ದಿನದ ಸುದ್ದಿ
ಕೊಲೆ ಕೇಸ್ ; ನಾಳೆ ಚಿತ್ರದುರ್ಗದಲ್ಲಿ ನಟ ದರ್ಶನ್ ವಿರುದ್ಧ ಪ್ರತಿಭಟನೆ
ಸುದ್ದಿದಿನಡೆಸ್ಕ್: ಚಿತ್ರದುರ್ಗದ ಯುವಕ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕನ್ನಡದ ಚಲನಚಿತ್ರ ನಟ ದರ್ಶನ್ ಅವರನ್ನು ಬಂಧಿಸಲಾಗಿದೆ.
ಈ ಸಂಬಂಧ ನಾಳೆ ಚಿತ್ರದುರ್ಗದಲ್ಲಿನ ವಿವಿಧ ಸಂಘಟನೆಗಳು ದರ್ಶನ್ ವಿರುದ್ಧ ಪ್ರತಿಭಟಿಸಿ ತನಿಖೆ ಪಾರದರ್ಶಕವಾಗಿರ ಬೇಕು ಹಾಗೂ ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಬೇಕೆಂದು ಡಿಸಿಗೆ ಮನವಿಯನ್ನು ಸಲ್ಲಿಸಲಿದ್ದಾರೆ.
ಮೈಸೂರಿನ ದರ್ಶನ್ ಒಡೆತನದ ಫಾರ್ಮ್ ಹೌಸ್‌ನಲ್ಲಿ ೧೦ ಮಂದಿಯನ್ನು ಬಂಧಿಸಲಾಗಿದೆ ಎಂದು ಸುದ್ದಿಸಂಸ್ಥೆ ತಿಳಿಸಿವೆ. ಹೆಚ್ಚಿನ ವಿಚಾರಣೆಗಾಗಿ ದರ್ಶನ್ ಅವರನ್ನು ಬೆಂಗಳೂರಿಗೆ ಕರೆತರಲಾಗಿದ್ದು, ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸಲಾಗುತ್ತಿದೆ.
ಬೆಂಗಳೂರಿನ ಸುಮನಹಳ್ಳಿ ಬಳಿಯ ವೃಷಭಾವತಿ ನಾಲೆಯಲ್ಲಿ ಅಪಾರ್ಟ್‌ಮೆಂಟ್ ಕಟ್ಟಡದ ಮುಂಭಾಗದಲ್ಲಿ ರೇಣುಕಾಸ್ವಾಮಿಯ ಶವ ಪತ್ತೆಯಾಗಿತ್ತು. ದರ್ಶನ್ ಚಿತ್ರದುರ್ಗ ಅಭಿಮಾನಿಗಳ ಸಂಘದ ಅಧ್ಯಕ್ಷರಿಗೆ ಕರೆ ಮಾಡಿ ರೇಣುಕಾಸ್ವಾಮಿ ಎಲ್ಲಿದ್ದಾರೆ ಎಂಬುದನ್ನು ಪತ್ತೆಮಾಡಿ ಬೆಂಗಳೂರಿಗೆ ಕರೆತರುವಂತೆ ಹೇಳಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243