ದಿನದ ಸುದ್ದಿ

ಏಕಲವ್ಯ ಪ್ರಶಸ್ತಿಗೆ ಜಿಲ್ಲೆಯ ಅರ್ಹ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆ ಪ್ರದರ್ಶಿಸಿದ ಪ್ರತಿಭಾನ್ವಿತ ಕ್ರೀಡಾಪಟುಗಳಿಂದ ಪ್ರಸಕ್ತ ಸಾಲಿನ ಏಕಲವ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲೆಯ ಆಸಕ್ತ ಮತ್ತು ಅರ್ಹ ಕ್ರೀಡಾಪಟುಗಳು ನವಂಬರ್ 20 ರೊಳಗಾಗಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಿಂದ ಅರ್ಜಿ ನಮೂನೆ ಪಡೆದು ಭರ್ತಿ ಮಾಡಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂ.ಸಂ. 08192 237480 ಗೆ ಸಂಪರ್ಕಿಸಲು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಕೆ.ಆರ್.ಜಯಲಕ್ಷ್ಮೀಬಾಯಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version