದು ಆಳವಾದ ವೈಚಾರಿಕ ಚಿಂತನೆಗಳು ಅಕ್ಷರಗಳಲ್ಲಿ ಅನುಭವದ ಮುತ್ತಾಗಿ ಪೋಣಿಸಲ್ಪಟ್ಟಿರುವುದೇ ಬೇಂದ್ರೆ ಕಾವ್ಯ ಕೃತಿಗಳು ಎಲ್ಲಾ ಓದುಗರಿಗೂ ಆಪ್ತ ಎನಿಸುವುದಕ್ಕೆ ಕಾರಣ ಎಂದು ಬಣ್ಣಿಸಿದ ಡಾ. ಹೊನ್ನಪ್ಪ ಅವರು ಬೇಂದ್ರೆಯವರ ಹಲವು ಕಾವ್ಯದ ಸಾಲುಗಳ ಸಾರವನ್ನು ಉದಾಹರಣೆಯೊಂದಿಗೆ ವಿವರಿಸಿದರು.

ಪ್ರೀತಿ ಧೈರ್ಯವನ್ನು ನೀಡುತ್ತದೆ. ತನ್ನವರ ಹಿತ ಕಾಪಾಡುತ್ತದೆ. ಬದುಕನ್ನು ಮುನ್ನಡೆಸುತ್ತದೆ. ಭಾವನೆಯನ್ನು ವಿಶಾಲಗೊಳಿಸುತ್ತದೆ. ನೋವ ನುಂಗಿ ಮುನ್ನೆಜ್ಜೆ ಇಡಲು ಸಹಕರಿಸುತ್ತದೆ. ಇಂತಹ ಕಾರ್ಯ ಪರಸ್ಪರ ಗಂಡ – ಹೆಂಡತಿ, ಮಕ್ಕಳಲ್ಲಿ ನಡೆದಾಗ ಕುಟುಂಬದಲ್ಲಿ ಸುಖ, ಸಂತೋಷ ನೆಲೆಸುತ್ತದೆ. ಉನ್ನತಿ ಸಾಧ್ಯವಾಗುತ್ತದೆ. ಈ ಸಾಧ್ಯತೆಗಳನ್ನು ಬೇಂದ್ರೆಯವರ ಬದುಕು ಮತ್ತು ಬರಹ ಕಲಿಸಿ ಕೊಡುತ್ತದೆ ಎಂದು ಡಾ. ಹೊನ್ನಪ್ಪ ಅರ್ಥೈಸಿದರು.

ಡಾ. ಫ್ರಾನ್ಸಿಸ್ ಡಿ ಕ್ಷೇವಿಯರ್ ಅವರು – ಬುದ್ಧ, ಪ್ರೊ. ಅಂಜಿನಪ್ಪ ಹಿಕ್ಕಿಂಗೆರೆ ಅವರು – ಬದುಕು, ಶ್ರೀಮತಿ ವೀಣಾ ಕೃಷ್ಣಮೂರ್ತಿಯವರು – ಗಡಿಯಾರ, ಶ್ರೀಮತಿ ಉಮಾದೇವಿ ಹಿರೇಮಠ ಅವರು – ಶಾಪ, ಶ್ರೀಮತಿ ಮಂಜುಳಾ ಸುನೀಲ್ ಅವರು – ಸಂಭವಾಮಿ ಯುಗೇ ಯುಗೇ , ತಾಜುದ್ದೀನ್ ಬೇತೂರು ಅವರು – ಬಲ್ಲರೇನು ಇದನ, ಫಕೀರೇಶ್ ಆದಾಪುರ ಅವರು – ಮತ್ತೆ ಬಾರದಿರಲಿ ಆ ದಿನಗಳು, ರಂಗನಾಥ ಕೆ. ಎನ್. ಜಿಗಳಿ ಅವರು – ಮನೆ ದೇವರು ಅಪ್ಪ, ಪ್ರಭು ಗೊಲ್ಲರಹಳ್ಳಿಯವರು – ಕಾಪಾಡು ಆರಾಧ್ಯ ದೈವವೇ ಎಂಬ ಸ್ವರಚಿತ ಕವನ ವಾಚಿಸಿದರು.

ಉದಯೋನ್ಮುಖ ಗಾಯಕ ಆಕಾಶ್ ಜಿ ವಿ. ಬೇಂದ್ರೆ ಗೀತೆಗಳನ್ನು ಹಾಡಿದರು. ಬಳಗದ ಸಂಚಾಲಕ ಗಂಗಾಧರ ಬಿ ಎಲ್ ನಿಟ್ಟೂರ್ ಪ್ರಾಸ್ತಾವಿಕ ನುಡಿಗಳೊಂದಿಗೆ ಸರ್ವರನ್ನೂ ಸ್ವಾಗತಿಸಿ ಕೊನೆಯಲ್ಲಿ ವಂದಿಸಿದರು. ಉಪನ್ಯಾಸಕಿ ಡಾ. ಅನಿತ ಹೆಚ್. ದೊಡ್ಡ ಗೌಡರ್ ಆನ್ ಲೈನ್ ಕಾರ್ಯಕ್ರಮ ನಿರ್ವಹಿಸಿದರು.

ಸಂತೆಬೆನ್ನೂರು ಫೈಜ್ನಟ್ರಾಜ್, ಸುಬ್ರಹ್ಮಣ್ಯ ನಾಡಿಗೇರ್, ಶ್ರೀಮತಿ ಮಲ್ಲಮ್ಮ ಎಸ್. ಎಂ, ಶ್ರೀಮತಿ ಅನ್ನಪೂರ್ಣ ಪಾಟೀಲ್, ಶ್ರೀಮತಿ ಶಾರದ ಅಸಗೋಡು ಸೇರಿದಂತೆ ಅನೇಕ ಸಾಹಿತ್ಯಾಭಿಮಾನಿಗಳು ವೀಕ್ಷಕರಾಗಿ ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | 1 ಸಾವಿರದ 350 ಕೋಟಿ ರೂಪಾಯಿ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ

Published

on

ಸುದ್ದಿದಿನ,ದಾವಣಗೆರೆ:ಅಭಿವೃದ್ಧಿ ಕಾರ್ಯಗಳಿಗೆ ರಾಜ್ಯ ಸರ್ಕಾರದ ಬಳಿ ಅನುದಾನದ ಕೊರತೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ದಾವಣಗೆರೆಯಲ್ಲಿಂದು 1 ಸಾವಿರದ 350 ಕೋಟಿ ರೂಪಾಯಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಅಭಿವೃದ್ಧಿ ಕಾರ್ಯಗಳಿಗೆ ರಾಜ್ಯ ಸರ್ಕಾರದ ಬಳಿ ಹಣ ಇಲ್ಲ ಎಂದು ಬಿಜೆಪಿ-ಜೆಡಿಎಸ್ ನಾಯಕರು ಆರೋಪಿಸುತ್ತಿದ್ದಾರೆ. ಆದರೆ ಹಣ ಇಲ್ಲದಿದ್ದರೆ ಇಷ್ಟೊಂದು ಅಭಿವೃದ್ಧಿ ಮಾಡಲು ಸಾಧ್ಯವೇ ಎಂದು ಪ್ರಶ್ನಸಿದರು.

ರಾಜ್ಯದಲ್ಲಿ ಗ್ಯಾರಂಟಿ ಜೊತೆಗೆ ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗುತ್ತಿದೆ. ಇದನ್ನು ಸಹಿಸದ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಇಲ-ಸಲ್ಲ್ಲದ ಸುಳ್ಳು ಹೇಳುತ್ತಿದ್ದಾರೆ ಎಂದು ದೂರಿದರು. ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವ ಡಾ.ಜಿ.ಪರಮೇಶ್ವರ್, ತೋಟಗಾರಿಕಾ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಶಾಮನೂರು ಶಿವಶಂಕರಪ್ಪ ಒಂದು ಕುಟುಂಬ, ವ್ಯಕ್ತಿ ಅಲ್ಲ, ಇಡೀ ಕಾಂಗ್ರೆಸ್‌ ಪಕ್ಷಕ್ಕೆ ಒಂದು ದೊಡ್ಡ ಶಕ್ತಿ : ಡಿಸಿಎಂ ಡಿ.ಕೆ.ಶಿವಕುಮಾರ್

Published

on

ಸುದ್ದಿದಿನ,ದಾವಣಗೆರೆ:ಜಿಲ್ಲಾ ವ್ಯಾಪ್ತಿಯ ಸುಮಾರು ₹1350 ಕೋಟಿ ರೂ. ಅನುದಾನದಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಮತ್ತು ವಿವಿಧ ಇಲಾಖಾ ಯೋಜನೆಗಳಡಿ ಫಲಾನುಭವಿಗಳಿಗೆ ಸವಲತ್ತು ವಿತರಿಸುವ ಕಾರ್ಯಕ್ರಮದಲ್ಲಿ ಭಾಗಿಯಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಮಾತನಾಡಿದರು.

ದಾವಣಗೆರೆಯಲ್ಲಿ ನಡೆದ ಇಂದಿನ ಐತಿಹಾಸಿಕ ಕಾರ್ಯಕ್ರಮದಲ್ಲಿ ಉತ್ಸುಕದಿಂದ ಭಾಗಿಯಾಗಿದ್ದೇನೆ. ದಾವಣಗೆರೆ ಜಿಲ್ಲೆಯಲ್ಲಿ 6 ಶಾಸಕರು ಮತ್ತು ಒಬ್ಬ ಸಂಸದರನ್ನು ಆಯ್ಕೆ ಮಾಡಿ, ನಿಮ್ಮ ಸೇವೆಗೆ ಅವಕಾಶವನ್ನು ಮಾಡಿಕೊಟ್ಟಿರುವ ನಿಮ್ಮೆಲ್ಲರಿಗೂ ಧನ್ಯವಾದಗಳು ಎಂದರು.

ನಿಮ್ಮೆಲ್ಲರ ಶಕ್ತಿಯಿಂದಾಗಿ ಚುನಾವಣೆಯಲ್ಲಿ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ ಇಡೀ ದೇಶಕ್ಕೆ ಸಂದೇಶವನ್ನು ಕಳುಹಿಸಿರುವುದು ನಮ್ಮ ಪುಣ್ಯ. ಬೆಲೆಯೇರಿಕೆಯಿಂದ ತತ್ತರಿಸಿದ ಸಾವಿರಾರು ಫಲಾನುಭವಿಗಳಿಗೆ ಗ್ಯಾರಂಟಿ ಯೋಜನೆಯ ಮೂಲಕ ನೆರವಾಗುತ್ತಿದ್ದೇವೆ. ಹಲವು ವರ್ಷಗಳಿಂದ ದಾಖಲೆ ಇಲ್ಲದೇ ಅಲೆಯುತ್ತಿದ್ದವರಿಗೆ ‘ಭೂ ಗ್ಯಾರಂಟಿ’ ಯೋಜನೆ ಕೊಟ್ಟಿದ್ದೇವೆ. ಕಂದಾಯ ಇಲಾಖೆ ಮೂಲಕ ದರಖಾಸ್ತು ಪೋಡಿ ವಿತರಣೆ ಮಾಡಿದ್ದೇವೆ. ಈ ಹಿಂದೆ ಯಾವುದೇ ಸರ್ಕಾರವು ಇಂತಹ ಕಾರ್ಯಕ್ರಮವನ್ನು ಮಾಡಲು ಸಾಧ್ಯವಾಗಿಲ್ಲ. ದೇಶದಲ್ಲಿ, ರಾಜ್ಯದಲ್ಲಿ ಯಾವಾಗ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆಯೋ ಆ ಸಂದರ್ಭದಲ್ಲಿ ಬಡವರ ಬದುಕು ಬದಲಾಯಿಸುವ ಕಾರ್ಯಕ್ರಮವನ್ನು ರೂಪಿಸಿಕೊಂಡು ಬಂದಿದ್ದೇವೆ ಎಂದು ಹೇಳಿದರು.

ನಮ್ಮ ಹಿರಿಯರಾದ ಶಾಮನೂರು ಶಿವಶಂಕರಪ್ಪ ಅವರು ಮತ್ತು ಅವರ ಕುಟುಂಬ ಒಂದು ವ್ಯಕ್ತಿ ಅಲ್ಲ, ಇಡೀ ಕಾಂಗ್ರೆಸ್‌ ಪಕ್ಷಕ್ಕೆ ಒಂದು ದೊಡ್ಡ ಶಕ್ತಿ ಎಂದು ಹೇಳಲು ನನಗೆ ಸಂತೋಷವಾಗುತ್ತದೆ. ಕೋವಿಡ್ ಸಂದರ್ಭದಲ್ಲಿ ನಾನು ಬಂದಾಗ ಯಾರು ಸಹಾಯ ಮಾಡುವವರು ಇರಲಿಲ್ಲ. ಬಿಜೆಪಿ ಸರ್ಕಾರವಿದ್ದರೂ ಸಹಾಯ ಮಾಡಲಿಲ್ಲ. ಆಗ ಅವರು 10 ಕೋಟಿ ರೂ. ಹಣವನ್ನು ಕೊಟ್ಟು ಲಸಿಕೆಯನ್ನು ದಾವಣಗೆರೆ ಜನರಿಗಾಗಿ ಹಂಚಿ ಮಾನವೀಯತೆ ಮೆರೆದಿದ್ದರು. ಅಂತಹ ಹೃದಯ ಶ್ರೀಮಂತಿಕೆ ಇರುವವರು ನಮ್ಮ ಶಾಮನೂರು ಶಿವಶಂಕರಪ್ಪನವರು. ಇಂದು ಅವರ 95ನೇ ಜನ್ಮೋತ್ಸವ ಸಂಭ್ರಮ ಆಚರಿಸಿದ್ದೇವೆ. ಅಂದಿನಿಂದ ಇಂದಿನವರೆಗೆ ಶಾಮನೂರು ಶಿವಶಂಕರಪ್ಪ ಅವರ ಕುಟುಂಬದವರು ಹಲವು ಕ್ಷೇತ್ರದಲ್ಲಿ ಸಾಧನೆಗೈದು ಕಾಂಗ್ರೆಸ್‌ ಪಕ್ಷಕ್ಕೆ ಶಕ್ತಿಯನ್ನು ಕೊಟ್ಟಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದಲ್ಲಿ ನಿಷೇಧ ; ತೆರವುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಪತ್ರ

Published

on

ಸುದ್ದಿದಿನಡೆಸ್ಕ್:ಕರ್ನಾಟಕದ ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲಾಧಿಕಾರಿ ವಿಧಿಸಿರುವ ನಿಷೇಧ ಆದೇಶ ರದ್ದು ತೆರವುಗೊಳಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಪತ್ರ ಮೂಲಕ ಮನವಿ ಮಾಡಿದ್ದಾರೆ.

ಇದು ಮುಂದಿನ ದಿನಗಳಲ್ಲಿ ತರಕಾರಿಗಳು ಮತ್ತು ಇತರ ಕೃಷಿ ಸರಕುಗಳ ಅಂತಾರಾಜ್ಯ ಸಾಗಾಣೆಗೆ ಅಡ್ಡಿ ಉಂಟುಮಾಡುವ ಸಾಧ್ಯತೆಯಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಈ ನಿರ್ಬಂಧವು ಸಾವಿರಾರು ರೈತರ ಜೀವನ ಉಪಾಯದ ಮೇಲೆ ನೇರ ಪರಿಣಾಮ ಬೀರಲಿದೆ ಎಂದು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending