ದಿನದ ಸುದ್ದಿ

ದಕ್ಷಿಣ ಕನ್ನಡದ ಜಿಲ್ಲಾಧಿಕಾರಿ ಸಸಿಕಾಂತ್​ ಸೆಂಥಿಲ್ ಐಎಎಸ್​ ಹುದ್ದೆಗೆ​ ರಾಜೀನಾಮೆ..!

Published

on

ಸುದ್ದಿದಿನ,ದಕ್ಷಿಣ ಕನ್ನಡ : ದಕ್ಷಿಣ ಕನ್ನಡದ ಜಿಲ್ಲಾಧಿಕಾರಿ (ಡಿಸಿ) ಸಸಿಕಾಂತ್ ಸೆಂಥಿಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಐಎಎಸ್ ಅಧಿಕಾರಿ ಸೆಂಥಿಲ್ ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ಸೆಪ್ಟೆಂಬರ್ 6 ಶುಕ್ರವಾರ ಜಿಲ್ಲಾಧಿಕಾರಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. 2009 ರ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿರುವ ಸೆಂಥಿಲ್ ತಮಿಳುನಾಡು ಮೂಲದವರಾಗಿದ್ದು, ಈ ಹಿಂದೆ ರಾಯಚೂರಿನ ಡಿಸಿ ಆಗಿ ಸೇವೆ ಸಲ್ಲಿಸಿದ್ದರು. ಅವರು ಎಲೆಕ್ಟ್ರಾನಿಕ್ಸ್ ಆಂಡ್ ಕಮ್ಯುನಿಕೇಷನ್ ವಿಷಯದಲ್ಲಿ ಇಂಜಿನಿಯರ್ ಪದವಿ ಹೊಂದಿದ್ದಾರೆ.

’ಪ್ರಜಾಪ್ರಭುತ್ವದ ಮೂಲ ಆಧಾರ ಸ್ತಂಭಗಳು ಹಿಂದೆಂದೂ ಕಾಣದ ರೀತಿಯಲ್ಲಿ ರಾಜಿ ಮಾಡಿಕೊಳ್ಳುತ್ತಿವೆ. ದೇಶದ ಬಹುತ್ವದ ಎಳೆಗಳಿಗೆ ಭವಿಷ್ಯದಲ್ಲಿ ಹೆಚ್ಚು ಅಪಾಯ ಇದ್ದಂತೆ ಭಾಸವಾಗುತ್ತಿದೆ. ಭವಿಷ್ಯದ ದಿನಗಳಲ್ಲಿ ಅಧಿಕಾರಿಗಳಿಗೆ ದೊಡ್ಡ ಪ್ರಮಾಣದ ಸವಾಲುಗಳು ಎದುರಾಗಬಹುದು. ಈ ಹಂತದಲ್ಲಿ ಭಾರತೀಯ ಆಡಳಿತ ಸೇವೆಯಿಂದ (ಐಎಎಸ್‌) ಹೊರಗಿರುವುದೇ ಲೇಸು ಎನಿಸುತ್ತದೆ. ಸೇವೆಯಿಂದ ಹೊರಗಿದ್ದು ಎಲ್ಲ ಜನರ ಒಳಿತಿಗಾಗಿ ದುಡಿಯುತ್ತೇನೆ’ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ತಮಿಳುನಾಡಿನವರಾದ ಸಸಿಕಾಂತ್ ಸೆಂಥಿಲ್ 2009ರ ವೃಂದದ ಐಎಎಸ್‌ ಅಧಿಕಾರಿಯಾಗಿದ್ದು, 2017ರ ಅಕ್ಟೋಬರ್ 10ರಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹುದ್ದೆಯಲ್ಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version