ದಿನದ ಸುದ್ದಿ

ಜಿ. ಪರಮೇಶ್ವರ್ ಮುಖ್ಯಮಂತ್ರಿ ಆಗೇ ಆಗ್ತಾರೆ : ಶಾಸಕ ಎಸ್. ರಾಮಪ್ಪ

Published

on

ಸುದ್ದಿದಿನ, ದಾವಣಗೆರೆ : ಉಪ ಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ಈ ರಾಜ್ಯದ ಮುಖ್ಯಮಂತ್ರಿ ಆಗೇ ಆಗುತ್ತಾರೆ ಎಂದು ಹರಿಹರ ಶಾಸಕ ಎಸ್ ರಾಮಪ್ಪ ಹೇಳಿದರು.

ಭಾನುವಾರ ನಡೆದ ಜಿಲ್ಲಾ ಛಲವಾದಿ ಮಹಾಸಭಾ ಅಭಿನಂದನಾ ಹಾಗೂ ಜನ ಜಾಗೃತಿ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನನ್ನ ರಾಜಕೀಯ ಗುರುಗಳು ಡಾ. ಪರಮೇಶ್ವರ್ 2014 ರಲ್ಲಿ ನನಗೆ ಕಾಂಗ್ರೆಸ್ ಬಿ ಫಾರಂ ಕೊಟ್ಟು ರಾಜಕೀಯಕ್ಕೆ ಅವಕಾಶ ಮಾಡಿಕೊಟ್ಟರು. ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಡಾ.ಜಿ ಪರಮೇಶ್ವರ್ ಕೊಡುಗೆ ಬಹಳ ಇದೆ. ಮುಂದಿನ ದಿನಗಳಲ್ಲಿ ಡಾ. ಜಿ ಪರಮೇಶ್ವರ್ ರಾಜ್ಯದ ಮುಖ್ಯಮಂತ್ರಿ ಆಗುತ್ತಾರೆ‌ ಎಂದರು.

ಕೇಂದ್ರ ಸಚಿವ ಅನಂತಕುಮಾರ್ ಸಂವಿಧಾನ ಬದಲಾಯಿಸುವ ಹೇಳಿಕೆಗೆ ದಲಿತರು ತಕ್ಕ ಉತ್ತರ ನೀಡಬೇಕು ಎಂದು ಕಿಡಿಕಾರಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9986715401

Trending

Exit mobile version