ದಿನದ ಸುದ್ದಿ
ಸರ್ಕಾರಿ ಶಾಲಾ ಮಕ್ಕಳ ಪ್ರತಿಭೆಗೆ ಹೆಗಲಾದವರನ್ನು ನೆನೆಯೋಣ
- ರಂಗನಾಥ ಕ ನಾ ದೇವರಹಳ್ಳಿ ಶಿಕ್ಷಕರು ವಿಶ್ವನಗರ
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿಶ್ವನಗರ, ಶುಕ್ರವಾರ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗಳಲ್ಲಿ ನಮ್ಮ ವಿಶ್ವನಗರ ಶಾಲೆಯ ಮಕ್ಕಳು ಅತೀ ಹೆಚ್ಚು ಪ್ರಥಮ ಬಹುಮಾನಗಳನ್ನು ಪಡೆಯುವ ಮೂಲಕ ಕ್ಲಸ್ಟರ್ ನಲ್ಲಿ ಬೆಸ್ಟ್ ಸ್ಕೂಲ್ ಆಗಿ ಹೊರಹೊಮ್ಮಿದ್ದಾರೆ.
ಎಲ್ಲಾ ಮಕ್ಕಳಿಗೂ ಹಾಗೂ ಸಹಕರಿಸಿದ ಪೋಷಕರಿಗೂ ಶಾಲೆಯ ಪರವಾಗಿ ಆತ್ಮೀಯ ಅಭಿನಂದನೆಗಳು ಶುಭವಾಗಲಿ….ಹಾಗೂ ಇಂದು ಪ್ರತಿಭಾ ಕಾರಂಜಿ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ಮೂಡಿಬಂದಿದೆ. ಇದರಲ್ಲಿ ನಮ್ಮ ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಎಲ್ಲಾ ಸಹ ಶಿಕ್ಷಕರ ಸಹಕಾರವು ತುಂಬಾ ಚೆನ್ನಾಗಿತ್ತು.
ಊಟದ ವ್ಯವಸ್ಥೆ ಹಾಗೂ ನಿರ್ವಹಣೆ ಜವಾಬ್ದಾರಿಯನ್ನು ಅತ್ಯುತ್ತಮವಾಗಿ ನಿರ್ವಹಿಸಿದ ಶ್ರೀಮತಿ ಪದ್ಮಾವತಿ ಬಿ, ಎಲ್ಲಾ ಮಕ್ಕಳಿಗೂ ಸ್ಪರ್ಧೆಗಳಲ್ಲಿ ಅತ್ಯುತ್ತಮವಾಗಿ ಅಭ್ಯಾಸ ನಡೆಸಿ ಮಕ್ಕಳಿಗೆ ಇಷ್ಟೊಂದು ಬಹುಮಾನ ಬರಲು ಸಹಕರಿಸುವುದಲ್ಲದೇ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿಕೊಟ್ಟ ಶ್ರೀಮತಿ ಮಂಜುಳಾ ಮೇಡಂ, ಶ್ರೀಮತಿ ನಾಗಲಕ್ಷ್ಮಿ ಮೇಡಂ ಶ್ರೀಮತಿ ರಾಜೇಶ್ವರಿ ಮೇಡಂ ಹಾಗೂ ಶ್ರೀ ವಿಜಯ್ ಇವರಿಗೂ ತುಂಬು ಹೃದಯದ ಧನ್ಯವಾದಗಳು.
ನಮ್ಮ ಕಾರ್ಯಕ್ರಮಕ್ಕೆ ನಮ್ಮ ಎಸ್. ಡಿ. ಎಂ. ಸಿ. ಅಧ್ಯಕ್ಷರು ಹಾಗೂ ಸದಸ್ಯರ ಕೊಡುಗೆ ಅಪಾರವಾಗಿತ್ತು.. ತಾವೇ ಜವಾಬ್ದಾರಿ ವಹಿಸಿಕೊಂಡು ಪೋಷಕರು ನಿರ್ವಹಣೆ ಮಾಡಿದ್ದು ತುಂಬಾ ಉತ್ತಮವಾಗಿತ್ತು. ನಮ್ಮ ಅಧ್ಯಕ್ಷರು ನಮ್ಮನ್ನು ಪ್ರೋತ್ಸಾಹಿಸುವ ರೀತಿ ನಮಗೆ ತುಂಬಾ ಸಂತೋಷವಾಯಿತು.
ನಮ್ಮ ಕಾರ್ಯಕ್ರಮಕ್ಕೆ ನಮ್ಮ ದಾನಿಗಳ ಕೊಡುಗೆ ಅಪಾರವಾದದ್ದು, ಶ್ರೀಯುತ ಶಭರೀಶ್. ಗ್ರಾಮ ಪಂಚಾಯಿತಿ ಅಧ್ಯಕ್ಷರು ಅರಬಿಳಚಿ. ಇವರು ನಮ್ಮ ಕ್ಲಸ್ಟರ್ ನ ಎಲ್ಲಾ ವಿಜೇತ ಮಕ್ಕಳಿಗೆ ಬಹುಮಾನದ ಕೊಡುಗೆ ನೀಡಿದರು.
ಶ್ರೀ ಮಧುಕುಮಾರ್. ಮಾಜಿ ತಾಲೂಕು ಪಂಚಾಯಿತಿ ಸದಸ್ಯರು. ನಮ್ಮ ಶಾಲೆಗೆ ಡಕ್ ಹಾಗೂ ಸ್ಪೀಕರ್ ಬಾಕ್ಸ್ ಕೊಡಿಸಿದ್ದಾರೆ. ಶ್ರೀ ಅಕ್ಬರ್ ಹಾಗೂ ಅವರ ಪುತ್ರರಾದ ಖಲೀಂ ರವರು ನಮ್ಮ ಕಾರ್ಯಕ್ರಮಕ್ಕೆ ವೇದಿಕೆಗೆ ಬೇಕಾಗುವ ಎಲ್ಲಾ ವ್ಯವಸ್ಥೆ ಮಾಡಿದ್ದಾರೆ. ಶ್ರೀ ರಾಜಣ್ಣನವರು ಮಕ್ಕಳಿಗೆ ತಟ್ಟೆಗಳನ್ನು ಕೊಡುಗೆಯಾಗಿ ನೀಡಿದ್ದಾರೆ.
ಶ್ರೀ ಪಳನಿಯವರು ಮಕ್ಕಳಿಗೆ ತಿಂಡಿಗೆ ಅಡಿಕೆ ಪ್ಲೇಟ್ ಗಳನ್ನು ಉಚಿತವಾಗಿ ನೀಡಿದ್ದಾರೆ. ಶ್ರೀ ಚಲುವರಾಜುರವರು,ಕಾರ್ಯಕ್ರಮಕ್ಕೆ ಧನಸಹಾಯ ಮಾಡಿರುತ್ತಾರೆ, ಶ್ರೀ ಅಂಗಡಿ ಕುಮಾರ್ ರವರು, ಹಾಗೂ ಶ್ರೀ ದಯಾನಂದ್ ರವರು ತಲಾ ಒಂದು ಮೂಟೆ ಅಕ್ಕಿಯನ್ನು ಕೊಟ್ಟಿರುತ್ತಾರೆ.
ಶ್ರೀ ಮುನಿವೇಲುರವರು ತೆಂಗಿನಕಾಯಿಗಳನ್ನು ನೀಡಿ ಕಾರ್ಯಕ್ರಮದಲ್ಲಿ ಊಟದ ವ್ಯವಸ್ಥೆಗೆ ಸಹಕರಿಸಿರುತ್ತಾರೆ. ನಮ್ಮ ಅಡುಗೆಯವರ ಕಾರ್ಯವನ್ನು ನೆನೆಯಲೇಬೇಕು.. ತುಂಬಾ ಶ್ರಮವಹಿಸಿದ್ದಾರೆ ಅವರಿಗೂ ಧನ್ಯವಾದಗಳು.
ಪೋಷಕರು ಹಾಗೂ ನಮ್ಮ ಗ್ರಾಮದ ಮುಖಂಡರುಗಳು ಕಾರ್ಯಕ್ರಮದ ಯಶಸ್ಸಿನಲ್ಲಿ ತಮ್ಮದೇ ಆದ ಕೊಡುಗೆ ನೀಡಿರುತ್ತಾರೆ ಅವರಿಗೂ ಧನ್ಯವಾದಗಳು.
ತಮಿಳು ಶಾಲೆಯ ಮುಖ್ಯ ಶಿಕ್ಷಕರಾದ ಶ್ರೀ ಪೆರಿಸ್ವಾಮಿಯವರು ಹಾಗೂ ಸಿಬ್ಬಂದಿ ವರ್ಗದವರು ಅವರ ಶಾಲೆಯಿಂದ ಕೊಠಡಿ, ಹಾಗೂ ಎಲ್ಲಾ ಪರಿಕರಗಳನ್ನು ನೀಡುವುದರ ಮೂಲಕ ಸಹಕರಿಸಿದ್ದಾರೆ ಅವರಿಗೂ ಧನ್ಯವಾದಗಳು… ನಮ್ಮ ಅಂಗನವಾಡಿ ಸಿಬ್ಬಂದಿ ವರ್ಗದವರಿಗೂ ಹಾಗೂ ತಮ್ಮ ಮಕ್ಕಳನ್ನು ಅತ್ಯುತ್ತಮವಾಗಿ ತಯಾರು ಮಾಡಿ ಬಹುಮಾನಗಳನ್ನು ಪಡೆದ ಎಲ್ಲಾ ಪೋಷಕರಿಗೂ, ಮುಖ್ಯವಾಗಿ ನಮ್ಮ ಮಕ್ಕಳಿಗೆ ಅನಂತ ಅನಂತ ಧನ್ಯವಾದಗಳು.
ಬಾಳೆಕಂದು ಮಾವಿನಸೊಪ್ಪು ಕಟ್ಟಿದ ಹಾಗೂ ಊಟದ ವ್ಯವಸ್ಥೆ ಮಾಡಿದ ಪ್ರಜ್ವಲ್ ಮತ್ತು ತಂಡದವರಿಗೆ, ಉತ್ತಮವಾಗಿ ರಂಗೋಲಿ ಹಾಕಿ,,,ಎಲ್ಲರನ್ನೂ ಸ್ವಾಗತಿಸಿದ ಅರ್ಚನಾ ಮತ್ತು ತಂಡದವರ ಸ್ವಾಗತ ಕಮಿಟಿಗೂ, ಬೆಳಿಗ್ಗೆಯಿಂದ ಸಂಜೆಯವರೆಗೂ ಎಲ್ಲೂ ಕಸ ಇರದಂತೆ ನೋಡಿಕೊಂಡ ಮನೋಜ್ ಮತ್ತು ತಂಡದ ಸ್ವಚ್ಛತಾ ಕಮಿಟಿಯವರಿಗೂ ನಮ್ಮ ಶಾಲೆಯ ಪರವಾಗಿ ಆತ್ಮೀಯ ಅಭಿನಂದನೆಗಳು.
ಇಂದು ಕಾರ್ಯಕ್ರಮಕ್ಕೆ ಆಗಮಿಸಿದ ಅರಬಿಳಚಿ ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷರಾದ ಶ್ರೀಮತಿ ಬೀಬಿಆಯಿಷಾರವರಿಗೂ, ಸದಸ್ಯರಾದ ಶ್ರೀಮತಿ ಸುಶೀಲಮ್ಮನವರಿಗೂ,ಶ್ರೀ ಗುಣಶೇಖರ್ ರವರಿಗೆ ,ತಾಯಂದಿರ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ದೀಪಾರವರಿಗೂ ಉಪಾಧ್ಯಕ್ಷರಾದ ಶ್ರೀಮತಿ ಮೀನಾರವರಿಗೂ ಹಾಗೂ ಎಲ್ಲಾ ಸದಸ್ಯರಿಗೂ ತುಂಬು ಹೃದಯದ ಧನ್ಯವಾದಗಳು.
ಇಂದಿನ ಕಾರ್ಯಕ್ರಮದಲ್ಲಿ ನಮ್ಮ ಮುಖ್ಯ ಶಿಕ್ಷಕರಾದ ಶ್ರೀಮತಿ ಸಾವಿತ್ರಮ್ಮನವರು ಹಾಗೂ ಸಿ ಆರ್ ಪಿ ಯವರಾದ ಶ್ರೀ ಜಾಪರ್ ರವರಿಗೆ* *ಹೃದಯಾಂತರಾಳದ ನಮನಗಳು..ಇವರು ಜಂಟಿ ಯಾಗಿ ಎಲ್ಲಾ ಜವಾಬ್ದಾರಿಗಳನ್ನು ನಿರ್ವಹಿಸುವ ಮೂಲಕ ಕಾರ್ಯಕ್ರಮದ ಯಶಸ್ಸಿಗೆ ಕಾರಣೀಕರ್ತರಾಗಿದ್ದಾರೆ ಅವರಿಗೆ ಆತ್ಮೀಯವಾಗಿ ವಂದಿಸುತ್ತಾ….ನಮ್ಮ ಕ್ಲಸ್ಟರಿನ ಎಲ್ಲಾ ಶಾಲೆಯ ಮುಖ್ಯ ಶಿಕ್ಷಕರಿಗೂ ಹಾಗೂ ಸಿಬ್ಬಂದಿಯವರಿಗೂ ನಮ್ಮ ಶಾಲೆಯ ವತಿಯಿಂದ ಕೃತಜ್ಞತಾಪೂರ್ವಕ ಧನ್ಯವಾದಗಳು….ನಿಮ್ಮೆಲ್ಲರ ಸಹಕಾರದಿಂದ ಇಂದು ಕಾರ್ಯಕ್ರಮ ಯಶಸ್ವಿಯಾಗಿದೆ ಎಲ್ಲರಿಗೂ ಧನ್ಯವಾದಗಳು.
ನಾನು ಎನ್ನುವುದು ಅಜ್ಞಾನ
ನನ್ನದು ಎನ್ನುವುದು ಅವಿವೇಕ
ನನ್ನಿಂದಲೇ ಎನ್ನುವುದು ಅಹಂಕಾರ
ಇಲ್ಲಿ ಸೇವೆಯೊಂದೇ ಆ ದೇವರಿಗೆ ಸಲ್ಲುವುದು ಸತ್ಯ
ಎಲ್ಲಾ ನೀನೇ ಕಾಣೋ ಉಡುಗಿರಿ ಶ್ರೀ ರಂಗನಾಥ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ನವಿಲೇಹಾಳು ಗ್ರಾಮ ಪಂಚಾಯಿತಿಗೆ ಭೇಟಿ ; ಗ್ರಾಮಸಭೆ – ಗ್ರಾಮಾಭಿವೃದ್ಧಿಗೆ ಮನವಿ
ಸುದ್ದಿದಿನ,ಚನ್ನಗಿರಿ: ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯು ಸೋಮೌಅರ ನವಿಲೇಹಾಳು ಗ್ರಾಮ ಪಂಚಾಯಿತಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಅವರನ್ನು ಭೇಟಿಯಾಗಿ ಗ್ರಾಮಸಭೆಯನ್ನು ಸಮರ್ಪಕವಾಗಿ ಹಾಗೂ ಪರಿಣಾಮಕಾರಿಯಾಗಿ ನಡೆಸುವಂತೆ ಮನವಿ ಪತ್ರ ಸಲ್ಲಿಸಲಾಯಿತು.
ಗ್ರಾಮಸಭೆ ಎಂಬುದು ಗ್ರಾಮಸ್ಥರ ಸಮಸ್ಯೆಗಳನ್ನು ನೇರವಾಗಿ ಚರ್ಚಿಸಿ, ಗ್ರಾಮದ ಅಭಿವೃದ್ಧಿಗೆ ಅಗತ್ಯವಿರುವ ಯೋಜನೆಗಳನ್ನು ರೂಪಿಸುವ ಪ್ರಮುಖ ವೇದಿಕೆಯಾಗಿರುವುದರಿಂದ, ಗ್ರಾಮಸಭೆಯ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಭಾಗವಹಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು PDO ಅವರಿಗೆ ಮನವಿ ಮಾಡಲಾಯಿತು.
ಅದರಂತೆ ಗ್ರಾಮಸಭೆಯ ದಿನಾಂಕ, ಸಮಯ ಹಾಗೂ ಸ್ಥಳದ ಮಾಹಿತಿಯನ್ನು ಟಾಂಟಾಂ/ಧ್ವನಿವರ್ಧಕದ ಮೂಲಕ ಗ್ರಾಮದಲ್ಲಿ ವ್ಯಾಪಕವಾಗಿ ಪ್ರಚಾರ ಮಾಡುವುದರ ಜೊತೆಗೆ, ಸಾರ್ವಜನಿಕರಿಗೆ ಮುಂಚಿತವಾಗಿ ಮಾಹಿತಿ ನೀಡಿ, ಅರ್ಹ ಫಲಾನುಭವಿಗಳು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸಭೆಯಲ್ಲಿ ಭಾಗವಹಿಸುವಂತೆ ಜಾಗೃತಿ ಮೂಡಿಸುವಂತೆ ತಿಳಿಸಲಾಯಿತು.
ಗ್ರಾಮದಲ್ಲಿಯೇ ಉದ್ಯೋಗ ಸೃಷ್ಟಿಗೆ ಒತ್ತು
ಇದೇ ಸಂದರ್ಭದಲ್ಲಿ ಮನರೇಗಾ (MGNREGA) ಯೋಜನೆಯಡಿ ಗ್ರಾಮದ ಅರ್ಹ ಕಾರ್ಮಿಕರಿಗೆ ಸ್ಥಳೀಯವಾಗಿಯೇ ಹೆಚ್ಚಿನ ಉದ್ಯೋಗಾವಕಾಶಗಳನ್ನು ಕಲ್ಪಿಸುವಂತೆ ಮನವಿ ಮಾಡಲಾಯಿತು.
ಗ್ರಾಮಸ್ಥರು ಉದ್ಯೋಗಕ್ಕಾಗಿ ಅನಿವಾರ್ಯವಾಗಿ ಗುಳೆ ಹೋಗುವ ಪರಿಸ್ಥಿತಿ ನಿರ್ಮಾಣವಾಗದಂತೆ, ಸರ್ಕಾರದ ಉದ್ಯೋಗ ಖಾತರಿ ಯೋಜನೆಯಡಿ ಲಭ್ಯವಿರುವ ಕೆಲಸಗಳನ್ನು ಸಮರ್ಪಕವಾಗಿ ಗುರುತಿಸಿ, ಅರ್ಹರಿಗೆ ನಿಯಮಾನುಸಾರ ಉದ್ಯೋಗ ಒದಗಿಸಬೇಕು ಎಂದು ತಿಳಿಸಲಾಯಿತು.
ಪ್ರಸ್ತುತ ಬತ್ತದ ನಾಟಿ ಕಾರ್ಯಕ್ಕೆ ಅಗತ್ಯವಿರುವ ನೀರಿನ ಸಮಸ್ಯೆಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ, ಕೃಷಿ ಕೆಲಸಗಳು ಲಭ್ಯವಿಲ್ಲದ ಅವಧಿಯಲ್ಲಿ ಗ್ರಾಮಸ್ಥರಿಗೆ ಮನರೇಗಾ ಸೇರಿದಂತೆ ಇತರೆ ಸರ್ಕಾರಿ ಯೋಜನೆಗಳ ಮೂಲಕ ಉದ್ಯೋಗ ಒದಗಿಸಿ, ಗ್ರಾಮದಲ್ಲಿಯೇ ಆದಾಯದ ಅವಕಾಶಗಳನ್ನು ಸೃಷ್ಟಿಸುವುದು ಅಗತ್ಯವಾಗಿದೆ ಎಂದು ಮನವಿ ಮಾಡಲಾಯಿತು.
ಗ್ರಾಮದಲ್ಲಿಯೇ ಉದ್ಯೋಗ ದೊರೆತರೆ ಗ್ರಾಮಸ್ಥರ ಆರ್ಥಿಕ ಸ್ಥಿತಿ ಸುಧಾರಿಸುವುದರ ಜೊತೆಗೆ, ಗುಳೆ ಹೋಗುವುದನ್ನು ತಡೆಯಲು ಹಾಗೂ ಗ್ರಾಮದ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು PDO ಅವರ ಗಮನಕ್ಕೆ ತರಲಾಯಿತು.
ಇತರೆ ಗ್ರಾಮಾಭಿವೃದ್ಧಿ ವಿಚಾರಗಳ ಚರ್ಚೆ
ಇದರ ಜೊತೆಗೆ ನವಿಲೇಹಾಳ ಗ್ರಾಮದ ವಿವಿಧ ಅಭಿವೃದ್ಧಿ ಸಮಸ್ಯೆಗಳು, ಸಾರ್ವಜನಿಕರಿಗೆ ಅಗತ್ಯವಿರುವ ಮೂಲಭೂತ ಸೌಲಭ್ಯಗಳು, ಉದ್ಯೋಗಾವಕಾಶಗಳು, ಕೃಷಿಗೆ ಸಂಬಂಧಿಸಿದ ಸಮಸ್ಯೆಗಳು ಹಾಗೂ ಸರ್ಕಾರದ ವಿವಿಧ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಕುರಿತು PDO ಅವರೊಂದಿಗೆ ಚರ್ಚಿಸಲಾಯಿತು.
ಗ್ರಾಮಸ್ಥರಿಗೆ ಸರ್ಕಾರದ ಯೋಜನೆಗಳ ಪ್ರಯೋಜನಗಳು ಸಮರ್ಪಕವಾಗಿ ತಲುಪುವಂತೆ ಪಾರದರ್ಶಕವಾಗಿ ಹಾಗೂ ನಿಯಮಾನುಸಾರ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು ಎಂದು ಮನವಿ ಮಾಡಲಾಯಿತು.
ಗ್ರಾಮಸಭೆಯಲ್ಲಿ ಸಾರ್ವಜನಿಕರ ಹೆಚ್ಚಿನ ಭಾಗವಹಿಸುವಿಕೆ, ಸ್ಥಳೀಯ ಉದ್ಯೋಗ ಸೃಷ್ಟಿ ಹಾಗೂ ಗ್ರಾಮಾಭಿವೃದ್ಧಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಮೂಲಕ ನವಿಲೇಹಾಳ ಗ್ರಾಮವನ್ನು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಮತ್ತಷ್ಟು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿ ಸಲ್ಲಿಸಲಾಯಿತು.
“ಗ್ರಾಮದ ಅಭಿವೃದ್ಧಿ ಕೇವಲ ಸರ್ಕಾರದ ಜವಾಬ್ದಾರಿಯಲ್ಲ; ಅಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರು ಒಗ್ಗೂಡಿ ಕಾರ್ಯನಿರ್ವಹಿಸಿದಾಗ ಮಾತ್ರ ಸಮಗ್ರ ಗ್ರಾಮಾಭಿವೃದ್ಧಿ ಸಾಧ್ಯ.”
ಗ್ರಾಮದ ಜನರ ಸಮಸ್ಯೆಗಳನ್ನು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು, ನವಿಲೇಹಾಳ ಗ್ರಾಮದ ಸಮಗ್ರ ಅಭಿವೃದ್ಧಿಗಾಗಿ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ (ರಿ.) ನಿರಂತರವಾಗಿ ಜನಪರವಾಗಿ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ ದಾವಣಗೆರೆ ಜಿಲ್ಲಾಧ್ಯಕ್ಷರಾದ ಜಾಫರ್ ರವರು ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ
ಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು
~ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ
ಆಗಸ್ಟ್ ದಿನಾಂಕ 8 ಮತ್ತು 9ನೇ ತಾರೀಕು,ಸಾಹಿತ್ಯದ ಬೃಹತ್ ಹಡಗೊಂದು ಶ್ರೀಮಂತನಗರಿ ದಾವಣಗೆರೆ. ಜ್ಞಾನದ ಗೂಡು ಸಾಹಿತ್ಯ ಕಲಾರಸಿಕರ ಬೀಡು. ವಿವಿಧ ಖಾದ್ಯಗಳ ರಸದೌತಣದ ನಾಡು,ಸರಸ್ವತಿ ನೆಲೆಸಿದ ನಾಡು ದಾವಣಗೆರೆ.
ಎಲ್ಲ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿರುವ ಬಹು ತಾಳ್ಮೆಯ ಕುಟುಂಬವನ್ನು ನಿರ್ವಹಿಸಿಕೊಂಡು ಸಂಸಾರದ ನೌಕೆಯನ್ನು ಸಾಗಿಸುತ್ತಾ ಅದರ ಜೊತೆಗೆ ತಮ್ಮ ಮನೋರಂಜನೆ ಸಾಹಿತ್ಯ ಸಮಾಜ ಜ್ಞಾನ ವಿಜ್ಞಾನಗಳ ಸಕಲ ಕಲಾವಿದ್ಯೆಗಳಲ್ಲಿ ತೊಡಗಿಸಿಕೊಂಡಿರುವ ನಮ್ಮೆಲ್ಲರ ಮಹಿಳೆಯರ ಪರವಾಗಿ ಈ ನಮ್ಮ ಕನ್ನಡ ಸಾಹಿತ್ಯ ಪರಿಷತ್ತು ಒಂದು ಅತ್ಯದ್ಭುತವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಕನ್ನಡ ಸಾಹಿತ್ಯ ಪರಿಷತ್ ಶ್ರೀ ಬಿ ವಾಮದೇವಪ್ಪ ತೊಗಲೇರಿ ಅಧ್ಯಕ್ಷರ ಸಮ್ಮುಖದಲ್ಲಿ ಈ ಮಹಿಳಾ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು . ಸಮ್ಮೇಳನದ ಅಧ್ಯಕ್ಷರು ಮಹಾಪೋಷಕರು ಡಾಕ್ಟರ್ ಪ್ರಭಾ ಮಲ್ಲಿಕಾರ್ಜುನ್, ಹಾಗೆಯೇ ಉದ್ಘಾಟಕರಾಗಿ ಮಹಿಳಾ ಆಯೋಗದ ಡಾಕ್ಟರ್ ನಾಗಲಕ್ಷ್ಮಿ ಚೌದರಿ, ಪ್ರಧಾನ ಸಂಚಾಲಕರು ರಾಜ ಯೋಗಿನಿ ಬ್ರಹ್ಮಕುಮಾರಿ ನೀಲಾಜಿ ಅವರೆಲ್ಲರಿಗೂ ಸ್ವಾಗತವನ್ನು ಬಯಸುತ್ತಾ ,
ಸ್ವಾಗತ ಸಮಿತಿ, ಹಣಕಾಸು ಸಮಿತಿ ,ಸಾಹಿತ್ಯ ಸಮಿತಿ, ಆಹಾರ ಸಮಿತಿ ,ಸಾಂಸ್ಕೃತಿಕ ಸಮಿತಿ ,ವೇದಿಕೆ ಸಮಿತಿ, ಸ್ಮರಣ ಸಂಚಿಕೆ ಸಮಿತಿ, ಪ್ರಚಾರ ಸಮಿತಿ, ಶಿಸ್ತು ಸಮಿತಿ ಮೆರವಣಿಗೆ ಸಮಿತಿ,ಪುಸ್ತಕ ಮಳಿಗೆ ಸಮಿತಿ ,ಅತಿಥಿ ಸತ್ಕಾರ ಸಮಿತಿ, ಸ್ಪರ್ಧಾ ಸಮಿತಿ, ಎಲ್ಲದಕ್ಕೂ ಸಹಕಾರ ಕೊಟ್ಟಂತಹ ಶ್ರೀ ಸಮರ್ಥ್ ಶಾಮನೂರ್ ಮಲ್ಲಿಕಾರ್ಜುನ್ ಶಾಸಕರು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ, ಶ್ರೀ ಸೋಮೇಶ್ವರ ಸಮೂಹ ಸಂಸ್ಥೆಗಳು.
ಎಲ್ಲ ಕಾರ್ಯಕ್ರಮಗಳನ್ನು ಸುಸಜ್ಜಿತವಾಗಿ ನಡೆಸಿ ಕೊಡುತ್ತಿರುವ ಶ್ರೀಮತಿ ಸುಮತಿ ಜಯಪ್ಪ, ಶ್ರೀಮತಿ ಯಶಾ ದಿನೇಶ್ ,ಶ್ರೀಮತಿ ವೀಣಾ ಕೃಷ್ಣಮೂರ್ತಿ , ಶ್ರೀಮತಿ ಸತ್ಯಭಾಮ ಮಂಜುನಾಥ್, ಶ್ರೀಮತಿ ಮಲ್ಲಮ್ಮ ಎಂ ಎಸ್ ,ಶ್ರೀಮತಿ ನೀಲಗುಂದ ಜಯಮ್ಮ, ಶ್ರೀಮತಿ ಜಯಲಕ್ಷ್ಮಿ ಮಹೇಶ್, ಶ್ರೀಮತಿ ಪ್ರೇಮ ಸೋಮಶೇಖರ್ ಹೇಮ ಗಣೇಶ್ ಶೇಟ್, ಸುನಿತಾ ಪ್ರಕಾಶ್, ವರದಿಗಾರರಾದ ಭಾರತಿ ಎಚ್ ,ಹಾಗೆ ಎ ಬಿ ರುದ್ರಮ್ಮ, ಆಮಂತ್ರಣ ಪತ್ರಿಕೆ ಎಲ್ಲಾ ಗೆಳತಿಯರು ಇವರೊೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೊಡುತ್ತಿರುವ ಎಲ್ಲ ಪ್ರತಿಭೆಗಳಿಗೂ ಹಾಗೂ ಕವಿಗೋಷ್ಠಿ ಕವಿತೆಗಳನ್ನು ವಾಚಿಸುವವರೆಗೂ ಹಾಗೆಯೇ ಸಾಹಿತ್ಯ ರತ್ನ ಪ್ರಶಸ್ತಿ ಪ್ರಧಾನ, ಪಡೆಯುತ್ತಿರುವ ಎಲ್ಲ ಸಹೋದರಿಯರಿಗೂ ಅಭಿನಂದನೆಗಳು ಹಾಗೆ ಎಲ್ಲ ಮಹಿಳಾ ಮಣಿಗಳ ಆಗಮನಕ್ಕೆ ಶುಭವನ್ನು ಕೋರುತ್ತಿರುವ ಶ್ರೀಮತಿ ವೀಣಾ ಮಹಂತೇಶ್ ಬಿ ಎಮ್ ದಾವಣಗೆರೆ.
ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ.

ದಿನದ ಸುದ್ದಿ
ನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್
ಸುದ್ದಿದಿನ,ದಾವಣಗೆರೆ: “ತಮ್ಮ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ತಾವು ಮುಖ್ಯಮಂತ್ರಿಯಂತೆ ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದೇನೆ” ಎಂದು ಶಾಸಕ ಶಿವಗಂಗಾ ಬಸವರಾಜ್ ಹೇಳಿದರು.
ದಾವಣಗೆರೆಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಅವರು, ನಾನು ಡಿ.ಕೆ ಶಿವಕುಮಾರ್ ಅವರ ಮನೆಮಗ, ಶಿವನ ಮುಂದೆ ಇರುವ ಬಸವ ನಾನು. ನಾನೇ ಮುಖ್ಯಮಂತ್ರಿ ಇದ್ದಂತೆ, ಮನೆ ಮಗನಿಗೆ ಯಾವಾಗಲೂ ಅವರ ಆಶೀರ್ವಾದ ಇದ್ದೇ ಇರುತ್ತದೆ ಎಂದಿದ್ದಾರೆ.
ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ಹಾಗೂ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ತಮ್ಮ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ತಕ್ಕಂತೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.
“ನಾನು ಮುಖ್ಯಮಂತ್ರಿ ಅಲ್ಲ. ಆದರೆ ನನ್ನ ಕ್ಷೇತ್ರದ ಅಭಿವೃದ್ಧಿ ವಿಚಾರ ಬಂದಾಗ ಮುಖ್ಯಮಂತ್ರಿಯಂತೆ ಜವಾಬ್ದಾರಿ ಹೊತ್ತು ಕೆಲಸ ಮಾಡುತ್ತಿದ್ದೇನೆ. ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವುದು ನನ್ನ ಮೊದಲ ಕರ್ತವ್ಯವಾಗಿದೆ. ರಸ್ತೆ, ಕುಡಿಯುವ ನೀರು, ಶಿಕ್ಷಣ, ಆರೋಗ್ಯ ಹಾಗೂ ಮೂಲಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ,” ಎಂದು ಅವರು ಹೇಳಿದರು.
ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳು ಈಗಾಗಲೇ ಪೂರ್ಣಗೊಂಡಿದ್ದು, ಇನ್ನೂ ಅನೇಕ ಯೋಜನೆಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದ ಅವರು, ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಿರಂತರ ಸಮನ್ವಯ ಸಾಧಿಸಿ ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುತ್ತಿದೆ ಎಂದರು.
“ಜನಪ್ರತಿನಿಧಿಯಾಗಿ ಚುನಾಯಿತರಾದ ಬಳಿಕ ಕ್ಷೇತ್ರದ ಪ್ರತಿಯೊಂದು ಹಳ್ಳಿಗೂ ಭೇಟಿ ನೀಡಿ ಅಲ್ಲಿನ ಜನರ ಸಮಸ್ಯೆಗಳನ್ನು ಆಲಿಸಿದ್ದೇನೆ. ಗ್ರಾಮಗಳ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಅಗತ್ಯ ಅನುದಾನ ತರುವ ಪ್ರಯತ್ನ ಮಾಡಲಾಗಿದೆ. ಕುಡಿಯುವ ನೀರಿನ ಯೋಜನೆಗಳು, ರಸ್ತೆ ಅಭಿವೃದ್ಧಿ, ಶಾಲೆಗಳ ಮೂಲಸೌಕರ್ಯ ಸುಧಾರಣೆ ಸೇರಿದಂತೆ ಹಲವು ಕಾಮಗಾರಿಗಳಿಗೆ ವೇಗ ನೀಡಲಾಗಿದೆ,” ಎಂದು ಹೇಳಿದರು.
ಕ್ಷೇತ್ರದ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕೈಗಾರಿಕೆಗಳನ್ನು ಆಕರ್ಷಿಸುವ ಪ್ರಯತ್ನ ನಡೆಯುತ್ತಿದೆ. ಕೃಷಿ ಕ್ಷೇತ್ರಕ್ಕೆ ಅಗತ್ಯವಾದ ನೀರಾವರಿ ಹಾಗೂ ರೈತರಿಗೆ ಅನುಕೂಲಕರ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.
ಸರ್ಕಾರದ ಅಭಿವೃದ್ಧಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಯಾವುದೇ ಅರ್ಹ ವ್ಯಕ್ತಿ ಯೋಜನೆಯಿಂದ ವಂಚಿತರಾಗಬಾರದು ಎಂಬುದು ತಮ್ಮ ಉದ್ದೇಶವಾಗಿದೆ ಎಂದು ಶಾಸಕರು ತಿಳಿಸಿದರು.
ವಿರೋಧ ಪಕ್ಷಗಳ ಟೀಕೆ ಕುರಿತು ಪ್ರತಿಕ್ರಿಯಿಸಿದ ಅವರು, “ಟೀಕೆಗಳು ಪ್ರಜಾಪ್ರಭುತ್ವದ ಭಾಗ. ಆದರೆ ಅಭಿವೃದ್ಧಿಯೇ ನಮ್ಮ ಉತ್ತರ. ಜನರ ಸಮಸ್ಯೆಗಳಿಗೆ ಪರಿಹಾರ ನೀಡುವುದು ಹಾಗೂ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ರೂಪಿಸುವುದೇ ನಮ್ಮ ಗುರಿಯಾಗಿದೆ,” ಎಂದರು.
ಕ್ಷೇತ್ರದ ಜನರು ಅಭಿವೃದ್ಧಿಗೆ ಸಹಕಾರ ನೀಡುತ್ತಿರುವುದಕ್ಕೆ ಕೃತಜ್ಞತೆ ಸಲ್ಲಿಸಿದ ಅವರು, ಸಾರ್ವಜನಿಕರು ಯಾವುದೇ ಸಮಸ್ಯೆಗಳಿದ್ದರೂ ನೇರವಾಗಿ ಸಂಪರ್ಕಿಸಬಹುದು. ಜನಸೇವೆಗಾಗಿ ತಮ್ಮ ಕಚೇರಿ ಸದಾ ತೆರೆದಿರುತ್ತದೆ ಎಂದು ಹೇಳಿದರು.
ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ರಸ್ತೆ, ಗ್ರಾಮೀಣ ಅಭಿವೃದ್ಧಿ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಸ್ಥಳೀಯ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243


