ದಿನದ ಸುದ್ದಿ
ವಿವಿಧ ಜಿಲ್ಲೆಗಳಲ್ಲಿ ಡಾ. ಬಾಬು ಜಗಜೀವನ್ ರಾಮ್ 117ನೇ ಜನ್ಮ ದಿನಾಚರಣೆ
ಸುದ್ದಿದಿನ ಡೆಸ್ಕ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಾ. ಬಾಬು ಜಗಜೀವನ್ ರಾಮ್ ಅವರ 117ನೇ ಜನ್ಮ ದಿನಾಚರಣೆ ಪ್ರಯುಕ್ತ ವಿಧಾನ ಸೌದದಲ್ಲಿರುವ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.
ಸಮಾಜ ಕಲ್ಯಾಣ ಸಚಿವ ಹೆಚ್.ಸಿ. ಮಹದೇವಪ್ಪ್ಪ, ಹಿರಿಯ ಶಾಸಕ ಈ. ತುಕಾರಾಮ್, ಮಾಜಿ ಸಚಿವ ಹೆಚ್.ಆಂಜನೇಯ, ವಿಧಾನ ಪರಿಷತ್ ಸದಸ್ಯ ಸುದಾಮ ದಾಸ್, ಮಹಿಳಾ ಆಯೋಗದ ಅದ್ಯಕ್ಷೆ ಡಾ. ನಾಗಲಕ್ಷ್ಮಿ ಸೇರಿ ಹಲವರು ಉಪಸ್ಥಿತರಿದ್ದರು. ದಾವಣಗೆರೆ ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ ರಾಂ ಅವರ ಜನ್ಮ ಜಯಂತಿಯನ್ನು ಸಾಂಕೇತಿಕವಾಗಿ ಆಚರಿಸಲಾಯಿತು.
ಲೋಕಸಭಾ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಸರಳವಾಗಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಜಗಜೀವನರಾಂ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಮಂಡ್ಯದ ಡಿಸಿ ಪಾರ್ಕ್ ಎದುರು ಇರುವ ಜಗಜೀವನ್‌ರಾಮ್ ಪ್ರತಿಮೆಗೆ ಜಿಲ್ಲಾಡಳಿತದ ವತಿಯಿಂದ ಮಾಲಾರ್ಪಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ, ಎಸ್ಪಿ ಎನ್.ಯತೀಶ್ ಸೇರಿದಂತೆ ಅಧಿಕಾರಿಗಳ ವರ್ಗ ಹಾಗೂ ಜಗಜೀವನ್‌ರಾಮ್ ಅನುಯಾಯಿಗಳು ಭಾಗವಹಿಸಿದ್ದರು.
ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪ ಪ್ರಧಾನಿ ಬಾಬು ಜಗಜೀವನ ರಾಂ ಅವರ ಅವರ 117ನೇ ಜಯಂತಿಯನ್ನು ಹಾವೇರಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಾಂಕೇತಿಕವಾಗಿ ಆಚರಿಸಲಾಯಿತು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬಾಬು ಜಗಜೀವನ್ ರಾಂ ಅವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಜಿಲ್ಲಾಧಿಕಾರಿ ರಘುನಂದನ ಮೂರ್ತಿ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243