Connect with us

ದಿನದ ಸುದ್ದಿ

ಬಹುಮುಖ ಪ್ರತಿಭೆ ದ್ವಾರಕೇಶ್‌ ; ಬದುಕಿನ ಪಯಣ

Published

on

  • ಹೆಚ್.ವಿ. ಮಂಜುನಾಥಸ್ವಾಮಿ

ನ್ನಡ ಚಿತ್ರರಂಗದ ಬಹುಮುಖ ಪ್ರತಿಭೆಯ ಪ್ರತಿಭೆ, ಜನಪ್ರಿಯ ವ್ಯಕ್ತಿ, ಹಿರಿಯ ನಟ, ನಿರ್ದೇಶಕ, ನಿರ್ಮಾಪಕ, ಪ್ರಚಂಡ ಕುಳ್ಳ ಎಂದೆ ಪ್ರಖ್ಯಾತರಾದ ದ್ವಾರಕೀಶ್ ಇಹಲೋಕ ತ್ಯಜಿಸಿದ್ದು ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟ. ಶ್ರೀಯುತ ದ್ವಾರಕೇಶ್ ರವರ ಬದುಕಿನ ಪಯಣವನ್ನು ಸಂಕ್ಷಿಪ್ತವಾಗಿ ಮೇಲುಕು ಹಾಕಿ ನೋಡೋಣ.

1942 ಆಗಸ್ಟ್ 19 ರಂದು ಜನಿಸಿದ ಇವರು 300ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದಂತಹ ಅಪರೂಪದ ನಟ. ಡಾ. ರಾಜಕುಮಾರ್, ವಿಷ್ಣುವರ್ಧನ್, ಶಂಕರನಾಗ್, ರಜನಿಕಾಂತ್, ಶ್ರೀನಾಥ್, ಅಂಬರೀಶ್, ಟೈಗರ್ ಪ್ರಭಾಕರ್ ರವರಂತಹ ಮೇರು ನಟರೊಂದಿಗೆ ನಟಿಸಿದ ಮೇಧಾವಿ. ಅವರು ಹೆಸರು ಮಾಡಿದ ಚಿತ್ರಗಳೆಂದರೆ ಮೇಯರ್ ಮುತ್ತಣ್ಣ, ಕುಳ್ಳ ಏಜೆಂಟ್ 000, ಭಕ್ತ ಕುಂಬಾರ, ಭಾಗ್ಯವಂತರು, ಗುರು ಶಿಷ್ಯರು, ಆಪ್ತಮಿತ್ರ, ದೇವರ ದುಡ್ಡು, ಅವರದೇ ಆದ ವಿಶೇಷ ಶೈಲಿಯಿಂದ ಒಬ್ಬ ಹಾಸ್ಯ ನಟರಾಗಿ, ನಂತರ ನಟರಾಗಿ, ಪೋಷಕ ನಟರಾಗಿ, ಸುಮಾರು ಐವತ್ತು ದಶಕಗಳಕಾಲ ಅಭಿನಯಿಸಿ, ನಿರ್ದೇಶಕ, ನಿರ್ಮಾಪಕರಾಗಿ ಅಪಾರ ಅಭಿಮಾನಿಗಳ ಮನಸ್ಸಿನಲ್ಲಿ ಉಳಿದಿದ್ದಾರೆ.

ಹೀಗೆ 300 ಚಿತ್ರಗಳಲ್ಲಿ ನಟನೆ, 30 ಚಿತ್ರಗಳ ನಿರ್ದೇಶನ, 50 ಚಿತ್ರಗಳ ನಿರ್ಮಾಣ ಮಾಡಿದ್ದಾರೆ. ಚಿತ್ರರಂಗದಲ್ಲಿ ಅಪಾರ ಪ್ರೀತಿ ಹೊಂದಿದ್ದ ದ್ವಾರಕೀಶ್ ರವರು ಸದಾ ಸಿನಿಮಾ ಅಂತಲೇ ತಮ್ಮ ಜೀವನವನ್ನು ಚಿತ್ರರಂಗಕ್ಕೆ ಮುಡುಪಾಗಿಟ್ಟಿದ್ದ ಧೀಮಂತ ವ್ಯಕ್ತಿ.

ಸಿನಿಮಾ ಕ್ಷೇತ್ರದಲ್ಲಿ ಹೊಸ ಹೊಸ ಪ್ರಯೋಗಗಳನ್ನು, ಹೊಸ ಹೊಸ ಆಲೋಚನೆಗಳೊಂದಿಗೆ ಕಠಿಣ ಸಾಹಸಕ್ಕೆ ಕೈ ಹಾಕುವ ಹುಚ್ಚಿನಲ್ಲಿ ನಿರ್ಮಿಸುವ ಕನಸು ಹೊಂದಿದ್ದ ಶ್ರೀಯುತ ದ್ವಾರಕೇಶ್‌ರವರು ಅನೇಕ ಹೊಸ ಪ್ರತಿಭೆ ಹೊಂದಿರುವ ನಟರನ್ನು ಚಿತ್ರರಂಗಕ್ಕೆ ಪರಿಚಯಿಸಿ, ಬೆಳೆಸಿದ್ದಾರೆ ಮತ್ತು ಮಾರ್ಗದರ್ಶಕರಾಗಿ ಪ್ರೋತ್ಸಾಹಿಸಿದ್ದಾರೆ. ಸದಾ ಹುರುಪು ಹುಮ್ಮಸ್ಸಿನಿಂದ ಇದ್ದ ಶ್ರೀ ದ್ವಾರಕೇಶ್ ರವರು ಹೆಸರಿಗೆ ಕುಳ್ಳ. ಅಷ್ಟೇ ಆದರೆ ಚಿತ್ರರಂಗ ಕ್ಷೇತ್ರದಲ್ಲಿ ಮತ್ತು ಅನುಭವದಲ್ಲಿ ಬಹಳ ಎತ್ತರಕ್ಕೆ ಬೆಳೆದಂತಹ ಮೇಧಾವಿ.

ಚಿತ್ರರಂಗದಲ್ಲಿ ಅನೇಕ ಏರು-ಇಳಿವು, ಸೋಲು-ಗೆಲುವು ಅನುಭವಿಸಿದ್ದರು ಮತ್ತೆ ಗೆದ್ದೇ ಗೆಲ್ಲುತ್ತೇನೆ ಎಂಬ ಭರವಸೆ, ಆಸೆ, ಛಲ, ನಂಬಿಕೆ ಹೊಂದಿದ ಉತ್ಸಾಹದ ಚಿಲುಮೆ ಮತ್ತು ಅದ್ಭುತ ಸಾಧನೆ ಮಾಡಿದ್ದಾರೆ. ಇದು ಸಾಮಾನ್ಯ ಸಾಧನೆಯಲ್ಲ, ಹೀಗೆ ಸಿನಿಮಾ ಕ್ಷೇತ್ರದಲ್ಲಿ ಸಾಧನೆ ಮಾಡಿ ಎಲ್ಲರ ಮನಸ್ಸಿನಲ್ಲಿ ಮಾಸದೇ ಉಳಿದಿರುವ ಜನಪ್ರಿಯ ನಟ ಕನ್ನಡದ ಕಣ್ಮಣಿ ದ್ವಾರಕೇಶ್ ರವರು ಅನೇಕರಿಗೆ ಮಾದರಿಯಾಗಿದ್ದಾರೆ.
1967 ಏಪ್ರಿಲ್ 26ರಂದು ಶ್ರೀಮತಿ ಅಂಬುಜಾ ರವರನ್ನು ಮದುವೆಯಾದರು. ಇವರಿಗೆ ಇಬ್ಬರು ಪತ್ನಿಯರು ಮೊದಲ ಪತ್ನಿ ಅಂಬುಜ ಎರಡನೇ ಪತ್ನಿ ಶೈಲಜಾ ಮೊದಲ ಪತ್ನಿ ಅಂಬುಜ ಅವರನ್ನು ಪ್ರಾಣಕ್ಕಿಂತ ಹೆಚ್ಚಾಗಿ ಪ್ರೀತಿಸುತ್ತಿದ್ದರು. ಇವರಿಗೆ ಒಟ್ಟು ಐದು ಜನ ಗಂಡು ಮಕ್ಕಳು, ಇವರದು ಸುಖೀ ಕುಟುಂಬ. (ಬರಹ ಹೆಚ್.ವಿ. ಮಂಜುನಾಥಸ್ವಾಮಿ,ಮೊ.: 9844882366)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ವಿದ್ಯಾರ್ಥಿಗಳು ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು: ಹೆಚ್ ಎನ್ ಶಿವಕುಮಾರ್

Published

on

ಸುದ್ದಿದಿನ,ರಾಣೇಬೆನ್ನೂರ: ಸಾಮಾಜಿಕ ಹಾಗೂ ಶೈಕ್ಷಣಿಕ ಜವಾಬ್ದಾರಿಗಳ ಅಗತ್ಯವು ವಿದ್ಯಾರ್ಥಿಗಳಿಗೆ ಅವಶ್ಯಕವಾಗಿದೆ. ವಿದ್ಯಾರ್ಥಿಗಳು ತಮಗೆ ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು.ಸದಾಕಾಲ ಜ್ಞಾನವನ್ನು ಪಡೆಯುವ ತನಕ ಹೊಂದಿ ಜ್ಞಾನಿಗಳಾಗುವ ಗುರಿ ಹೊಂದಲು ಬಾಪೂಜಿ ಮಹಾವಿದ್ಯಾಲಯ ಉಪ ಪ್ರಾಚಾರ್ಯರಾದ ಎಚ್ ಎನ್ ಶಿವಕುಮಾರ್ ನುಡಿದರು.

ಅವರು ಸ್ಥಳೀಯ ಬಿಎಜೆಎಸ್ಎಸ್ ಪ್ರಥಮ ದರ್ಜೆ ಕಾಲೇಜಿನ ಪ್ರತಿಭಾ ಪುರಸ್ಕಾರ, ಬಿಳ್ಕೋಡಿಗೆ ಕಾರ್ಯಕ್ರಮ ಮತ್ತು ವಿದ್ಯಾರ್ಥಿ ಒಕ್ಕೂಟದ, ಎನ್ ಎಸ್ ಎಸ್ ಚಟುವಟಿಕೆ, ಯುವ ರೆಡ್ ಕ್ರಾಸ್ ಘಟಕದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.

ವಿಶೇಷ ಅತಿಥಿಗಳಾಗಿ ಉಪಸ್ಥಿತರಿದ್ದ ಬಿಎ ಜೆಎಸ್ಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಅಧಿಕಾರಿಗಳು ಡಾ.ಆರ್ ಎಂ ಕುಬೇರಪ್ಪ ಮಾತನಾಡಿ ವಿದ್ಯೆಯನ್ನು ವಿನಯದಿಂದ ವಿದ್ಯೆಕಲಿಯಬೇಕು ಸಂಸ್ಕಾರವಂತರಾಗ ಬೇಕು, ಸಂಸ್ಕಾರ ಹೊಂದಿರುವ ವ್ಯಕ್ತಿಗಳು ಪುರಸ್ಕಾರ ಪಡೆದರೆ ಸಂಸ್ಕಾರ ಇಲ್ಲದವರು ಸಮಾಜದಲ್ಲಿ ತಿರಸ್ಕಾರಕ್ಕೆ ಒಳಗಾಗುವರು.ನಿಮ್ಮ ಬದುಕನ್ನು ನೀವೆ ಕಟ್ಟಿಕೊಳ್ಳುವ ನೆಲೆಯಲ್ಲಿ ಪ್ರಯತ್ನಿಸಬೇಕು ಎಂದು ನುಡಿದರು.

ಪ್ರಾಚಾರ್ಯರಾದ ಪ್ರಕಾಶ್ ಬಸಪ್ಪನವರ್ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಎಚ್ ಎನ್ ಭೀಕ್ಷಾವರ್ತಿಮಠ ಹಾಗೂ ಕೆ ಕೆ ಹಾವಿನಾಳ ರವರು ವಿದ್ಯಾರ್ಥಿಗಳಿಗೆ ಹಿತವಚನ ನುಡಿದರು.ಆರಂಭದಲ್ಲಿಪ್ರೋ.ಎಂ ಡಿ ಹೊನ್ನಮ್ಮನವರ ಸ್ವಾಗತಿಸಿದರು.ಪ್ರೋ.ಶ್ರೀಕಾಂತ ಕುಂಚೂರ, ಪ್ರಾಸ್ತಾವಿಕ ಮಾತನಾಡಿ ವಾರ್ಷಿಕ ವರದಿ ವಾಚಿಸಿದರು.

ಕೊನೆಯಲ್ಲಿ ಪ್ರೋ.ಪುಷ್ಟಾ ಕಬ್ಬಿನಾಲೆ ವಂದಿಸಿದರು.ಇದೆ ಸಮಾರಂಭದಲ್ಲಿ ಕ್ರೀಡೆ, ಸಾಂಸ್ಕೃತಿಕ, ಸಾಮಾಜಿಕ ಸೇವೆಗಳಲ್ಲಿವಿದ್ಯಾರ್ಥಿಗಳ ಸಾಧನೆ ಗುರುತಿಸಿ ಪುರಸ್ಕಾರ ಮಾಡಲಾಯಿತು.ವರ್ಷದ ಮಹಾವಿದ್ಯಾಲಯ ಉತ್ತಮ ವಿದ್ಯಾರ್ಥಿಗಳನ್ನು ಗುರುತಿಸಿ ಪುರಸ್ಕಾರ ಪ್ರದಾನ ಮಾಡಲಾಯಿತು.ವಿವಿಧ ವಿಷಯದ ಉಪನ್ಯಾಸಕರು, ವಿದ್ಯಾರ್ಥಿಗಳು, ಸಿಬ್ಬಂದಿ ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಪಿಂಚಣಿ ದಾರರು ಸಕಾಲದಲ್ಲಿ ಜೀವಂತ ಪ್ರಮಾಣ ಪತ್ರ ಸಲ್ಲಿಸಿ

Published

on

ಸುದ್ದಿದಿನ,ದಾವಣಗೆರೆ: ಪಿಂಚಣಿ ಪಡೆಯಲು ಜೀವಂತ ಸದಸ್ಯರ ಪ್ರಮಾಣ ಪತ್ರಗಳು ಕಡ್ಡಾಯವಾಗಿರುವುದರಿಂದ ಸಕಾಲಕ್ಕೆ ಸೂಕ್ತ ದಾಖಲಾತಿಗಳನ್ನು ನೀಡುವ ಮೂಲಕ ಸಹಕರಿಸಿ ಎಂದು ಉಪ ಮಹಾಲೇಖಪಾಲರಾದ ಸಚ್ಚಿನ್ ಕೃಷ್ಣ ಕೌಶಿಕ್ ತಿಳಿಸಿದರು.

ಶುಕ್ರವಾರ ಜೂನ್(19) ‌ಬೆಂಗಳೂರಿನ ಮಹಾಲೇಖಪಾಲರು ದಾವಣಗೆರೆ ಜಿಲ್ಲಾ ಖಜಾನೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಾಮಾನ್ಯ ಭವಿಷ್ಯ ನಿಧಿ ಹಾಗೂ ಲೆಕ್ಕಪತ್ರ ಸಮಸ್ಯೆಗಳ ಕುರಿತು ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಪಿಂಚಣಿದಾರರು ತಮ್ಮ ಎಲ್ಲಾ ಬ್ಯಾಂಕ್‌ಗೆ 2ನೇ ವಾರ ಭೇಟಿ ನೀಡಿದರೆ ನಿಮ್ಮ ಸಮಸ್ಯೆಯನ್ನು ಶೀಘ್ರವಾಗಿ ಬಗೆಹರಿಸಲಾಗುವುದು. ಜೀವಂತ ಸದಸ್ಯರ ದೃಢೀಕರಣ ಪತ್ರವನ್ನು ಪಡೆಯಲು ಸೈಬರ್‌ಕೆಫೆ ಇನ್ನಿತರ ಕೇಂದ್ರಗಳಿಗೆ ಅಲೆಯುವ ಅವಶ್ಯಕತೆ ಇಲ್ಲ. ನೀವು ಮನೆಯಲ್ಲಿ ಮೊಬೈಲ್‌ನಲ್ಲಿ ಅಫ್ ಲೋಡ್ ಮಾಡಿ ಪಡೆಯಬಹುದು. ಮತ್ತು ನಿಮ್ಮ ಸಮಸ್ಯೆಗಳನ್ನು ತಿಳಿಸುವಾಗ ಅರ್ಜಿಯಲ್ಲಿ ಇ-ಮೇಲ್ ವಿಳಾಸ, ಮೊಬೈಲ್ ನಂಬರ್‌ನ್ನು ಕಡ್ಡಾಯವಾಗಿ ನಮೂದಿಸಿದರೆ, ಇದರಿಂದ ನಿಮಗೆ ಮಾಹಿತಿ ನೀಡಲು ಅನುಕೂಲವಾಗುತ್ತದೆ ಎಂದರು.

ಪಿಂಚಣಿ ಅದಾಲತ್ ಎನ್ನುವುದು ನಿವೃತ್ತ ನೌಕರರು ಮತ್ತು ಪಿಂಚಣಿದಾರರ ದೀರ್ಘಕಾಲದ ಬಾಕಿ ಉಳಿದಿರುವ ಸಮಸ್ಯೆಗಳನ್ನು ಅಥವಾ ಕುಂದುಕೊರತೆಗಳನ್ನು ಪರಿಹರಿಸಲು ವಿಶೇಷ ವೇದಿಕೆಯಾಗಿದೆ. ಸ್ಥಳದಲ್ಲೇ ಅರ್ಜಿಗಳನ್ನು ಪರಿಶೀಲಿಸಿ, ಬ್ಯಾಂಕ್‌ ಅಧಿಕಾರಿಗಳ ಸಮ್ಮುಖದಲ್ಲಿ ತ್ವರಿತವಾಗಿ ಸಮಸ್ಯೆಗಳನ್ನು ಬಗೆಹರಿಸುವುದು ಇದರ ಮುಖ್ಯ ಉದ್ದೇಶವಾಗಿದೆ.

ಮಹಾಲೇಖಪಾಲರ ಕಚೇರಿಯ ಹಿರಿಯ ಲೆಕ್ಕಪರಿಶೋಧನಾ ಅಧಿಕಾರಿ ನಾಗಸೇನಾ.ಟಿ.ವಿ, ಮತ್ತು ಪದ್ಮವತಿ, ಜಿಲ್ಲಾ ಖಜಾನೆಯ ಉಪನಿರ್ದೇಶಕರಾದ ರಮೇಶ್ ಅರೆಮಲ್ಲಾಪುರ, ಸಹಾಯಕ ಲೆಕ್ಕಪರಿಶೋಧನಾ ಆಧಿಕಾರಿ ಚಂದನ್ ಮತ್ತು ಜಾಬ್‌ಲೀನೋ, ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗವಿಸಿದ್ಧ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿಗೆ ದಾವಣಗೆರೆಯ ಪಾಪು ಗುರು ಆಯ್ಕೆ

Published

on

ಸುದ್ದಿದಿನ,ದಾವಣಗೆರೆ: ಕವಿ ಗವಿಸಿದ್ಧ ಎನ್. ಬಳ್ಳಾರಿ ವೇದಿಕೆ ಹಾಗೂ ಗವಿಸಿದ್ಧ ಎನ್. ಬಳ್ಳಾರಿ ಸಾಂಸ್ಕೃತಿಕ, ಕಲಾ, ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಸೇವಾ ಸಂಸ್ಥೆ, ಕೊಪ್ಪಳ ವತಿಯಿಂದ ನೀಡಲಾಗುವ **”ಗವಿಸಿದ್ಧ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ – 2026″**ಕ್ಕೆ ದಾವಣಗೆರೆಯ ಕವಿ ಹಾಗೂ ಪತ್ರಕರ್ತ ಪಾಪು ಗುರು ಅವರ “ಈ ಹೊತ್ತಿಗೆ ಇಷ್ಟು ಸಾಕು” ಕವನ ಹಸ್ತ ಪ್ರತಿ ಆಯ್ಕೆಯಾಗಿದೆ.

ಪ್ರಶಸ್ತಿಗೆ ಈ ಬಾರಿ ರಾಜ್ಯದ ವಿವಿಧ ಭಾಗಗಳಿಂದ ಒಟ್ಟು 53 ಕವನ ಹಸ್ತಪ್ರತಿಗಳು ಬಂದಿದ್ದು, ಅಂತಿಮ ಆಯ್ಕೆ ಪ್ರಕ್ರಿಯೆಯಲ್ಲಿ ಪಾಪು ಗುರು ಅವರ ಕೃತಿ ಪ್ರಶಸ್ತಿಗೆ ಪಾತ್ರವಾಗಿದೆ.

ಪ್ರಶಸ್ತಿಯು ₹5,000 ನಗದು ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ನವೆಂಬರ್ ತಿಂಗಳಲ್ಲಿ ಕೊಪ್ಪಳದಲ್ಲಿ ನಡೆಯಲಿರುವ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದೆ ಎಂದು ಸಾಹಿತ್ಯೋತ್ಸವದ ಸಂಚಾಲಕ ಮಹೇಶ್ ಬಳ್ಳಾರಿ ತಿಳಿಸಿದ್ದಾರೆ.

ಈಗಾಗಲೇ ಸಾಹಿತ್ಯ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಪಾಪು ಗುರು ಅವರ ‘ಮುಳ್ಳೆಲೆಯ ಮದ್ದು’, ‘ಮಣ್ಣೇ ಮೊದಲು’ ಕವನ ಸಂಕಲನಗಳು ಹಾಗೂ ‘ಸೂಜಿ’ ಕಾದಂಬರಿ ಪ್ರಕಟವಾಗಿವೆ. ಅಲ್ಲದೆ ‘ಕೆಂಪು ಕಾಂಡದ ಹೂ’ ಮತ್ತು ‘ಹಸಿರು ಹಾದಿಯ ಹೆಜ್ಜೆಗಳು’ ಕೃತಿಗಳನ್ನು ಸಂಪಾದನೆ ಮಾಡಿದ್ದಾರೆ. ಅವರ ಸೂಳೆಕೆರೆಯ ಇತಿಹಾಸದ ಹಿನ್ನೆಲೆ ಇರುವ ‘ಶಾಂತದೇವಿ’ ಕಾದಂಬರಿ ಮುದ್ರಣ ಹಂತದಲ್ಲಿದೆ.

ಸಾಹಿತ್ಯ, ಪತ್ರಿಕೋದ್ಯಮ ಮತ್ತು ಸೃಜನಶೀಲ ಬರವಣಿಗೆಯ ಮೂಲಕ ತಮ್ಮದೇ ಆದ ಛಾಪು ಮೂಡಿಸಿರುವ ಪಾಪು ಗುರು ಅವರಿಗೆ ದೊರೆತಿರುವ ಈ ಪ್ರಶಸ್ತಿ ಸಾಹಿತ್ಯ ವಲಯದಲ್ಲಿ ಸಂತಸಕ್ಕೆ ಕಾರಣವಾಗಿದೆ. ಇವರಿಗೆ ಜಿಲ್ಲೆಯ ಅಭಿಮಾನಿಗಳು, ಪತ್ರಕರ್ತರು ಮತ್ತು ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಸಾಹಿತಿ ಸಂತೆಬೆನ್ನೂರು ಫೈಜ್ನಟ್ರಾಜ್ ಹಾಗೂ ಹೆಚ್ ಬಿ. ಇಂದ್ರಕುಮಾರ್ ಅಭಿನಂದನೆ ಸಲ್ಲಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending