ದಿನದ ಸುದ್ದಿ
ದಾವಣಗೆರೆ | ರೈತ ಮುಖಂಡರೊಂದಿಗೆ ಸಭೆ ; ಕಾಡಾ ಸಭೆ ಶೀಘ್ರ, ಕಾಲುವೆಗೆ ನೀರು ಬಿಡಲು ದಿನಾಂಕ ನಿಗದಿ : ಸಚಿವ ಎಸ್.ಎಸ್.ಮಲ್ಲಿಕಾರ್ಜುನ್
ಸುದ್ದಿದಿನ,ದಾವಣಗೆರೆ:ಭದ್ರಾ ಜಲಾಶಯದಿಂದ ಅಚ್ಚುಕಟ್ಟು ದಾರರಿಗೆ ಮಳೆಗಾಲದ ಬೆಳೆಗೆ ನೀರು ಹರಿಸಬೇಕು ಮತ್ತು ಜಲಾಶಯದ ದುರಸ್ಥಿ ಕೈಗೊಳ್ಳಬೇಕೆಂದು ಹೆದ್ದಾರಿ ಬಂದ್ ಗೆ ಕರೆ ಕೊಟ್ಟಿದ್ದ ರೈತ ಮುಖಂಡರೊಂದಿಗೆ ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರು ಒಂದೆರಡು ದಿನಗಳಲ್ಲಿ ಕಾಡಾ ಸಭೆ ಕರೆಯಲು ನಿರ್ಣಯಿಸಲಾಗುತ್ತದೆ ಎಂದು ದೂರವಾಣಿಯಲ್ಲಿ ನೀಡಿದ ಭರವಸೆ ಮೇರೆಗೆ ರೈತ ಮುಖಂಡರು ಉದ್ದೇಶಿಸಿದ್ದ ಪ್ರತಿಭಟನೆ ಮುಂದೂಡಿದ್ದಾರೆ.
ಜುಲೈ 23 ರಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಅಧ್ಯಕ್ಷತೆಯಲ್ಲಿ ಜಿಲ್ಲಾಡಳಿತ ಭವನದಲ್ಲಿ ರೈತ ಮುಖಂಡರೊಂದಿಗೆ ಸಮಾಲೋಚನಾ ಸಭೆ ನಡೆಯಿತು. ಮಾಜಿ ಸಚಿವರಾದ ಎಸ್.ಎ.ರವೀಂದ್ರನಾಥ್ ನೇತೃತ್ವದಲ್ಲಿ ಭದ್ರಾ ಜಲಾಶಯದ ಅಗತ್ಯ ದುರಸ್ಥಿಗೆ ಅನುದಾನ ಬಿಡುಗಡೆ ಮತ್ತು ಕಾಲುವೆಗಳ ದುರಸ್ಥಿ ಸೇರಿದಂತೆ ಮಳೆಗಾಲದ ಬೆಳೆಗೆ ನೀರು ಹರಿಸಬೇಕೆಂಬ ಬೇಡಿಕೆಗಳನ್ನಿಟ್ಟು ಹೆದ್ದಾರಿ ಬಂದ್ ಕರೆ ಕೊಟ್ಟಿದ್ದರು.
ಅಧಿವೇಶನ ನಡೆಯುತ್ತಿದ್ದು ಸಚಿವರು ಸೇರಿದಂತೆ ಜನಪ್ರತಿನಿಧಿಗಳು ಅಧಿವೇಶನದಲ್ಲಿ ಭಾಗಿಯಾಗಿದ್ದು ಜಿಲ್ಲೆಯ ಹಿತದೃಷ್ಟಿಯಿಂದ ನಿಮ್ಮ ಬೇಡಿಕೆಗಳನ್ನು ಉಸ್ತುವಾರಿ ಸಚಿವರ ಗಮನಕ್ಕೆ ಮತ್ತು ಸರ್ಕಾರದ ಗಮನಕ್ಕೆ ತಂದು ರೈತರ ಎಲ್ಲಾ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸುವುದಾಗಿ ಜಿಲ್ಲಾಧಿಕಾರಿಯವರು ಭರವಸೆ ನೀಡಿದರು. ಆದರೂ ಒಪ್ಪದ ಮುಖಂಡರು ಪಟ್ಟು ಹಿಡಿದಾಗ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ದೂರವಾಣಿಯಲ್ಲಿ ಸಮಾಲೋಚಿಸಿದಾಗ ಜುಲೈ 24 ರಂದು ಉಪಮುಖ್ಯಮಂತ್ರಿಗಳು ಎಲ್ಲಾ ನೀರಾವರಿ ನಿಗಮಗಳ ಅಧಿಕಾರಿಗಳು ಹಾಗೂ ಸಚಿವರು, ಶಾಸಕರೊಂದಿಗೆ ಸಭೆ ಕರೆದಿದ್ದು ಈ ಸಭೆಯಲ್ಲಿ ಭದ್ರಾ ಕಾಡಾ ಸಭೆ ಕರೆದು ಕಾಲುವೆಗಳಿಗೆ ನೀರು ಬಿಡಲು ದಿನಾಂಕ ನಿಗದಿ ಮಾಡಲಾಗುತ್ತದೆ. ಈ ಸಭೆಗೆ ದಾವಣಗೆರೆ ರೈತ ಮುಖಂಡರನ್ನು ಆಹ್ವಾನಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ ಎಂದು ರೈತ ಮುಖಂಡರ ಸಭೆಯಲ್ಲಿ ಜಿಲ್ಲಾಧಿಕಾರಿಯವರು ತಿಳಿಸಿದರು.
ಎರಡು ದಿನಗಳಲ್ಲಿ ನೀರು ಬಿಡಲು ತೀರ್ಮಾನಿಸಬೇಕು ಮತ್ತು ಭದ್ರಾ ಜಲಾಶಯದಲ್ಲಿನ ಸ್ಲುಗೇಟ್ ದುರಸ್ಥಿ ಮತ್ತು ಕ್ರೆಸ್ ಗೇಟ್ ದುರಸ್ಥಿ ಮತ್ತು ನಾಲಾ ದುರಸ್ಥಿಗೆ ಅನುದಾನ ಬಿಡುಗಡೆ ಮಾಡಲು ಆಗಸ್ಟ್ 15 ವರೆಗೆ ಗಡುವು ಮತ್ತು ತುಂಗಾದಿಂದ ಭದ್ರಾಕ್ಕೆ 22.5 ಟಿಎಂಸಿ ಲಿಫ್ಟ್ ಮಾಡದೆ, ಭದ್ರಾ ಮೇಲ್ದಂಡೆ ಯೋಜನೆಗೆ ನೀರು ಹರಿಸಬಾರದೆಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂತ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್, ಹೆಚ್ಚುವರಿ ರಕ್ಷಣಾಧಿಕಾರಿ ವಿಜಯಕುಮಾರ್ ಎಂ.ಸಂತೋಷ್, ನೀರಾವರಿ ನಿಗಮದ ಅಧೀಕ್ಷಕ ಇಂಜಿನಿಯರ್ ಸುಜಾತ, ಮಾಜಿ ಸಚಿವರಾದ ಎಸ್.ಎ.ರವೀಂದ್ರನಾಥ್, ಎಂ.ಪಿ. ರೇಣುಕಾಚಾರ್ಯ, ರೈತ ಮುಖಂಡರಾದ ಮಾಡಾಳು ಮಲ್ಲಿಕಾರ್ಜುನ್, ಬಲ್ಲೂರು ರವಿಕುಮಾರ್, ಶಾಮನೂರು ಲಿಂಗರಾಜ, ಕೋಳೆನಹಳ್ಳಿ ಸತೀಶ್ ಹಾಗೂ ಇನ್ನಿತರೆ ಮುಖಂಡರು, ಅಧಿಕಾರಿಗಳು ಉಪಸ್ಥಿತರಿದ್ದರು.ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಜಂಟಿ ನಿರ್ದೇಶಕ ಹೆಚ್. ಕೇಶವ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ಶಿವಮೊಗ್ಗ:ಎಸ್.ಜೆ.ಎಂ ವಿದ್ಯಾಪೀಠ (ರಿ), ಚಿತ್ರದುರ್ಗ ಇಲ್ಲಿ ಬ್ಯಾಕ್‌ಲಾಗ್ ಅಡಿಯಲ್ಲಿ ನೇಮಕ ಮಾಡಿಕೊಳ್ಳಲಾದ ಹುದ್ದೆಗಳನ್ನು ಇಲಾಖಾ ತನಿಖೆ ನಡೆಸುವಂತೆ ಕೋರಿ ಅರ್ಜಿ ಸಲ್ಲಿಸಿ 2 ತಿಂಗಳು ಕಳೆದರೂ ಯಾವುದೇ ತನಿಖಾ ವರದಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ನಿರ್ಲಕ್ಷ್ಯ ತೋರಿದ ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇಲ್ಲಿಯ ಜಂಟಿ ನಿರ್ದೇಶಕರಾದ ಶ್ರೀ ಕೇಶವ ಹೆಚ್. ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಎಸ್.ಜೆ.ಎಂ ವಿದ್ಯಾಪೀಠ (ರಿ), ಚಿತ್ರದುರ್ಗ ಇಲ್ಲಿ 2022ನೇ ಸಾಲಿನಲ್ಲಿ ಬ್ಯಾಕ್‌ಲಾಗ್ ಅಡಿಯಲ್ಲಿ ಅರ್ಥಶಾಸ್ತç (ಎಸ್.ಟಿ), ರಾಜ್ಯಶಾಸ್ತç (ಎಸ್.ಸಿ), ಗ್ರಂಥಪಾಲಕರು (ಎಸ್.ಟಿ) ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗಿದ್ದು, ಇಲ್ಲಿ ಅಂತಿಮವಾಗಿ ಆಯ್ಕೆ ಮಾಡಿಕೊಳ್ಳಲಾದ ನೇಮಕಾತಿ ಪ್ರಕ್ರಿಯೆಯು ಪಾರದರ್ಶಕವಾಗಿ ನಡೆದಿರುವ ಬಗ್ಗೆ ಅನುಮಾನ ವ್ಯಕ್ತವಾಗಿ ಜಂಟಿ ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇವರಿಗೆ ದಿನಾಂಕ: 24-11-2025 ರಂದು ಅರ್ಜಿ ಸಲ್ಲಿಸಿ, ಬ್ಯಾಕ್ ಲಾಗ್ ನೇಮಕಾತಿಯ ಬಗ್ಗೆ ತನಿಖೆ ನಡೆಸಿ, ತನಿಖಾ ವರದಿಯನ್ನು ನೀಡುವಂತೆ ಕೋರಲಾಗಿತ್ತು.
ಅರ್ಜಿ ಸಲ್ಲಿಸಿ ಒಂದು ತಿಂಗಳಾದರೂ ಯಾವುದೇ ಮಾಹಿತಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ಇರುವ ಕಾರಣ ಜ್ಞಾಪನ ನೀಡಿ 7 ದಿನಗಳ ಒಳಗಾಗಿ ತನಿಖಾ ವರದಿಯನ್ನು ನೀಡುವಂತೆ ವಿನಂತಿಸಲಾಗಿತ್ತು. ಆದರೆ ಜಂಟಿ ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇವರು ಅರ್ಜಿ ಸಲ್ಲಿಸಿ 2 ತಿಂಗಳಾದರೂ ಕನಿಷ್ಠ ಹಿಂಬರಹವನ್ನಾದರೂ ನೀಡದೆ ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ಕರ್ತವ್ಯ ಲೋಪ ಎಸಗಿದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್‍ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್‍ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್‍ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.


