ದಿನದ ಸುದ್ದಿ
ಎಸ್.ಎಂ.ಕೃಷ್ಣ ಸಹೋದರ ಶಂಕರ್ ವಿಧಿವಶ
ಸುದ್ದಿದಿನ,ಮಂಡ್ಯ : ಮಾಜಿ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ಸಹೋದರ ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯ ಎಸ್.ಎಂ ಶಂಕರ್(83) ರವರು ಬಹಳ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.
ಎಸ್.ಎಂ.ಕೃಷ್ಣರವರು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಎಸ್.ಎಂ.ಶಂಕರ್ ಎಂ.ಎಲ್.ಸಿ. ಆಗಿದ್ದರು. ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ, ಸ್ವಗ್ರಾಮವಾದ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಸಲು ಕುಟುಂಬಸ್ಥರು ನಿರ್ಧಾರ ಮಾಡಿದ್ದಾರೆ.
ವರದಿ , ಗಿರೀಶ್ ರಾಜ್
ಸುದ್ದಿದಿನ.ಕಾಂ|ವಾಟ್ಸಾಪ್|9980346243