ದಿನದ ಸುದ್ದಿ

ಅಡುಗೆ ಅನಿಲ ಸೋರಿ ಒಂದೇ ಕುಟುಂಬದ ನಾಲ್ವರು ಸಾವು

Published

on

ಸುದ್ದಿದಿನ ಡೆಸ್ಕ್ : ಅಡುಗೆ ಅನಿಲ ಸೋರಿಕೆಯಿಂದ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ನಗರದ ಆಲನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಡಾ ರಾಜ್ ಕುಮಾರ್ ರಸ್ತೆಯಲ್ಲಿರುವ ಶನೇಶ್ವರ ದೇವಸ್ಥಾನದ ಹಿಂಭಾಗದಲ್ಲಿರುವ ನಿವಾಸದಲ್ಲಿ ಅಡುಗೆ ಅನಿಲ ಸೋರಿಕೆಯಿಂದ ಕುಮಾರಸ್ವಾಮಿ, ಮಂಜುಳಾ, ಮಕ್ಕಳಾದ ಅರ್ಚನಾ, ಸ್ವಾತಿ ಮೃತಪಟ್ಟ ದುರ್ದೈವಿಗಳು.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಸ್ಥಳೀಯ ಪೊಲೀಸ್ ಠಾಣೆಯ ಅಧಿಕಾರಿಗಳು, ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿ ತನಿಖೆ ಮುಂದುವರಿಸಿದ್ದಾರೆ. ಮೃತರು ಚಿಕ್ಕಮಗಳೂರು ಜಿಲ್ಲೆಯ ಕಡೂರು ಗ್ರಾಮದವರು ಎಂದು ತಿಳಿದು ಬಂದಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version