ದಿನದ ಸುದ್ದಿ
ಸುಖಾಸುಮ್ಮನೆ ವಾಹನ ತಡೆದು ದಾಖಲೆ ಪರಿಶೀಲಿಸುವಂತಿಲ್ಲ : ಟ್ರಾಫಿಕ್ ಪೊಲೀಸರಿಗೆ ಡಿಜಿಪಿ ಪ್ರವೀಣ್ ಸೂದ್ ಸೂಚನೆ
ಸುದ್ದಿದಿನ,ಬೆಂಗಳೂರು: ಬೆಂಗಳೂರಿನಲ್ಲಿ ಓಡಾಡುವ ವಾಹನ ಸವಾರರ ದಾಖಲೆ ಪರಿಶೀಲನೆಗೆ ಇನ್ಮುಂದೆ ಟ್ರಾಫಿಕ್ ಪೊಲೀಸರು ಸುಖಾಸುಮ್ಮನೆ ಗಾಡಿ ನಿಲ್ಲಿಸಿ ಪರಿಶೀಲನೆ ನಡೆಸಬಾರದು ಎಂದು ಖುದ್ದು ಡಿಜಿ & ಐಜಿಪಿ ಪ್ರವೀಣ್ ಸೂದ್ ಸೂಚನೆ ನೀಡಿದ್ದಾರೆ.
ಕೇವಲ ಟ್ರಾಫಿಕ್ ರೂಲ್ಸ್ ಉಲ್ಲಂಘಿಸಿದವರ ವಾಹನಗಳನ್ನು ಮಾತ್ರ ನಿಲ್ಲಿಸಬೇಕು. ಡ್ರಿಂಕ್ ಆಂಡ್ ಡ್ರೈವ್ ಮಾಡುವ ವಾಹನಗಳಿಗೆ ಮಾತ್ರ ತಪಾಸಣೆ ನಡೆಸಿಬೇಕು. ಇಲ್ಲದೇ, ಕಣ್ಣಿಗೆ ಕಾಣುವಂತೆ ರೂಲ್ಸ್ ಬ್ರೇಕ್ ಮಾಡುವಂತಹ ವಾಹನಗಳನ್ನು ತಡೆದು ಪರಶೀಲಿಸಿ ಎಂದು ನಗರದ ಪೊಲೀಸ್ ಕಮೀಷನರ್ ಹಾಗೂ ಟ್ರಾಫಿಕ್ ಜಂಟಿ ಆಯುಕ್ತರನ್ನು ಟ್ಯಾಗ್ ಮಾಡಿ ಡಿಜಿಪಿ ಟ್ವೀಟ್ ಮಾಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243