ದಿನದ ಸುದ್ದಿ
ಸಜೀವಿ ಮಣ್ಣು ಸಾಮ್ರಾಜ್ಯದ ಮಹಾರಾಣಿ ಈ ಎರೆಹುಳು..!
ಇಂದು ವಿಶ್ವ ಎರೆಹುಳು ದಿನ. ಈ ಹಿನ್ನೆಲೆಯಲ್ಲಿ ಎರೆಹುಳು ಕುರಿತಂತೆ ಸಣ್ಣ ಲೇಖನ ನಿಮಗಾಗಿ.
- ಸಾಯ್ಲ್ ವಾಸು
ಇವಳು ಎರೆಹುಳು. ಸಜೀವಿ ಮಣ್ಣು ಸಾಮ್ರಾಜ್ಯದ ಮಹಾರಾಣಿ.ನಮ್ಮಲ್ಲಿ ಬೆರಗು ಮೂಡಿಸುವ ಬೆಡಗಿನರಸಿ. ಮಣ್ಣಲ್ಲಿ ತಾಕತ್ತು ತುಂಬುವ ಸೊಬಗಿನ ರಾಣಿ. ಸುಲಭಕ್ಕೆ ಕಣ್ಣಿಗೆ ಬೀಳದ ಮಾಯಾಂಗನೆ. ನಿರಂತರ ಮಣ್ಣಲ್ಲಿ ಮೇಲಿನಿಂದ ಕೆಳಗೆ – ಕೆಳಗಿನಿಂದ ಮೇಲೆ ಸಂಚರಿಸುತ್ತಾ ಕೋಟ್ಯಾಂತರ ಸುರಂಗಗಳನ್ನ್ನು ರೂಪಿಸುವ ವ್ಯೆಯ್ಯಾರಿ.
ಇವಳು ಹಾವಿನಂತೆ ಅಕ್ಕ ಪಕ್ಕ zigzag ರೀತಿಯಲ್ಲಿ ತೆವಳುತ್ತಾ ಸಾಗುವುದಿಲ್ಲ, ಬದಲಿಗೆ ನೇರವಾಗಿ ಮಣ್ಣಲ್ಲಿಯೇ ಮುನ್ನುಗ್ಗುತ್ತಾಳೆ. ಇದರಿಂದಾಗಿಯೇ “ನಿಸರ್ಗದ ನೇಗಿಲು” ಎಂಬ ಬಿರುದು ಪಡೆದವಳು.
ಒಟ್ಟಾರೆ ಸಜೀವಿ ಮಣ್ಣು ಸುಧಾರಕಿ ಹಾಗೂ ಮಣ್ಣು ವಿಶ್ಲೇಷಕಿ. ಇಂದಿಗೂ ಮಣ್ಣಿನ ಫಲವತ್ತತೆಯನ್ನು ಗುರುತಿಸಿ ತೀರ್ಮಾನಿಸುವಾಗ, ಮಣ್ಣಲ್ಲಿ ಇವಳ ಇರುವಿಕೆಯ ಪ್ರಮಾಣವನ್ನು ಪ್ರಧಾನವಾಗಿ ಪರಿಗಣಿಸಲಾಗುತ್ತದೆ. ಇವಳ ಮಹಿಮೆ, ಮಣ್ಣು ಮತ್ತು ಮಾನವ ಸಮುದಾಯಕ್ಕೆ ಇವಳ ಕೊಡುಗೆಗಳ ಕುರಿತಂತೆ ಆಳವಾಗಿ ಗಮನಿಸಿದಷ್ಟೂ ರೋಚಕ ಸಂಗತಿಗಳು ಬಯಲಾಗುತ್ತವೆ.
ನಮ್ಮವರೇ ಆದ Dr. Radha Kale, Dr. Channesh T S, L C Nagaraj, Manjunatha Holalu ಹಾಗೂ Dr. Sulthan Ismail ಹಾಗೂ Sir Albert Howard, J. I. Rodale ಮತ್ತು Bill MOllison ಇನ್ನಿತರರು ಇವಳ ವಿದ್ಯಾರ್ಥಿಗಳೇ. ಇವಳ ಇತಿಹಾಸ, ಕುಲ-ಸಂಕುಲಗಳು, ಹುಟ್ಟು – ಬೆಳವಣಿಗೆ, ಪಾತ್ರ – ಜವಾಬ್ದಾರಿ – ಸೇವೆ ಇವೆಲ್ಲವನ್ನೂ ಕುರಿತಂತೆ ಈ ವಿದ್ಯಾರ್ಥಿಗಳು ಹಲವಾರು ಲೇಖನ – ಪುಸ್ತಕಗಳನ್ನೇ ಬರೆದಿಟ್ಟಿದ್ದಾರೆ.
ಇವಳಿರುವ ಮಣ್ನನ್ನು ಉಳುಮೆ ಮಾಡದಿದ್ದರೆ, ಆ ಮಣ್ಣಿಗೆ ನಿರಂತರ ಸಾವಯವ ಗೊಬ್ಬರವನ್ನೇ ಹಾಕುತ್ತಿದ್ದರೆ, ಇವಳಿರುವ ಮಣ್ಣನ್ನು ಸೂರ್ಯನ ನೇರಬಿಸಿಲಿಗೆ ಒಡ್ಡದಿದ್ದರೆ, ಇವಳಲ್ಲಿನ ವಿಶಿಷ್ಟ ಶಕ್ತಿ ಸಾಮರ್ಥ್ಯಗಳ ಅರಿವಾಗುತ್ತದೆ. ಇವಳ ಹಿಕ್ಕೆ ಅಥವಾ ತಿಂದು ಹೊರಹಾಕುವ ವಿಸರ್ಜಿತ ವಸ್ತು, ಮಣ್ಣಲ್ಲಿ ಬೆರೆಯುತ್ತಿದ್ದಂತೆ;
- ಮಣ್ಣಿನ ಆರೋಗ್ಯ ಸುಧಾರಣೆ
- ಇವಳು ಮಣ್ಣಲ್ಲಿ ನಿರ್ಮಿಸುವ ಸುರಂಗಗಳ ಮೂಲಕ ಗಾಳಿಯಾಡುವಿಕೆ
- ಈ ಸುರಂಗ ರಂಧ್ರಗಳ ಮೂಲಕ ಮಳೆ ನೀರು ಮಣ್ಣೊಳಗಿಳಿಯುತ್ತದೆ
- ಗಿಡದ ಬೇರುಗಳ ಮೂಲಕ ಗಿಡದ ಬೆಳವಣಿಗೆಗೆ ಬೇಕಾದ ಪೋಷಕಾಂಶ ಪೂರೈಕೆ
ಇವಳಲ್ಲಿನ ಅಪಾರ ಶಕ್ತಿ ಸಾಮರ್ಥ್ಯಗಳ ಕುರಿತು ನಮ್ಮಲ್ಲಿ ಲವಲೇಶದ ಜ್ಞಾನವೂ ಇಲ್ಲ. ಉದಾಹರಣೆಗೆ, ಇರುವೆಗಳು ಗಾತ್ರದಲ್ಲಿ ಚಿಕ್ಕದಾದರೂ, ಅವು ಬಲಿಷ್ಟ ಜೀವಿಗಳು ಎಂದೇ ನಮ್ಮಲ್ಲನೇಕರು ಭಾವಿಸಿದ್ದೇವೆ. ಆದರೆ ಇರುವೆಗಳಿಗೇ ಸಡ್ಡು ಹೊಡೆವಷ್ಟು ಬಲಿಷ್ಟತೆ ಇವಳಿಗಿದೆ. ತನ್ನ ತೂಕದ ಆರವತ್ತು ಪಟ್ಟು ಹೆಚ್ಚು ಭಾರದ ಕಲ್ಲುಗಳನ್ನು ಇವಳು ನಿರಾಯಾಸವಾಗಿ ನೂಕಬಲ್ಲಳು. ಅಂದರೆ 50 ಕೆ.ಜಿ. ತೂಕದ ವ್ಯಕ್ತಿಯೊಬ್ಬ 600 ಕೆ.ಜಿ. ತೂಕದ ಕಲ್ಲುಬಂಡೆಯೊಂದನ್ನು ಸುಲಭವಾಗಿ ನೂಕಿದಂತೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ
ಸುದ್ದಿದಿನ,ದಾವಣಗೆರೆ : 66/11 ಕೆ.ವಿ. ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಮತ್ತು ತುರ್ತು ನಿರ್ವಹಣಾ ಕಾಮಗಾರಿಗಳ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಜೂನ್ 23 ರಂದು ಬೆಳಿಗ್ಗೆ 10 ರಿಂದ ಸಂಜೆ 5.30 ರವರೆಗೆÉ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಮಾಮಾಸ್ ಜಾಯಿಂಟ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ಎಮ್.ಸಿ.ಸಿ.ಬಿ : ಶಾಬನೂರು ರಸ್ತೆ, ಎಸ್.ಎಸ್. ಲೇಔಟ್, ಎ ಬ್ಲಾಕ್, ಕುವೆಂಪು ನಗರ, ಬಾಟ್ಲಿ ಬಿಲ್ಡಿಂಗ್ ಸುತ್ತ ಮುತ್ತ, ಸಿದ್ದವೀರಪ್ಪ ಬಡಾವಣೆ, 1ನೇ ಅಡ್ಡ ರಸ್ತೆ ಯಿಂದ 7ನೇ ಅಡ್ಡರಸ್ತೆವರೆಗೆ, ಗ್ಲಾಸ್ ಹೌಸ್, ಬಾಪೂಜಿ ಬ್ಯಾಂಕ್ ಸಮುದಾಯ ಭವನದ ಹಿಂಭಾಗದ ಪ್ರದೇಶ , ಬಿ.ಐ.ಇ.ಟಿ. ಕಾಲೇಜು ಹಾಗೂ ಸುತ್ತ ಮುತ್ತ ಪ್ರದೇಶಗಳು.
ಮಂಡಿಪೇಟೆ, ಬೆನ್ನೆ ಕಂಪನಿ ರಸ್ತೆ, ಎಮ್ ಜಿ ರಸ್ತೆ, ಎನ್ ಆರ್ ರಸ್ತೆ, ಬೆಲ್ಲೌಡಿಹಲ್ಲಿ, ಮಹಾವೀರ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಬಿ.ಟಿ.: ಮಂಡಕ್ಕಿ ಬಟ್ಟಿ, 1 ರಿಂದ 10 ನೇ ಕ್ರಾಸ್, ಇಂದಿರಾ ನಗರ, ಸಿದ್ದರಾಮೇಶ್ವರ ಬಡಾವಣೆ, ಕಾರ್ಲ್ ಮಾರ್ಸ್ ನಗರ, ಕೋಳಿ ಚನ್ನಪ್ಪ ಬಡಾವಣೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳು, ಮೌನೇಶ್ವರ : ಹೆಚ್.ಕೆ. ಆರ್. ಸರ್ಕಲ್, ಕೆ.ಇ.ಬಿ ಕಾಲೋನಿ, ನಿಟುವಳ್ಳಿ ಹಾಗು ನಿಟುವಳ್ಳಿ ಹೊಸಬಡಾವಣೆ, ಮೌನೇಶ್ವರ ಬಡಾವಣೆ, ಸೈಯದ್ ಪೀರ್ ಬಡಾವಣೆ, ಐ.ಟಿ.ಐ. ರಿಂಗ್ ರಸ್ತೆ, ಜಯನಗರ, ದುರ್ಗಾಂಬಿಕ ದೇವಸ್ಥಾನ ಸುತ್ತಮುತ್ತ.
ಎಸ್.ಎಸ್. ಹೈಟೆಕ್ ಆಸ್ಪತ್ರೆ ರಸ್ತೆ, ಭಗೀರಥ ಸರ್ಕಲ್, ಕಾಳಿಕಾಂಬ ದೇವಸ್ಥಾನ, ಶಕ್ತಿನಗರ, ಹಾಗು ಇ.ಎಸ್.ಐ ಆಸ್ಪತ್ರೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳ, ಪಿ.ಬಿ. ರಸ್ತೆ., ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಕೆಟಿಜೆ: ಶ್ರೀ ಮುರಘ ರಾಜೇಂದ್ರ ಸ್ವಾಮಿಗಳ ಮಠ, ಜಾಧವ್ ಕ್ಲಿನಿಕ್ ಸುತ್ತ ಮುತ್ತ , ಶಿವಪ್ಪ ವೃತ್ತದಿಂದ ಜಯದೇವ ವೃತ್ತದವರೆಗೆ ಹಾಗು ಸುತ್ತಮುತ್ತ ಪ್ರದೇಶಗಳು, ಪಿಜೆ: ಪೋಲೀಸ್ ಕ್ವಾಟ್ರಸ್, ತುಂಗ, ಭದ್ರ, ಸರಸ್ವತಿ, ಕೃಷ್ಣ ಬ್ಲಾಕ್, ಅರುಣಾ ಸರ್ಕಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು, ಸಿಜಿಹೆಚ್: ಎಮ್.ಸಿ.ಸಿ. ಎ ಬ್ಲಾಕ್, ನ್ಯಾಯಾಧೀಶರ ವಸತಿ ಗೃಹಗಳು, ತೊಗಟವೀರ ಕಲ್ಯಾಣ ಮಂದಿರ, ವಿನೋಬ ನಗರ 1ನೇ ಮುಖ್ಯ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಎಸ್.ಎಸ್. ಬಡಾವಣೆ, ಎ ಬ್ಲಾಕ್, ಶಾಂತಿ ನಗರ, ಕುಂದುವಾಡ ರಸ್ತೆ, ಮಹಾನಗರ ಪಾಲಿಕೆ ಕುಡಿಯುವ ನೀರಿನ ಸ್ಥಾವರ, ಬಸವೇಶ್ವರ ಬಡಾವಣೆ, ಮಹಾಲಕ್ಷ್ಮೀ ಬಡಾವಣೆ, ಬಾಲಾಜಿ ನಗರ, ಕುಂದುವಾಡ ಕೆರೆ ಹಾಗು ಸುತ್ತಮುತ್ತ ಪ್ರದೇಶಗಳು.
ಕರೂರು ಇಂಡಸ್ಟ್ರಿಯಲ್ ಏರಿಯಾ, ಡಿ.ಸಿ. ಕಛೇರಿ, ಜಿ.ಎಂ.ಐ.ಟಿ. ಬಸವೇಶ್ವರ ನಗರ, ರಶ್ಮೀ, ಹರಿಹರ ರಸ್ತೆ, ವಿಜಯ ನಗರ, ಅಶೋಕ ನಗರ, ಆರ್.ಟಿ.ಓ. ಕಛೇರಿ, ಎಸ್.ಪಿ. ಕಛೇರಿ, ರಿಂಗ್ ರಸ್ತೆ, ಶಿಬಾರ, ಎಸ್.ಎಂ.ಕೆ. ನಗರ, ಹಾಗೂ ಚಿತ್ತನಹಳ್ಳಿ, ಕಕ್ಕರಗೊಳ್ಳ, ಆವರಗೊಳ್ಳ, ನೀಲನಹಳ್ಳಿ, ದೇವರಹಟ್ಟಿ, ದೊಡ್ಡಬಾತಿ, ಹಳೆಬಾತಿ, ನಾರಾಯಣ ಕ್ಯಾಂಪ್, ಯರಗುಂಟಾ, ಕೋಡಿಹಳ್ಳಿ, ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು, ಮಾಗಾನಹಳ್ಳಿ, ಮಾಗಾನಹಳ್ಳಿ ಕ್ಯಾಂಪ್, ಓಬಜ್ಜಿಹಳ್ಳಿ, ಓಬಜ್ಜಿಹಳ್ಳಿ ಕ್ಯಾಂಪ್, ಕಡ್ಲೇಬಾಳು, ಹಳೆಕಡ್ಲೆಬಾಳು, ಮಾಳಗೊಂಡನಹಳ್ಳಿ, ಅರಸಾಪುರ, ಬದುನಾಯಕನತಾಂಡ, ಚಿಕ್ಕಓಬಜ್ಜೀಹಳ್ಳಿ, ದೊಡ್ಡಓಬಜ್ಜೀಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳು, ಮ್ಯಾಸರಹಳ್ಳಿ, ಗುಮ್ಮನೂರು, ಹುಣಸೆಕಟ್ಟೆ, ಮುಡೇನಹಳ್ಳಿ, ಕೆಂಚಮ್ಮನಹಳ್ಳಿ, ಹೊಸಹಳ್ಳಿ, ಕಾಟಿಹಳ್ಳಿ.
ಮಂಡಲೂರು ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಹನುಮನಹಳ್ಳಿ, ಕೊಗ್ಗÀನೂರು, ಹನುಮನಹಳ್ಳಿ, ಆನಗೋಡು, ಹೆಬ್ಬಾಳು, ನೀರ್ಥಡಿ, ಶಿವಪುರ, ಹಾಲುವರ್ತಿ, ಗಂಗನಕಟ್ಟೆ, ನೇರ್ಲಿಗಿ, ಚಿನ್ನಸಮುದ್ರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಮತ್ತು ಆರಾಧ್ಯಾ ಕೈಗಾರಿಕೆ, ಅತ್ತಿಗೆರೆ, ಕುರ್ಕಿ, ಬಾಡ, ಕಬ್ಬೂರು, ಹೀರೆತೊಗಲೇರಿ, ಗೊಪಾನಾಳು, ಕಂದ್ಗಲ್, ರಾಮಗೊಂಡನಹಳ್ಳಿ, ಕಾಶೀಪುರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಆರ್.ಎಂ.ಸಿ. ಲಿಂಕ್ ರಸ್ತೆ, ಬಿ.ಟಿ. ಲೇಔಟ್, ಗುಜರಿ ಲೈನ್, ಬಂಬೂ ಬಜಾರ್, ಮಟ್ಟಿಕಲ್, ಬಿಡಿಓ ಕಛೇರಿ, ಇಮಾಮ್ ನಗರ, ಅಮರಪ್ಪನ ತೋಟ.
ಆನೆಕೊಂಡ, ಎಲ್.ಬಿ.ಎಸ್. ನಗರ.ಟಿ.ಸಿ. ಲೇಔಟ್, ಬಿಟಿ ಲೇಔಟ್, ಕೆ.ಆರ್. ರಸ್ತೆ, ಇಮಾಮ್ ನಗರ, ಆನೆಕೊಂಡ, ಐನಳ್ಳಿ ಕಾಂಪೌಂಡ್, ಎಪಿಎಂಸಿ, ಭಾರತ್ ಕಾಲೋನಿ, ಶೇಖ್ರಪ್ಪ ನಗರ ಹೆಚ್.ಕೆ.ಆರ್. ನಗರ, ಕಬ್ಬೂರು ಬಸಾಪುರ ನಗರ, ಆಣ್ಣಾ ನಗರ, ಬಸಾಪುರ ರಸ್ತೆ, ಗೋಶಾಲೆ, ಪಿ.ಬಿ. ರಸ್ತೆ, ರವಿ ಮಿಲ್ ಹಾಗೂ ಆವರಗೆರೆ, ಹೊನ್ನೂರು, ಐಗೂರು, ಮಲ್ಲಶೆಟ್ಟಿಹಳ್ಳಿ, ತೊಳಹುಣಸೆ, ದಾವಣಗೆರೆ ವಿಶ್ವವಿದ್ಯಾಲಯ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಿದ್ಯಾರ್ಥಿಗಳು ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು: ಹೆಚ್ ಎನ್ ಶಿವಕುಮಾರ್
ಸುದ್ದಿದಿನ,ರಾಣೇಬೆನ್ನೂರ: ಸಾಮಾಜಿಕ ಹಾಗೂ ಶೈಕ್ಷಣಿಕ ಜವಾಬ್ದಾರಿಗಳ ಅಗತ್ಯವು ವಿದ್ಯಾರ್ಥಿಗಳಿಗೆ ಅವಶ್ಯಕವಾಗಿದೆ. ವಿದ್ಯಾರ್ಥಿಗಳು ತಮಗೆ ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು.ಸದಾಕಾಲ ಜ್ಞಾನವನ್ನು ಪಡೆಯುವ ತನಕ ಹೊಂದಿ ಜ್ಞಾನಿಗಳಾಗುವ ಗುರಿ ಹೊಂದಲು ಬಾಪೂಜಿ ಮಹಾವಿದ್ಯಾಲಯ ಉಪ ಪ್ರಾಚಾರ್ಯರಾದ ಎಚ್ ಎನ್ ಶಿವಕುಮಾರ್ ನುಡಿದರು.
ಅವರು ಸ್ಥಳೀಯ ಬಿಎಜೆಎಸ್ಎಸ್ ಪ್ರಥಮ ದರ್ಜೆ ಕಾಲೇಜಿನ ಪ್ರತಿಭಾ ಪುರಸ್ಕಾರ, ಬಿಳ್ಕೋಡಿಗೆ ಕಾರ್ಯಕ್ರಮ ಮತ್ತು ವಿದ್ಯಾರ್ಥಿ ಒಕ್ಕೂಟದ, ಎನ್ ಎಸ್ ಎಸ್ ಚಟುವಟಿಕೆ, ಯುವ ರೆಡ್ ಕ್ರಾಸ್ ಘಟಕದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.
ವಿಶೇಷ ಅತಿಥಿಗಳಾಗಿ ಉಪಸ್ಥಿತರಿದ್ದ ಬಿಎ ಜೆಎಸ್ಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಅಧಿಕಾರಿಗಳು ಡಾ.ಆರ್ ಎಂ ಕುಬೇರಪ್ಪ ಮಾತನಾಡಿ ವಿದ್ಯೆಯನ್ನು ವಿನಯದಿಂದ ವಿದ್ಯೆಕಲಿಯಬೇಕು ಸಂಸ್ಕಾರವಂತರಾಗ ಬೇಕು, ಸಂಸ್ಕಾರ ಹೊಂದಿರುವ ವ್ಯಕ್ತಿಗಳು ಪುರಸ್ಕಾರ ಪಡೆದರೆ ಸಂಸ್ಕಾರ ಇಲ್ಲದವರು ಸಮಾಜದಲ್ಲಿ ತಿರಸ್ಕಾರಕ್ಕೆ ಒಳಗಾಗುವರು.ನಿಮ್ಮ ಬದುಕನ್ನು ನೀವೆ ಕಟ್ಟಿಕೊಳ್ಳುವ ನೆಲೆಯಲ್ಲಿ ಪ್ರಯತ್ನಿಸಬೇಕು ಎಂದು ನುಡಿದರು.
ಪ್ರಾಚಾರ್ಯರಾದ ಪ್ರಕಾಶ್ ಬಸಪ್ಪನವರ್ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಎಚ್ ಎನ್ ಭೀಕ್ಷಾವರ್ತಿಮಠ ಹಾಗೂ ಕೆ ಕೆ ಹಾವಿನಾಳ ರವರು ವಿದ್ಯಾರ್ಥಿಗಳಿಗೆ ಹಿತವಚನ ನುಡಿದರು.ಆರಂಭದಲ್ಲಿಪ್ರೋ.ಎಂ ಡಿ ಹೊನ್ನಮ್ಮನವರ ಸ್ವಾಗತಿಸಿದರು.ಪ್ರೋ.ಶ್ರೀಕಾಂತ ಕುಂಚೂರ, ಪ್ರಾಸ್ತಾವಿಕ ಮಾತನಾಡಿ ವಾರ್ಷಿಕ ವರದಿ ವಾಚಿಸಿದರು.
ಕೊನೆಯಲ್ಲಿ ಪ್ರೋ.ಪುಷ್ಟಾ ಕಬ್ಬಿನಾಲೆ ವಂದಿಸಿದರು.ಇದೆ ಸಮಾರಂಭದಲ್ಲಿ ಕ್ರೀಡೆ, ಸಾಂಸ್ಕೃತಿಕ, ಸಾಮಾಜಿಕ ಸೇವೆಗಳಲ್ಲಿವಿದ್ಯಾರ್ಥಿಗಳ ಸಾಧನೆ ಗುರುತಿಸಿ ಪುರಸ್ಕಾರ ಮಾಡಲಾಯಿತು.ವರ್ಷದ ಮಹಾವಿದ್ಯಾಲಯ ಉತ್ತಮ ವಿದ್ಯಾರ್ಥಿಗಳನ್ನು ಗುರುತಿಸಿ ಪುರಸ್ಕಾರ ಪ್ರದಾನ ಮಾಡಲಾಯಿತು.ವಿವಿಧ ವಿಷಯದ ಉಪನ್ಯಾಸಕರು, ವಿದ್ಯಾರ್ಥಿಗಳು, ಸಿಬ್ಬಂದಿ ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಪಿಂಚಣಿ ದಾರರು ಸಕಾಲದಲ್ಲಿ ಜೀವಂತ ಪ್ರಮಾಣ ಪತ್ರ ಸಲ್ಲಿಸಿ
ಸುದ್ದಿದಿನ,ದಾವಣಗೆರೆ: ಪಿಂಚಣಿ ಪಡೆಯಲು ಜೀವಂತ ಸದಸ್ಯರ ಪ್ರಮಾಣ ಪತ್ರಗಳು ಕಡ್ಡಾಯವಾಗಿರುವುದರಿಂದ ಸಕಾಲಕ್ಕೆ ಸೂಕ್ತ ದಾಖಲಾತಿಗಳನ್ನು ನೀಡುವ ಮೂಲಕ ಸಹಕರಿಸಿ ಎಂದು ಉಪ ಮಹಾಲೇಖಪಾಲರಾದ ಸಚ್ಚಿನ್ ಕೃಷ್ಣ ಕೌಶಿಕ್ ತಿಳಿಸಿದರು.
ಶುಕ್ರವಾರ ಜೂನ್(19) ಬೆಂಗಳೂರಿನ ಮಹಾಲೇಖಪಾಲರು ದಾವಣಗೆರೆ ಜಿಲ್ಲಾ ಖಜಾನೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಾಮಾನ್ಯ ಭವಿಷ್ಯ ನಿಧಿ ಹಾಗೂ ಲೆಕ್ಕಪತ್ರ ಸಮಸ್ಯೆಗಳ ಕುರಿತು ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಪಿಂಚಣಿದಾರರು ತಮ್ಮ ಎಲ್ಲಾ ಬ್ಯಾಂಕ್‌ಗೆ 2ನೇ ವಾರ ಭೇಟಿ ನೀಡಿದರೆ ನಿಮ್ಮ ಸಮಸ್ಯೆಯನ್ನು ಶೀಘ್ರವಾಗಿ ಬಗೆಹರಿಸಲಾಗುವುದು. ಜೀವಂತ ಸದಸ್ಯರ ದೃಢೀಕರಣ ಪತ್ರವನ್ನು ಪಡೆಯಲು ಸೈಬರ್‌ಕೆಫೆ ಇನ್ನಿತರ ಕೇಂದ್ರಗಳಿಗೆ ಅಲೆಯುವ ಅವಶ್ಯಕತೆ ಇಲ್ಲ. ನೀವು ಮನೆಯಲ್ಲಿ ಮೊಬೈಲ್‌ನಲ್ಲಿ ಅಫ್ ಲೋಡ್ ಮಾಡಿ ಪಡೆಯಬಹುದು. ಮತ್ತು ನಿಮ್ಮ ಸಮಸ್ಯೆಗಳನ್ನು ತಿಳಿಸುವಾಗ ಅರ್ಜಿಯಲ್ಲಿ ಇ-ಮೇಲ್ ವಿಳಾಸ, ಮೊಬೈಲ್ ನಂಬರ್‌ನ್ನು ಕಡ್ಡಾಯವಾಗಿ ನಮೂದಿಸಿದರೆ, ಇದರಿಂದ ನಿಮಗೆ ಮಾಹಿತಿ ನೀಡಲು ಅನುಕೂಲವಾಗುತ್ತದೆ ಎಂದರು.
ಪಿಂಚಣಿ ಅದಾಲತ್ ಎನ್ನುವುದು ನಿವೃತ್ತ ನೌಕರರು ಮತ್ತು ಪಿಂಚಣಿದಾರರ ದೀರ್ಘಕಾಲದ ಬಾಕಿ ಉಳಿದಿರುವ ಸಮಸ್ಯೆಗಳನ್ನು ಅಥವಾ ಕುಂದುಕೊರತೆಗಳನ್ನು ಪರಿಹರಿಸಲು ವಿಶೇಷ ವೇದಿಕೆಯಾಗಿದೆ. ಸ್ಥಳದಲ್ಲೇ ಅರ್ಜಿಗಳನ್ನು ಪರಿಶೀಲಿಸಿ, ಬ್ಯಾಂಕ್ ಅಧಿಕಾರಿಗಳ ಸಮ್ಮುಖದಲ್ಲಿ ತ್ವರಿತವಾಗಿ ಸಮಸ್ಯೆಗಳನ್ನು ಬಗೆಹರಿಸುವುದು ಇದರ ಮುಖ್ಯ ಉದ್ದೇಶವಾಗಿದೆ.
ಮಹಾಲೇಖಪಾಲರ ಕಚೇರಿಯ ಹಿರಿಯ ಲೆಕ್ಕಪರಿಶೋಧನಾ ಅಧಿಕಾರಿ ನಾಗಸೇನಾ.ಟಿ.ವಿ, ಮತ್ತು ಪದ್ಮವತಿ, ಜಿಲ್ಲಾ ಖಜಾನೆಯ ಉಪನಿರ್ದೇಶಕರಾದ ರಮೇಶ್ ಅರೆಮಲ್ಲಾಪುರ, ಸಹಾಯಕ ಲೆಕ್ಕಪರಿಶೋಧನಾ ಆಧಿಕಾರಿ ಚಂದನ್ ಮತ್ತು ಜಾಬ್‌ಲೀನೋ, ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoಗವಿಸಿದ್ಧ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿಗೆ ದಾವಣಗೆರೆಯ ಪಾಪು ಗುರು ಆಯ್ಕೆ
-
ದಿನದ ಸುದ್ದಿ3 days agoಪಿಂಚಣಿ ದಾರರು ಸಕಾಲದಲ್ಲಿ ಜೀವಂತ ಪ್ರಮಾಣ ಪತ್ರ ಸಲ್ಲಿಸಿ
-
ದಿನದ ಸುದ್ದಿ2 days agoವಿದ್ಯಾರ್ಥಿಗಳು ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು: ಹೆಚ್ ಎನ್ ಶಿವಕುಮಾರ್
-
ದಿನದ ಸುದ್ದಿ5 hours agoದಾವಣಗೆರೆ | ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ

